Breaking News :

ಪ್ರೌಢಶಾಲಾ ಶಿಕ್ಷಕರನ್ನು ಬಿಎಲ್‌ಒಗಳನ್ನಾಗಿ ನೇಮಕ ಮಾಡದಂತೆ ಜಿಲ್ಲಾಧಿಕಾರಿಗೆ ಮನವಿ 

ಪ್ರೌಢಶಾಲಾ ಶಿಕ್ಷಕರನ್ನು ಬಿಎಲ್‌ಒಗಳನ್ನಾಗಿ ನೇಮಕ ಮಾಡದಂತೆ ಡಿಸಿಗೆ ಮನವಿ ಮಡಿಕೇರಿ : ಪ್ರೌಢಶಾಲಾ ಶಿಕ್ಷಕರುಗಳನ್ನು ಬಿಎಲ್‌ಒಗಳನ್ನಾಗಿ ನೇಮಕ ಮಾಡುತ್ತಿರುವುದನ್ನು ಕೈಬಿಡಬೇಕೆಂದು ಕೋರಿ ಪ್ರೌಢಶಾಲಾ ಸಹಶಿಕ್ಷಕರ ಸಂಘ ಕೊಡಗು ಘಟಕ ವತಿಯಿಂದ ಜಿಲ್ಲಾಧಿಕಾರಿ ವೆಂಕಟರಾಜಾ ರವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಚ್.ಜೆ.ಕುಮಾರ್, ಪ್ರೌಢಶಾಲಾ ಸಹಶಿಕ್ಷಕರುಗಳಿಗೆ ಈಗಾಗಲೇ ಪಾಠಪ್ರವಚನಗಳ ಹೆಚ್ಚು ಕಾರ್ಯಭಾರವಿದೆ. ಇಲಾಖೆಯ ಹತ್ತು ಹಲವು ಕಾರ್ಯಕ್ರಮಗಳ ಅನುಷ್ಠಾನ ಸೇರಿದಂತೆ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಫಲಿತಾಂಶ ತರಬೇಕಾದ ಒತ್ತಡವಿರುವುದರಿಂದ ಬಿಎಲ್‌ಒ ಕರ್ತವ್ಯ ನಿಭಾಯಿಸುವುದು […]

ರಾಜ್ಯದ ಜನರ ಮನೆ ಬಾಗಿಲಿಗೆ ನಮ್ಮ ಯೋಜನೆಗಳ ಮೂಲಕ ತಲುಪಿದ್ದೇವೆ : ಸಿಎಂ ಸಿದ್ದರಾಮಯ್ಯ

ರಾಜ್ಯದ ಜನರ ಮನೆ ಬಾಗಿಲಿಗೆ ನಮ್ಮ ಯೋಜನೆಗಳ ಮೂಲಕ ತಲುಪಿದ್ದೇವೆ : ಮೈಸೂರಿನಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ  ಮೈಸೂರು : ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ನಮ್ಮ ಯೋಜನೆಗಳ ಮೂಲಕ ತಲುಪಿದ್ದೇವೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ  ₹2,578 ಕೋಟಿಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭ ಹಾಗೂ ರಾಜ್ಯ ಸರ್ಕಾರದ ಎರಡು […]

ಪ್ರತಿಭೆ ಯಾರ ಸ್ವತ್ತೂ ಅಲ್ಲ ಅವಕಾಶ ಸಿಕ್ಕರೆ ಪ್ರತಿಯೊಬ್ಬರ ಪ್ರತಿಭೆ ಹೊರ ಬರುತ್ತೆ : ಸಿಎಂ ಸಿದ್ದರಾಮಯ್ಯ 

