ಬೈಕ್ ಗೆ ಪಿಕಪ್ ಢಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

ಬೈಕ್ ಗೆ ಪಿಕಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕಿನ ಅಗಸರಕೋಣೆ ಬಳಿ ನಡೆದಿದೆ. ಅಗಸರಕೋಣೆಯ ಶರತ್ ಹಾಗೂ ಕೇರಳದ ಮೂಲದ ಸಂತೋಷ್ ಮೃತಪಟ್ಟವರು ಎಂದು ತಿಳಿದು ಬಂದಿದೆ. ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ ಬಳಿ ಮಧ್ಯಾಹ್ನ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಪಿಕಪ್ ನಡುವೆ ಅಪಘಾತ ಸಂಭವಿಸಿದೆ. ಅತೀ ವೇಗದ ಚಾಲನೆಯಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಅಪಘಾತದ […]
ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ನಫೀಸಾಗೆ ಕೆಂಪುಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವಕ್ಕೆ ಆಹ್ವಾನ

ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ದ.ಕ.ಜಿಲ್ಲೆಯ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ಅವರನ್ನು ಆಹ್ವಾನಿಸಲಾಗಿದ್ದು ವಿಶೇಷ ಅತಿಥಿಯಾಗಿ ಅವರು ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಳೆದ ಒಂದು ವರ್ಷದಿಂದ ಸೇವೆ ಸಲ್ಲಿಸುತ್ತಿರುವ ನಫೀಸಾ ಅವರು ಹಿಂದಿನ ಅವಧಿಯಲ್ಲಿ ಎರಡೂವರೆ ವರ್ಷ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಗ್ರಾ.ಪಂ ಉಪಾಧ್ಯಕ್ಷರಾಗಿದ್ದ ಸಂದರ್ಭದಲ್ಲಿ ತ್ಯಾಜ್ಯ ವಿಲೇವಾರಿ ವಾಹನವನ್ನು ಸ್ವತಃ ಚಲಾಯಿಸಿ ತ್ಯಾಜ್ಯ ಸಂಗ್ರಹಿಸಿ ಗಮನ ಸೆಳೆದಿದ್ದ ಅವರು ಅನೇಕ ಗೌರವಗಳನ್ನು ಸ್ವೀಕರಿಸಿದರು. […]
ಶಿವಮೊಗ್ಗ; ಒಂದೇ ಮನೆಯ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ; ಆತ್ಮಹತ್ಯೆ ಶಂಕೆ

ಶಿವಮೊಗ್ಗ ಕ್ಲಾರ್ಕ್ ಪೇಟೆಯಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಭುವನೇಶ್ವರಿ, ಮಾರುತಿ ಹಾಗೂ ದರ್ಶನ್ ಮೃತರು ತಿಳಿದು ಬಂದಿದೆ. ಇವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಭುವನೇಶ್ವರಿ ಹಾಗೂ ಅವರ ತಮ್ಮ ಹಾಗೂ ಮಗ ಸಾವನ್ನಪ್ಪಿದವರು. ಇವರು ವಿಷ ಸೇವಿಸಿ ಕಳೆದ ಭಾನುವಾರವೇ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ವಿಜಯ್ ಗ್ಯಾರೇಜ್ ಬಳಿಇವರ ಮನೆಯಿದ್ದು, ಇವರಿಗೆ ಪೋನ್ ಸಂಪರ್ಕ ಸಿಗದ ಹಿನ್ನೆಲೆ ಸಂಬಂಧಿಕರೊಬ್ಬರು ಮನೆಯ ಬಳಿಗೆ ಬಂದು ವಿಚಾರಿಸಿದ್ದಾರೆ. ಈ […]
ಅಪಘಾತ, ದುರಂತದ ಬಗ್ಗೆ ವಿಡಿಯೋ ಪ್ರಸಾರ: ಖಾಸಗಿ ವಾಹಿನಿಗಳಿಗೆ ಹೊಸ ನಿಯಮ ಸೂಚಿಸಿದ ಕೇಂದ್ರ

