ಬಿ.ಎಸ್.ಸಿ ಇನ್ ಫ್ಯಾಷನ್ ಡಿಸೈನ್ ಪದವಿಯಲ್ಲಿ ಡಿವೀನ ಸಲ್ದಾನಗೆ ಚಿನ್ನದ ಪದಕ

ಜನವಾಹಿನಿ News ಮಡಿಕೇರಿ : ಮಂಗಳೂರು ವಿಶ್ವವಿದ್ಯಾನಿಲಯದ 2024-25 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಡೀವಿನ ಸಲ್ಡಾನ ಚಿನ್ನದ ಪದಕ ಪಡೆದು ಕೊಂಡಿದ್ದಾರೆ. ಶ್ರೀದೇವಿ ಕಾಲೇಜ್ ಆಫ್ ಫ್ಯಾಷನ್ ಡಿಸೈನ್, ಬಲ್ಲಾಳ್ ಭಾಗ್, ಮಂಗಳೂರುನಲ್ಲಿ ಬಿ.ಎಸ್.ಸಿ ಇನ್ ಫ್ಯಾಷನ್ ಡಿಸೈನ್ ವ್ಯಾಸಂಗ ಮಾಡಿದ ಇವರು ಫ್ಯಾಷನ್ ಡಿಸೈನ್ ಪದವಿ ವಿಭಾಗದಲ್ಲಿ ಅತಿ ಹೆಚ್ಚು ಅಂಕಗಳಿಸಿ ಮೊದಲ ರ್ಯಾಂಕ್ ನೊಂದಿಗೆ ಚಿನ್ನದ ಪದಕ ಪಡೆದು ಕೊಂಡಿದ್ದಾರೆ. ಡಿವೀನ ಸಲ್ದಾನ ಮೂಲತಹ ವಿರಾಜಪೇಟೆ ತಾಲೂಕಿನ ಅಪ್ಪಯ್ಯ ಸ್ವಾಮಿ […]
ಕಾಡಾನೆ ದಾಳಿಗೆ ಮೃತಪಟ್ಟ ಜಲಜಾಕ್ಷಿ ನಿವಾಸಕ್ಕೆ ಶಾಸಕ ಮಂತರ್ ಗೌಡ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

ಜನವಾಹಿನಿ News ಮಡಿಕೇರಿ : ಕಾಡಾನೆ ದಾಳಿಯಿಂದ ಮೃತಪಟ್ಟ ಜಲಜಾಕ್ಷಿ ಅವರ ಬಾಳೆಗುಂಡಿ ಹಾಡಿ ನಿವಾಸಕ್ಕೆ ಶಾಸಕ ಡಾ.ಮಂತರ್ ಗೌಡ ಅವರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಇದೆ ಸಂದರ್ಭ ಮೊದಲ ಹಂತದ 5 ಲಕ್ಷ ಮೊತ್ತ ಪರಿಹಾರ ಚೆಕ್ ವಿತರಿಸಿದರು. ಬಳಿಕ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕರು ಕಾಡಾನೆ ಸೆರೆ ಸೇರಿದಂತೆ ಆನೆ ಹಾವಳಿ ನಿಯಂತ್ರಣ ಸಂಬಂಧ ಅರಣ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಶೀಘ್ರ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. […]
ಕಾಡಾನೆ ದಾಳಿಗೆ ಸಿಲುಕಿ ಗ್ರಾ.ಪಂ ಮಾಜಿ ಸದಸ್ಯೆ ಸಾವು : ಬಾಳೆಗುಂಡಿಯಲ್ಲಿ ಘಟನೆ

ಜನವಾಹಿನಿ News ಮಡಿಕೇರಿ : ಕಾಡಾನೆ ದಾಳಿಗೆ ಸಿಲುಕಿ ಗ್ರಾಮ ಪಂಚಾಯತಿ ಮಾಜಿ ಸದಸ್ಯೆಯೊಬ್ಬರು ಮೃತ ಪಟ್ಟಿರುವ ಘಟನೆ ಕುಶಾಲನಗರ ತಾಲೂಕು ಅರಣ್ಯ ವ್ಯಾಪ್ತಿಗೆ ಒಳಪಡುವ ಬಾಳೆಗುಂಡಿಯಲ್ಲಿ ನಡೆದಿದೆ. ಕೆಳೆದ ಅವಧಿಯಲ್ಲಿ ವಾಲ್ನೂರು ಗ್ರಾಮ ಪಂಚಾಯತಿಯ ಆಡಳಿತ ಮಂಡಳಿ ಸದಸ್ಯರಾಗಿದ್ದ , ಜಲಜಮ್ಮ ಅಲಿಯಾಸ್ ಜಲಜಾಕ್ಷಿ (54) ಎಂಬುವವರೇ ಆನೆ ದಾಳಿಗೆ ಸಿಲುಕಿ ಮೃತಪಟ್ಟ ದುರ್ದೈವಿ. ತೋಟಕ್ಕೆ ಕೆಲಸಕ್ಕೆ ತೆರಳಿ ಹಿಂತಿರುಗುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಘಟನೆಯಲ್ಲಿ ಜಲಜಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಘಟನೆ […]
ಟಿ20 ವಿಶ್ವಕಪ್ : ಭಾರತಕ್ಕೆ ಐತಿಹಾಸಿಕ ಗೆಲುವು ; ಮೂರನೇ ಬಾರಿ ಚಾಂಪಿಯನ್ಸ್ ಆದ ಟೀಂ ಇಂಡಿಯಾ

