Breaking News :

BIG NEWS ಸಿಸಿಬಿ ಇನ್ಸ್ ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ; ಪಿಎಸ್ಐ ಪರಶುರಾಮ್ ಪ್ರಕರಣದ ಬೆನ್ನಲ್ಲೇ ನಡೆದ ಮತ್ತೊಂದು ಘಟನೆ

ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಬಿಡದಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಪಿಎಸ್‌ಐ ಪರಶುರಾಮ್ ಸಾವು ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಮ್ಮೇಗೌಡ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮದರಸಾ ವಿದ್ಯಾರ್ಥಿಯನ್ನು ಚೂರಿಯಿಂದ ಇರಿದು ಕೊಲೆ

2ನೇ ತರಗತಿ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ದುರಂತ ಘಟನೆ ಉತ್ತರ ಪ್ರದೇಶದ ಬಲರಾಂಪುರ ಜಿಲ್ಲೆಯ ತುಳಸಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮದರಸಾದಲ್ಲಿ ನಡೆದಿದೆ. ಬಲರಾಂಪುರ ಜಿಲ್ಲೆಯಿಂದ 30 ಕಿಲೋಮೀಟರ್ ದೂರದಲ್ಲಿರುವ ತುಳಸಿಪುರ ಇಟ್ವಾ ರಸ್ತೆಯಲ್ಲಿರುವ ಜಾಮಿಯಾ ನೈಮಿಯಾನ್ ಇರ್ವಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಭಾನುವಾರ ಕೊಲೆ ಪ್ರಕರಣವನ್ನು ಬಹಿರಂಗಪಡಿಸಿದ್ದಾರೆ ಮತ್ತು ಘಟನೆಗೆ ಸಂಬಂಧಿಸಿ 12 ವರ್ಷದ ಮದ್ರಸಾ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಹತ್ಯೆಗೆ ಬಳಸಲಾದ ಚಾಕುವನ್ನು ಉತ್ತರದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಯೋಗೇಶ್ ಕುಮಾರ್ ಅವರು […]

ಸಂಪಾಜೆಯಲ್ಲಿ ಬೈಕ್ ಅಪಘಾತ; ಧರ್ಮಸ್ಥಳಕ್ಕೆ ಬರುತ್ತಿದ್ದ ಇಬ್ಬರು ಯುವಕರು ಮೃತ್ಯು

ಮಡಿಕೇರಿ; ರಸ್ತೆ ಬದಿಯ ಮೋರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಪಾಜೆ ಅರಣ್ಯ ಇಲಾಖಾ ಕಚೇರಿ ಬಳಿ ನಡೆದಿದೆ. ಮೃತರನ್ನು ಮೈಸೂರು ಮೂಲದ ಪವನ್ ಹಾಗೂ ಮನೋಜ್ ಎಂದು ಗುರುತಿಸಲಾಗಿದೆ. ಇವರು ಬುಲೆಟ್ ಬೈಕ್ ನಲ್ಲಿ ಮೈಸೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕೊಯ್ನಾಡಿನ ಫಾರೆಸ್ಟ್ ಐಬಿ ಬಳಿ ಮುಖ್ಯರಸ್ತೆಯಲ್ಲಿ ರಸ್ತೆ ಬದಿಯ ಮೋರಿಗೆ ವೇಗವಾಗಿದ್ದ ಬೈಕ್ ಢಿಕ್ಕಿ ಹೊಡೆದಿದೆ. ಈ ವೇಳೆ ಚರಂಡಿಗೆ ಇಬ್ಬರು ಯುವಕರು ಎಸೆಯಲ್ಪಟ್ಟು […]

ಮಗಳ ಮದುವೆ ಆಮಂತ್ರಣ ಹಂಚಿ ಬಂದವ ಅಪಘಾತದಲ್ಲಿ ಮೃತ್ಯು; ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ

ಮಗಳ ಮದುವೆಗಾಗಿ ಭರ್ಜರಿ ತಯಾರಿ ನಡೆಸುತ್ತಿದ್ದ ತಂದೆಯೋರ್ವ ಅಪಘಾತದಲ್ಲಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಂಜುನಾಥ್ ಮೃತ ದುರ್ದೈವಿ. ಇವರು ಅಧಿಕಾರಿಯಾಗಿ ಕೆಲಸ‌ ಮಾಡುತ್ತಿದ್ದರು. ಇವರು ಬೆಳಗ್ಗೆ ಆಮಂತ್ರಣ ಪತ್ರಿಕೆ ಹಂಚಿ ರಾತ್ರಿ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಎಲೆಕ್ಟ್ರಾನಿಕ್​ ಸಿಟಿ ಫ್ಲೈಓವರ್​​ ಮೇಲೆ ಕಾರು ಕೆಟ್ಟು ನಿಂತಿದೆ ಎಂದು ಅದನ್ನು ಟೋಯಿಂಗ್ ವೆಹಿಕಲ್ ಕರೆಸಿ ತೆರವು ಮಾಡಿಸುವಾಗ ವೇಗವಾಗಿ ಬಂದ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದಿದ್ದು ಅಧಿಕಾರಿ ಮಂಜುನಾಥ್ ಮೃತಪಟ್ಟಿದ್ದಾರೆ. ಆಗಸ್ಟ್ 10ರಂದು ಮೃತ […]

ಸ್ವಕ್ಷೇತ್ರದಲ್ಲೇ ಪ್ರತಿಭಟನಾಕಾರರಿಂದ ತಪ್ಪಿಸಿಕೊಳ್ಳಲು ಕಾರು & ಬೆಂಗಾವಲು ವಾಹನ ಬಿಟ್ಟು ಬೈಕ್ ನಲ್ಲಿ ಪರಾರಿಯಾದ ಕೇಂದ್ರ ಸಚಿವ

ಪ್ರತಿಭಟನಾಕಾರರಿಂದ ತಪ್ಪಿಸಿಕೊಂಡು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಬೆಂಗಾವಲು ಪಡೆಯನ್ನು ಬಿಟ್ಟು ಬೈಕ್‌ ನಲ್ಲಿ ಪರಾರಿಯಾಗಿರುವ ಘಟನೆ ಬಿಹಾರದ ಬೇಗುಸರಾಯ್‌ ನಲ್ಲಿ ನಡೆದಿದೆ. ಕೇಂದ್ರ ಸಚಿವ ಮತ್ತು ಬಿಹಾರದ ಬೇಗುಸರಾಯ್‌ನ ಬಿಜೆಪಿ ಸಂಸದರಾದ ಗಿರಿರಾಜ್ ಸಿಂಗ್ ಅವರಿಗೆ ತಮ್ಮ ಸ್ವಂತ ಕ್ಷೇತ್ರದಲ್ಲಿ  ಪ್ರತಿಭಟನಾಕಾರರು ಘೇರಾವ್ ಹಾಕಿದ್ದಾರೆ. ಈ ವೇಳೆ ಸಚಿವರು ಪರಾರಿಯಾಗುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಮ್ಮ ಬೇಡಿಕೆಗಳ ಪಟ್ಟಿಯನ್ನು ಸಚಿವರಿಗೆ ಸಲ್ಲಿಸಲು ಬಂದ ಎಎನ್‌ಎಂ(ವೈದ್ಯಕೀಯ) ಕಾರ್ಯಕರ್ತರು ಗಿರಿರಾಜ್ ಸಿಂಗ್ ಅವರ ವಾಹನಕ್ಕೆ ಘೇರಾವ್ […]

