ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಮಂಡೇಟಿರ ಅನಿಲ್ ಅಯ್ಯಪ್ಪ ಆಯ್ಕೆ

ಜನವಾಹಿನಿ NEWS ಮಡಿಕೇರಿ : ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ನೂತನ ಉಪಾಧ್ಯಕ್ಷರಾಗಿ ಮಂಡೇಟಿರ ಅನಿಲ್ ಅಯ್ಯಪ್ಪ ರವರನ್ನು ಆಯ್ಕೆ ಮಾಡಿ ಆದೇಶ ಪತ್ರವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ ನವರು ಹಸ್ತಾಂತರಿಸಿದರು. ಮಂಡೇಟಿರ ಅನಿಲ್ ಅಯ್ಯಪ್ಪ ಹಲವು ವರ್ಷಗಳಿಂದ ಕಾಕೋಟುಪರಂಬು ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಆದೇಶ ಪತ್ರ ಹಸ್ತಾಂತರ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಅಧ್ಯಕ್ಷರಾದ ಶ್ರೀ ಪಟ್ಟಡ ರಂಜಿ ಪೂಣಚ್ಚ, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರಾದ ಮತೀನ್, ಮಾಜಿ ಪುರಸಭೆ […]
ನಾಪೊಕ್ಲು ಬ್ಲಾಕ್ ವ್ಯಾಪ್ತಿಯ ನೂತನ ವಲಯ ಕಾಂಗ್ರೆಸ್ ಅಧ್ಯಕ್ಷರ ನೇಮಕ

ಜನವಾಹಿನಿ NEWS ಮಡಿಕೇರಿ : ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ನಾಪೊಕ್ಲು ಬ್ಲಾಕ್ ನ ಹದಿನೆಂಟು ವಲಯಗಳಿಗೆ ನೂತನ ವಲಯ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ ಪತ್ರವನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪನವರು ಕೊಡಗು ಜಿಲ್ಲಾ ಕಾಂಗ್ರೆಸ್ ಕಛೇರಿ ಮಡಿಕೇರಿಯಲ್ಲಿ ವಿತರಿಸಿದರು. ನಾಪೊಕ್ಲು ಮಾಚೆಟ್ಟಿರ ಕುಶು ಕುಶಾಲಪ್ಪ. ಬಲ್ಲಮಾವಟಿ ಮಂಡಿರ ದಯಾ ಚಿಣ್ಣಪ್ಪ,ಬೆಟ್ಟಗೇರಿ ಕೊಡಗನ ತೀರ್ಥ ಪ್ರಸಾದ್,ಎಮ್ಮೆಮಾಡು ಕೂರಳಿಕಾರಂಡ ಕೆ.ಎಂ.ಮೂಸಾ,ನರಿಯಂದಡ ಕೋಡಿರ ವಿನೋದ್ ನಾಣಯ್ಯ,ಮೇಕೆರಿ ಹೆಚ್.ಸಿ.ಪೊನ್ನಪ್ಪ, ಮದೆನಾಡು ಮಜ್ಜಿಗೆಮನೆ ದೀಪಕ್,ಪಾರಾಣೆ ಬೊಳ್ಳಂಡ […]
ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮ ಖಂಡಿಸಿ ಪ್ರತಿಭಟನೆ ; ವಿಧ್ಯಾರ್ಥಿಗಳ ಭವಿಷ್ಯಕ್ಕೆ ಬಿಜೆಪಿ ಮಾರಕವಾಗಿದೆ :ಎ.ಎಸ್.ಪೊನ್ನಣ್ಣ ಆತಂಕ

ಜನವಾಹಿನಿ NEWS ಮಡಿಕೇರಿ : ಪ್ರಸ್ತುತ ಸನ್ನಿವೇಶದಲ್ಲಿ ಮುಂದಿನ ಪ್ರಜೆಗಳಾಗಬೇಕಿರುವ ವಿಧ್ಯಾರ್ಥಿಗಳ ಭವಿಷ್ಯಕ್ಕೆ ಕೇಂದ್ರದ ಬಿಜೆಪಿ ಮಾರಕವಾಗಿದೆ ಎಂದು ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಆತಂಕ ವ್ಯಕ್ತಪಡಿಸಿದ್ದಾರೆ. ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮ ಖಂಡಿಸಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಗೋಣಿಕೊಪ್ಪ ಬಸ್ ನಿಲ್ದಾಣದಲ್ಲಿ ಆಯೋಜಿಸಿದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು ದೇಶದಲ್ಲಿ 25 ಲಕ್ಷ ವಿಧ್ಯಾರ್ಥಿಗಳು ಭಾದಿತರಾಗಿದ್ದಾರೆ, 20 ಕ್ಕೂ ಹೆಚ್ಚು ಹದಿಹರೆಯದ ವಿಧ್ಯಾರ್ಥಿಗಳು ಸಾವನಪ್ಪಿದ್ದಾರೆ. ಆದರೆ ಪ್ರಧಾನ ಮಂತ್ರಿ ಹಾಗೂ […]
ಕೂಡಿಗೆ : ಶಾಸಕ ಡಾ.ಮಂತರ್ ಗೌಡ ಅವರಿಂದ 1 ಕೋಟಿ ರೂ ವೆಚ್ಚದ ಕಾಮಗಾರಿಗಳ ಲೋಕಾರ್ಪಣೆ

ಜನವಾಹಿನಿ NEWS ಮಡಿಕೇರಿ : ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ರವರು ಕೂಡಿಗೆ ವ್ಯಾಪ್ತಿಯಲ್ಲಿ 1 ಕೋಟಿ ರೂ ವೆಚ್ಚದ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಿದರು. ಜೇನುಕಲ್ಲು ಬೆಟ್ಟ ಭುವನ ಗಿರಿ ಗ್ರಾಮದಲ್ಲಿ 44.60 ವೆಚ್ಚದ ಕಾಂಕ್ರೀಟ್ ರಸ್ತೆ,ಸೀಗೆ ಹೊಸೂರು ಕಾಲೋನಿಯಲ್ಲಿ 25.5 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ, ಹಾಗೂ ಹುಣಸೆಪಾರೆ ಪರಿಶಿಷ್ಟ ಪಂಗಡದ ಕಾಲೋನಿಗೆ 30 ಲಕ್ಷ ರೂಗಳ ಕಾಂಕ್ರೀಟ್ ಕಾಮಗಾರಿಯನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು ಕ್ಷೇತ್ರದ ವ್ಯಾಪ್ತಿಯಲ್ಲಿ ರಸ್ತೆ […]
ಖ್ಯಾತ ಬಹುಭಾಷಾ ಗಾಯಕಿ ಎಸ್ ಜಾನಕಿ ನಿಧನಕ್ಕೆ ಸಿಎಂ ಡಿಕೆ ಶಿವಕುಮಾರ್ ಸಂತಾಪ

ಜನವಾಹಿನಿ NEWS ಬೆಂಗಳೂರು : ಖ್ಯಾತ ಬಹುಭಾಷಾ ಗಾಯಕಿ ಎಸ್ ಜಾನಕಿ ಅಮ್ಮನವರ ನಿಧನಕ್ಕೆ ಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಭಾರತೀಯ ಚಿತ್ರರಂಗದ ಅಪ್ರತಿಮ ಹಿನ್ನೆಲೆ ಗಾಯಕಿ, ಕನ್ನಡ ಚಿತ್ರರಂಗದ ಮೇರುಗಾಯಕಿ, ಗಾನಕೋಗಿಲೆ ಶ್ರೀಮತಿ ಎಸ್. ಜಾನಕಿ ಅವರ ನಿಧನದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ ಎಂದಿರುವ ಡಿ.ಕೆ ಶಿವಕುಮಾರ್ ತಮ್ಮ ಕಂಠಸಿರಿಯ ಮೂಲಕ ಕೋಟ್ಯಂತರ ಜನರ ಮನೆಮನಗಳಲ್ಲಿ ನೆಲೆಸಿದ್ದ ಬಹುಭಾಷಾ ಗಾಯಕಿ ಜಾನಕಮ್ಮನವರ ನಿಧನದಿಂದ ಸಂಗೀತ ಕ್ಷೇತ್ರದ ಮಹಾನ್ ಸ್ವರಮಾಧುರ್ಯ ಮೌನವಾದಂತಾಗಿದೆ ಎಂದು […]
ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷರ ನೇಮಕ : ಕುಮಾರಸ್ವಾಮಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ತಾಲ್ಲೂಕು ಅಧ್ಯಕ್ಷರ ನಿಯೋಗ

ಜನವಾಹಿನಿ NEWS ಮಡಿಕೇರಿ : ಕಳೆದ ಸುಮಾರು ನಾಲ್ಕು ವರ್ಷಗಳಿಂದ ಕೊಡಗು ಜಿಲ್ಲಾ ಜೆಡಿಎಸ್ ಅಧ್ಯಕ್ಷರ ನೇಮಕವಾಗದ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೊಡಗಿನ ವಿವಿಧ ತಾಲ್ಲೂಕುಗಳ ಜೆಡಿಎಸ್ ಅಧ್ಯಕ್ಷರ ನಿಯೋಗವು ಇಂದು ಬೆಂಗಳೂರಿನ ಜೆಪಿ ಭವನದಲ್ಲಿರುವ ಪಕ್ಷದ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ,ಜೆಡಿಎಸ್ ರಾಜ್ಯಾ ಧ್ಯಕ್ಷ,ಕೇಂದ್ರ ಸಚಿವ ಎಚ್. ಡಿ. ಕುಮಾರ ಸ್ವಾಮಿ ಅವರನ್ನು ಭೇಟಿ ಮಾಡಿ, ಜಿಲ್ಲೆಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡುವಂತೆ ಮನವಿ ಸಲ್ಲಿಸಿತು. ನಿಯೋಗದ ಮನವಿಗೆ ಸ್ಪಂದಿಸಿದ […]
ಕಾಡಾನೆ ಹಾವಳಿ ತಡೆಗೆ ವಿಫಲ, ರೈತರ ಕಡೆಗಣನೆ ಆರೋಪ : ರಾಜ್ಯ ಸರಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ, ವಾಹನ ಜಾಥಾ

