Breaking News :

ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಲು ಶ್ರಮಿಸಬೇಕು : ಡಾ. ಮಂತರ್ ಗೌಡ

  ಜನವಾಹಿನಿ News ಮಡಿಕೇರಿ : ಸಮಾಜದಲ್ಲಿ ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ ಎಂಬುದನ್ನು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಾರಿದ್ದಾರೆ. ಆದ್ದರಿಂದ ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಲು ಶ್ರಮಿಸಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. […]

ಜಿಲ್ಲಾಡಳಿತದಿಂದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಜನ್ಮ ದಿನಾಚರಣೆ : ಸೇನಾ ಕ್ಷೇತ್ರದಲ್ಲಿ ಜನರಲ್ ತಿಮ್ಮಯ್ಯ ಅವರ ಸಾಹಸ, ಸಾಧನೆ ಅಪಾರ: ಎ.ಎಸ್.ಪೊನ್ನಣ್ಣ

  ಜನವಾಹಿನಿ News  ಮಡಿಕೇರಿ : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಜನ್ಮ ದಿನಾಚರಣೆಯನ್ನು ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನ (ಸನ್ನಿಸೈಡ್)ದಲ್ಲಿ ಮಂಗಳವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ದೀಪ ಬೆಳಗಿ, ಜನರಲ್ ತಿಮ್ಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಗೌರವ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಶಾಸಕರು […]

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸ್ಪಷ್ಟನೆ

  ಜನವಾಹಿನಿ News ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿ.ಗೆ ಯಾವುದೇ ರೀತಿಯ ‌ಕೊರತೆ ಇಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ. ರಾಜ್ಯದಲ್ಲಿ ಎಲ್‌ಪಿಜಿ ಸರಬರಾಜು ವ್ಯವಸ್ಥೆಯನ್ನು, ವಿಶೇಷವಾಗಿ ಆಟೋ ಎಲ್‌ಪಿಜಿ ಪೂರೈಕೆಯನ್ನು ರಾಜ್ಯ ಸರ್ಕಾರವು ನಿಕಟವಾಗಿ ಗಮನಿಸುತ್ತಿದೆ. ಕರ್ನಾಟಕದಾದ್ಯಂತ ಒಟ್ಟು 72 ಆಟೋ ಎಲ್‌ಪಿಜಿ ಡಿಸ್ಪೆನ್ಸಿಂಗ್ ಸ್ಟೇಷನ್‌ಗಳು (ALDS) ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ ಕೇವಲ ಬೆಂಗಳೂರು ನಗರವೊಂದರಲ್ಲೇ 31 […]

ತುರ್ತು ನೀರು ಸರಬರಾಜು ವ್ಯವಸ್ಥೆಯನ್ನು ಉದ್ಘಾಟಿಸಿದ ಶಾಸಕ ಪೊನ್ನಣ್ಣ

  ಜನವಾಹಿನಿ News ಪೊನ್ನಂಪೇಟೆ : ಈ ಬಾರಿಯ ಬೇಸಿಗೆ ಕಾಲದಲ್ಲಿ ಸಾರ್ವಜನಿಕರು ನೀರಿನ ಅಭಾವದಿಂದ ಬಳಲಬಾರದು ಎಂಬ ಸದುದ್ದೇಶದಿಂದ ಕ್ಷೇತ್ರದ ಶಾಸಕರು ತಮ್ಮ 28ಲಕ್ಷ ವೆಚ್ಚದ ವೈಯುಕ್ತಿಕ ಅನುದಾನದಲ್ಲಿ ಪೊನ್ನಂಪೇಟೆ ಭಾಗದಲ್ಲಿ ಅಗತ್ಯ ಇರುವ ಸಾರ್ವಜನಿಕರಿಗೆ ತುತ್ತು ನೀರಿನ ಸೌಲಭ್ಯ ಕಲ್ಪಿಸಲು ಟ್ಯಾಂಕರ್ ವಾಹನವನ್ನು ವ್ಯವಸ್ಥೆ ಮಾಡಿದ್ದಾರೆ. ಪೊನ್ನಂಪೇಟೆಯಲ್ಲಿ ಟ್ಯಾಂಕರ್ ವಾಹನವನ್ನು ಉದ್ಘಾಟಿಸಿ ಶುಭ ಹಾರೈಸಿ ಮಾತನಾಡಿದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ , ತೀವ್ರ ಬೇಸಿಗೆಯಿಂದ ನೀರಿನ ಅಭಾವ ತಲೆದೋರಿದ್ದು, […]

