Breaking News :

ಚನ್ನಯ್ಯನಕೋಟೆಯಲ್ಲಿ ಕಾರ್ಗಿಲ್ ವಿಜಯೋತ್ಸವ ಹಾಗೂ ಬೃಹತ್ ಉಚಿತ ಅರೋಗ್ಯ ತಪಾಸಣಾ ಶಿಬಿರ 

ಚನ್ನಯ್ಯನಕೋಟೆಯಲ್ಲಿ ಕಾರ್ಗಿಲ್ ವಿಜಯೋತ್ಸವ ಹಾಗೂ ಬೃಹತ್ ಉಚಿತ ಅರೋಗ್ಯ ತಪಾಸಣಾ ಶಿಬಿರ ಮಡಿಕೇರಿ :  ಸರ್ವ ಸಹಾಯಿ ಮಿತ್ರ ಮಂಡಳಿ ವತಿಯಿಂದ  (ಜು 27) ರಂದು ಇಂದು ಕಾರ್ಗಿಲ್ ವಿಜಯೋತ್ಸವ, ಡಾ. ಎಪಿಜೆ ಅಬ್ದುಲ್ ಕಲಾಂ ಪುಣ್ಯ ಸ್ಮರಣೆ ಹಾಗೂ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸರ್ವಸಹಾಯಿ ಮಿತ್ರ ಮಂಡಳಿ ಅಧ್ಯಕ್ಷ ವಿಜು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಚೆನ್ನಯ್ಯನಕೋಟೆ ಗ್ರಾಮದಲ್ಲಿ ಕಳೆದ 11 ವರ್ಷಗಳಿಂದ ಯೋಧರಿಗೆ ನಮನ ಕಾರ್ಗಿಲ್ ವಿಜಯೋತ್ಸವ, […]

ಬಿಜೆಪಿಗರಿಂದ ಜನತೆಗೆ ತಪ್ಪು ಸಂದೇಶ : ಕಾಂಗ್ರೆಸ್ ಆರೋಪ 

ಬಿಜೆಪಿಗರಿಂದ ತಪ್ಪು ಸಂದೇಶ : ಕಾಂಗ್ರೆಸ್ ಆರೋಪ ಮಡಿಕೇರಿ : ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರ ಹಾಗೂ ಶಾಸಕರ ಕಾಳಜಿಯಿಂದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ ಇದನ್ನು ತಾಳಲಾರದೆ ಬಿಜೆಪಿಗರು ಜನತೆಗೆ ತಪ್ಪು ಸಂದೇಶವನ್ನು ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಟಿ.ಇ.ಸುರೇಶ್ ಆರೋಪಿಸಿದ್ದಾರೆ. ನಗರದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಸರ್ಕಾರವಿದ್ದ ಸಂದರ್ಭದಲ್ಲಿ ಅಭಿವೃದ್ಧಿಯ ಕಾಳಜಿ ಇರಲಿಲ್ಲ. ಆದರೆ, ಇಂದು ಸರ್ಕಾರ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಮಂತರ್‌ಗೌಡ ವಿಶೇಷ ಕಾಳಜಿಯಿಂದ ಜಿಲ್ಲೆಗೆ ಸಾಕಷ್ಟು […]

ವಿಜಯ್ ದಿವಸ್: ಮಡಿಕೇರಿಯಲ್ಲಿ ಹುತಾತ್ಮ ಯೋಧರಿಗೆ ಗೌರವ ನಮನ 

ಮಡಿಕೇರಿಯಲ್ಲಿ ಹುತಾತ್ಮ ಯೋಧರಿಗೆ ಗೌರವ ನಮನ  ಮಡಿಕೇರಿ : ವಿವಿಧ ಸಂಘಟನೆಗಳ ವತಿಯಿಂದ ನಗರದಲ್ಲಿ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಯಿತು.  ಕೊಡಗು ಹಿಂದು ಜಾಗರಣ ವೇದಿಕೆ, ಮಡಿಕೇರಿ ಮಾಜಿ ಸೈನಿಕರ ಸಂಘ ಸೇರಿದಂತೆ ವಿವಿಧ ಸಂಘಟನೆಗಳಿಂದ ನಗರದ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್‌ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಹಾಗೂ ವಕೀಲರಾದ ಮೇಜರ್ ಓ.ಎಸ್.ಚಿಂಗಪ್ಪ ಕಾರ್ಗಿಲ್ ಯುದ್ಧದಲ್ಲಿ ದಿಗ್ವಿಜಯ ಸಾಧಿಸಿದ ಭಾರತೀಯ ಯೋಧರ ತ್ಯಾಗ ಬಲಿದಾನಗಳನ್ನು ಸ್ಮರಿಸಿದರು. […]

