Breaking News :

ಶಿಕ್ಷಕಿ ಬಿ.ಬಿ ಜಾಜಿ ಅವರಿಗೆ ಕಾವೇರಿ ರತ್ನ ಪ್ರಶಸ್ತಿ

ಶಿಕ್ಷಕಿ ಬಿ.ಬಿ ಜಾಜಿ ಅವರಿಗೆ ಕಾವೇರಿ ರತ್ನ ಪ್ರಶಸ್ತಿ ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಚೆನ್ನಯ್ಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಜಾಜಿ ಬಿ.ಬಿ ಅವರು ಕಾವೇರಿ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ, ಕುಶಾಲನಗರ ಪ್ರೆಸ್ ಕ್ಲಬ್ ಟ್ರಸ್ಟ್, ಸಂಗಮ ಟಿ.ವಿ., ವಂಶಿ ನ್ಯೂಸ್ ಹಾಗೂ ರಾಷ್ಟ್ರೀಯ ಅಪರಾದ ತಡೆ ಮತ್ತು ಮಾನವ ಹಕ್ಕುಗಳ ಭಾರತ ಪರಿಷತ್ ಬೆಂಗಳೂರು ಇವರ ಸಹಯೋಗದೊಂದಿಗೆ ನಡೆಯಲಿರುವ ಅಂತರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ […]

ಜಿಲ್ಲೆಯ ಅಭಿವೃದ್ಧಿ ಸಂಬಂಧ ಸಚಿವರು, ಶಾಸಕರೊಂದಿಗೆ ಸಿಎಂ ಸಿದ್ದರಾಮಯ್ಯ ಸಮಾಲೋಚನೆ

ಜಿಲ್ಲೆಯ ಅಭಿವೃದ್ಧಿ ಸಂಬಂಧ ಸಚಿವರು, ಶಾಸಕರೊಂದಿಗೆ ಸಿಎಂ ಸಿದ್ದರಾಮಯ್ಯ ಸಮಾಲೋಚನೆ ಮಡಿಕೇರಿ : ಕೊಡಗು ಜಿಲ್ಲೆಯ ಅಭಿವೃದ್ಧಿ ಸಂಬಂಧ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ ಅವರೊಂದಿಗೆ ಸಮಾಲೋಚನಾ ಸಭೆ ನಡೆಸಿದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರುಗಳ ಜೊತೆ ಸಭೆ ನಡೆಸಿ, ಜಿಲ್ಲಾ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳು ಉಂಟುಮಾಡಿರುವ ಧನಾತ್ಮಕ ಬದಲಾವಣೆಯ ಮಾಹಿತಿ ಪಡೆದು, ವಿವಿಧ ಇಲಾಖೆಗಳ […]

ಅಸ್ಸಾಂನವರ ಸೋಗಿನಲ್ಲಿರುವ ಬಾಂಗ್ಲಾ ವಲಸಿಗರಿಂದ ಕಾನೂನು ಬಾಹಿರ ಚಟುವಟಿಕೆಗಳ ಹೆಚ್ಚಳ : ಗಡಿಪಾರಿಗೆ ಜಿಲ್ಲಾ ಬಿಜೆಪಿ ಆಗ್ರಹ 

ಅಸ್ಸಾಂನವರ ಸೋಗಿನಲ್ಲಿರುವ ಬಾಂಗ್ಲಾ ವಲಸಿಗರಿಂದ ಕಾನೂನು ಬಾಹಿರ ಚಟುವಟಿಕೆಗಳ ಹೆಚ್ಚಳ : ಗಡಿಪಾರಿಗೆ ಜಿಲ್ಲಾ ಬಿಜೆಪಿ ಆಗ್ರಹ ಮಡಿಕೇರಿ : ಜಿಲ್ಲೆಯಲ್ಲಿ ಅಸ್ಸಾಂನವರ ಸೋಗಿನಲ್ಲಿ ಬಾಂಗ್ಲದೇಶ ವಲಸಿಗರು ಸೇರಿಕೊಂಡಿದ್ದಾರೆ. ಅಲ್ಲದೇ ಜಿಲ್ಲೆಯಲ್ಲಿ ಅಕ್ರಮ ಗಾಂಜಾ ಮಾರಾಟ, ಗೋಮಾಂಸ ಮಾರಾಟ, ಹಲ್ಲೆ ಪ್ರಕರಣಗಳು ವಲಸೆ ಕಾರ್ಮಿಕರಿಂದ ಹೆಚ್ಚಾಗಿ ನಡೆಯುತ್ತಿದೆ. ಈ ಹಿನ್ನೆಲೆ ಜಿಲ್ಲಾಡಳಿತ ಪ್ರತಿ ಗ್ರಾಮ ಪಂಚಾಯಿತಿ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ವಲಸೆ ಕಾರ್ಮಿಕರ ದಾಖಲಾತಿ ಸಂಗ್ರಹಿಸಲು ಸೂಚನೆ ನೀಡಬೇಕೆಂದು ಜಿಲ್ಲಾಧ್ಯಕ್ಷ ರವಿ ಕಾಳಪ್ಪ ಒತ್ತಾಯಿಸಿದ್ದಾರೆ. ನಗರದ […]