ಕೊಡಗು ಮೂಲದ ಪೊಲೀಸ್  ಅಧಿಕಾರಿ ಕಿಶೋರ್ ರವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ.

  ಜನವಾಹಿನಿ News ಬೆಂಗಳೂರು : ಬೆಂಗಳೂರು ನಗರದ ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಮೂಲತಃ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬೋಯಿಕೇರಿ ಗ್ರಾಮದ ಬಿ.ಟಿ. ಕಿಶೋರ್ ಅವರು 2025 ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಬಿ.ಟಿ ಕಿಶೋರ್ ರವರು ಈ ಹಿಂದೆ ಬೆಂಗಳೂರು ನಗರದ ಮಡಿವಾಳ ಪೊಲೀಸ್ ಠಾಣೆ, ಬನಶಂಕರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರಲ್ಲದೆ ಪ್ರಸ್ತುತ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. […]

ಮೀನುಗಾರಿಕೆ ಇಲಾಖೆಯ ಮಿಲನ ಭರತ್ ಗೆ ಬೆಳ್ಳಿ ಪದಕ

  ಜನವಾಹಿನಿ News ಮಡಿಕೇರಿ : ನವ ದೆಹಲಿಯಲ್ಲಿ ನಡೆದ ಅಖಿಲ ಭಾರತ ನಾಗರೀಕ ಸೇವೆಗಳ ನೌಕರರ ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಶಾಸ್ತ್ರೀಯ ನೃತ್ಯ ವಿಭಾಗದಲ್ಲಿ ಸೋಮವಾರ. ಪೇಟೆ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಮಿಲನ ಕೆ ಭರತ್ ಬೆಳ್ಳಿ ಪದಕ ಪಡೆದಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಇವರಿಗೆ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ನಿರ್ದೇಶಕರಾದ ನವಪ್ರೀತ್ ಕೌರ್ ಬಹುಮಾನ ವಿತರಿಸಿರು. ವಿರಾಜಪೇಟೆಯ ಗುರು ವಿದ್ವಾನ್ ರಾಜೇಶ್ ಆಚಾರ್ಯರವರ ಮಾರ್ಗದರ್ಶನದಲ್ಲಿ ಮಿಲನರವರು ನೃತ್ಯ ಪ್ರದರ್ಶನ […]

ಹರೇಕಳ ಹಾಜಬ್ಬ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

  ಜನವಾಹಿನಿ News ಮಂಗಳೂರು : ಅಕ್ಷರ ಸಂತ ಹರೇಕಳ ಹಾಜಬ್ಬ , ಇತ್ತೀಚೆಗೆ ನಿಧನರಾದ ಯಕ್ಷಗಾನ ದಿಗ್ಗಜ‌ ಸೂರಿಕುಮೇರು ಗೋವಿಂದ ಭಟ್ (ಮರಣೋತ್ತರ), ದೈವ‌ ನರ್ತಕ ರವೀಶ್ ಪಡುಮಲೆ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದವು ಗೌರವ ಡಾಕ್ಟರೇಟ್ ಘೋಷಿಸಿದೆ. ಮಾ.28ರಂದು ಬೆಳಿಗ್ಗೆ 11ಕ್ಕೆ‌ ಮಂಗಳ ಸಭಾಂಗಣದಲ್ಲಿ ನಡೆಯುವ ವಿವಿಯ 44ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಡಾ.‌ಎಂ.ಸಿ. ಸುಧಾಕರ ಭಾಗವಹಿಸುವರು.‌ ಸಂಸದ‌ ಕ್ಯಾ. ಬ್ರಿಜೇಶ್ ಚೌಟ […]

