ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಸಂಸದ ಯದುವೀರ್ ಒಡೆಯರ್ ರಿಂದ ಭೂಮಿಪೂಜೆ

ಜನವಾಹಿನಿ News ಮಡಿಕೇರಿ : ರಾಷ್ಟ್ರೀಯ ಹೆದ್ದಾರಿ 275 ರ ಇಬ್ಬನಿ ರೆಸಾರ್ಟ್ ಬಳಿಯಿಂದ ಸಂಪಾಜೆ ವರೆಗೆ 21 ಕಡೆಗಳಲ್ಲಿ ಸುಮಾರು 94 ಕೋಟಿ ರೂ. ವೆಚ್ಚದ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬುಧವಾರ ಭೂಮಿ ಪೂಜೆ ನೆರವೇರಿಸಿದರು. ಮಡಿಕೇರಿ ತಾಲ್ಲೂಕಿನ ಮದೆನಾಡು ಬಳಿಯ ಕರ್ತೋಜಿ ಬಳಿ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಂಸದರು ಸ್ಥಳೀಯರ ಬೇಡಿಕೆಯಂತೆ 21 ಕಡೆಗಳಲ್ಲಿ ರಕ್ಷಣಾ […]
ಚೊಕಂಡಳ್ಳಿ ನಲ್ವತೋಕ್ಲು ಮೋಹಿದೀನ್ ಜುಮಾ ಮಸೀದಿಗೆ ಅನುದಾನ ನೀಡಲು ಸಂಸದರಿಗೆ ಮನವಿ

ಜನವಾಹಿನಿ News ಸಿದ್ದಾಪುರ : ಚೊಕಂಡಳ್ಳಿ ನಲ್ವತೋಕ್ಲು ಮೋಹಿದೀನ್ ಜುಮಾ ಮಸೀದಿಗೆ ಅನುದಾನ ಒದಗಿಸಲು ಸಂಸದ ಯದುವೀರ್ ಒಡೆಯರ್ ಅವರಿಗೆ ವಿರಾಜಪೇಟೆ ತಾಲೂಕು ಜೆಡಿಎಸ್ ಅಲ್ಪಾಸಖ್ಯಾತರ ಘಟಕ ಮನವಿ ಪತ್ರ ಸಲ್ಲಿಸಿದೆ ಸಿದ್ದಾಪುರದ ಎಸ್ .ಎನ್. ಡಿ .ಪಿ (ಶ್ರೀ ನಾರಾಯಣ ಗುರು ಪರಿಪಾಲನ ಯೋಗಂ) ಸಭಾಂಗಣದಲ್ಲಿ ನಡೆದ ಎಸ್. ಎನ್. ಡಿ. ಪಿ .ವನಿತಾ ಮಹಿಳಾ ಸಮಾವೇಶ ಕಾರ್ಯಕ್ರಮಕ್ಕೆ ಆಗಮಿಸಿದ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಯದುವೀರ್ ಚಾಮರಾಜ ದತ್ತ […]
ಕೇರಳ ಚುನಾವಣಾ ಪ್ರಚಾರದಲ್ಲಿ ಶಾಸಕ ಎ.ಎಸ್. ಪೊನ್ನಣ್ಣ

ಜನವಾಹಿನಿ News ಮಡಿಕೇರಿ : ಕೇರಳದ ಕೊಟ್ಟಾಯಂ ಜಿಲ್ಲೆಯ ಚಂಗನಶ್ಶೇರಿಯಲ್ಲಿ, ಇಂದು ನಡೆದ ಚುನಾವಣಾ ಪ್ರಚಾರದಲ್ಲಿ ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ.ಜೆ ಜಾರ್ಜ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು, ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರದಲ್ಲಿ ಪಾಲ್ಗೊಂಡರು.
ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮನ್ ರೇಗಾ ಬಚಾವ್ ಸಂಗ್ರಾಮ : ಬಡವರ ಮೇಲೆ ಬಿಜೆಪಿ ದಾಳಿ : ಶಾಸಕ ಪೊನ್ನಣ್ಣ ಆರೋಪ

ಜನವಾಹಿನಿ News ವಿರಾಜಪೇಟೆ : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ)ಯಿಂದ ಮಹಾತ್ಮಗಾಂಧಿ ಹೆಸರನ್ನು ಕೈಬಿಟ್ಟಿರುವ ಕೇಂದ್ರ ಸರ್ಕಾರದ ವಿರುದ್ಧ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕಾವೇರಿ ಕಾಲೇಜು ಸಮೀಪದಿಂದ ಆರಂಭವಾದ ಮನ್ ರೇಗಾ ಬಚಾವ್ ಸಂಗ್ರಾಮದ ಪಾದಯಾತ್ರೆಯು ವಿರಾಜಪೇಟೆ ಕಾರುನಿಲ್ದಾಣದಲ್ಲಿ ಸಮಾರೋಪಗೊಂಡಿತು. ಈ ವೇಳೆ ಪ್ರತಿಭಟನಾನಿರತರು ಕೇಂದ್ರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು. ಬೃಹತ್ ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ […]
ಶಾಸಕ ಪೊನ್ನಣ್ಣರಿಂದ ರಸ್ತೆ ದುರಸ್ತಿಗೆ ಭೂಮಿ ಪೂಜೆ

