Breaking News :

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ ಕೋರಿದ ಸಿಎಂ

  ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ ಕೋರಿದ ಸಿಎಂ ಬೆಂಗಳೂರು : ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಮತ್ತು ವಂದೇ ಭಾರತ್ ಉದ್ಘಾಟನೆಗೆ ಬೆಂಗಳೂರಿಗೆ  ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೆಚ್‌ಕ್ಯೂಟಿಸಿ ಹೆಲಿಪ್ಯಾಡ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೂಗುಚ್ಚ ನೀಡಿ, ಗಂಧದ ಹಾರ ಹಾಕಿ ಆತ್ಮೀಯವಾಗಿ ಬರಮಾಡಿಕೊಂಡರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.    

ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿಯವರನ್ನು ಶಾಸಕ ಪೊನ್ನಣ್ಣ ಸ್ವಾಗತಿಸಿದರು

ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿಯವರನ್ನು ಶಾಸಕ ಪೊನ್ನಣ್ಣ ಸ್ವಾಗತಿಸಿದರು ಬೆಂಗಳೂರು : ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯುತ್ತಿರುವ ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ ಪ್ರತಿಭಟನೆಯಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ ಸಂಸದರು ಹಾಗೂ ವಿರೋಧ ಪಕ್ಷದ ನಾಯಕರದ ರಾಹುಲ್ ಗಾಂಧಿಯವರನ್ನು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಆತ್ಮೀಯವಾಗಿ ಬರಮಾಡಿಕೊಂಡರು.

ಛತ್ತೀಸಗಢದಲ್ಲಿ ಕ್ರೈಸ್ತ ಸನ್ಯಾಸಿಗಳ ಬಂಧನ ಹಾಗೂ ದೌರ್ಜನ್ಯ ಖಂಡಿಸಿ ಸಿದ್ದಾಪುರದಲ್ಲಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

  ಛತ್ತೀಸಗಢದಲ್ಲಿ ಕ್ರೈಸ್ತ ಸನ್ಯಾಸಿಗಳ ಬಂಧನ ಹಾಗೂ ದೌರ್ಜನ್ಯ ಖಂಡಿಸಿ ಸಿದ್ದಾಪುರದಲ್ಲಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ ಸಿದ್ದಾಪುರ : ಛತ್ತೀಸಗಢದಲ್ಲಿ ಇಬ್ಬರು ಕ್ಯಾಥೊಲಿಕ್‌ ಸನ್ಯಾಸಿನಿಯರ ಬಂಧನ ಹಾಗೂ ಕ್ರೈಸ್ತರ ಮೇಲಿನ ದೌರ್ಜನ್ಯ ಖಂಡಿಸಿ ಸಿದ್ದಾಪುರ ಪ್ರಗತಿಪರ ಸಂಘಟನೆಗಳಿಂದ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು. ನಗರದ ಬಸ್ ನಿಲ್ದಾಣದಲ್ಲಿ ಜಮಾವಣೆಗೊಂಡ ಪ್ರಗತಿಪರ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ದೌರ್ಜನ್ಯ ಹೆಚ್ಚುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಛತ್ತೀಸಗಢ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. […]

ಕೊಡಗು ಜಿಲ್ಲಾ ವಲ್ಫ್ ಮಂಡಳಿ ಅಧ್ಯಕ್ಷರ ನೇಮಕ ವಿಚಾರ: ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಮಹತ್ವದ ಸಭೆ

ಕೊಡಗು ಜಿಲ್ಲಾ ವಲ್ಫ್ ಮಂಡಳಿ ಅಧ್ಯಕ್ಷರ ನೇಮಕ ವಿಚಾರ: ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಮಹತ್ವದ ಸಭೆ ಮಡಿಕೇರಿ : ಶೀಘ್ರದಲ್ಲೇ ತೆರವಾಗಲಿರುವ ಕೊಡಗು ಜಿಲ್ಲಾ ವಲ್ಫ್ ಸಲಹಾ ಮಂಡಳಿ ಅಧ್ಯಕ್ಷರ ನೇಮಕ ವಿಚಾರ ಇದೀಗ ದಿನೇ ದಿನೇ ಬಿರುಸುಕೊಳ್ಳುತ್ತಿದೆ. ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳ ಪಟ್ಟಿ ಹೆಚ್ಚುತ್ತಿರುವುದರಿಂದ ಪಕ್ಷದ ಹೈಕಮಾಂಡಿಗೆ ಈ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಆಡಳಿತ ಪಕ್ಷದ ಜಿಲ್ಲೆಯ ಇಬ್ಬರು ಶಾಸಕರ ನಿರ್ದೇಶನದಂತೆ ಕೊಡಗು ಜಿಲ್ಲಾ ಕಾಂಗ್ರೆಸ್‌ ಅಲ್ಪಸಂಖ್ಯಾತರ […]

