Breaking News :

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಗಮನಕ್ಕೆ

  ಜನವಾಹಿನಿ NEWS ಮಡಿಕೇರಿ : ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡಿರುವ ಫಲಾನುಭವಿಗಳಿಗೆ ಜೀವಂತ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಮಾಡಬೇಕೆಂದು ಸಂಸ್ಥೆಗಳು ಹಾಗೂ ಕೆಲವು ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಪ್ರಮಾಣ ಪತ್ರ ಮಾಡಿಸಲು ಹಣ ವಸೂಲು ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಜೀವಂತ ಪ್ರಮಾಣ ಪತ್ರವನ್ನು ಮಾಡಿಸುವ ಬಗ್ಗೆ ಸರ್ಕಾರದಿಂದ ಅಧಿಕೃತ ಆದೇಶ ಸ್ವೀಕೃತವಾಗಿರುವುದಿಲ್ಲ. ಆದ್ದರಿಂದ ಅಧಿಕೃತ ಆದೇಶ ಬಂದ ಕೂಡಲೇ ನಿರ್ದೇಶನ ನೀಡಲಾಗುವುದು. ಫಲಾನುಭವಿಗಳು ಸಹಕರಿಸುವಂತೆ ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ತಿಳಿಸಿದ್ದಾರೆ.

ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ : ಸಚಿವ ರಾಮಲಿಂಗ ರೆಡ್ಡಿ ರಾಜೀನಾಮೆ..!

  ಜನವಾಹಿನಿ NEWS ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ೨೪ ಗಂಟೆ ಕಳೆಯುವ ಮೊದಲೇ ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು, ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡದಿದ್ದಕ್ಕೆ ಹಿರಿಯ ಸಚಿವ ರಾಮಲಿಂಗರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್‌ನ ಪ್ರಭಾವಿ ಹಾಗೂ ಹಿರಿಯ ನಾಯಕರಾಗಿರುವ ರಾಮಲಿಂಗಾರೆಡ್ಡಿ ಅವರು ಬೆಂಗಳೂರು ನಗರಾಭಿವೃದ್ಧಿ ಖಾತೆ ಮೇಲೆ ಕಣ್ಣಿಟ್ಟಿದ್ದರು. ಆದರೆ, ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡದೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿದ್ದು, ಇದು […]

ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಿಸಿದ ನೂತನ ಸಿಎಂ

  ಜನವಾಹಿನಿ NEWS ಬೆಂಗಳೂರು : ಡಿಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಎಲ್ಲಾ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಇಂದು ಸಂಜೆ ವಿಧಾನಸೌಧದಲ್ಲಿ ನಡೆದ ತಮ್ಮ ನೇತೃತ್ವದ ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ರಾಜ್ಯದಲ್ಲಿ ಹೊಸ ಯುಗ ಆರಂಭಿಸಲು, ನಾವು ಮೊದಲ ಸಚಿವ […]

ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ

  ಜನವಾಹಿನಿ NEWS ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಡಾ.ಜಿ ಪರಮೇಶ್ವರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು. ಇದರೊಂದಿಗೆ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ರಾಜಭವನದ ಗಾಜಿನ ಮನೆಯಲ್ಲಿಂದು ನಡೆದ ವರ್ಣರಂಜಿತ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು. ಡಿ.ಕೆ.ಶಿವಕುಮಾರ್ ಅವರು ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದು ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇದೇ ವೇಳೆ ಉಪಮುಖ್ಯಮಂತ್ರಿಯಾಗಿ ಡಾ.ಜಿ ಪರಮೇಶ್ವರ್ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹೆಸರಿನಲ್ಲಿ […]

ಬಿಜೆಪಿ ಆಡಳಿತ ವೈಫಲ್ಯವನ್ನು ಖಂಡಿಸಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

  ಜನವಾಹಿನಿ NEWS ಮಡಿಕೇರಿ : ಮಡಿಕೇರಿ ನಗರಸಭಾ ಬಿಜೆಪಿ ಆಡಳಿತ ಮಂಡಳಿಯ ಕಾರ್ಯವೈಖರಿಯನ್ನು ಪ್ರಶ್ನಿಸಿ, ನಗರ ಕಾಂಗ್ರೆಸ್ ಸಮಿತಿ ವತಿಯಿಂದ ನಗರಸಭೇ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಕಾಶ್ ಆಚಾರ್ಯ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ನಗರಸಭಾ ಕಚೇರಿವರೆಗೆ ಕಾರ್ಯಕರ್ತರು ಮೆರವಣಿಗೆಯಲ್ಲಿ ಸಾಗಿದರು. ಈ ಸಂದರ್ಭ ವಿವಿಧ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ತಾಳುತ್ತಿರುವ ನಗರಸಭಾ ಆಡಳಿತ ಮಂಡಳಿ ಮತ್ತು ಜನಪ್ರತಿನಿಧಿಗಳ ವಿರುದ್ಧ ಮೆರವಣಿಗೆಯಲ್ಲಿ ಧಿಕ್ಕಾರ, ಘೋಷಣೆೆಗಳು ಕೂಗಿದರು. ಮೆರವಣಿಗೆ ಬಳಿಕ ಕಾರ್ಯಕರ್ತರು […]

ಪೊನ್ನಂಪೇಟೆಯಲ್ಲಿ ಟಾಸ್ಕ್ ಪೋರ್ಸ್ ಸಮಿತಿ‌ ಸಭೆ : ಮುಂಗಾರು ಶೀಘ್ರ ಆರಂಭ; ಅಗತ್ಯ ಸಿದ್ಧತೆಗೆ ಎ.ಎಸ್.ಪೊನ್ನಣ್ಣ ಸೂಚನೆ

ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮುಂಗಾರು ಶೀಘ್ರ ಆರಂಭವಾಗುವ ಲಕ್ಷಣಗಳು ಕಾಣುತ್ತಿದ್ದು, ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಸೂಚಿಸಿದ್ದಾರೆ. ಪೊನ್ನಂಪೇಟೆಯ ತಾ.ಪಂ.ಸಭಾಂಗಣದಲ್ಲಿ ಶುಕ್ರವಾರ ನಡೆದ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲ್ಲೂಕು ಮಟ್ಟದ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಜಿಲ್ಲೆಯ ಅಲ್ಲಲ್ಲಿ ಗಾಳಿ ಮಳೆಗೆ ಮರದ […]

ಸಿದ್ದಾಪುರ ವಿಜಯ್ ಅಭಿಮಾನಿಗಳಿಂದ ಸಂಭ್ರಮಾಚರಣೆ

  ಜನವಾಹಿನಿ News ಸಿದ್ದಾಪುರ : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಐತಿಹಾಸಿಕ ಜಯಗಳಿಸುವುದರೊಂದಿಗೆ ಕಾಂಗ್ರೆಸ್ ಮತ್ತಿತರ ಮಿತ್ರ ಪಕ್ಷಗಳ ಬೆಂಬಲದೊಂದಿಗೆ ನಟ-ರಾಜಕಾರಣಿ ಸಿ.ಜೋಸೆಫ್ ವಿಜಯ್ ಅವರು ಮೇ 10ರಂದು ಭಾನುವಾರ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಈ ಐತಿಹಾಸಿಕ ಕ್ಷಣವನ್ನು ಸಿದ್ದಾಪುರದಲ್ಲೂ ಅವರ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ, ವಿಜಯ್ ಪರ ಜಯ ಘೋಷಗಳನ್ನು ಕೂಗುವ ಮೂಲಕ ಸಂಭ್ರಮಿಸಿದರು. ಈ […]

ಪಂಚರಾಜ್ಯ ಚುನಾವಣೆ – ಎನ್‌ಡಿಎಗೆ ಗೆಲುವು : ಸಿದ್ದಾಪುರದಲ್ಲಿ ವಿಜಯೋತ್ಸವ 

  ಜನವಾಹಿನಿ News ಮಡಿಕೇರಿ : ದೇಶದ ಮೂರು ಪ್ರಮುಖ ರಾಜ್ಯಗಳಾದ ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿಯಲ್ಲಿ ಬಿಜೆಪಿ (ಎನ್‌ಡಿಎ) ಐತಿಹಾಸಿಕ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸಿದ್ದಾಪುರದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು. ದೇಶದ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಹಾಗೂ ಗೃಹ ಮಂತ್ರಿ ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರ ಮತ್ತು ಕಾರ್ಯಕರ್ತರ ಪರಿಶ್ರಮದ ಫಲವಾಗಿ ಇಂದು ಮೂರು ರಾಜ್ಯಗಳಲ್ಲಿ ಈ ಭರ್ಜರಿ […]

ಉಪ ಚುನಾವಣೆಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ 

    ಜನವಾಹಿನಿ News ಮಡಿಕೇರಿ : ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಿದ ಹಿನ್ನಲೆಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮಡಿಕೇರಿ ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ವಿಜಯೋತ್ಸವ ಆಚರಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ನವರ ನೇತೃದಲ್ಲಿ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಪಟಾಕಿ ಸಿಡಿಸಿ,ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಧರ್ಮಜ ಉತ್ತಪ್ಪ ನವರು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯದ ಕಾಂಗ್ರೆಸ್ […]

ಹಾಕತ್ತೂರು :  50 ಲಕ್ಷ ವೆಚ್ಚದ ತಡೆಗೋಡೆ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ

  ಜನವಾಹಿನಿ News ಮಡಿಕೇರಿ : ಮಡಿಕೇರಿ ತಾಲೂಕಿನ ಹಾಕತ್ತೂರು ಪಂಚಾಯತ್ ವ್ಯಾಪ್ತಿಯ ಚೂರಿಕಾಡು ಬಳಿ ಭೂ ಕುಸಿತ ತಡೆಯುವ ಹಿನ್ನಲೆಯಲ್ಲಿ 50 ಲಕ್ಷ ರೂ ವೆಚ್ಚದ ತಡೆಗೋಡೆ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ನವರು ಇಂದು ಚಾಲನೆ ನೀಡಿದರು. 2002 ರಿಂದಲೇ ಈ ಭಾಗದಲ್ಲಿ ಭೂ ಕುಸಿತವಾಗಿ ಕೃಷಿ ಜಮೀನು ನಾಶವಾಗುವುದಲ್ಲದೆ ಸನಿಹದಲ್ಲಿ ಇರುವ ರಸ್ತೆ ಕೂಡ ಹಾಳಾಗುತ್ತಿದ್ದು ತಡೆಗೋಡೆ ನಿರ್ಮಾಣದ ಮೂಲಕ ರಕ್ಷಣೆ ಮಾಡುವಂತೆ ಸ್ಥಳೀಯರು ಸರ್ಕಾರಕ್ಕೆ ಮನವಿ ಮಾಡುತ್ತಲೇ ಬಂದಿದ್ದರು.ಕಳೆದ ವಿಧಾನ ಸಭಾ ಚುನಾವಣೆ […]