ಜನವಾಹಿನಿ News ಸಿದ್ದಾಪುರ : ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಕರಡಿಗೋಡು ಗ್ರಾಮಕ್ಕೆ ತೆರಳುವ ರಸ್ತೆ ದುರಸ್ತಿ ಕಾರ್ಯಕ್ಕೆ ಭಾನುವಾರ ಶಾಸಕ ಪೊನ್ನಣ್ಣ ಗುದ್ದಲಿ ಪೂಜೆ ನೆರವೇರಿಸಿದರು. ಕಳೆದ ಹಲವಾರು ವರ್ಷಗಳಿಂದ ದುರಸ್ತಿ ಕಾಣದಿದ್ದ ಈ ರಸ್ತೆಗೆ ಸುಮಾರು 50 ಲಕ್ಷ ರೂ ಅನುದಾನ ಬಿಡುಗಡೆ ಮಾಡಲಾಗಿದ್ದು, ಸೇಕ್ರೆಡ್ ಹಾರ್ಟ್ ಹಾಸ್ಪಿಟಲ್ ಸಮೀಪದಿಂದ ಬಸವೇಶ್ವರ ದೇವಾಲಯದ ವರೆಗಿನ ಸುಮಾರು ಒಂದು ಕಿಲೋ ಮೀಟರ್ ರಸ್ತೆ ದುರಸ್ತಿ ಕಾರ್ಯ ನಡೆಯಲಿದೆ. ಇದರಲ್ಲಿ ಕಾಂಕ್ರಿಟ್ ರಸ್ತೆ ಮತ್ತು ಡಾಂಬರು […]
ಶನಿವಾರಸಂತೆಯಲ್ಲಿ ನೂತನವಾಗಿ ನಿರ್ಮಿಸಿರುವ ಬಸ್ ನಿಲ್ದಾಣ ಉದ್ಘಾಟನೆ : ಕೊಡ್ಲಿಪೇಟೆಯಲ್ಲಿಯೂ ಜಾಗ ಒದಗಿಸಿದ್ದಲ್ಲಿ ಬಸ್ ನಿಲ್ದಾಣ ನಿರ್ಮಾಣ: ರಾಮಲಿಂಗಾರೆಡ್ಡಿ

ಜನವಾಹಿನಿ News ಮಡಿಕೇರಿ : ಶನಿವಾರಸಂತೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬಸ್ ನಿಲ್ದಾಣಕ್ಕೆ ರಾಷ್ಟ್ರದ ಪ್ರಥಮ ಸೇನಾ ಮಹಾದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವತಿಯಿಂದ ಶನಿವಾರಸಂತೆಯಲ್ಲಿ 105 ಲಕ್ಷ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಬಸ್ ನಿಲ್ದಾಣ ಲೋಕಾರ್ಪಣೆಗೊಳಿಸಿ ಸಚಿವರು ಮಾತನಾಡಿದರು. ಶನಿವಾರಸಂತೆ ಗ್ರಾಮದಲ್ಲಿ ಹುಟ್ಟಿ ಬೆಳೆದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಸೇನಾ ಕ್ಷೇತ್ರದಲ್ಲಿನ ಸೇವೆಯನ್ನು ಸ್ಮರಿಸಿ […]
ಸರ್ಕಾರದ ಸೌಲಭ್ಯ ಬಳಸಿಕೊಂಡು ಶೈಕ್ಷಣಿಕವಾಗಿ, ರಾಜಕೀಯವಾಗಿ ಮುಂದೆ ಬನ್ನಿ : ಸವಿತಾ ಸಮಾಜ ಬಾಂಧವರಿಗೆ ಟಿ.ಪಿ.ರಮೇಶ್ ಸಲಹೆ

ಜನವಾಹಿನಿ News ಮಡಿಕೇರಿ : ಸವಿತಾ ಸಮಾಜವು ಹಿಂದುಳಿದ ವರ್ಗಕ್ಕೆ ಸೇರಿದ್ದು, ಆರ್ಥಿಕ ಹಾಗೂ ಸಾಮಾಜಿಕವಾಗಿ ತುಂಬಾ ಹಿಂದೆ ಇದ್ದಾರೆ. ಆದ್ದರಿಂದ ಸರ್ಕಾರದ ಸೌಲಭ್ಯ ಬಳಸಿಕೊಂಡು ಶೈಕ್ಷಣಿಕ ಹಾಗೂ ರಾಜಕೀಯವಾಗಿ ಮುಂದೆ ಬರಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಸಲಹೆ . ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ಭಾನುವಾರ ನಡೆದ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. […]
ಇತಿಹಾಸ ಮರೆತು ಇತಿಹಾಸ ನಿರ್ಮಿಸಲು ಸಾದ್ಯವಿಲ್ಲ : ಶಾಸಕ ಎ.ಎಸ್.ಪೊನ್ನಣ್ಣ