ದುರಂತಗಳು ಮತ್ತು ಗಂಭೀರ ಅಪಘಾತಗಳ ವಿಡಿಯೋಗಳನ್ನು ಪ್ರಸಾರ ಮಾಡುವಾಗ ದೃಶ್ಯಗಳ ಮೇಲೆ ಅಪಘಾತ ಅಥವಾ ದುರಂತ ಸಂಭವಿಸಿದ ಸಮಯ, ದಿನಾಂಕವನ್ನು ಕಡ್ಡಾಯವಾಗಿ ನಮೂದಿಸಬೇಕೆಂದು ಕೇಂದ್ರ ಸರ್ಕಾರ ಹೇಳಿದೆ. ಈ ಕುರಿತು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಪ್ರಮುಖ ದುರಂತಗಳು ಮತ್ತು ಗಂಭೀರ ಅಪಘಾತಗಳ ವಿಡಿಯೋ ಪ್ರಸಾರ ಮಾಡುವಾಗ ದೃಶ್ಯಗಳ ಮೇಲೆ ಅವು ಸಂಭವಿಸಿದ ದಿನಾಂಕ ಮತ್ತು ಸಮಯ ನಮೂದಿಸಬೇಕೆಂದು ಎಲ್ಲಾ ಸುದ್ದಿ ವಾಹಿನಿಗಳಿಗೆ ಹೇಳಿದೆ. ನೈಸರ್ಗಿಕ ವಿಕೋಪಗಳು, ಪ್ರಮುಖ ಅಪಘಾತಗಳ ಪ್ರಸಾರವನ್ನು […]
ಚನ್ನಪಟ್ಟಣ ಉಪಚುನಾವಣೆ; ಎನ್ ಡಿಎ ಮೈತ್ರಿಕೂಟಕ್ಕೆ ತಲೆ ನೋವಾದ ಸಿಪಿ ಯೋಗೇಶ್ವರ್

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನನಗೆ ಬಿಜೆಪಿ ವತಿಯಿಂದ ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ. ಈ ಮೂಲಕ ಬಿಜೆಪಿ ಪಕ್ಷವು ಟಿಕೆಟ್ ನೀಡದಿದ್ದರೆ, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮುನ್ಸೂಚನೆಯನ್ನು ಅವರು ಕೊಟ್ಟಿದ್ದು, ಅವರ ನಡೆ ಎನ್ ಡಿಎ ಮೈತ್ರಿ ಕೂಟಕ್ಕೆ ದೊಡ್ಡ ತಲೆನೋವಾಗುವ ಸಂಭವವಿದೆ. ನನ್ನ ತಾಲೂಕಿನ ಜನ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಯಾವುದೇ ಚಿನ್ಹೆಯ ಅಡಿ ನಿಂತರೂ ಗೆಲ್ಲಿಸುತ್ತಾರೆ. ಕ್ಷೇತ್ರದ ಸಮಾನ ಮನಸ್ಕ ವೇದಿಕೆಯಿಂದಲೂ […]
ಅತ್ಯಾಚಾರ ಸಂತ್ರಸ್ತೆ ವೈದ್ಯೆಯ ಕಣ್ಣಿನಿಂದ ರಕ್ತ ಬಂದಿದ್ದೇಗೆ? ಮರಣೋತ್ತರ ಪರೀಕ್ಷಾ ವರದಿಯಲ್ಲೇನಿದೆ ಗೊತ್ತಾ?