ಕಾವೇರಿ ಕಾಲೇಜಿನ ದೈಹಿಕ ನಿರ್ದೇಶಕ ಕೆ. ಎಸ್. ತಮ್ಮಯ್ಯ ಅವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ 

ಕಾವೇರಿ ಕಾಲೇಜಿನ ದೈಹಿಕ ನಿರ್ದೇಶಕ ಕೆ. ಎಸ್. ತಮ್ಮಯ್ಯ ಅವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ  ವಿರಾಜಪೇಟೆ : ಕಾವೇರಿ ಕಾಲೇಜಿನಲ್ಲಿ ದೈಹಿಕ ನಿರ್ದೇಶಕರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಬೇಗೂರು ಕೆಚೆಟ್ಟಿರ .ಎಸ್. ತಮ್ಮಯ್ಯನವರು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ(ರಿ) ಮಂಗಳೂರು ವಿಭಾಗ ವತಿಯಿಂದ ನೀಡಲಾಗುವ ಅಧ್ಯಾಪಕ ಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇತ್ತೀಚೆಗೆ ಮೂಡಬಿದಿರೆ ಆಳ್ವಾಸ್ ಕ್ಯಾಂಪನ್ ನಲ್ಲಿ ನಡೆದ ಪ್ರೇರಣ ದಿವಸ್ ಕಾರ್ಯಕ್ರಮದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ರವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಕ್ರೀಡಾ […]

ಮದ್ದೂರು ಕ್ಷೇತ್ರದಲ್ಲಿ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ : ರಾಜ್ಯದಲ್ಲಿ ಅಭಿವೃದ್ಧಿಗೆ ಹಣವಿಲ್ಲವೆನ್ನುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು : ಸಿದ್ದರಾಮಯ್ಯ

ಮದ್ದೂರು ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ : ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು : ಸಿಎಂ ಸಿದ್ದರಾಮಯ್ಯ  ಮಂಡ್ಯ  : ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಸಿಎಂ ಸಿದ್ದರಾಮಯ್ಯ […]

ಪಹಲ್ಗಾಮ್ ದಾಳಿಯ ರೂವಾರಿ ಸೇರಿ ಮೂವರು ಉಗ್ರರರನ್ನು ಬೇಟೆಯಾಡಿದ ಭದ್ರತಾ ಪಡೆಗೆ ಉಗರರ ಸುಳಿವು ಹೇಗೆ ಸಿಕ್ತು.?..ಕಾರ್ಯಾಚರಣೆಗೆ ಆಪರೇಷನ್ ಮಹಾದೇವ ಹೆಸರಿಡಲು ಕಾರಣವೇನು..? ಇಲ್ಲಿದೆ ಕಂಪ್ಲೀಟ್ ಮಾಹಿತಿ 

ಪಹಲ್ಗಾಮ್ ದಾಳಿಯ ರೂವಾರಿ ಸೇರಿ ಮೂವರು ಉಗ್ರರರನ್ನು ಬೇಟೆಯಾಡಿದ ಭದ್ರತಾ ಪಡೆ..! ಭದ್ರತಾ ಪಡೆಗೆ ಉಗರರ ಸುಳಿವು ಹೇಗೆ ಸಿಕ್ತು.?..ಕಾರ್ಯಾಚರಣೆಗೆ ಆಪರೇಷನ್ ಮಹಾದೇವ ಹೆಸರಿಡಲು ಕಾರಣವೇನು..? ಇಲ್ಲಿದೆ ಕಂಪ್ಲೀಟ್ ಮಾಹಿತಿ ನವದೆಹಲಿ : ಶ್ರೀನಗರದ ನಗರದ ಹೊರವಲಯದ ಮಹಾದೇವ ಬೆಟ್ಟ ಶ್ರೇಣಿಯ ದಾಚೀಗಾಮ್‌ನಲ್ಲಿ ‘ಆಪರೇಷನ್‌ ಮಹಾದೇವ’ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಯ ಸಿಬ್ಬಂದಿಗಳು, ಪಹಲ್ಗಾಮ್ ದಾಳಿಯ ರೂವಾರಿ ಸೇರಿದಂತೆ ಪಾಕಿಸ್ತಾನದ ಮೂವರು ಉಗ್ರರನ್ನು ಬೇಟೆಯಾಡಿದ್ದಾರೆ. ಮೃತ ಉಗ್ರರನ್ನು ಹಸೀಮ್ ಮುಸಾ ಅಲಿಯಾಸ್ ಸುಲೇಮಾನ್, ಪಾಕಿಸ್ತಾನದ ಯಾಸಿರ್ […]