ಗೃಹಬಳಕೆ ಮತ್ತು ವಾಣಿಜ್ಯ ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

  ಜನವಾಹಿನಿ News ಮಡಿಕೇರಿ : ಕೇಂದ್ರ ಸರ್ಕಾರ ಏಕಾಏಕಿ ಗೃಹಬಳಕೆ ಮತ್ತು ವಾಣಿಜ್ಯ ಅಡುಗೆ ಅನಿಲ ಬೆಲೆ ಏರಿಕೆ ಮಾಡಿದನ್ನು ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ಕಾರ್ಯಕರ್ತರು ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ನಗರದ ಇಂದಿರಾ ಗಾಂಧಿ ( ಚೌಕಿ) ವೃತ್ತದಿಂದ ಮೆರವಣಿಗೆ ಮೂಲಕ ಸಾಗಿದ ನೂರಾರು ಕಾರ್ಯಕರ್ತರು ಗ್ಯಾಸ್ ಬೆಲೆ ಏರಿಕೆ ಮಾಡಿದ ಕೇಂದ್ರ ಸರ್ಕಾರ,ಬಿಜೆಪಿ ಆಡಳಿತ,ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲ ಸೀತಾರಾಮ್ ವಿರುದ್ದ ಧಿಕ್ಕಾರ ಕೂಗಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ […]

ಕೊಡಗಿನಲ್ಲಿ ಶಾಂತಿ ಕದಡಲು ಯತ್ನಿಸುವವರನ್ನು ಗಡಿಪಾರು ಮಾಡಬೇಕು : ಜಿಲ್ಲಾ ಬಿಜೆಪಿ ಆಗ್ರಹ

ಜನವಾಹಿನಿ News ಮಡಿಕೇರಿ : ಇತ್ತೀಚೆಗೆ ನಾಪೋಕ್ಲಿನಲ್ಲಿ ಹಿಂದೂ ಸಂಗಮ ಪ್ರಚಾರದ ವೇಳೆ ನಡೆದ ಹಲ್ಲೆ ಪ್ರಕರಣದ ಆರೋಪಿತರಿಗೆ ಷರತ್ತುಬದ್ಧವಾಗಿ ನೀಡಲಾಗಿರುವ ಜಾಮೀನನ್ನು ರದ್ದುಪಡಿಸಿ ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಒತ್ತಾಯಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಪೋಕ್ಲುವಿನಲ್ಲಿ ಈಚೆಗೆ ಶಾಂತಿ ಕದಡುವ ಉದ್ದೇಶದಿಂದ ಹಿಂದೂ ಸಮಾಜೋತ್ಸವದ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲಾಗಿತ್ತು. ನಂತರ ಷರತ್ತುಬದ್ಧ ಜಾಮೀನಿನ ಮೇಲೆ ಹೊರಬಂದಿರುವ ಅವರು ಮತ್ತೆ ಇನ್ ಸ್ಟಾಗ್ರಾಂ ಖಾತೆಯಲ್ಲಿ ಶಾಂತಿ ಕದಡುವ […]

ಕೇರಳ ಚುನಾವಣೆ ; 2 ಕ್ಷೇತ್ರಗಳ ವೀಕ್ಷಕರಾಗಿ ಶಾಸಕ ಪೊನ್ನಣ್ಣ ನೇಮಕ

  ಜನವಾಹಿನಿ News ಮಾನಂದವಾಡಿ : ಸಂಸದೆ ಹಾಗೂ ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿಯವರ ವಯನಾಡು ಲೋಕಸಭಾ ಕ್ಷೇತ್ರದ ಭಾಗವಾಗಿರುವ, ಮಾನಂದವಾಡಿ ಹಾಗೂ ಸುಲ್ತಾನ್ ಬತ್ತೇರಿ ವಿಧಾನಸಭಾ ಕ್ಷೇತ್ರಗಳ ವೀಕ್ಷಕರಾಗಿ, ಎ.ಎಸ್ ಪೊನ್ನಣ್ಣ ರವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ನೇಮಕ ಮಾಡಿ ಆದೇಶಿಸಿದೆ.