ಒತ್ತಡ ನಡುವೆ ಕೆಸರುಗದ್ದೆಯಲ್ಲಿ ಕಾದಾಡಲಿರುವ ಖಾಕಿ ಪಡೆ : ನಾಳೆ ಗೋಣಿಕೊಪ್ಪಲುವಿನಲ್ಲಿ ಜಿಲ್ಲಾ ಪೊಲೀಸರ ಕೆಸರುಗದ್ದೆ ಕ್ರೀಡಾಕೂಟ

ಒತ್ತಡ ನಡುವೆ ಕೆಸರುಗದ್ದೆಯಲ್ಲಿ ಕಾದಾಡಲಿರುವ ಜಿಲ್ಲಾ ಖಾಕಿ ಪಡೆ : ನಾಳೆ ಗೋಣಿಕೊಪ್ಪಲುವಿನಲ್ಲಿ ಪೊಲೀಸರ ಕೆಸರುಗದ್ದೆ ಕ್ರೀಡಾಕೂಟ – ಮಡಿಕೇರಿ : ಸದಾ ಒತ್ತಡಲ್ಲೇ ಕಾರ್ಯ ನಿರ್ವಹಿಸುವ ಜಿಲ್ಲೆಯ ಆರಕ್ಷಕರಿಗೆ ರಿಲಿಪ್ ನೀಡುವ ಸಲುವಾಗಿ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ, ವಿರಾಜಪೇಟೆ ಉಪ ವಿಭಾಗದ ವತಿಯಿಂದ ಪೊಲೀಸ್ ಸಿಬ್ಬಂದಿಗಳು ಹಾಗೂ ಕುಟುಂಬಸ್ಥರಿಗಾಗಿ ಇದೆ ಮೊದಲ ಬಾರಿಗೆ ಕೆಸರು ಗದ್ದೆ ಕ್ರೀಡಾಕೂಟವನ್ನು ಆಯೋಜನೆ ಮಾಡಿದೆ. ಗೋಣಿಕೊಪ್ಪಲು ಕಾವೇರಿ ಕಾಲೇಜು ಹಿಂಭಾಗದ ಗದ್ದೆಯಲ್ಲಿ ನಾಳೆ (ಜುಲೈ […]
ಮನೆಯ ಗೋಡೆ ಕುಸಿದು ಕಾರ್ಮಿಕ ಮಹಿಳೆ ದುರ್ಮರಣ

ಮನೆಯ ಗೋಡೆ ಕುಸಿದು ಕಾರ್ಮಿಕ ಮಹಿಳೆ ದುರ್ಮರಣ ಮಡಿಕೇರಿ : ಮನೆಯ ಗೋಡೆ ಕುಸಿದು ಬಿದ್ದು ಕಾರ್ಮಿಕ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಅಫ್ಜಲ್ ಪುರದ ರವಿ ಎಂಬುವವರ ಪತ್ನಿ ಸುಷ್ಮಾ(29) ಮೃತ ಮಹಿಳೆ. ಮೃತ ಮಹಿಳೆ, ಸಹೋದರ ಹಾಗೂ ಮಕ್ಕಳು ಕಳೆದ ಎರಡು ವರ್ಷಗಳ ಹಿಂದೆ ಸೋಮವಾರಪೇಟೆಗೆ ಆಗಮಿಸಿದ್ದು, ಹಾನಗಲ್ಲು ಗ್ರಾಮದ ಸಚಿನ್ ಎ.ಎನ್ ಎಂಬುವವರ ವಾಸದ ಮನೆಯಲ್ಲಿ ಬಾಡಿಗೆ ಇದ್ದರು. ಇಂದು ಬೆಳಿಗ್ಗೆ 5.30 […]
ಸಾರ್ವಜನಿಕರಿಗೆ ಸಕಾಲದಲ್ಲಿ ಸ್ಪಂದಿಸಿ : ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ

ಸಾರ್ವಜನಿಕರಿಗೆ ಸಕಾಲದಲ್ಲಿ ಸ್ಪಂದಿಸಿ : ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ಮಡಿಕೇರಿ : ಕಂದಾಯ ಇಲಾಖೆಯಲ್ಲಿ ಗ್ರಾಮ ಆಡಳಿತ ಅಧಿಕಾರಿ ಹಂತದ ವರೆಗೂ ಇ ಕಚೇರಿ ವ್ಯವಸ್ಥೆ ಅಳವಡಿಸಲಾಗಿದ್ದು, ಸಾರ್ವಜನಿಕರಿಗೆ ಸಕಾಲದಲ್ಲಿ ಸ್ಪಂದಿಸಿ ಕೆಲಸ ನಿರ್ವಹಿಸುಂತಾಗಬೇಕು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮ ಆಡಳಿತಾಧಿಕಾರಿಗಳಿಗೆ ಗ್ರಾ.ಪಂ.ಕಚೇರಿಯಲ್ಲಿ ಸ್ಥಳಾವಕಾಶ […]
ಸೆ.13 ರಂದು ರಾಷ್ಟ್ರೀಯ ಲೋಕ ಅದಾಲತ್

