Breaking News :

ಶಾಸಕ ಪೊನ್ನಣ್ಣನಿಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ಮುಖ್ಯಮಂತ್ರಿ ಹಾಗೂ ಮಾಜಿ ಸಿಎಂಗೆ ಮನವಿ

  ಜನವಾಹಿನಿ NEWS ಮಡಿಕೇರಿ : ಸಚಿವ ಸಂಪುಟ ವಿಸ್ತರಣೆ ಸಂದರ್ಭ ವಿರಾಜಪೇಟೆ ಶಾಸಕರಾದ ಎ.ಎಸ್‌ ಪೊನ್ನಣ್ಣ ನವರಿಗೆ ಸಚಿವ ಸ್ಥಾನ ನೀಡುವಂತೆ ಕೊಡಗಿನ ನಿವೃತ ಸೇನಾಧಿಕಾರಿಗಳು, ನಿವೃತ ವಾಯುಪಡೆ ಅಧಿಕಾರಿಗಳು , ಮಾಜಿ ಒಲಿಂಪಿಯನ್‌ಗಳು , ಪ್ರಮುಖರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು. ಕೊಡಗಿನ ಮಾನವ ಪ್ರಾಣಿ ಸಂಘರ್ಷ, ಪ್ರವಾಸೋದ್ಯಮ, ಭೂ ಪರಿವರ್ತನೆಯಂತಹ ಕೆಲವು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದೆ, ಜಿಲ್ಲೆಯ ಅಭಿವೃದ್ಧಿ ಮತ್ತು ಜನರ ಸಮಸ್ಯೆಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳುವ […]

ಕೇಂದ್ರ ಸರ್ಕಾರದ ಬೇಜವಾಬ್ದಾರಿಯೆ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣ : ಕೊಡಗು ಕಾಂಗ್ರೆಸ್ ಆರೋಪ – ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯ

  ಜನವಾಹಿನಿ NEWS ಮಡಿಕೇರಿ : ಕೇಂದ್ರ ಸರ್ಕಾರದ ದುರಾಡಳಿತ ಮತ್ತು ಬೇಜವಾಬ್ದಾರಿಯಿಂದ ನೀಟ್ ಯುಜಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ವಿದ್ಯಾರ್ಥಿಗಳ ಜೀವನ ಹಾಳಾಗುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಆರೋಪಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ನೀಟ್ ಯುಜಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಈ ವೈಫಲ್ಯದ ಹೊಣೆಗಾರಿಕೆಯನ್ನು ಸರಿಪಡಿಸುವ ಯಾವುದೇ ಮಹತ್ವದ ಕ್ರಮವನ್ನು ಕೇಂದ್ರ ಸರ್ಕಾರ ಕೈಗೊಂಡಿಲ್ಲ. ಪರೀಕ್ಷೇಗಳ ನಿರ್ವಹಣೆಯ ಜವಬ್ದಾರಿ ಹೊತ್ತಿರುವ ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂಧ್ರ […]

ಪ್ರಕೃತ್ತಿ ವಿಕೋಪ ನಿರ್ವಹಣೆ ಉಸ್ತುವಾರಿ ಸಚಿವರಾಗಿ ಕೊಡಗಿಗೆ ಯುಟಿ ಖಾದರ್ ನೇಮಕ 

  ಜನವಾಹಿನಿ NEWS ಮಡಿಕೇರಿ : ಮುಂಗಾರು ಹಿನ್ನಲೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಪ್ರಕೃತಿ ವಿಕೋಪ ನಿರ್ವಹಣೆಗೆ ಸಚಿವರ ನೇಮಕ ಮಾಡಲಾಗಿದ್ದು, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿ ನಿರ್ಗಮಿತ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಶ್ರೀ ಕ್ಷೇತ್ರ ಕಾರಿಂಜದಲ್ಲಿ ಸಂಸದ ಕ್ಯಾ. ಚೌಟ ನೇತೃತ್ವದ ೩ನೇ ಆವೃತ್ತಿಯ ʼಯೋಗ ವಿದ್‌ ಯೋಧʼ ಕಾರ್ಯಕ್ರಮ : ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ವಿತರಣೆ