ದಸರಾ ಸಮಿತಿಯಿಂದ ಪೇಟೆ ಶ್ರೀ ರಾಮಮಂದಿರದಲ್ಲಿ ವಿಶೇಷ ಪೂಜೆ

ದಸರಾ ಸಮಿತಿಯಿಂದ ಪೇಟೆ ಶ್ರೀ ರಾಮಮಂದಿರದಲ್ಲಿ ವಿಶೇಷ ಪೂಜೆ  ಮಡಿಕೇರಿ : ಮಡಿಕೇರಿಯ ಐತಿಹಾಸಿಕ ದಸರಾ ಉತ್ಸವಾಚರಣೆಗೆ ಸಾಂಪ್ರದಾಯದಂತೆ ಮಡಿಕೇರಿ ನಗರ ದಸರಾ ಉತ್ಸವ ಸಮಿತಿ ವತಿಯಿಂದ ನಗರದ ಪೇಟೆ ಶ್ರೀರಾಮಮಂದಿರದಲ್ಲಿ ಪೂಜೆ ಸಲ್ಲಿಸುವ ಮೂಲಕ ಉತ್ಸವದ ಕಾರ್ಯಗಳಿಗೆ ಶನಿವಾರ ಚಾಲನೆ ನೀಡಲಾಯಿತು. ಈ ಸಂದರ್ಭ ಮಡಿಕೇರಿ ನಗರ ದಸರಾ ಉತ್ಸವ ಸಮಿತಿಯ ನೂತನ ಕಾರ್ಯಧ್ಯಕ್ಷ ಅರುಣ್ ಕುಮಾರ್ ಮಾತನಾಡಿ, ಐತಿಹಾಸಿಕ ಮಡಿಕೇರಿ ದಸರಾಗೆ ಚಾಲನೆ ನೀಡಲಾಗಿದೆ. ಈ ಭಾರಿ ಕಾರ್ಯಧ್ಯಕ್ಷ ಸ್ಥಾನದ ಮಹತ್ವದ ಜವಾಬ್ದಾರಿ ಕೂಡ […]

ಕ್ಷೇತ್ರದ ಜನಪರ – ಅಭಿವೃದ್ಧಿ ಕೆಲಸ ಮಾಡುವುದರಲ್ಲಿ ಶಿವಲಿಂಗೇಗೌಡರು ಮುಂದಿದ್ದಾರೆ : ಸಿಎಂ ಸಿದ್ದರಾಮಯ್ಯ ಶ್ಲಾಘನೆ 

ಕ್ಷೇತ್ರದ ಜನಪರ – ಅಭಿವೃದ್ಧಿ ಕೆಲಸ ಮಾಡುವುದರಲ್ಲಿ ಶಿವಲಿಂಗೇಗೌಡರು ಮುಂದಿದ್ದಾರೆ : ಸಿಎಂ ಸಿದ್ದರಾಮಯ್ಯ ಶ್ಲಾಘನೆ  ಹಾಸನ : ಕ್ಷೇತ್ರದ ಜನಪರ – ಅಭಿವೃದ್ಧಿ ಕೆಲಸ ಮಾಡುವುದರಲ್ಲಿ, ವಿಧಾನಸಭೆಯಲ್ಲಿ ಪಕ್ಷ ಮತ್ತು ಸರ್ಕಾರದ ಕಾರ್ಯಗಳನ್ನು ಸಮರ್ಥವಾಗಿ ಮಂಡಿಸುವುದರಲ್ಲೂ ಶಿವಲಿಂಗೇಗೌಡರು ಮುಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಹಲವು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಿ ಅವರು ಮಾತನಾಡಿದರು 148 […]

ಒತ್ತಡ ನಡುವೆ ಕೆಸರುಗದ್ದೆಯಲ್ಲಿ ಕಾದಾಡಲಿರುವ ಖಾಕಿ ಪಡೆ : ನಾಳೆ ಗೋಣಿಕೊಪ್ಪಲುವಿನಲ್ಲಿ ಜಿಲ್ಲಾ ಪೊಲೀಸರ ಕೆಸರುಗದ್ದೆ ಕ್ರೀಡಾಕೂಟ

ಒತ್ತಡ ನಡುವೆ ಕೆಸರುಗದ್ದೆಯಲ್ಲಿ ಕಾದಾಡಲಿರುವ ಜಿಲ್ಲಾ ಖಾಕಿ ಪಡೆ : ನಾಳೆ ಗೋಣಿಕೊಪ್ಪಲುವಿನಲ್ಲಿ ಪೊಲೀಸರ ಕೆಸರುಗದ್ದೆ ಕ್ರೀಡಾಕೂಟ –  ಮಡಿಕೇರಿ : ಸದಾ ಒತ್ತಡಲ್ಲೇ ಕಾರ್ಯ ನಿರ್ವಹಿಸುವ ಜಿಲ್ಲೆಯ ಆರಕ್ಷಕರಿಗೆ ರಿಲಿಪ್ ನೀಡುವ ಸಲುವಾಗಿ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ, ವಿರಾಜಪೇಟೆ ಉಪ ವಿಭಾಗದ ವತಿಯಿಂದ ಪೊಲೀಸ್ ಸಿಬ್ಬಂದಿಗಳು ಹಾಗೂ ಕುಟುಂಬಸ್ಥರಿಗಾಗಿ ಇದೆ ಮೊದಲ ಬಾರಿಗೆ ಕೆಸರು ಗದ್ದೆ ಕ್ರೀಡಾಕೂಟವನ್ನು ಆಯೋಜನೆ ಮಾಡಿದೆ. ಗೋಣಿಕೊಪ್ಪಲು ಕಾವೇರಿ ಕಾಲೇಜು ಹಿಂಭಾಗದ ಗದ್ದೆಯಲ್ಲಿ ನಾಳೆ (ಜುಲೈ […]