ಜನವಾಹಿನಿ News ಅಹಮದಾಬಾದ್ : 2026ರ ಟಿ20 ವಿಶ್ವಕಪ್‌ನಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವದ ಟೀಂ ಇಂಡಿಯಾ ನ್ಯೂಜಿಲೆಂಡ್ ಅನ್ನು 96 ರನ್‌ಗಳಿಂದ ಸೋಲಿಸಿ, ಸತತ ಎರಡನೇ ಬಾರಿಗೆ ಮತ್ತು ದಾಖಲೆಯ ಮೂರನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ, ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಫೀಲ್ಡಿಂಗ್ ಆಯ್ಕೆ ಮಾಡುವ ಮೂಲಕ ಟೀಂ ಇಂಡಿಯಾವನ್ನು ಬ್ಯಾಟಿಂಗಿಗೆ ಆಹ್ವಾನಿಸಿತು. ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ 255/5 […]
ಯುಪಿಎಸ್‍ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ 525ನೇ ರ‍್ಯಾಂಕ್

ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲೆಯ ವಿರಾಜಪೇಟೆಯ ಕೆ.ಎಲ್.ಸೂರಜ್ ಅವರು ಯುಪಿಎಸ್‍ಸಿ ಪರೀಕ್ಷೆಯಲ್ಲಿ 525ನೇ ರ‍್ಯಾಂಕ್ ಪಡೆದಿದ್ದಾರೆ. ಇದು ಅವರ ನಾಲ್ಕನೇ ಪ್ರಯತ್ನದ ಯಶಸ್ಸು. 3ನೇ ಪ್ರಯತ್ನದಲ್ಲಿ 713 ನೇ ರ‍್ಯಾಂಕ್ ಗಳಿಸಿ, ಕರ್ನಾಟಕ ಕೇಡರ್‌ನಲ್ಲೇ ಐಪಿಎಸ್ ಆಗಿ ಆಯ್ಕೆಯಾಗಿದ್ದರು. 29 ವರ್ಷ ವಯಸ್ಸಿನ ಅವರು ಕೊಡಗು ಜಿಲ್ಲೆ ವಿರಾಜಪೇಟೆಯವರು. ತಂದೆ ಕೆ.ಬಿ.ಲಿಂಗರಾಜ್ ಅವರು ನಿವೃತ್ತ ಭಾರತೀಯ ಕಂದಾಯ ಸೇವೆಯಲ್ಲಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಮೈಸೂರಿನ ಜೆಎಸ್‍ಎಸ್ ಶಾಲೆಯಲ್ಲಿ ಪ್ರಾಥಮಿಕ, ಅಳಿಕೆಯಲ್ಲಿ ಪ್ರೌಢಶಿಕ್ಷಣ ಮೈಸೂರಿನ […]
ಆದಿವಾಸಿಗಳ ವಿವಿಧ ಬೇಡಿಕೆ ಆಲಿಸಿದ ಜಿಲ್ಲಾಧಿಕಾರಿ ಸೋಮಶೇಖರ್

ಜನವಾಹಿನಿ News ಮಡಿಕೇರಿ : ನಾಗರಹೊಳೆಯ ಆದಿವಾಸಿ ನಿವಾಸಿಗಳು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸುತ್ತಿದ್ದು, ಈ ಹಿನ್ನೆಲೆ ಅರಣ್ಯ ಹಕ್ಕು ಕಾಯ್ದೆಯಡಿ ಮತ್ತೊಮ್ಮೆ ಪರಿಶೀಲಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನಾಗರಹೊಳೆ ಭಾಗದ ಹಾಡಿಗಳಲ್ಲಿನ ಅರಣ್ಯ ಹಕ್ಕು ಕಾಯ್ದೆ ಅರ್ಜಿಗಳ ವಿಲೇವಾರಿ ಬಗ್ಗೆ ಮತ್ತು ಮೂಲಭೂತ ಸೌಕರ್ಯಗಳ ಸಮಸ್ಯೆಗಳ ಕುರಿತು ಹಾಡಿ ಮುಖಂಡರು ಜಿಲ್ಲಾಧಿಕಾರಿ ಅವರ ಗಮನ ಸೆಳೆದರು. ರಾಜ್ಯ ಮಟ್ಟದ ಅರಣ್ಯ ಹಕ್ಕು […]
ಮೂರ್ನಾಡು ಗ್ರಾಮದಲ್ಲಿ ಜ್ಞಾನದ ಭಂಡಾರ ಪುಸ್ತಕ ಪತ್ತಾಯ ಕಾರ್ಯಕ್ರಮ

