ವಿವಿಧ ಸಂಘ ಸಂಸ್ಥೆಗಳು ಹಾಗೂ ಅಭಿಮಾನಿಗಳಿಂದ ಶಾಸಕರಾದ ಡಾ.ಮಂತರ್ ಗೌಡ ಅವರಿಗೆ ಅಭಿನಂದನೆ

ಜನವಾಹಿನಿ News ಮಡಿಕೇರಿ : ಹಲವು ದಶಕಗಳಿಂದ ಸಮಸ್ಯೆಯಾಗಿ ಉಳಿದಿದ್ದ ಕೊಡಗಿನ ಜಮ್ಮಾ ಭೂಮಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ ವಿದೇಯಕವನ್ನು ಸದನದಲ್ಲಿ ಮಂಡಿಸಿ ಕಾಯ್ದೆ ರೂಪಕ್ಕೆ ಜಾರಿಗೊಳಿಸುವಲ್ಲಿ ಶ್ರಮಿಸಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ ಅವರನ್ನು ಶುಕ್ರವಾರ ಅಭಿನಂದಿಸಲಾಯಿತು. ನಗರದ ಲಯನ್ಸ್ ಸಂಸ್ಥೆ ಸಭಾಂಗಣದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಶಾಸಕರಾದ ಡಾ.ಮಂತರ್ ಗೌಡ ಅವರಿಗೆ ಜಿಲ್ಲೆಯ ವಿವಿಧ ಸಂಘಟನೆಗಳು ಹಾಗೂ ಅಭಿಮಾನಿಗಳು ಶಾಲೂ, ಫಲ ತಾಂಬೂಲ, […]
ಸಂಸದರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಕೊಡಗು ಜೆಡಿಎಸ್ ಅಲ್ಪಸಂಖ್ಯಾತ ಮುಖಂಡರು

ಜನವಾಹಿನಿ News ಮಡಿಕೇರಿ : ಕೊಡಗು ಮೈಸೂರು ಲೋಕಸಭಾ ಕ್ಷೇತ್ರದಸಂಸದರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡಯರ್ ರವರನ್ನು ಕೊಡಗು ಜಿಲ್ಲೆಯ ಜೆಡಿಎಸ್ ಅಲ್ಪಸಂಖ್ಯಾತ ಮುಖಂಡರು ಭೇಟಿಯಾಗಿ ವಿವಿಧ ಬೇಡಿಕೆಗಳಿಗೆ ಮನವಿ ಸಲ್ಲಿಸಿದರು. ಅಲ್ಪಸಂಖ್ಯಾತ ಸಮುದಾಯದ ಸಮುದಾಯ ಭವನ,ಮಸೀದಿ, ಕಬರ್ ಸ್ಥಾನಗಳಿಗೆ ,ತಡೆಗೋಡೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಂಸದರಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ವಿರಾಜಪೇಟೆ ತಾಲೂಕು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸೈಫುದ್ದಿನ್ ಚಾಮಿಯಾಲ,ಕುಶಾಲನಗರ ತಾಲೂಕು ಅಲ್ಪಸಂಖ್ಯಾತ ಅಧ್ಯಕ್ಷ ಶಿಯಾಬುದ್ದೀನ್, ವಿ.ಪಿ.ಎ.ಸ್ ನೆಲ್ಯಹುದಿಕೇರಿ ಮಡಿಕೇರಿ […]
ಪ್ರಧಾನಿ ಅವಹೇಳನ : ಆರೋಪಿಗಳು ಮಡಿಕೇರಿ ಬಿಜೆಪಿ ಮುಖಂಡರ ಚೇಲಾಗಳು ಕೊಡಗು ಕಾಂಗ್ರೆಸ್ ಆರೋಪ