ಮನೆಯ ಗೋಡೆ ಕುಸಿದು ಕಾರ್ಮಿಕ‌ ಮಹಿಳೆ ದುರ್ಮರಣ

ಮನೆಯ ಗೋಡೆ ಕುಸಿದು ಕಾರ್ಮಿಕ‌ ಮಹಿಳೆ ದುರ್ಮರಣ ಮಡಿಕೇರಿ : ಮನೆಯ ಗೋಡೆ ಕುಸಿದು ಬಿದ್ದು ಕಾರ್ಮಿಕ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಅಫ್ಜಲ್ ಪುರದ ರವಿ ಎಂಬುವವರ ಪತ್ನಿ ಸುಷ್ಮಾ(29) ಮೃತ ಮಹಿಳೆ. ಮೃತ ಮಹಿಳೆ, ಸಹೋದರ ಹಾಗೂ ಮಕ್ಕಳು ಕಳೆದ ಎರಡು ವರ್ಷಗಳ ಹಿಂದೆ ಸೋಮವಾರಪೇಟೆಗೆ ಆಗಮಿಸಿದ್ದು, ಹಾನಗಲ್ಲು ಗ್ರಾಮದ ಸಚಿನ್ ಎ.ಎನ್ ಎಂಬುವವರ ವಾಸದ ಮನೆಯಲ್ಲಿ ಬಾಡಿಗೆ ಇದ್ದರು. ಇಂದು ಬೆಳಿಗ್ಗೆ 5.30 […]

ಸಾರ್ವಜನಿಕರಿಗೆ ಸಕಾಲದಲ್ಲಿ ಸ್ಪಂದಿಸಿ : ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ

ಸಾರ್ವಜನಿಕರಿಗೆ ಸಕಾಲದಲ್ಲಿ ಸ್ಪಂದಿಸಿ : ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ಮಡಿಕೇರಿ : ಕಂದಾಯ ಇಲಾಖೆಯಲ್ಲಿ ಗ್ರಾಮ ಆಡಳಿತ ಅಧಿಕಾರಿ ಹಂತದ ವರೆಗೂ ಇ ಕಚೇರಿ ವ್ಯವಸ್ಥೆ ಅಳವಡಿಸಲಾಗಿದ್ದು, ಸಾರ್ವಜನಿಕರಿಗೆ ಸಕಾಲದಲ್ಲಿ ಸ್ಪಂದಿಸಿ ಕೆಲಸ ನಿರ್ವಹಿಸುಂತಾಗಬೇಕು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮ ಆಡಳಿತಾಧಿಕಾರಿಗಳಿಗೆ ಗ್ರಾ.ಪಂ.ಕಚೇರಿಯಲ್ಲಿ ಸ್ಥಳಾವಕಾಶ […]

ಸೆ.13 ರಂದು ರಾಷ್ಟ್ರೀಯ ಲೋಕ ಅದಾಲತ್ 

ಸೆ.13 ರಂದು ರಾಷ್ಟ್ರೀಯ ಲೋಕ ಅದಾಲತ್ ಮಡಿಕೇರಿ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಸೆಪ್ಟೆಂಬರ್, 13 ರಂದು ರಾಜ್ಯದಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ಅದರಂತೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್, 13 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ತಿಳಿಸಿದ್ದಾರೆ.  

ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ 

ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ ಮಡಿಕೇರಿ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಕರಿಕೆ, ಮಡಿಕೇರಿ ತಾಲ್ಲೂಕು ಇಲ್ಲಿಗೆ 8ನೇ ತರಗತಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳನ್ನು ಬೋಧಿಸಲು ಗೌರವಧನ ಆಧಾರದ ಮೇಲೆ ಶಿಕ್ಷಕರ ಸೇವೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್,್ಟ 14 ಕೊನೆಯ ದಿನಾಂಕವಾಗಿದ್ದು, ಗಣಿತ ಮತ್ತು ವಿಜ್ಞಾನ ವಿಷಯ ಬೋಧಿಸಲು ಬಿಎಸ್ಸಿ, ಬಿಇಡಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ […]