ಪ್ಲೀಸ್ ನೀವಾದ್ರೂ ಮನೆ ಕೊಡ್ಸಿ ಸಾ*ರ್ ಎಂದು ಜಿಲ್ಲಾಧಿಕಾರಿ ಕಾಲಿಗೆ ಬಿದ್ದು ಅಂಗಲಾಚಿದ ಮಹಿಳೆ.!

ಪ್ಲೀಸ್ ನೀವಾದ್ರೂ ಮನೆ ಕೊಡ್ಸಿ ಸಾ*ರ್ ಎಂದು ಜಿಲ್ಲಾಧಿಕಾರಿ ಕಾಲಿಗೆ ಬಿದ್ದು ಅಂಗಲಾಚಿದ ಮಹಿಳೆ.! ಮಡಿಕೇರಿ : ಮಳೆ ಹಾನಿ ಪ್ರದೇಶಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಪರಿಶೀಲನೆಗೆಂದು ತೆರಳಿದ್ದ ಸಂದರ್ಭ ಮಹಿಳೆಯೊಬ್ಬರು ಜಿಲ್ಲಾಧಿಕಾರಿಯ ಕಾಲಿಗೆ ಬಿದ್ದು ಮನೆ ಕೊಡ್ಸಿ ಸಾರ್ ಎಂದು ಕಣ್ಣೀರಿಟ್ಟ ಪ್ರಸಂಗ ಮಡಿಕೇರಿಯಲ್ಲಿ ನಡೆದಿದೆ. ಐದು ವರ್ಷದ ಹಿಂದೆ ಮನೆ ಕಳೆದುಕೊಂಡಿದ್ದೇನೆ. ನನಗೆ ಗಂಡ ಇಲ್ಲ. ಮನೆ ಮಾಡಿ ಕೊಡ್ತೇನೆ ಅಂತ ಹೇಳಿ ಇಲ್ಲಿವರೆಗೆ ಯಾರೂ ಮಾಡಿಕೊಟ್ಟಿಲ್ಲ. ದಯವಿಟ್ಟು ನೀವಾದ್ರು ಮನೆ ಮಾಡ್ಸಿ […]
ಇಂಡಿಯಾದ ಸಬ್ ಜೂನಿಯರ್ ಹಾಕಿ ಚಾಂಪಿಯನ್ ಶಿಪ್ ಪಂದ್ಯಾಟಕ್ಕೆ ಮಂಡೆಪಂಡ ಕಾಳಪ್ಪ ಆಯ್ಕೆ

ಇಂಡಿಯಾ ಸಬ್ ಜೂನಿಯರ್ ಹಾಕಿ ಚಾಂಪಿಯನ್ ಶಿಪ್ ಪಂದ್ಯಾಟಕ್ಕೆ ಮಂಡೆಪಂಡ ಕಾಳಪ್ಪ ಆಯ್ಕೆ ಸಬ್ ಜೂನಿಯರ್ ಇಂಡಿಯಾ ಚಾಂಪಿಯನ್ ಶಿಪ್ ಪಂದ್ಯಾಟಕ್ಕೆ ಅಮ್ಮತಿ ಹೋಬಳಿ ಕಾವಾಡಿ ಗ್ರಾಮದ ಮಂಡಪಂಡ ಕಾಳಪ್ಪ ಕರ್ನಾಟಕ ತಂಡದಲ್ಲಿ ಆಡಲು ಆಯ್ಕೆಯಾಗಿದ್ದಾರೆ. 15ನೇ ಸಬ್ ಜೂನಿಯರ್ ವಿಭಾಗದ ರಾಷ್ಟ್ರೀಯ ಚಾಂಪಿಯನ್ ಶಿಪ್ 2025 ಪಂದ್ಯಾಟವು ಆಗಸ್ಟ್ 1ರಿಂದ 12ರ ವರೆಗೆ ತಮಿಳುನಾಡಿನ ಚೆನೈಯಲ್ಲಿ ನಡೆಯಲಿದೆ. ಅಮ್ಮತಿ ಹೋಬಳಿಯ ಕಾವಾಡಿ ಗ್ರಾಮದ ಮಂಡೆಪಂಡ ಲವ ಹಾಗೂ ಶಬೀತ ( ತಾಮನೆ ಮಾಣಿಪಂಡ) ದಂಪತಿಯಾ ಪುತ್ರರಾಗಿರುವ […]
ವಸತಿ ಶಾಲೆ ನಿರ್ಮಾಣಕ್ಕೆ ಸರ್ಕಾರದಿಂದ ಅನುಮೋದನೆ : ಸಚಿವರಿಗೆ ಧನ್ಯವಾದ ಸಲ್ಲಿಸಿದ ಮಂತರ್ ಗೌಡ

