Breaking News :

ದೇಶ ತೊರೆದ ಶೇಖ್ ಹಸೀನಾಗೆ ವ್ಯಂಗ್ಯ ಮಾಡಿದ ವಿವಾದಾತ್ಮಕ ಲೇಖಕಿ ತಸ್ಲೀಮಾ ನಸ್ರೀನ್‌

ಬಾಂಗ್ಲಾದೇಶದಲ್ಲಿ ವ್ಯಾಪಕ ಹಿಂಸಾಚಾರದಿಂದಾಗಿ ಶೇಖ್ ಹಸೀನಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶವನ್ನು ತೊರೆದಿದ್ದರು. ಈ ಬಗ್ಗೆ ಖ್ಯಾತ ಲೇಖಕಿ ತಸ್ಲೀಮಾ ನಸ್ರೀನ್‌ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವಿವಾದಾತ್ಮಕ ಲೇಖಕಿಯಾಗಿರುವ ತಸ್ಲೀಮಾ ನಸ್ರೀನ್,  ಇಸ್ಲಾಂಮಿಸ್ಟ್ ಗಳನ್ನು ಮೆಚ್ಚಿಸಲು ಶೇಖ್ ಹಸೀನಾ ನನ್ನನ್ನು ಬಾಂಗ್ಲಾದೇಶದಿಂದ ಹೊರ ಹಾಕಿದ್ದರು. ಈಗ ಅದೇ ಜನರು ವಿದ್ಯಾರ್ಥಿ ಚಳವಳಿ ಮೂಲಕ ಶೇಖ್ ಹಸೀನಾ ಅವರನ್ನು ದೇಶ ತೊರೆಯುವಂತೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ನಾನು 1999ರಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ನನ್ನ ತಾಯಿಯನ್ನು ನೋಡಲು ಬಾಂಗ್ಲಾಕ್ಕೆ […]

ಹಸೀನಾ ಬಾಂಗ್ಲಾದೇಶ ತೊರೆಯುತ್ತಿದ್ದಂತೆ ಜೈಲಿನಿಂದ ಮಾಜಿ ಪ್ರಧಾನಿ ಖಲೀದಾ ಜಿಯಾ ಬಿಡುಗಡೆ

ಬಾಂಗ್ಲಾದೇಶದಲ್ಲಿ ವ್ಯಾಪಕವಾದ ಹಿಂಸಾಚಾರದ ಬೆನ್ನಲ್ಲಿ ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ್ದಾರೆ. ಇದರ ಬೆನ್ನಲ್ಲಿ ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್, ಜೈಲಿನಲ್ಲಿದ್ದ ವಿರೋಧ ಪಕ್ಷದ ನಾಯಕಿ ಮತ್ತು ಮಾಜಿ ಪ್ರಧಾನಿ ಖಲೀದಾ ಜಿಯಾ ಅವರನ್ನು ಬಿಡುಗಡೆ ಮಾಡಲು ಆದೇಶಿಸಿದ್ದಾರೆ. ವಿರೋಧ ಪಕ್ಷದ ಸದಸ್ಯರೊಂದಿಗೆ ಚರ್ಚಿಸಿದ ನಂತರ ಖಲೀದಾ ಜಿಯಾ ಅವರನ್ನು ಬಿಡುಗಡೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್ ಪಿ) ಅಧ್ಯಕ್ಷರನ್ನು ವಿಳಂಬವಿಲ್ಲದೆ ಬಿಡುಗಡೆ ಮಾಡಲು ಅಧ್ಯಕ್ಷ […]

ಮಂಗಳೂರು; ಪಬ್ ನಲ್ಲಿ ಮಹಿಳೆಗೆ ನಿಂದನೆ; ಪುತ್ತೂರಿನ ನಾಲ್ವರು ಅರೆಸ್ಟ್

ಮಂಗಳೂರು:  ಪಾಂಡೇಶ್ವರದ ಪಬ್‌ವೊಂದಕ್ಕೆ ಬಂದಿದ್ದ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿ, ನಿಂದನೆ ಮಾಡಿರುವ ಆರೋಪದಲ್ಲಿ ನಾಲ್ವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ಪುತ್ತೂರು ನಿವಾಸಿಗಳಾದ ಮಹೇಶ್ (28), ವಿನಯ್ (30), ನಿತೇಶ್ (32), ಪ್ರಿತೇಶ್ (33) ಬಂಧಿತ ಆರೋಪಿಗಳು. ಪಾಂಡೇಶ್ವರದಲ್ಲಿರುವ ಪಬ್‌ಗೆ ಮಹಿಳೆ ತನ್ನ ಗೆಳತಿ ಜತೆ ತೆರಳಿದ್ದರು. ಅಲ್ಲಿ ಪುತ್ತೂರಿನ ಯುವಕರ ತಂಡವೊಂದು ಪಾರ್ಟಿಯಲ್ಲಿ ತೊಡಗಿತ್ತು. ಅವರು ಮಹಿಳೆಗೆ ನಿಂದಿಸಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಗಳ ವಿರುದ್ಧ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳನ್ನು […]

ವಯನಾಡು; ಎಲ್ಲಾ ಧರ್ಮಗಳ ಪ್ರಾರ್ಥನೆಯೊಂದಿಗೆ ಗುರುತು ಸಿಗದ ಮೃತದೇಹಗಳ ಸಾಮೂಹಿಕ ಅಂತ್ಯ ಸಂಸ್ಕಾರ

ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತದ ಪತ್ತೆ ಹಚ್ಚಲಾಗದ ಮೃತದೇಹಗಳ ಭಾಗಗಳನ್ನು ಸಾಮೂಹಿಕವಾಗಿ ಅಂತ್ಯಕ್ರಿಯೆಯನ್ನು ಇಂದು ಜಿಲ್ಲಾಡಳಿತವು ನಡೆಸಿದೆ. ಅಪರಿಚಿತ ಸಂತ್ರಸ್ತರ ದೇಹದ ಭಾಗಗಳನ್ನು ಪುತ್ತುಮಲ ಪ್ರದೇಶದಲ್ಲಿ ಸಾಮೂಹಿಕವಾಗಿ ಧಪನ ಮಾಡಲಾಗಿದೆ. ಸಮಾಧಿ ಕಾರ್ಯಕ್ರಮಕ್ಕೂ ಮುನ್ನ ಎಲ್ಲ ಧರ್ಮದವರ ಪ್ರಾರ್ಥನೆ ನಡೆಸಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಈ ಕುರಿತು ಎಎನ್‌ಐ ಜೊತೆ ಮಾತನಾಡಿದ ಕೇರಳ ಸಚಿವ ಕೆ ಎನ್ ಬಾಲಗೋಪಾಲ್, ನಾಪತ್ತೆಯಾದ ದೇಹದ ಭಾಗಗಳ ನಿಖರವಾದ ಸಂಖ್ಯೆಯನ್ನು ನಾವು ನೀಡಲು ಸಾಧ್ಯವಿಲ್ಲ. ಅಪರಿಚಿತ ಶವಗಳಿಗೆ ಸಾಮೂಹಿಕ ಅಂತ್ಯಕ್ರಿಯೆ ನಡೆಯುತ್ತಿದೆ ಎಂದು […]

ಬಾಂಗ್ಲಾದೇಶದ ಪ್ರಧಾನಿ ನಿವಾಸಕ್ಕೆ ನುಗ್ಗಿ ದಾಂಧಲೆ ನಡೆಸಿದ ಪ್ರತಿಭಟನಾಕಾರರು; ಶ್ರೀಲಂಕಾ ಬಿಕ್ಕಟ್ಟನ್ನು ಮರು ನೆನಪಿಸಿದ ಘಟನೆ

ಬಾಂಗ್ಲಾದೇಶದಲ್ಲಿ  ಮೀಸಲಾತಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ನೂರಾರು ಮಂದಿ ಬಾಂಗ್ಲಾದೇಶಿಯರು ಮೃತಪಟ್ಟಿದ್ದಾರೆ. ಹಿಂಸಾಚಾರ ವ್ಯಾಪಕವಾಗುತ್ತಿದ್ದಂತೆ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಶೇಖ್ ಹಸೀನಾ ಭಾರತಕ್ಕೆ ಬಂದಿಳಿದಿದ್ದಾರೆ. ಈ ಮಧ್ಯೆ ವಿದ್ಯಾರ್ಥಿಗಳು ಬಾಂಗ್ಲಾದೇಶದ ಪ್ರಧಾನಿಯ ಮನೆಗೆ ನುಗ್ಗಿದ್ದು, ಪ್ರಧಾನಿ ಮಲಗುತ್ತಿದ್ದ ಮಂಚದ ಮೇಲೆ ಮಲಗಿ ದುಸ್ಸಾಹಾಸ ಮೆರೆದಿದ್ದಾನೆ. ವಿದ್ಯಾರ್ಥಿಗಳು ಪ್ರಧಾನಿ ಮನೆಯ ಒಳಗಡೆ ನುಗ್ಗಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಸರ್ಕಾರಿ ಉದ್ಯೋಗಕ್ಕೆ ಮೀಸಲಾತಿ ವಿರುದ್ಧ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಇಂದು ತಾರಕಕ್ಕೇರಿದ್ದು, ಪ್ರತಿಭಟನಾಕಾರರು ನುಗ್ಗುವ ಮುನ್ನವೇ ಅಪಾಯದ ಮುನ್ಸೂಚನೆ […]

ಎಪಿ ಅಬೂಬಕ್ಕರ್ ಮುಸ್ಲಿಯಾರ್ ಗೆ ಸರಕಾರಿ ಗೌರವ; ತಗಾದೆ ತೆಗೆದ ಬಸವನಗೌಡ ಪಾಟೀಲ್ ಯತ್ನಾಳ್

ಆಗಸ್ಟ್‌ 2 ರಂದು ಬೆಂಗಳೂರಿನ ಸಿಎಂ ಕಾನ್ವೆನ್ಶನ್‌ನಲ್ಲಿ ಬೆಂಗಳೂರಿನ ಖಾಝಿ ಸ್ವೀಕಾರ ಸಮಾರಂಭ ಮತ್ತು ಕೂರತ್ ತಂಙಳ್ ಅವರ ಅನುಸ್ಮರಣೆ ನಡೆದಿತ್ತು. ಕಾರ್ಯಕ್ರಮಕ್ಕೆ ಇಂಡಿಯನ್ ಗ್ರಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅತಿಥಿಯಾಗಿ ಆಗಮಿಸಿದ್ದರು. ಬೆಂಗಳೂರಿಗೆ ಆಗಮಿಸಿದ್ದ ಉಸ್ತಾದರಿಗೆ ಸರಕಾರಿ ವಾಹನದಲ್ಲಿ ತೆರಳಲು ಅವಕಾಶವನ್ನು ಮಾಡಿಕೊಡಲಾಗಿತ್ತು. ಇದಕ್ಕೆ ಇದೀಗ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ತಗಾದೆ ತೆಗೆದಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ ಮಾಡಿರುವ ಬಸವನಗೌಡ ಪಾಟೀಲ್ ಯತ್ನಾಳ್, ಸರ್ಕಾರಕ್ಕೆ ಸಂಬಂಧವೇ ಇಲ್ಲದ […]

ಬಾಂಗ್ಲಾದೇಶದಲ್ಲಿ ವ್ಯಾಪಕ‌ ಹಿಂಸಾಚಾರ ಹಿನ್ನೆಲೆ: ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ

ಬಾಂಗ್ಲಾದೇಶದಲ್ಲಿ ಸರ್ಕಾರ ವಿರೋಧಿ ಹೋರಾಟ ಹಿಂಸಾರೂಪಕ್ಕೆ ತಿರುಗಿದ್ದು, ಲಕ್ಷಾಂತರ ಜನರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಮಧ್ಯೆ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಸೋಮವಾರ ಮಿಲಿಟರಿ ಹೆಲಿಕಾಪ್ಟರ್‌ನಲ್ಲಿ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಹಿಂಸಾತ್ಮಕ ಘರ್ಷಣೆಗಳಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪಿದ್ದಾರೆ. ಮತ್ತು ನೂರಾರು ಜನ ಗಾಯಗೊಂಡಿದ್ದಾರೆ. ಇದರ ನಡುವೆ ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲು ಸಿದ್ಧರಾಗಿದ್ದಾರೆ. ರಾಷ್ಟ್ರವ್ಯಾಪಿ ಕರ್ಫ್ಯೂ […]

ಕೊಳವೊಂದರಲ್ಲಿ ಸ್ನಾನ ಮಾಡಿದ ಯುವಕರಲ್ಲಿ ಕಂಡು ಬಂದ ಮೆದುಳು ಜ್ವರ; ಓರ್ವ ಸಾವು, ಮಳೆಗಾಲದಲ್ಲಿ ಕೊಳದಲ್ಲಿ ಈಜುವವರೇ ಎಚ್ಚರ!

ಕೊಳವೊಂದರಲ್ಲಿ ಸ್ನಾನ ಮಾಡಿದ್ದ ಯುವಕನೊಬ್ಬ ಮೆದುಳು ಜ್ವರದಿಂದ ಮೃತಪಟ್ಟಿದ್ದು, ಇನ್ನೂ 4 ಮಂದಿಯಲ್ಲಿ ತೀವ್ರ ಜ್ವರ ಕಾಣಿಸಿಕೊಂಡಿರುವ ಘಟನೆ ಕೇರಳದ ನೆಯ್ಯಾಟಿಂಕರ ಪ್ರದೇಶದಲ್ಲಿ ನಡೆದಿದೆ. ಪ್ಲಾವರತಾಳದ ಅನೀಶ್ (26), ಪುತಮಕೋಟ್‌ನ ಅಚ್ಚು (25), ಹರೀಶ್ (27) ಮತ್ತು ಪುತ್ತಮಕೋಟ್ ಬಳಿಯ ಧನುಷ್ (26) ಬೋಧಿನಗರದ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ನಾಲ್ವರ ಪೈಕಿ ಒಬ್ಬರಿಗೆ ಮೆದುಳು ಜ್ವರ ಇರುವುದು ಪತ್ತೆಯಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.  ಇದರಿಂದ ಇಲಾಖೆ ನೀರಿನ ಮಾದರಿಗಳನ್ನು ಸಂಗ್ರಹಿಸಿ […]

ಉಡುಪಿ ಬಸ್ ನಲ್ಲಿ ಯುವತಿ ಅಸ್ವಸ್ಥ; ಬಸ್ ನ್ನು ನೇರವಾಗಿ ಆಸ್ಪತ್ರೆಗೆ ಕೊಂಡೊಯ್ದು ಮಾನವೀಯತೆ ಮೆರೆದ ಸಿಬ್ಬಂದಿಗಳು

ಉಡುಪಿ: ಬಸ್ ನಲ್ಲಿ ತೆರಳುತ್ತಿರುವಾಗ ಯುವತಿಯೋರ್ವಳು ಅಸ್ವಸ್ಥಗೊಂಡಿದ್ದು, ಬಸ್ ಚಾಲಕ ಮತ್ತು ನಿರ್ವಾಹಕ ಬಸ್ ನ್ನು ಆಸ್ಪತ್ರೆಗೆ ಕೊಂಡೊಯ್ದ ಘಟನೆ ಉಡುಪಿ ನಗರದಲ್ಲಿ  ನಡೆದಿದೆ. ಶಿರ್ವದಿಂದ ಉಡುಪಿಗೆ ಬರುತ್ತಿದ್ದ ನವೀನ್ ಎಂಬ ಬಸ್‌ನಲ್ಲಿ  ಯುವತಿ ಅಸ್ವಸ್ಥಳಾಗಿದ್ದು, ಬಸ್ ನಲ್ಲೇ ವಾಂತಿ ಮಾಡಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾಳೆ. ತಕ್ಷಣ ಚಾಲಕ ಶಶಿಕಾಂತ್, ನಿರ್ವಾಹಕ ಸಲೀಂ ಎಚ್ಚೆತ್ತು ಬಸ್ ನ್ನು ನೇರ ಆಸ್ಪತ್ರೆಗೆ ಸಾಗಿಸಿದ್ದಾರೆ. ಯುವತಿಗೆ ತಕ್ಷಣವೇ ಪ್ರಥಮ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಆ ಬಳಿಕ ಯುವತಿಯ ಮನೆಯವರಿಗೆ ಮಾಹಿತಿ […]

ವಯನಾಡಿನ ರೀತಿಯ ದುರಂತದ ಭೀತಿಯಲ್ಲಿ ಮಂಗಳೂರಿನ ಕೆತ್ತಿಕಲ್ ನಿವಾಸಿಗಳು

ವಯನಾಡಿನಲ್ಲಿ ಭೀಕರ ಭೂ ಕುಸಿತ ದುರಂತದಲ್ಲಿ ಮೃತರ ಸಂಖ್ಯೆ 360ರ ಗಡಿ ದಾಟಿದೆ. ಇನ್ನು ಕೂಡ 300 ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಈ ಭೀಕರ ದುರಂತಕ್ಕೆ ದೇಶವೇ ಬೆಚ್ಚಿಬಿದ್ದಿದೆ. ಸಾಂಭವ್ಯ ಘಟನೆಯನ್ನು ತಡೆಯಲು ವಿವಿಧ ರಾಜ್ಯಗಳು ಮುಂದಾಗಿದೆ. ಈ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬಳಿಯೂ ಅಂಥದ್ದೇ ಅನಾಹುತ ಸಂಭವಿಸಬಹುದಾದ ಭೀತಿ ಎದುರಾಗಿದೆ. ಮಂಗಳೂರು ನಗರ ಹೊರವಲಯದ ವಾಮಂಜೂರು ಸಮೀಪದ ಕೆತ್ತಿಕಲ್ ಬಳಿ ಗುಡ್ಡೆ ಮಣ್ಣು ಕುಸಿಯುತ್ತಲೇ ಇದ್ದು ಆತಂಕ ಸೃಷ್ಟಿಸಿದೆ. ಈ ಗುಡ್ಡದ […]