ಪ.ಬಂಗಾಳದ ಸರಕಾರಿ ಆರ್.ಜಿ.ಕಾರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ಪಡೆಯುತ್ತಿದ್ದ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ವೇಳೆ ಮಹತ್ವದ ಮಾಹಿತಿಗಳು ಬಹಿರಂಗವಾಗಿದೆ. ಪಿಜಿ ವೈದ್ಯೆಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂಜಯ್ ರಾಯ್ ಎಂಬ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ. ವೈದ್ಯೆಯ ಎರಡೂ ಕಣ್ಣುಗಳು, ಬಾಯಿಯಿಂದ ರಕ್ತಸ್ರಾವ ಉಂಟಾಗಿತ್ತು, ಮುಖದ ಮೇಲೆ ಗಾಯದ ಗುರುತುಗಳಿದ್ದವು. ವೈದ್ಯೆಯ ಮರ್ಮಾಂಗದಿಂದ ಕೂಡಾ ರಕ್ತಸ್ರಾವ ಆಗುತ್ತಿತ್ತು. ತೊಡೆ, ಎಡಕಾಲು, ಕುತ್ತಿಗೆ, ಬಲಗೈ, ಬೆರಳು, ತುಟಿಗಳ ಮೇಲೆ […]
ಕಡಪ್ಪರ ಸಮೀರ್ ಕೊಲೆ ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ, ಸಮೀರ್ ಪತ್ನಿ ನೀಡಿದ ದೂರಿನಲ್ಲಿ ಏನೇನಿದೆ ಗೊತ್ತಾ?

ಮಂಗಳೂರು: ರೌಡಿ ಶೀಟರ್ ಕಡಪ್ಪರ ಸಮೀರ್ (33)ನನ್ನು ದುಷ್ಕರ್ಮಿಗಳ ತಂಡವೊಂದು ಕಲ್ಲಾಪು ಬಳಿ ಮಾರಕಾಯುಧಗಳಿಂದ ಕೊಚ್ಚಿ ಕೊಲೆಗೈದಿತ್ತು. ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯಾಗಿದ್ದ ಸಮೀರ್ ಕೊಲೆ ಪ್ರಕರಣದ ಆರೋಪಿಗಳ ಪತ್ತೆಗಾಗಿ ಇದೀಗ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಪೊಲೀಸರು ಮಾಹಿತಿಯನ್ನು ನೀಡಿದ್ದಾರೆ. ರೌಡಿ ಶೀಟರ್ ಆಗಿರುವ ಸಮೀರ್ ವಿರುದ್ಧ ಉಳ್ಳಾಲ ಸಹಿತ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 9 ಪ್ರಕರಣಗಳು ದಾಖಲಾಗಿವೆ. ದರೋಡೆ ಪ್ರಕರಣವೊಂದರಲ್ಲಿ ಸಮೀರ್ ಇತ್ತೀಚೆಗೆ ಜೈಲು ಪಾಲಾಗಿದ್ದ. ಜು.1ರಂದು ಮಂಗಳೂರಿನ ಜೈಲಿನಲ್ಲಿ ನಡೆದ […]
ಸೌದಿ ಅರೇಬಿಯಾ; ಹವಾಂತರ ಸೃಷ್ಟಿಸಿದ ಮಳೆ; 9 ಮಂದಿ ಮೃತ್ಯು

ಜೆದ್ದಾ: ಸೌದಿ ಅರೇಬಿಯಾದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹಕ್ಕೆ ಸಿಲುಕಿ 9 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ನೈಋತ್ಯ ಪ್ರದೇಶದ ಜೀಝಾನ್ ನಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹದಲ್ಲಿ ಇಬ್ಬರು ಮಕ್ಕಳು ಮುಳುಗಿ ಸಾವನ್ನಪ್ಪಿದ್ದಾರೆ. ಜಸ್ಸಾನ್ ನ ಸಬಿಯಾ ಮತ್ತು ಅಬು ಅರಿಶ್ ಪ್ರದೇಶಗಳನ್ನು ಸಂಪರ್ಕಿಸುವ ಸೇತುವೆ ಭಾಗಶಃ ಕುಸಿದ ಪರಿಣಾಮ ದಂಪತಿ ಸಾವನ್ನಪ್ಪಿದ್ದಾರೆ. ಈಗೆ ಸೌದಿ ಅರೇಬಿಯಾದ ವಿವಿಧೆಡೆ ಇಂದು ಸುರಿದ ಭಾರೀ ಮಳೆಗೆ 9 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.
ಹುಟ್ಟು ಹಬ್ಬದ ದಿನವೇ ಇಬ್ಬರು ಯುವಕರು ಅಪಘಾತದಲ್ಲಿ ಮೃತ್ಯು