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಆನೆ ದಾಳಿಗೊಳಗಾದ ಕಾರ್ಮಿಕರ ಯೋಗಕ್ಷೇಮ ವಿಚಾರಿಸಿದ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಆನೆ ದಾಳಿಗೊಳಗಾದ ಕಾರ್ಮಿಕರ ಯೋಗಕ್ಷೇಮ ವಿಚಾರಿಸಿದ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಮಡಿಕೇರಿ : ಕೊಡಗಿನ ವಿರಾಜಪೇಟೆ ತಾಲೂಕು ವ್ಯಾಪ್ತಿಯ ಕರಡಿಗೋಡು ಗ್ರಾಮದಲ್ಲಿ ಕಾಡಾನೆ ದಾಳಿಗೊಳಗಾಗಿ  ಗಾಯಗೊಂಡ ಕಾರ್ಮಿಕರನ್ನು ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು. ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಕರಡಿಗೋಡು ಕಾಫಿ ತೋಟ ದಲ್ಲಿ ಕೆಲಸ ನಿರ್ವಹಿಸುತ್ತಿದಾ ಸಾಬುಅಲ್ಲಿ (60) ಹಾಗೂ ಕಣ್ಣನ್ನ್ (49) ಎಂಬ ಕಾರ್ಮಿಕ […]

ಅಧಿಕಾರಿಗಳು ತಳಮಟ್ಟದಲ್ಲಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ: ಎ.ಎಸ್.ಪೊನ್ನಣ್ಣ 

ಅಧಿಕಾರಿಗಳು ತಳಮಟ್ಟದಲ್ಲಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ: ಎ.ಎಸ್.ಪೊನ್ನಣ್ಣ  ಮಡಿಕೇರಿ : ಅರಣ್ಯಕ್ಕೆ ಸಂಬಂಧಿಸಿದಂತೆ ಹಲವು ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಮುಂದಾಗಬೇಕು. ಆ ನಿಟ್ಟಿನಲ್ಲಿ ತಳಮಟ್ಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ಸಂಪಾಜೆ, ಚೆಂಬು, ಪೆರಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಅರಣ್ಯ ಅಧಿಕಾರಿಗಳು ಹಾಗೂ ಸಾರ್ವಜನಿಕರ ಜೊತೆ ಚೆಂಬು ಗ್ರಾ.ಪಂ.ಸಭಾಂಗಣದಲ್ಲಿ […]

ರಸ್ತೆ ಸುರಕ್ಷತೆಗೆ ಗಮನಹರಿಸಿ ಅಪಘಾತ ತಪ್ಪಿಸಿ: ವೆಂಕಟ್ ರಾಜಾ 

ರಸ್ತೆ ಸುರಕ್ಷತೆಗೆ ಗಮನಹರಿಸಿ ಅಪಘಾತ ತಪ್ಪಿಸಿ: ವೆಂಕಟ್ ರಾಜಾ  ಮಡಿಕೇರಿ : ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ರಸ್ತೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ‘ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಗತ್ಯವಿರುವ ಕಡೆಗಳಲ್ಲಿ ವೇಗ ನಿಯಂತ್ರಣ ಸಂಬಂಧ ಹಂಪ್‍ಗಳನ್ನು ಅಳವಡಿಸುವುದು. ಜೊತೆಗೆ ಎದ್ದು ಕಾಣುವಂತೆ ಬಿಳಿ […]

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘ ಪ್ರತಿಭಟನೆ

ಮಡಿಕೇರಿ : ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಸಿಐಟಿಯು ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಮಾತನಾಡಿ, ಗ್ರಾಮ ಪಂಚಾಯಿತಿ ನೌಕರರು ವೈಜ್ಞಾನಿಕ ಕನಿಷ್ಠ ವೇತನವೂ ಇಲ್ಲದೆ, ಕಡಿಮೆ ಸಂಬಳಕ್ಕೆ ಒತ್ತಡದ ಹೆಚ್ಚಿನ ಕೆಲಸವನ್ನು ಮಾಡಬೇಕಿದೆ. ೨೦೧೬ರಲ್ಲಿ ಅತ್ಯಲ್ಪ ವೇತನವನ್ನು ಜಾಸ್ತಿ ಮಾಡಿದ್ದು ಬಿಟ್ಟರೆ, ಇಲ್ಲಿಯವರೆಗೆ ವೇತನ ಹೆಚ್ಚು ಮಾಡಿಲ್ಲ. ನೌಕರರಿಗೆ […]