  ಜನವಾಹಿನಿ NEWS ಬಂಟ್ವಾಳ : ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಭೂಕೈಲಾಸವೆಂದೇ ಪ್ರಸಿದ್ಧವಾದ ಐತಿಹಾಸಿಕ ಶ್ರೀ ಕ್ಷೇತ್ರ ಕಾರಿಂಜೇಶ್ವರ ಬೆಟ್ಟದ ಆವರಣದಲ್ಲಿ 3ನೇ ಆವೃತ್ತಿಯ ’ಯೋಗ ವಿದ್ ಯೋಧ’ ಬೃಹತ್ ಯೋಗಾಭ್ಯಾಸ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆಯಿತು. ಪ್ರಕೃತಿ ಹಾಗೂ ದೈವಿಕತೆಯ ಮಡಿಲಲ್ಲಿ ಮನಸ್ಸನ್ನು ಶಾಂತಗೊಳಿಸಿ, ದೇಹವನ್ನು ಹತೋಟಿಗೆ ತರುವ ಈ ಅಪೂರ್ವ ಯೋಗಾಭ್ಯಾಸಕ್ಕೆ ಪ್ರಕೃತಿ ರುದ್ರ ರಮಣೀಯ ಕೊಡ್ಯಾಮಲೆ ಬೆಟ್ಟಗಳ ಶ್ರೇಣಿ ಸಾಕ್ಷಿಯಾಯಿತು. ದ.ಕ. ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ […]

ಜಿಲ್ಲಾ ಅಭಿವೃದ್ಧಿ ಮತ್ತು ಸಮನ್ವಯ ಸಮಿತಿ ಸಭೆ : ಕೇಂದ್ರ ಸರ್ಕಾರದ ಹಲವು ಯೋಜನಾ ಕಾರ್ಯಕ್ರಮ ಪರಿಣಾಮಕಾರಿಯಾಗಿ ತಲುಪಿಸಿ ; ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ 

  ಜನವಾಹಿನಿ NEWS ಮಡಿಕೇರಿ : ಸಂಸದರಾದ ಯುದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯಲ್ಲಿ ಪಾರಂಪರಿಕ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದು, ಅಮೃತ್ 2.0 ಯೋಜನೆ, ಜಲಜೀವನ್ ಅಭಿಯಾನ, ಸ್ವಚ್ಛ ಭಾರತ ಅಭಿಯಾನ, ವನ್ಯ ಪ್ರಾಣಿಗಳ ಹಾವಳಿ ನಿಯಂತ್ರಣ ಹಾಗೂ ಕೃಷಿ ಚಟುವಟಿಕೆ ಸಂಬಂಧ ಸುದೀರ್ಘ ಚರ್ಚೆ ನಡೆಯಿತು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ದಿಶಾ ಸಮಿತಿ ಸಭೆಯ ಆರಂಭದಲ್ಲಿ ಮಡಿಕೇರಿ ನಗರದ […]

ತೈಲ,ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕುಶಾಲನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ

  ಜನವಾಹಿನಿ NEWS ಕುಶಾಲನಗರ : ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ, ಯುರಿಯ ರಸಗೊಬ್ಬರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಶನಿವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಬಾವುಟ,ಬ್ಯಾನರ್ ಹಿಡಿದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಗೌಡ ಸಮಾಜ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಬಳಿಯಿಂದ ಜೀಪ್ ಗೆ ಹಗ್ಗ ಕಟ್ಟಿ ಕಾರ್ಯಕರ್ತರು ಎಳೆಯುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ […]

ಅನಿಲ ದರ ಏರಿಕೆ ಖಂಡಿಸಿ ಮಡಿಕೇರಿಯಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಪ್ರತಿಭಟನೆ

  ಜನವಾಹಿನಿ NEWS ಮಡಿಕೇರಿ : ಅಡುಗೆ ಅನಿಲದ ಬೆಲೆ ಏರಿಕೆ ಖಂಡಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ಕೊಡಗು ಜಿಲ್ಲಾ ವತಿಯಿಂದ ನಗರದ ಇಂದಿರಗಾಂಧಿ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು. ವಿಮೆನ್ ಇಂಡಿಯಾ ಮೂವ್ಮೆಂಟ್‌ನ ಪ್ರದಾನ ಕಾರ್ಯದರ್ಶಿ ರಿಶಾನ್ ತೈಸೀರ್ ಮಾತನಾಡಿ, ಅಂದಿನ ಕಾಲದಲ್ಲಿ ಒಲೆ ಹುರಿದರೆ ಮನೆ ಹುರಿದಂತೆ ಎಂದು ಅಜ್ಜಿ ಹೇಳುತ್ತಿದ್ದರು. ಆದರೆ, ಇಂದು ಒಂದು ಒಲೆ ಹುರಿಬೇಕಾದರೆ ಕುಟುಂಬಸ್ಥರು ಒಟ್ಟುಗೂಡಿ ಯೋಚನೆ ಮಾಡುಬೇಕಾದ ಪರಿಸ್ಥಿತಿ ಎದುರಾಗಿದೆ. ಅಂದು ಮೋದಿಯವರು ಉಜ್ವಲ ಹೆಸರಿನಲ್ಲಿ ಸಿಲಿಂಡರ್ ನೀಡಿದರು. […]

ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಸಿಆರ್‍ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು: ಯದುವೀರ್ ಒಡೆಯರ್

  ಜನವಾಹಿನಿ NEWS ಮಡಿಕೇರಿ : ಕೊಡಗು ಜಿಲ್ಲೆಯ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ಉತ್ತೇಜನ ನೀಡುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರವು ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ ಅಡಿಯಲ್ಲಿ ಜಿಲ್ಲೆಯ ಮೂರು ಪ್ರಮುಖ ರಾಜ್ಯ ಹೆದ್ದಾರಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಒಟ್ಟು ₹ 22 ಕೋಟಿ ಮಂಜೂರು ಮಾಡಿದೆ ಎಂದು ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಿಳಿಸಿದ್ದಾರೆ. ಕೊಡಗಿನ ಬಹುಕಾಲದ ರಸ್ತೆ ಅಭಿವೃದ್ಧಿ ಅಗತ್ಯಗಳಿಗೆ ಸ್ಪಂದಿಸಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ […]

ಪತ್ರಕರ್ತರು ಸಮಾಜದ ಕಣ್ಣು-ಕಿವಿ ಇದ್ದಂತೆ ಕೊಡಗು ಪ್ರೆಸ್‌ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಡಿಕೇರಿ ಪ್ರಸನ್ನ

  ಜನವಾಹಿನಿ NEWS ಮಡಿಕೇರಿ : ಸಮಾಜದ ಕಣ್ಣು ಹಾಗೂ ಕಿವಿಯಾಗಿರುವ ಪತ್ರಕರ್ತರು, ಸತ್ಯವನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಸಮಾಜ ಸೇವಕ ಹಾಗೂ ಉದ್ಯಮಿ, ಲೀಡಿಂಗ್ ಎಡ್ಜ್ ಅಡ್ವಟೈಸಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಎಡಿಕೇರಿ ಪ್ರಸನ್ನ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಭಾನುವಾರ ನಡೆದ ಕೊಡಗು ಪ್ರೆಸ್‌ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ದಿನವಿಡೀ ಸುದ್ದಿಯ ಹಿಂದಿರುವ ಪತ್ರಕರ್ತರು ವರ್ಷಕ್ಕೊಮ್ಮೆ ಸಂಭ್ರಮದಿಂದ ಕಳೆಯುವುದು ಶ್ಲಾಘನೀಯ ಎಂದ ಅವರು, ಸಮಾಜದ ಕಣ್ಣು ಹಾಗೂ […]

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ರಾಜಕೀಯ ಪಕ್ಷಗಳ ಮುಖಂಡರ ಜೊತೆ ಜಿಲ್ಲಾಧಿಕಾರಿ ಸಭೆ 

  ಜನವಾಹಿನಿ NEWS ಮಡಿಕೇರಿ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಮುಖಂಡರ ಜೊತೆ ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇರ್ ಅವರು ಶುಕ್ರವಾರ ಸಭೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲಿ ನಡೆದ ಸಭೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯನ್ನು ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ಮತ್ತು ಪಾರದರ್ಶಕವಾಗಿ ಪೂರ್ಣಗೊಳಿಸಲು ಪಕ್ಷದ ಮುಖಂಡರುಗಳು ಸಹಕಾರ ನೀಡುವಂತೆ ಕೋರಿದರು. ಭಾರತ ಚುನಾವಣಾ ಆಯೋಗವು ವಿಶೇಷ ಸಮಗ್ರ ಪರಿಷ್ಕರಣೆಗೆ ಅರ್ಹತಾ ದಿನಾಂಕ 2026 ಅಕ್ಟೋಬರ್ 1 ನ್ನು […]