ಜನವಾಹಿನಿ News ಮಡಿಕೇರಿ : ದೇಶದ ಪ್ರಧಾನ ಮಂತ್ರಿಗಳನ್ನು ಅಪಮಾನಿಸಿ ಬಂಧಿತರಾಗಿರುವ ಕಿಡಿಗೇಡಿ ಆರೋಪಿಗಳು ಮಡಿಕೇರಿ ನಗರ ಬಿಜೆಪಿ ಮುಖಂಡರ ಚೇಲಾಗಳಾಗಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಗಂಭೀರ ಆರೋಪ ಮಾಡಿದ್ದಾರೆ. ಸಂವಿಧಾನ ಬದ್ದ ಹುದ್ದೆಯಲ್ಲಿ ಪರಮ್ಮೋಚ್ಛ ಸ್ಥಾನದಲ್ಲಿರುವ ದೇಶದ ಪ್ರಧಾನ ಮಂತ್ರಿಗಳನ್ನು ಮಡಿಕೇರಿಯ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ಅನಧಿಕೃತ ಮಳಿಗೆಗಳನ್ನು ಮಡಿಕೇರಿ ಬಿಜೆಪಿ ಮುಖಂಡರ ಬಹಿರಂಗ ಕುಮ್ಮಕ್ಕಿನಿಂದ ನಡೆಸುತ್ತಿರುವ ವ್ಯಕ್ತಿಯ ಸಿಬ್ಬಂದಿಗಳು ಅತ್ಯಂತ ಕೀಳಾಗಿ ನಿಂದಿಸಿ ವಿಡಿಯೋ ಹರಿಯಬಿಟ್ಟಿದ್ದು ಈ ಹಿನ್ನಲೆಯಲ್ಲಿ ಮಡಿಕೇರಿ […]
ಪ್ರಧಾನಿಗೆ ಅವಹೇಳನ ಪ್ರಕರಣ : ಆರೋಪಿಗಳ ಗಡಿಪಾರಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಜನವಾಹಿನಿ News ಮಡಿಕೇರಿ : ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಹೇಳನ ಮಾಡಿದ ಯುವಕರ ಗಡಿಪಾರಿಗೆ ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ಇಂದಿರಾಗಾಂಧಿ ವೃತ್ತದಲ್ಲಿ ಸೇರಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಅಸಮಾಧಾನ ಹೊರಹಾಕಿದರಲ್ಲದೆ, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಅಪ್ಪಚ್ಚು ರಂಜನ್, ಭಾರತದ ಪ್ರಧಾನಿ ನರೇಂದ್ರ ಮೋದಿ ಇಡೀ ಪ್ರಪಂಚದಲ್ಲಿಯೇ ವಿಶ್ವಗುರು ಎಂದು […]
ಮಡಿಕೇರಿ : ಸಾಮಾಜಿಕ ಕಾರ್ಯಕರ್ತ ಕಾವೇರಪ್ಪ ಕಾಂಗ್ರೆಸ್ ಗೆ ಸೇರ್ಪಡೆ

ಜನವಾಹಿನಿ News ಮಡಿಕೇರಿ : ಸಾಮಾಜಿಕ ಕಾರ್ಯಕರ್ತ ಹಾಗೂ ನಗರಸಭೆಯ ಬಿಜೆಪಿ ಸದಸ್ಯೆ ಉಷಾ ಕಾವೇರಪ್ಪ ಅವರ ಪತಿ ಎಂ.ಕೆ.ಕಾವೇರಪ್ಪ ಅವರು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಶಾಸಕರ ಅಭಿವೃದ್ಧಿ ಕಾರ್ಯ, ಜನಪರ ಕಾಳಜಿ, ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಇಚ್ಛಾಶಕ್ತಿ ಮತ್ತು ಜನಸ್ನೇಹಿ ಗುಣವನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ ಕಾವೇರಪ್ಪ ತಿಳಿಸಿದರು. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯ ಮೂಲಕ ಶಾಸಕರಿಗೆ ಶಕ್ತಿ ತುಂಬುವುದಾಗಿ ಹೇಳಿದರು. ಈ ಸಂದರ್ಭ […]
ಮಾಲ್ದಾರೆ : ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಭೂಮಿ ಪೂಜೆ ನೆರವೇರಿಸಿದ ಶಾಸಕ ಪೊನ್ನಣ್ಣ

ಜನವಾಹಿನಿ News ಸಿದ್ದಾಪುರ : ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಸಿದ್ದಾಪುರ ಗ್ರಾಮದ ಮಾಲ್ದಾರೆ ಪಂಚಾಯಿತಿ ವ್ಯಾಪ್ತಿಯಲ್ಲಿ ಕ್ಷೇತ್ರ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ ರವರು ವಿವಿಧ ಅಭಿವೃದ್ಧಿ ಕಾರ್ಯಕ್ರಮ ಪ್ರಯುಕ್ತ ಭೇಟಿ ನೀಡಿದರು. ಬಾಡಗ ಬಾಣಂಗಾಲ ಮಠಕ್ಕೆ, ರೂ.20 ಲಕ್ಷ ಅನುದಾನದಲ್ಲಿ, ವಿದ್ಯುತ್ ಸಂಪರ್ಕ ಕಲ್ಪಿಸುವ ನೂತನ ವಿದ್ಯುತ್ ಮಾರ್ಗವನ್ನು ಉದ್ಘಾಟಿಸಿ ಶುಭ ಕೋರಿದ ಶಾಸಕರು ಈ ವ್ಯಾಪ್ತಿಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ” ಲೈನ್ ಮ್ಯಾನ್ ಪರಶುರಾಮ್ ” […]
ಬ್ಯಾನರ್ ತೆರವು ವಿಚಾರಕ್ಕೆ ಗಲಾಟೆ: ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಜನವಾಹಿನಿ News ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದಲ್ಲಿ ಬ್ಯಾನರ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ಮಧ್ಯೆ ಸಂಘರ್ಷ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತನನ್ನು ಹತ್ಯೆ ಮಾಡಲಾಗಿದೆ. ಗಣೇಶ್ ಗೌಡ (38) ಮೃತ ದುರ್ದೈವಿ. ಗಣೇಶ್ ಮುಂದೆ ಬರಲಿರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಸಖರಾಯಪಟ್ಟಣ ಗ್ರಾಮ ಪಂಚಾಯತಿ ಸದಸ್ಯನಾಗಿರುವ ಗಣೇಶ್ ಗೌಡ (38) ಮೃತ ದುರ್ದೈವಿ ಎಂದು ತಿಳಿದುಬಂದಿದ್ದು, ಬಜರಂಗದಳ ಕಾರ್ಯಕರ್ತರು ಕೃತ್ಯವೆಸಗಿರುವ ಆರೋಪ ಕೇಳಿಬಂದಿದೆ. ಗಣೇಶ್ ಮೇಲೆ ಸಂಜಯ್, […]
ಬೆಳೆಗಾರರಿಗೆ ಪರಿಹಾರ ನೀಡದ ಸರ್ಕಾರ : ಖಂಡಿಸಿ ಮಡಿಕೇರಿಯಲ್ಲಿ ಪ್ರತಿಭಟನೆ