ಜನವಾಹಿನಿ News ಮಡಿಕೇರಿ : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ 4ನೇ ಕೊಡವ ಪುಸ್ತಕ ಪತ್ತಾಯ ಸ್ಥಾಪನೆ ಕಾರ್ಯಕ್ರಮ ಮೂರ್ನಾಡು ಕೊಡವ ಸಮಾಜದಲ್ಲಿ ಅರ್ಥಪೂರ್ಣವಾಗಿ ನೆರೆವೇರಿತು. ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷರಾದ ತೇಲಪಂಡ ಸಿ.ಸುಬ್ಬಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕೊಡವ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಮಹೇಶ್ ನಾಚಯ್ಯ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಈ ವಿನೂತನ ಯೋಜನೆಯು ಕೇವಲ ಕೊಡವ ಭಾಷೆಯ ಪುಸ್ತಕಗಳ ದಾಸ್ತಾನು […]
ವಿದ್ಯುತ್ ಸೇವೆ ಹಾಗೂ ಸುರಕ್ಷತೆಗೆ ಒತ್ತು ನೀಡಿ: ಜಿಲ್ಲಾಧಿಕಾರಿ ಸೋಮಶೇಖರ್

ಜನವಾಹಿನಿ News ಮಡಿಕೇರಿ : ಪವರ್ ಮ್ಯಾನ್/ ಲೈನ್‍ಮ್ಯಾನ್‍ಗಳು ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ವಿದ್ಯುತ್ ಕೆಲಸವು ಸೂಕ್ಷ್ಮ ಆಗಿರುವುದರಿಂದ ಒತ್ತಡಕ್ಕೆ ಒಳಗಾಗಬಾರದು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸಲಹೆ ಮಾಡಿದ್ದಾರೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ನಗರದ ಸೆಸ್ಕ್ ವಿಭಾಗೀಯ ಕಚೇರಿಯಲ್ಲಿ ಶನಿವಾರ ನಡೆದ ‘ಪವರ್‍ಮ್ಯಾನ್ /ಲೈನ್‍ಮ್ಯಾನ್‍ಗಳ’ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪವರ್ ಮ್ಯಾನ್‍ಗಳು ಪ್ರತಿನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಯಾವುದೇ ಕಾರಣಕ್ಕೂ ವಿಚಲಿತರಾಗದೇ ವಿದ್ಯುತ್ […]
ಟಿ20 ವಿಶ್ವಕಪ್ ಸೆಮಿ ಫೈನಲ್ಸ್: ಇಂಗ್ಲೆಂಡ್ ಮಣಿಸಿ ಫೈನಲ್ಗೆ ಲಗ್ಗೆ ಇಟ್ಟ ಟೀಮ್ ಇಂಡಿಯಾ

ಜನವಾಹಿನಿ News ಮುಂಬೈ : ಇಂಗ್ಲೆಂಡ್ ವಿರುದ್ಧ ನಡೆದಿದ್ದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ 7 ರನ್ಗಳಿಂದ ರೋಚಕ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಮ್ ಇಂಡಿಯಾ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 253 ರನ್ ಕಲೆಹಾಕಿತ್ತು. ಇದಕ್ಕುತ್ತರವಾಗಿ ಇಂಗ್ಲೆಂಡ್ ತಂಡ 7 ವಿಕೆಟ್ ನಷ್ಟಕ್ಕೆ 246 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ವಾಂಖೆಡೆ ಕ್ರೀಡಾಂಗಣದಲ್ಲಿ ಬೃಹತ್ ಮೊತ್ತ ಸಿಡಿಸಿದರೂ ಭಾರತ ಪಂದ್ಯ ಕ್ಷಣ ಕ್ಷಣಕ್ಕೂ ರೋಚಕ […]
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಿದ್ದಾಪುರದಲ್ಲಿ ಪೊಲೀಸ್ ಪಥ ಸಂಚಲನ

ಜನವಾಹಿನಿ News ಸಿದ್ದಾಪುರ : ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಸಾರ್ವಜನಿಕರಲ್ಲಿ ಆತ್ಮ ವಿಶ್ವಾಸ ತುಂಬುವ ನಿಟ್ಟಿನಲ್ಲಿ ಜಿಲ್ಲೆಯ ಸಿದ್ದಾಪುರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಪಥ ಸಂಚಲನವನ್ನು ನಡೆಸಲಾಯಿತು. ಸಂತ ಅನ್ನಮ್ಮ ಶಾಲೆಯಿಂದ – ಮೈಸೂರು ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ – ಮಾರ್ಕೆಟ್ ರಸ್ತೆ ಬಸ್ಸು ನಿಲ್ದಾಣ ಮುಖಾಂತರ ಪೊಲೀಸ್ ಠಾಣೆ ವರೆಗೆ ಪಥ ಸಂಚಲನ ನಡೆಸಿದ ಪೊಲೀಸರು, ನಾಗರಿಕರಿಗೆ ಜಾಗೃತಿ ಮೂಡಿಸುವುದರ ಜೊತೆಗೆ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲ ಎಂಬ […]