ನೆಲ್ಯಹುದಿಕೇರಿಯಲ್ಲಿ ಡಿ ವೈ ಎಫ್ ಐ ಜಿಲ್ಲಾ ಸಮಾವೇಶ : ಯುವ ಸಮೂಹಕ್ಕೆ ಉದ್ಯೋಗ ಸೃಷ್ಟಿಸದ ಸರ್ಕಾರಗಳ ವಿರುದ್ಧ ಆಕ್ರೋಶ

ನೆಲ್ಯಹುದಿಕೇರಿಯಲ್ಲಿ ಡಿ ವೈ ಎಫ್ ಐ ಜಿಲ್ಲಾ ಸಮಾವೇಶ : ಯುವ ಸಮೂಹಕ್ಕೆ ಉದ್ಯೋಗ ಸೃಷ್ಟಿಸದ ಸರ್ಕಾರಗಳ ವಿರುದ್ಧ ಆಕ್ರೋಶ ಮಡಿಕೇರಿ :- ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 78 ವರ್ಷ ಕಳೆದರೂ ಇಂದಿಗೂ ನಿರುದ್ಯೋಗ ಸಮಸ್ಯೆಯಿಂದ ಯುವ ಸಮೂಹ ಅತಂತ್ರ ಸ್ಥಿತಿಯಲ್ಲಿ ದಿನಕಳೆಯಬೇಕಾದ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದ್ದು ಉದ್ಯೋಗ ಸೃಷ್ಟಿಸಬೇಕಾದ ಸರ್ಕಾರಗಳು ಮೌನವಾಗಿರುವ ಹಿನ್ನೆಲೆ ಯುವ ಸಮೂಹವನ್ನು ನಂಬಿರುವ ಕುಟುಂಬಗಳು ಸಂಕಷ್ಟದ ಜೀವನ ನಡೆಸುವಂತಾಗಿದೆ ಎಂದು ಭಾರತ ಪ್ರಜಾ ಸತ್ತಾತ್ಮಕ ಯುವಜನ ಫೆಡರೇಶನ್ ( ಡಿ ವೈ […]

ಬಿರುಕು ಬಿಟ್ಟಿರುವ ತಡೆಗೋಡೆ ವೀಕ್ಷಿಸಿದ ಸಂಸದ ಯದುವೀರ್ ಒಡೆಯರ್ : ಹೆದ್ದಾರಿ ಸುರಕ್ಷತೆ ಬಗ್ಗೆ ಕಾಳಜಿ ವಹಿಸಲು ಇಂಜಿನಿಯರ್ ಗಳಿಗೆ ಸೂಚನೆ

ಬಿರುಕು ಬಿಟ್ಟಿರುವ ತಡೆಗೋಡೆ ವೀಕ್ಷಿಸಿದ ಸಂಸದ ಯದುವೀರ್ ಒಡೆಯರ್ : ಹೆದ್ದಾರಿ ಸುರಕ್ಷತೆ ಬಗ್ಗೆ ಕಾಳಜಿ ವಹಿಸಲು ಇಂಜಿನಿಯರ್ ಗಳಿಗೆ ಸೂಚನೆ ಮಡಿಕೇರಿ : ನಗರ ಸಮೀಪದ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಬಿರುಕು ಬಿಟ್ಟಿರುವ ತಡೆಗೋಡೆಯನ್ನು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಶನಿವಾರ ಭೇಟಿ ನೀಡಿ ವೀಕ್ಷಿಸಿದರು. ಹೆದ್ದಾರಿ ಸುರಕ್ಷತೆ ಸಂಬಂಧ ಜಿಲ್ಲಾಡಳಿತ ಕ್ರಮ ವಹಿಸಿದ್ದು, ಎಂಜಿನಿಯರ್ ಗಳು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಂಸದರು ನಿರ್ದೇಶನ ನೀಡಿದರು. ಹೆದ್ದಾರಿ ಸುರಕ್ಷತೆಗೆ ಒತ್ತು […]

ಜಿಲ್ಲೆಯ ಅಭಿವೃದ್ಧಿ ಸಂಬಂಧ ಸಚಿವರು, ಶಾಸಕರೊಂದಿಗೆ ಸಿಎಂ ಸಿದ್ದರಾಮಯ್ಯ ಸಮಾಲೋಚನೆ

ಜಿಲ್ಲೆಯ ಅಭಿವೃದ್ಧಿ ಸಂಬಂಧ ಸಚಿವರು, ಶಾಸಕರೊಂದಿಗೆ ಸಿಎಂ ಸಿದ್ದರಾಮಯ್ಯ ಸಮಾಲೋಚನೆ ಮಡಿಕೇರಿ : ಕೊಡಗು ಜಿಲ್ಲೆಯ ಅಭಿವೃದ್ಧಿ ಸಂಬಂಧ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ ಅವರೊಂದಿಗೆ ಸಮಾಲೋಚನಾ ಸಭೆ ನಡೆಸಿದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರುಗಳ ಜೊತೆ ಸಭೆ ನಡೆಸಿ, ಜಿಲ್ಲಾ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳು ಉಂಟುಮಾಡಿರುವ ಧನಾತ್ಮಕ ಬದಲಾವಣೆಯ ಮಾಹಿತಿ ಪಡೆದು, ವಿವಿಧ ಇಲಾಖೆಗಳ […]

ಮದ್ದೂರು ಕ್ಷೇತ್ರದಲ್ಲಿ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ : ರಾಜ್ಯದಲ್ಲಿ ಅಭಿವೃದ್ಧಿಗೆ ಹಣವಿಲ್ಲವೆನ್ನುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು : ಸಿದ್ದರಾಮಯ್ಯ

ಮದ್ದೂರು ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ : ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು : ಸಿಎಂ ಸಿದ್ದರಾಮಯ್ಯ  ಮಂಡ್ಯ  : ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಸಿಎಂ ಸಿದ್ದರಾಮಯ್ಯ […]

ಕಾರ್ಯಕರ್ತರನ್ನು ಸಂಘಟಿಸಿ ಪಕ್ಷ ಬಲವರ್ಧನೆಗೆ ಕೈಜೋಡಿಸಿ : ಬಿಜೆಪಿ ಎಸ್.ಸಿ ಮೂರ್ಚಾ ಜಿಲ್ಲಾಧ್ಯಕ ರವಿ ಮನವಿ

ಮಡಿಕೇರಿ : ಜಿಲ್ಲೆಯ ಎಲ್ಲಾ ಭಾಗದಲ್ಲೂ ಎಸ್.ಸಿ ಮೂರ್ಚಾದ ಕಾರ್ಯಕರ್ತರನ್ನು ಸಂಘಟಿಸಿ ಪಕ್ಷದ ಬಲವರ್ಧನೆಗೆ ಕೈಜೋಡಿಸಬೇಕು ಎಂದು ಭಾರತೀಯ ಜನತಾ ಪಾರ್ಟಿಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ ಮನವಿ ಮಾಡಿದ್ದಾರೆ. ನಗರದ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸೋಮವಾರ ನಡೆದ ಭಾರತೀಯ ಜನತಾ ಪಾರ್ಟಿ ಎಸ್.ಸಿ.ಮೋರ್ಚಾದ ಜಿಲ್ಲಾ, ನಗರಮಂಡಲ ಹಾಗೂ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪರಿಶಿಷ್ಟ ಜಾತಿಯ ಸಮುದಾಯಕ್ಕೆ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯ ಕೊರತೆಯಿದ್ದು, ಯೋಜನೆಗಳ ಬಗ್ಗೆ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಜತೆಗೆ […]

ಕ್ಷೇತ್ರದ ಜನಪರ – ಅಭಿವೃದ್ಧಿ ಕೆಲಸ ಮಾಡುವುದರಲ್ಲಿ ಶಿವಲಿಂಗೇಗೌಡರು ಮುಂದಿದ್ದಾರೆ : ಸಿಎಂ ಸಿದ್ದರಾಮಯ್ಯ ಶ್ಲಾಘನೆ 

ಕ್ಷೇತ್ರದ ಜನಪರ – ಅಭಿವೃದ್ಧಿ ಕೆಲಸ ಮಾಡುವುದರಲ್ಲಿ ಶಿವಲಿಂಗೇಗೌಡರು ಮುಂದಿದ್ದಾರೆ : ಸಿಎಂ ಸಿದ್ದರಾಮಯ್ಯ ಶ್ಲಾಘನೆ  ಹಾಸನ : ಕ್ಷೇತ್ರದ ಜನಪರ – ಅಭಿವೃದ್ಧಿ ಕೆಲಸ ಮಾಡುವುದರಲ್ಲಿ, ವಿಧಾನಸಭೆಯಲ್ಲಿ ಪಕ್ಷ ಮತ್ತು ಸರ್ಕಾರದ ಕಾರ್ಯಗಳನ್ನು ಸಮರ್ಥವಾಗಿ ಮಂಡಿಸುವುದರಲ್ಲೂ ಶಿವಲಿಂಗೇಗೌಡರು ಮುಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಹಲವು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಿ ಅವರು ಮಾತನಾಡಿದರು 148 […]