ವಸತಿ ಶಾಲೆ ನಿರ್ಮಾಣಕ್ಕೆ ಸರ್ಕಾರದಿಂದ ಅನುಮೋದನೆ : ಸಚಿವರಿಗೆ ಧನ್ಯವಾದ ಸಲ್ಲಿಸಿದ ಮಂತರ್ ಗೌಡ ಮಡಿಕೇರಿ : ಸೋಮವಾರಪೇಟೆ ತಾಲ್ಲೂಕಿನ ಚನ್ನಾಪುರದಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ‘ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ’ ವತಿಯಿಂದ 6 ನೇ ತರಗತಿಯಿಂದ 12 ನೇ ತರಗತಿಯವರೆಗೆ 37.55 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ವಸತಿ ಶಾಲೆ ನಿರ್ಮಿಸಲು ಕರ್ನಾಟಕ ರಾಜ್ಯ ಸರ್ಕಾರದಿಂದ ಅನುಮೋದನೆಗೊಂಡ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಕಾರ್ಮಿಕ ಇಲಾಖೆ […]
ತರಬೇತಿ ಮುಗಿಸಿ ಸ್ವಗ್ರಾಮಕ್ಕೆ ಆಗಮಿಸಿದ ಯೋಧನ ಊರಲ್ಲಿ ಹಬ್ಬದ ವಾತಾವರಣ

ತರಬೇತಿ ಮುಗಿಸಿ ಸ್ವಗ್ರಾಮಕ್ಕೆ ಆಗಮಿಸಿದ ಯೋಧನ ಊರಲ್ಲಿ ಹಬ್ಬದ ವಾತಾವರಣ ಕುಶಾಲನಗರ : ಭಾರತಾಂಬೆಯ ಸೇವೆ ಸಲ್ಲಿಸಲು ಸೈನಿಕನಾಗಿ ಪ್ಯಾರಾ ಕಮಾಂಡೋ PARA COMMANDO (SPECIAL FORCE) ಗೆ ಆಯ್ಕೆಯಾಗಿ ತರಬೇತಿ ಮುಗಿಸಿ ಸ್ವಗ್ರಾಮಕ್ಕೆ ಆಗಮಿಸಿದ ಪಿರಿಯಾಪಟ್ಟಣ ತಾಲೂಕಿನ ಚೆನ್ನನಹಳ್ಳಿ ಕೊಪ್ಪಲು ಗ್ರಾಮದ ಯೋಧ ಪ್ರಮೋದ್.ಸಿ.ಎಸ್ ಅವರಿಗೆ ಕುಟುಂಬದವರು ಮತ್ತು ಸ್ನೇಹಿತರು ವಿಶೇಷವಾಗಿ ಸ್ವಾಗತಿಸಿದರು, ದೇಶದ ಹೆಮ್ಮೆಯ ಮಗನಿಗೆ ಪ್ರೀತಿಯಿಂದ ಹಾರೈಸಿದ ಸ್ನೇಹಿತರ ಬಳಗವು ಗ್ರಾಮಸ್ಥರಿಗೆ ಭೋಜನ ವ್ಯವಸ್ಥೆ ಮಾಡುವ ಮೂಲಕ ಯೋಧನಿಗೆ ಶುಭಕೋರಿದರು
ಮಡಿಕೇರಿಯ ಡಾ.ಸೂರ್ಯಕುಮಾರ್ ಗೆ ರಾಜ್ಯ ಪ್ರಶಸ್ತಿ

ಮಡಿಕೇರಿಯ ಡಾ.ಸೂರ್ಯಕುಮಾರ್ ಗೆ ರಾಜ್ಯ ಪ್ರಶಸ್ತಿ ಮಡಿಕೇರಿ : ಕರ್ನಾಟಕ ರಾಜ್ಯ ವೈದ್ಯ ಬರಹಗಾರರ ಸಂಘದ ವತಿಯಿಂದ ಕರ್ನಾಟಕ ರಾಜ್ಯದ ಎಲ್ಲಾ ವೈದ್ಯರ ಶ್ರೇಷ್ಠ ಪುಸ್ತಕಗಳಿಗೆ ನೀಡುವ ವಾರ್ಷಿಕ ಪ್ರಶಸ್ತಿಗೆ ಮಡಿಕೇರಿಯ ಖ್ಯಾತ ವೈದ್ಯರಾದ ಡಾ ಸೂರ್ಯಕುಮಾರ್ ಅವರು ಬರೆದು ಹರಿವು ಪ್ರಕಾಶನದವರು ಪ್ರಕಟಿಸಿರುವ ಮಂಗಳಿ – ತೃತೀಯ ಲಿಂಗಿಗಳ ಜೀವನ ಆಧಾರಿತ ಒಂದು ಕಥೆಗೆ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದೆ.
ಶಿಕ್ಷಕಿ ಬಿ.ಬಿ ಜಾಜಿ ಅವರಿಗೆ ಕಾವೇರಿ ರತ್ನ ಪ್ರಶಸ್ತಿ

ಶಿಕ್ಷಕಿ ಬಿ.ಬಿ ಜಾಜಿ ಅವರಿಗೆ ಕಾವೇರಿ ರತ್ನ ಪ್ರಶಸ್ತಿ ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಚೆನ್ನಯ್ಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಜಾಜಿ ಬಿ.ಬಿ ಅವರು ಕಾವೇರಿ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ, ಕುಶಾಲನಗರ ಪ್ರೆಸ್ ಕ್ಲಬ್ ಟ್ರಸ್ಟ್, ಸಂಗಮ ಟಿ.ವಿ., ವಂಶಿ ನ್ಯೂಸ್ ಹಾಗೂ ರಾಷ್ಟ್ರೀಯ ಅಪರಾದ ತಡೆ ಮತ್ತು ಮಾನವ ಹಕ್ಕುಗಳ ಭಾರತ ಪರಿಷತ್ ಬೆಂಗಳೂರು ಇವರ ಸಹಯೋಗದೊಂದಿಗೆ ನಡೆಯಲಿರುವ ಅಂತರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ […]
ಜಿಲ್ಲೆಯ ಅಭಿವೃದ್ಧಿ ಸಂಬಂಧ ಸಚಿವರು, ಶಾಸಕರೊಂದಿಗೆ ಸಿಎಂ ಸಿದ್ದರಾಮಯ್ಯ ಸಮಾಲೋಚನೆ

ಜಿಲ್ಲೆಯ ಅಭಿವೃದ್ಧಿ ಸಂಬಂಧ ಸಚಿವರು, ಶಾಸಕರೊಂದಿಗೆ ಸಿಎಂ ಸಿದ್ದರಾಮಯ್ಯ ಸಮಾಲೋಚನೆ ಮಡಿಕೇರಿ : ಕೊಡಗು ಜಿಲ್ಲೆಯ ಅಭಿವೃದ್ಧಿ ಸಂಬಂಧ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ ಅವರೊಂದಿಗೆ ಸಮಾಲೋಚನಾ ಸಭೆ ನಡೆಸಿದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರುಗಳ ಜೊತೆ ಸಭೆ ನಡೆಸಿ, ಜಿಲ್ಲಾ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳು ಉಂಟುಮಾಡಿರುವ ಧನಾತ್ಮಕ ಬದಲಾವಣೆಯ ಮಾಹಿತಿ ಪಡೆದು, ವಿವಿಧ ಇಲಾಖೆಗಳ […]
ಅಸ್ಸಾಂನವರ ಸೋಗಿನಲ್ಲಿರುವ ಬಾಂಗ್ಲಾ ವಲಸಿಗರಿಂದ ಕಾನೂನು ಬಾಹಿರ ಚಟುವಟಿಕೆಗಳ ಹೆಚ್ಚಳ : ಗಡಿಪಾರಿಗೆ ಜಿಲ್ಲಾ ಬಿಜೆಪಿ ಆಗ್ರಹ