ಜನವಾಹಿನಿ NEWS ಮಡಿಕೇರಿ : ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಕಾಡಾನೆ ಹಾಗೂ ಮಾನವ ಸಂಘರ್ಷವನ್ನು ತಡೆಯಲು ವಿಫಲವಾದ ಹಾಗೂ ರೈತರನ್ನು ಕಡೆಗಣಿಸಿರುವ ರಾಜ್ಯ ಸರ್ಕಾರದ ದೋರಣೆಯ ವಿರುದ್ಧ ಸೋಮವಾರ ಬೃಹತ್ ಜನಾಕ್ರೋಶ ವಾಹನ ಜಾಥಾ ಹಾಗೂ ಪ್ರತಿಭಟನಾ ಸಭೆ ಮಡಿಕೇರಿ ನಗರದಲ್ಲಿ ನಡೆಯಿತು. ಜಿಲ್ಲೆಯ ಭಾಗಮಂಡಲ, ಸೋಮವಾರಪೇಟೆ, ಕುಟ್ಟ, ಸಿದ್ದಾಪುರ, ತೊರೆನೂರು ವ್ಯಾಪ್ತಿಯಿಂದ ನೂರಾರು ವಾಹನಗಳ ಮೂಲಕ ಕಾರ್ಯಕರ್ತರು, ರೈತರೊಂದಿಗೆ ವಾಹನ ಜಾಥಾ ಮೂಲಕ ಆಗಮಿಸಿ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಸಮಾವೇಶಗೊಂಡರು. ಈ ಸಂದರ್ಭ ಕೊಡಗು ಮತ್ತು […]
ಜೆಡಿಎಸ್ ಅಲ್ಪಸಂಖ್ಯಾತ ಘಟಕ ನಾಯಕರ ಸಭೆ

ಜನವಾಹಿನಿ NEWS ಸಿದ್ದಾಪುರ : ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯದ ಪ್ರಮುಖ ನಾಯಕರ ಸಭೆ ಜೆಡಿಎಸ್ ರಾಜ್ಯಾಧ್ಯಕ್ಷಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಬೆಂಗಳೂರು ಜೆಪಿ ಭವನದಲ್ಲಿರುವ ಜೆಡಿಎಸ್ ರಾಜ್ಯ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷದ ಸಂಘಟನೆ ಬಲಪಡಿಸುವುದು, ಸಮುದಾಯದಲ್ಲಿ ಸಂಘಟನೆಯನ್ನು ಅಲ್ಪಸಂಖ್ಯಾತ ಪಕ್ಷದ ಇನ್ನಷ್ಟು ವಿಸ್ತರಿಸುವುದು ಹಾಗೂ ಮುಂಬರುವ ರಾಜಕೀಯ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಕೊಡಗು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಜಾಸಿರ್‌ಮೂರ್ನಾಡ್, ರಾಜ್ಯಕಾರ್ಯಾಧ್ಯಕ್ಷ ಶರೀಫ್ ಸುಂಟಿಕೊಪ್ಪ, ವಿರಾಜಪೇಟೆ ತಾಲೂಕು ಯುವ ಘಟಕದ […]
ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ : ಯು.ಟಿ. ಖಾದರ್ ; ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ಮಾಹಿತಿ ಪಡೆದ ಸಚಿವರು

ಜನವಾಹಿನಿ NEWS ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಅತಿವೃಷ್ಠಿ ಹಾಗೂ ಅನಾವೃಷ್ಠಿಯನ್ನು ಎದುರಿಸಲು ಸಜ್ಜಾಗುವಂತೆ ಪ್ರಾಕೃತಿಕ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ. ಖಾದರ್ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಭಾನುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಸದ್ಯ ಜುಲೈ ಮತ್ತು […]
ಜು.5 ರಂದು ಕೊಡಗು ಜಿಲ್ಲೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯುಟಿ ಖಾದರ್ ಪ್ರವಾಸ

ಜನವಾಹಿನಿ NEWS ಮಡಿಕೇರಿ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ.ಖಾದರ್ ಅವರು ಜುಲೈ, 05 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಜುಲೈ, 05 ರಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಆಪ್ತ ಕಾರ್ಯದರ್ಶಿ ಮಹೇಶ ಕರ್ಜಗಿ ಅವರು ತಿಳಿಸಿದ್ದಾರೆ.