ಜನವಾಹಿನಿ News ಮಡಿಕೇರಿ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿಯನ್ನು ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಮ್ಮುಣಿಚಂಡ ರಂಜಿ ಪೂಣಚ್ಚ ಮಾತನಾಡಿ, ಕೇಂದ್ರದ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ರೈತರಿಗೆ ನೀಡುತ್ತಿದ್ದ ಕಿಸಾನ್ ಸಮ್ಮಾನ್ ಯೋಜನೆಯ ರೂ.೬,೦೦೦ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದ ಬಿ.ಜೆ.ಪಿ ಸರ್ಕಾರ ರೂ.೪,೦೦೦ ಒಟ್ಟು ೧೦.೦೦೦ ರೂಪಾಯಿಗಳನ್ನು ನೀಡುತ್ತಿತ್ತು. ಕಾಂಗ್ರೆಸ್ ಆಡಳಿತಕ್ಕೆ […]
ಜನವರಿಯಲ್ಲಿ ದಲಿತರ ಸ್ವಾಭಿಮಾನಿ ಸಮಾವೇಶ : ಸಚಿವರಿಗೆ ಶಾಸಕರಿಗೆ ಪ್ರಶಸ್ತಿ ಪ್ರದಾನ

ಜನವಾಹಿನಿ News ಮಡಿಕೇರಿ : ದಲಿತ ಸಂಘರ್ಷ ಸಮಿತಿ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೪ನೇ ಜನ್ಮದಿನಾಚರಣೆ ಪ್ರಯುಕ್ತ ಬಾಬಾಸಾಹೇಬ್ ಅನುಯಾಯಿಗಳೊಂದಿಗೆ ಸ್ವಾಭಿಮಾನಿ ಸಮಾವೇಶವನ್ನು ಜನವರಿ ತಿಂಗಳಲ್ಲಿ ಮಡಿಕೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಮಡಿಕೇರಿ ತಾಲೂಕು ಅಧ್ಯಕ್ಷ ದೀಪಕ್ ಪೊನ್ನಪ್ಪ ತಿಳಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ ೧೦ ಗಂಟೆಗೆ ಅಶೋಕ್‌ಪುರದಿಂದ ಬುದ್ಧ, ಬಸವ, ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾರ್ಲಾಪಣೆ ಮಾಡಲಾಗುವುದು. ನಂತರ ನಡೆಯುವ ಮೆರವಣಿಗೆಯಲ್ಲಿ ೧೦೦ ಬೈಕ್‌ಗಳು, ೫೦ ಮಹಿಳೆಯರ ಕಳಸ, ಪೂರ್ವಿಕರ ಸ್ತಬ್ಧಚಿತ್ರ, […]
ಉನ್ನತ ಮಟ್ಟದ, ಅತ್ಯಂತ ಪ್ರಾಮುಖ್ಯತೆಯ ಉಪಹಾರ ಭೇಟಿ : ಶಾಸಕ ಪೊನ್ನಣ್ಣ ಭಾಗಿ

ಜನವಾಹಿನಿ News ಬೆಂಗಳೂರು : ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಮತ್ತು ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭೆ ಕ್ಷೇತ್ರದ ಶಾಸಕರಾದ ಎ ಎಸ್ ಪೂನ್ನಣ್ಣನವರು ಉನ್ನತ ಮಟ್ಟದ ಸಭೆಯಲ್ಲಿ ಭಾಗಿ.