ಅಸ್ಸಾಂನವರ ಸೋಗಿನಲ್ಲಿರುವ ಬಾಂಗ್ಲಾ ವಲಸಿಗರಿಂದ ಕಾನೂನು ಬಾಹಿರ ಚಟುವಟಿಕೆಗಳ ಹೆಚ್ಚಳ : ಗಡಿಪಾರಿಗೆ ಜಿಲ್ಲಾ ಬಿಜೆಪಿ ಆಗ್ರಹ ಮಡಿಕೇರಿ : ಜಿಲ್ಲೆಯಲ್ಲಿ ಅಸ್ಸಾಂನವರ ಸೋಗಿನಲ್ಲಿ ಬಾಂಗ್ಲದೇಶ ವಲಸಿಗರು ಸೇರಿಕೊಂಡಿದ್ದಾರೆ. ಅಲ್ಲದೇ ಜಿಲ್ಲೆಯಲ್ಲಿ ಅಕ್ರಮ ಗಾಂಜಾ ಮಾರಾಟ, ಗೋಮಾಂಸ ಮಾರಾಟ, ಹಲ್ಲೆ ಪ್ರಕರಣಗಳು ವಲಸೆ ಕಾರ್ಮಿಕರಿಂದ ಹೆಚ್ಚಾಗಿ ನಡೆಯುತ್ತಿದೆ. ಈ ಹಿನ್ನೆಲೆ ಜಿಲ್ಲಾಡಳಿತ ಪ್ರತಿ ಗ್ರಾಮ ಪಂಚಾಯಿತಿ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ವಲಸೆ ಕಾರ್ಮಿಕರ ದಾಖಲಾತಿ ಸಂಗ್ರಹಿಸಲು ಸೂಚನೆ ನೀಡಬೇಕೆಂದು ಜಿಲ್ಲಾಧ್ಯಕ್ಷ ರವಿ ಕಾಳಪ್ಪ ಒತ್ತಾಯಿಸಿದ್ದಾರೆ. ನಗರದ […]
ಕಾವೇರಿ ಕಾಲೇಜಿನ ದೈಹಿಕ ನಿರ್ದೇಶಕ ಕೆ. ಎಸ್. ತಮ್ಮಯ್ಯ ಅವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

ಕಾವೇರಿ ಕಾಲೇಜಿನ ದೈಹಿಕ ನಿರ್ದೇಶಕ ಕೆ. ಎಸ್. ತಮ್ಮಯ್ಯ ಅವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ ವಿರಾಜಪೇಟೆ : ಕಾವೇರಿ ಕಾಲೇಜಿನಲ್ಲಿ ದೈಹಿಕ ನಿರ್ದೇಶಕರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಬೇಗೂರು ಕೆಚೆಟ್ಟಿರ .ಎಸ್. ತಮ್ಮಯ್ಯನವರು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ(ರಿ) ಮಂಗಳೂರು ವಿಭಾಗ ವತಿಯಿಂದ ನೀಡಲಾಗುವ ಅಧ್ಯಾಪಕ ಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇತ್ತೀಚೆಗೆ ಮೂಡಬಿದಿರೆ ಆಳ್ವಾಸ್ ಕ್ಯಾಂಪನ್ ನಲ್ಲಿ ನಡೆದ ಪ್ರೇರಣ ದಿವಸ್ ಕಾರ್ಯಕ್ರಮದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ರವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಕ್ರೀಡಾ […]
ಮದ್ದೂರು ಕ್ಷೇತ್ರದಲ್ಲಿ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ : ರಾಜ್ಯದಲ್ಲಿ ಅಭಿವೃದ್ಧಿಗೆ ಹಣವಿಲ್ಲವೆನ್ನುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು : ಸಿದ್ದರಾಮಯ್ಯ

ಮದ್ದೂರು ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ : ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು : ಸಿಎಂ ಸಿದ್ದರಾಮಯ್ಯ ಮಂಡ್ಯ : ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಸಿಎಂ ಸಿದ್ದರಾಮಯ್ಯ […]