ಸೆ.13 ರಂದು ರಾಷ್ಟ್ರೀಯ ಲೋಕ ಅದಾಲತ್ ಮಡಿಕೇರಿ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಸೆಪ್ಟೆಂಬರ್, 13 ರಂದು ರಾಜ್ಯದಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ಅದರಂತೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್, 13 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ತಿಳಿಸಿದ್ದಾರೆ.
ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ ಮಡಿಕೇರಿ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಕರಿಕೆ, ಮಡಿಕೇರಿ ತಾಲ್ಲೂಕು ಇಲ್ಲಿಗೆ 8ನೇ ತರಗತಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳನ್ನು ಬೋಧಿಸಲು ಗೌರವಧನ ಆಧಾರದ ಮೇಲೆ ಶಿಕ್ಷಕರ ಸೇವೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್,್ಟ 14 ಕೊನೆಯ ದಿನಾಂಕವಾಗಿದ್ದು, ಗಣಿತ ಮತ್ತು ವಿಜ್ಞಾನ ವಿಷಯ ಬೋಧಿಸಲು ಬಿಎಸ್ಸಿ, ಬಿಇಡಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ […]
ಗುರಿ ಸಾಧಿಸುವ ಛಲವಿದ್ದಲ್ಲಿ ಏನನ್ನೂ ಸಾಧಿಸಲು ಸಾಧ್ಯ; ಆರ್.ಐಶ್ವರ್ಯ

ಗುರಿ ಸಾಧಿಸುವ ಛಲವಿದ್ದಲ್ಲಿ ಏನನ್ನೂ ಸಾಧಿಸಲು ಸಾಧ್ಯ; ಆರ್.ಐಶ್ವರ್ಯ ಮಡಿಕೇರಿ : ವಿದ್ಯಾರ್ಥಿಗಳಲ್ಲಿ ನಿರ್ದಿಷ್ಟ ಗುರಿ, ಸಾದಿಸುವ ಛಲ ಇದ್ದಲ್ಲಿ ಜೀವನದಲ್ಲಿ ಏನನ್ನು ಬೇಕಾದರೂ ಸಾದಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಹೇಳಿದ್ದಾರೆ. ಮಾದಾಪುರದ ಡಿ.ಚೆನ್ಮಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಅವರು ಮಾತನಾಡಿದರು. ಎಂತಹುದ್ದೇ ಕಠಿಣ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಎದೆಗುಂದದೆ ಸೋಲು ಗೆಲವುಗಳನ್ನು ಸ್ಥಿತಪ್ರಜ್ಞರಾಗಿ ಸ್ವೀಕರಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಗರಗಂದೂರು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪಾರ್ವತಿ ಮಾತನಾಡಿ ವಿದ್ಯಾರ್ಥಿ ಸಂಘದ […]
ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ಪುನೀತ ರಾಜ್‍ಕುಮಾರ ಹೃದಯಜ್ಯೋತಿ ಯೋಜನೆ ವಿಸ್ತರಣೆ : ಆರೋಗ್ಯ ಸಚಿವ ದಿನೇಶ ಗುಂಡೂರಾವ್

ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ಪುನೀತ ರಾಜ್‍ಕುಮಾರ ಹೃದಯಜ್ಯೋತಿ ಯೋಜನೆ ವಿಸ್ತರಣೆ : ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಬೆಂಗಳೂರು : ರಾಜ್ಯದಲ್ಲಿ ಹೃದಯ ಖಾಯಿಲೆ ಪ್ರಕರಣಗಳಲ್ಲಿ ಹೆಚ್ಚಳವಿಲ್ಲ. ಆರೋಗ್ಯ ಇಲಾಖೆಯ ಯಶಸ್ವಿ ಕಾರ್ಯಕ್ರಮಗಳಲ್ಲಿ ಒಂದಾಗಿರುವ ಪುನೀತ ರಾಜ್‍ಕುಮಾರ ಹೃದಯಜ್ಯೋತಿ ಯೋಜನೆಯನ್ನು ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ವಿಸ್ತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿ ವಿಭಾಗ ಮಟ್ಟದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯೋಜನೆಗಳ […]
ಶನಿವಾರ ಸಂಜೆ ಮಡಿಕೇರಿಯಲ್ಲಿ ಕಾರ್ಗಿಲ್ ಹುತಾತ್ಮರಿಗೆ ದೀಪನಮನ, ಗಾನ ನಮನ ಮತ್ತು ಪುಪ್ಪ ನಮನ ಕಾರ್ಯಕ್ರಮ