ಜನವಾಹಿನಿ News ಮಡಿಕೇರಿ : ಇತಿಹಾಸವನ್ನು ಮರೆತು ಇತಿಹಾಸ ನಿರ್ಮಿಸುವುದು ಅಸಾಧ್ಯ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣನವರು ಭಾರತದ ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್ ರವರ ಘೋಷವಾಕ್ಯ ವನ್ನು ಪುನರುಚ್ಚರಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಪೂಜಾರಿರ ರಾಮಪ್ಪ ನವರ ಹೆಸರಿನಲ್ಲಿ ಮೇಕೇರಿ ಬಿಳಿಗೇರಿ, ಅರ್ವತ್ತೋಕ್ಲು ಲಿಂಕ್ ರಸ್ತೆಗೆ ನಾಮಕರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕೊಡಗಿನ ಅನೇಕ ಮಹನೀಯರು ತಮ್ಮ ಬದುಕನ್ನು ತ್ಯಾಗ ಮಾಡಿ ಪಾಲ್ಗೊಳ್ಳುವ […]
ವಿವಿಧ ಸಂಘ ಸಂಸ್ಥೆಗಳು ಹಾಗೂ ಅಭಿಮಾನಿಗಳಿಂದ ಶಾಸಕರಾದ ಡಾ.ಮಂತರ್ ಗೌಡ ಅವರಿಗೆ ಅಭಿನಂದನೆ

ಜನವಾಹಿನಿ News ಮಡಿಕೇರಿ : ಹಲವು ದಶಕಗಳಿಂದ ಸಮಸ್ಯೆಯಾಗಿ ಉಳಿದಿದ್ದ ಕೊಡಗಿನ ಜಮ್ಮಾ ಭೂಮಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ ವಿದೇಯಕವನ್ನು ಸದನದಲ್ಲಿ ಮಂಡಿಸಿ ಕಾಯ್ದೆ ರೂಪಕ್ಕೆ ಜಾರಿಗೊಳಿಸುವಲ್ಲಿ ಶ್ರಮಿಸಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ ಅವರನ್ನು ಶುಕ್ರವಾರ ಅಭಿನಂದಿಸಲಾಯಿತು. ನಗರದ ಲಯನ್ಸ್ ಸಂಸ್ಥೆ ಸಭಾಂಗಣದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಶಾಸಕರಾದ ಡಾ.ಮಂತರ್ ಗೌಡ ಅವರಿಗೆ ಜಿಲ್ಲೆಯ ವಿವಿಧ ಸಂಘಟನೆಗಳು ಹಾಗೂ ಅಭಿಮಾನಿಗಳು ಶಾಲೂ, ಫಲ ತಾಂಬೂಲ, […]
ಸಂಸದರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಕೊಡಗು ಜೆಡಿಎಸ್ ಅಲ್ಪಸಂಖ್ಯಾತ ಮುಖಂಡರು

ಜನವಾಹಿನಿ News ಮಡಿಕೇರಿ : ಕೊಡಗು ಮೈಸೂರು ಲೋಕಸಭಾ ಕ್ಷೇತ್ರದಸಂಸದರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡಯರ್ ರವರನ್ನು ಕೊಡಗು ಜಿಲ್ಲೆಯ ಜೆಡಿಎಸ್ ಅಲ್ಪಸಂಖ್ಯಾತ ಮುಖಂಡರು ಭೇಟಿಯಾಗಿ ವಿವಿಧ ಬೇಡಿಕೆಗಳಿಗೆ ಮನವಿ ಸಲ್ಲಿಸಿದರು. ಅಲ್ಪಸಂಖ್ಯಾತ ಸಮುದಾಯದ ಸಮುದಾಯ ಭವನ,ಮಸೀದಿ, ಕಬರ್ ಸ್ಥಾನಗಳಿಗೆ ,ತಡೆಗೋಡೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಂಸದರಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ವಿರಾಜಪೇಟೆ ತಾಲೂಕು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸೈಫುದ್ದಿನ್ ಚಾಮಿಯಾಲ,ಕುಶಾಲನಗರ ತಾಲೂಕು ಅಲ್ಪಸಂಖ್ಯಾತ ಅಧ್ಯಕ್ಷ ಶಿಯಾಬುದ್ದೀನ್, ವಿ.ಪಿ.ಎ.ಸ್ ನೆಲ್ಯಹುದಿಕೇರಿ ಮಡಿಕೇರಿ […]