ಭೀಕರ ಅಪಘಾತದಲ್ಲಿ ಬರ್ತ್ ಡೆ ಪಾರ್ಟಿ ಮುಗಿಸಿ ವಾಪಾಸ್ಸಾಗುತ್ತಿದ್ದ ಇಬ್ಬರು ಯುವಕರು ಮೃತಪಟ್ಟ ಘಟನೆ ಬೀದರ್ ಜಿಲ್ಲೆ ಔರಾದ್ ತಾಲೂಕಿನ ಸೋರಳ್ಳಿ ಗ್ರಾಮದ ಸಮೀಪ ನಡೆದಿದೆ. ಔರಾದ್ ತಾಲೂಕಿನ ಬೇಲೂರ್ (ಎನ್) ಗ್ರಾಮದ ಹಣಮಂತ ಚನ್ನಪ್ಪ (20), ಗಣೇಶ ಧನರಾಜ್ (19) ಮೃತರು. ಹಣಮಂತನ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಜಂಬಗಿ ಗ್ರಾಮದಲ್ಲಿ ಬರ್ತಡೇ ಪಾರ್ಟಿ ಮುಗಿಸಿ ಇಬ್ಬರೂ ಬೈಕ್‌ನಲ್ಲಿ ವಾಪಸ್ಸಾಗುವಾಗ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದೆ. ಈ ವೇಳೆ ಇಬ್ಬರೂ ರಸ್ತೆ ಪಕ್ಕದ ಕಂದಕದಲ್ಲಿ […]
ಒರಿಯರ್ದೊರಿ ಅಸಲ್ ಖ್ಯಾತಿಯ ತುಳು ರಂಗಭೂಮಿ ಕಲಾವಿದ ಅಶೋಕ್ ಶೆಟ್ಟಿ ಇನ್ನಿಲ್ಲ

ಮಂಗಳೂರು; ಖ್ಯಾತ ತುಳು ರಂಗಭೂಮಿ ಕಲಾವಿದ, ಒರಿಯರ್ದೊರಿ ಅಸಲ್ ತುಳು ಸಿನಿಮಾದ ಖ್ಯಾತಿಯ ಅಶೋಕ್ ಶೆಟ್ಟಿ ಅಂಬ್ಲಮೊಗರು ಅವರು ಇಂದು ನಿಧನರಾಗಿದ್ದಾರೆ. ಅಂಬ್ಲಮೊಗರುವಿನ ಮನೆಯಲ್ಲಿ ಅಸ್ವಸ್ಥರಾಗಿದ್ದ ಅಶೋಕ್ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತ ಪಟ್ಟಿದ್ದಾರೆ. ವೃತ್ತಿಪರ ಕಲಾವಿದರಾದ ಅಶೋಕ್ ಅವರು ವಿಜಯ ಕುಮಾರ್ ಕೊಡಿಯಾಲ್ ಬೈಲ್ ಅವರ ಕಲಾಸಂಗಮ ನಾಟಕ ತಂಡದಲ್ಲಿ ಕಲಾ ಸೇವೆ ಸಲ್ಲಿಸಿದ್ದರು. ಇವರ ಅಗಲಿಕೆಗೆ ತುಳು ಸಿನಿಮಾರಂಗದ ಗಣ್ಯರು ಸೇರಿದಂತೆ ಹಲವರು ಸಂತಾಪವನ್ನು ಸೂಚಿಸಿದ್ದಾರೆ.