ಮಡಿಕೇರಿ : ಕಾಗಿ೯ಲ್ ವಿಜಯ್ ದಿವಸ್ ಹಿನ್ನಲೆಯಲ್ಲಿ ನಾಳೆ (ಶನಿವಾರ) ಸಂಜೆ ಕೊಡಗು ಪತ್ರಕತ೯ರ ಸಂಘ (ರಿ) ಮತ್ತು ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಕಾಗಿ೯ಲ್ ಹುತಾತ್ಮರಿಗೆ ಗೌರವ ನಮನ ಕಾಯ೯ಕ್ರಮ ದೀಪನಮನ, ಗಾನ ನಮನ ಮತ್ತು ಪುಪ್ಪ ನಮನ ಆಯೋಜಿಸಲಾಗಿದೆ. ನಗರದ ಗೌಡ ಸಮಾಜದಲ್ಲಿ ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಆಯೋಜಿತ ಕಾಯ೯ಕ್ರಮದಲ್ಲಿ ಜಿಲ್ಲೆಯಾದ್ಯಂತಲಿನ 85 ಸಂಘಸಂಸ್ಥೆಗಳು ಪಾಲ್ಗೊಳ್ಳುತ್ತಿವೆ ಎಂದು ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ರೋಟರಿ ಮಿಸ್ಟಿ ಹಿಲ್ಸ್ […]
ಪೊನ್ನಂಪೇಟೆ ಮತ್ತು ಕುಶಾಲನಗರದಲ್ಲಿ ಪ್ರಜಾಸೌಧ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಶೀಘ್ರ ಚಾಲನೆ: ಕೃಷ್ಣ ಬೈರೇಗೌಡ

ಪೊನ್ನಂಪೇಟೆ ಮತ್ತು ಕುಶಾಲನಗರದಲ್ಲಿ ಪ್ರಜಾಸೌಧ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಶೀಘ್ರ ಚಾಲನೆ: ಕೃಷ್ಣ ಬೈರೇಗೌಡ ಮಡಿಕೇರಿ : ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಪೊನ್ನಂಪೇಟೆಯ ತಹಶೀಲ್ದಾರರ ಕಚೇರಿಗೆ ಶುಕ್ರವಾರ ಭೇಟಿ ನೀಡಿ ಭೂ ಸುರಕ್ಷತೆ ಮತ್ತು ಕಂದಾಯ ದಾಖಲೆ ಡಿಜಿಟಲೀಕರಣ ಪ್ರಕ್ರಿಯೆ ಸಂಬಂಧ ಮಾಹಿತಿ ಪಡೆದರು. ಸರ್ಕಾರ ಭೂಸುರಕ್ಷತಾ ಯೋಜನೆಯಡಿ ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಕಲ್ಪಿಸುತ್ತಿರುವ ಹಿನ್ನೆಲೆ ತಹಶೀಲ್ದಾರರ ಕಚೇರಿಯಲ್ಲಿ ಯಾವ ರೀತಿ ಅಪ್‍ಡೇಟ್ ಮಾಡಿದ್ದಾರೆ ಎಂಬ ಬಗ್ಗೆ ಸಚಿವರು ಮಾಹಿತಿ […]
ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ : ಹವಾಮಾನ ಇಲಾಖೆಯಿಂದ ಭಾರಿ ಮಳೆ ಬೀಳುವ ಮುನ್ಸೂಚನೆ

ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ : ಹವಾಮಾನ ಇಲಾಖೆಯಿಂದ ಭಾರಿ ಮಳೆ ಬೀಳುವ ಮುನ್ಸೂಚನೆ ಮಡಿಕೇರಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರಿಗೆ ಆರೆಂಜ್ ಅಲರ್ಟ್ ಮತ್ತು ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕೊಡಗು ಜಿಲ್ಲೆಗೆ ಭಾರಿ ಮಳೆ ಬೀಳುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆಯು ಜುಲೈ 26ರ ಬೆಳಿಗ್ಗೆ 8.30ರವರೆಗೂ ಆರೆಂಜ್ ಅಲರ್ಟ್ ಘೋಷಿಸಿದ್ದು, ಮುನ್ನಚ್ಚರಿಕೆಯನ್ನೂ […]