ಸಹೋದರನಿಗೆ ವಾಟ್ಸಾಪ್ ನಲ್ಲಿ ವಿಡಿಯೋ ಕಳುಹಿಸಿ ಯುವಕನೋರ್ವ ನಾಲೆಗೆ ಹಾರಿ ಆತ್ಮಹತ್ಯೆ

ಯುವಕನೊಬ್ಬ ತನ್ನ ಸಹೋದರನಿಗೆ ವಾಟ್ಯ್ಸಾಪ್‌ ವಿಡಿಯೋ ಕಳಿಸಿ ನಾಲೆಯ ನೀರಿಗೆ ಹಾರಿ ಆತ್ಮಹತ್ಯೆ  ಮಾಡಿಕೊಂಡ ಆಘಾತಕಾರಿ ಘಟನೆ ಕುಣಿಗಲ್ ದೊಡ್ಡಕೆರೆಯ ಕೋಡಿ ಹಾಲಮಡುವಿನಲ್ಲಿ ನಡೆದಿದೆ. ಪಟ್ಟಣದ ಮಹವೀರ ನಗರದ ನಿವಾಸಿ ಬಿ.ಆನಂದ್ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಬಿ.ಆನಂದ್ ಕುಣಿಗಲ್ ತಾಲೂಕಿನ ಅಂಚೇಪಾಳ್ಯ ಪ್ರದೇಶದ ವಿನರ್‌ ಬರ್ಗರ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ. ಆನಂದ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತನ್ನ ಸಹೋದರ ಸಾಗರ್‌ಗೆ ವಿಡಿಯೋ ಮಾಡಿ ಕಳುಹಿಸಿದ್ದು, ನನ್ನ ಸಾವಿಗೆ ಯಾರು ಕಾರಣರಲ್ಲ, ನನಗೆ ಬದುಕಲು ಇಷ್ಟವಿಲ್ಲ ಹಾಗಾಗಿ […]

ಪುತ್ರನ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಶಾಸಕಿ ವಿರುದ್ಧ ಕ್ರಮ ತೆಗೆದುಕೊಳ್ಳದಿದ್ದರೆ ಇಸ್ಲಾಂಗೆ ಮಾತಾಂತರವಾಗುವುದಾಗಿ ಹೇಳಿದ್ದ ಕೈ ಮುಖಂಡನ ವಿರುದ್ದ ಕಠಿಣ ಕಾಯ್ದೆಯಡಿ ಎಫ್ಐಆರ್

ಕಾಂಗ್ರೆಸ್ ದಲಿತ ಮುಖಂಡ ರಾಜೇಶ್ ಅಲಿಯಾಸ್ ರಾಜು ಸೋಲಂಕಿ ತನ್ನ ಪುತ್ರನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗೊಂಡಾಲ್ ಬಿಜೆಪಿ ಶಾಸಕಿ ಗೀತಾಬಾ ಜಡೇಜಾ ಮತ್ತು ಅವರ ಪತಿ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಇಸ್ಲಾಂಗೆ ಮತಾಂತರಗೊಳ್ಳುವುದಾಗಿ ಹೇಳಿದ್ದರು. ಇದೀಗ ಮೂರು ವಾರಗಳ ನಂತರ, ರಾಜು ಮತ್ತು ಅವರ ಕುಟುಂಬದ ನಾಲ್ವರ ವಿರುದ್ಧ ಕಠಿಣ ಗುಜರಾತ್ ನಿಯಂತ್ರಣ ಮತ್ತು ಸಂಘಟಿತ ಅಪರಾಧ ಕಾಯ್ದೆ (GUJCTOC) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜುನಾಗಢ್ ಜಿಲ್ಲೆಯ ಸ್ಥಳೀಯ ಅಪರಾಧ […]

ಇಸ್ರೇಲ್ ಮೇಲೆ ಹಿಜ್ಬುಲ್ಲಾದಿಂದ ರಾಕೆಟ್ ದಾಳಿ

ಇಸ್ರೇಲ್ -ಹಮಾಸ್ ಮೇಲೆ ಕಳೆದ 9 ತಿಂಗಳಿಂದ ಯುದ್ಧ ನಡೆಸುತ್ತಿದೆ. ಈ ಮಧ್ಯೆ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಅವರನ್ನು ಟೆಹ್ರಾನ್‍ನಲ್ಲಿ ಹತ್ಯೆ ಮಾಡಲಾಗಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಹಿಜ್ಬುಲ್ಲಾ ಮಿಲಿಟರಿ ನಾಯಕ ಫೌದ್ ಶುಕ್ರ್ ಅವರ ಹತ್ಯೆ ಬೈರೂತ್ ನಲ್ಲಿ  ನಡೆದಿತ್ತು. ಇದರಿಂದಾಗಿ ಇದೀಗ ಮಧ್ಯ ಪ್ರಾಚ್ಯದಲ್ಲಿ ಮತ್ತೊಂದು ಯುದ್ಧದ ಕಾರ್ಮೋಡ ಕವಿದಿದೆ. ಇರಾನ್ ಬೆಂಬಲಿತ ಸೇನಾಪಡೆ ಹೆಜ್ಬೊಲ್ಲಾದ ಕಮಾಂಡರ್ ಫೌದ್ ಶುಕ್ರ್ ನನ್ನು ಇಸ್ರೇಲ್ ರಕ್ಷಣಾ ಪಡೆ ನಡೆಸಿದ ವಾಯು ದಾಳಿಯಲ್ಲಿ ಮೃತಪಟ್ಟ ಬೆನ್ನಲ್ಲೇ […]

ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಗೋಡೆ ಕುಸಿತ: 9 ಮಕ್ಕಳು ದುರ್ಮರಣ

ದೇವಸ್ಥಾನದಲ್ಲಿ ಗೋಡೆ ಕುಸಿದು 9 ಮಕ್ಕಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ. ಶಾಹಪುರದ ಹರ್ದೌಲ್ ಬಾಬಾ ದೇವಸ್ಥಾನದಲ್ಲಿ  ಧಾರ್ಮಿಕ ಸಮಾರಂಭದ ವೇಳೆ ಈ ದಾರುಣ ಘಟನೆ ನಡೆದಿದೆ. ಗಾಯಗೊಂಡ ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಸ್ಥಳೀಯರ ನೆರವಿನೊಂದಿಗೆ ಪೊಲೀಸರು ರಕ್ಷಣಾ ಕಾರ್ಯ ನಡೆಸಿದ್ದಾರೆ. ಮೃತ ಮಕ್ಕಳು 10ರಿಂದ 15 ವರ್ಷದವರಾಗಿದ್ದಾರೆ. ವಿಶೇಷ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.    

ವಯನಾಡು ಭೂ ಕುಸಿತ ಸ್ಥಳದಲ್ಲಿ ಕಳ್ಳರ ಹಾವಳಿ!

ವಯನಾಡು ಭೂಕುಸಿತ ಸ್ಥಳದಲ್ಲಿ 350ಕ್ಕೂ ಅಧಿಕ ಮಂದಿಯ ಮೃತದೇಹ ಪತ್ತೆಯಾಗಿದೆ. ಬದುಕುಳಿದವರು ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಈ ಮಧ್ಯೆ ಹಾನಿಗೊಳಗಾದ ಮನೆಗಳಿಗೆ ಕಳ್ಳರು ನುಗ್ಗಿ ಅಳಿದುಳಿದ ವಸ್ತುಗಳನ್ನು ಕದ್ದೊಯ್ಯುತ್ತಿದ್ದಾರೆ ಎಂದು ಜನರು ದೂರಿದ್ದಾರೆ. ಈ ಹಿನ್ನೆಲೆ ಘಟನೆ ನಡೆದ ಸ್ಥಳಗಳಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ದುರಂತ ನಡೆದ ಸ್ಥಳದಲ್ಲಿ ಜನವಸತಿ ಇರದ ಕಾರಣ ಕಳ್ಳರು ಅದರ ಲಾಭ ಪಡೆದುಕೊಳ್ಳುತ್ತಿದ್ದಾರೆ. ಮನೆಯಲ್ಲಿನ ಮೌಲ್ಯಯುತ ವಸ್ತುಗಳು ಕಳ್ಳತನವಾಗುತ್ತಿವೆ. ಹೀಗಾಗಿ ಕ್ರಮ ಕೈಗೊಳ್ಳಬೇಕು ಎಂದು ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ. ಭೂಕುಸಿತದ […]