ಪ್ರತಿಭೆ ಯಾರ ಸ್ವತ್ತೂ ಅಲ್ಲ ಅವಕಾಶ ಸಿಕ್ಕರೆ ಪ್ರತಿಯೊಬ್ಬರ ಪ್ರತಿಭೆ ಹೊರ ಬರುತ್ತೆ : ಸಿಎಂ ಸಿದ್ದರಾಮಯ್ಯ ಬೆಂಗಳೂರು : ಪ್ರತಿಭೆ ಯಾರ ಸ್ವತ್ತೂ ಅಲ್ಲ ಅವಕಾಶ ಸಿಕ್ಕರೆ ಪ್ರತಿಯೊಬ್ಬರ ಪ್ರತಿಭೆ ಹೊರಗೆ ಬರತ್ತದೆ. ಮಕ್ಕಳ ಪ್ರತಿಭೆ ರೂಪುಗೊಳ್ಳಲು ಶಿಕ್ಷಕರಷ್ಟೇ ಪೋಷಕರ ಶ್ರಮ ಕೂಡ ಅಗತ್ಯ. ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳದಿದ್ದರೆ ಯಾರನ್ನೂ ದೂರಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ […]

ಧರ್ಮಸ್ಥಳ ಪ್ರಕರಣ : ಎಸ್‍ಐಟಿ ತನಿಖೆಗೆ ಒಪ್ಪಿಸಲು ಆಗ್ರಹಿಸಿ ಕುಶಾಲನಗರದಲ್ಲಿ ಪ್ರತಿಭಟನೆ

ಧರ್ಮಸ್ಥಳ ಪ್ರಕರಣ : ಎಸ್‍ಐಟಿ ತನಿಖೆಗೆ ಒಪ್ಪಿಸಲು ಆಗ್ರಹಿಸಿ ಕುಶಾಲನಗರದಲ್ಲಿ ಪ್ರತಿಭಟನೆ ಕುಶಾಲನಗರ : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳ ತನಿಖೆಗೆ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಎಸ್‍ಐಟಿ ತನಿಖೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಪಿಐ) ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿತು. ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಎಸ್‍ಡಿಪಿಐ ಪ್ರಮುಖರು ಹಾಗೂ ಸದಸ್ಯರು ಧರ್ಮಸ್ಥಳದಲ್ಲಿ ನಡೆದಿರುವ ಘಟನೆಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ […]

ರಾಜ್ಯ ಕಬಡ್ಡಿ ತಂಡಕ್ಕೆ ಕೊಡಗಿನ ಸಚಿನ್ ಆಯ್ಕೆ

ರಾಜ್ಯ ಕಬಡ್ಡಿ ತಂಡಕ್ಕೆ ಕೊಡಗಿನ ಸಚಿನ್ ಆಯ್ಕೆ ಕೊಡಗು : ಆಮೇಚೂರ್ ಕಬಡ್ಡಿ ಫೆಡರೇಷನ್ ಆಪ್ ಇಂಡಿಯಾ ಸಂಸ್ಥೆಯು ಪಂಜಾಬ್ ರಾಜ್ಯದ ಚಂಡೀಗಡದ ಪಂಚಕುಲದಲ್ಲಿ ಜುಲೈ 25 ರಿಂದ 28 ರವರೆಗೆ ನಡೆಸಲಿರುವ 72ನೇ ಹಿರಿಯರ ರಾಷ್ಟ್ರ ಮಟ್ಟದ ಕಬಡ್ಡಿ ಟೂರ್ನಿಯಲ್ಲಿ ಕೊಡಗು ಜಿಲ್ಲೆಯ ಸಚಿನ್ ಪೂವಯ್ಯ  ಹೊಟ್ಟೆಯಂಡ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಸಚಿನ್ ಮೂಲತಃ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಉಂಜಿಗನಹಳ್ಳಿ ನಿವಾಸಿ ಪೂವಯ್ಯ.ಹೆಚ್.ಎಸ್ ಹಾಗೂ ಸರಸು.ಹೆಚ್.ಪಿ. ದಂಪತಿಗಳ ಪುತ್ರ. ಸಚಿನ್ ಈಗಾಗಲೇ ಜಿಲ್ಲೆ ಹಾಗೂ ರಾಜ್ಯ […]

ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ 

ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ  ಮೈಸೂರು : ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು.‌ ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ. ಭಾರತೀಯ ಸಾರ್ವಜನಿಕ‌ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ ಸಂಸ್ಥೆ, ಐಐಪಿಐ ಸಂಯುಕ್ತಾಶ್ರಯದಲ್ಲಿ ಕೆ.ಎ.ಎಸ್ ತಾಲೂಕು ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ಮೂಲ ಆಶಯ. ಸಂವಿಧಾನ ಜಾರಿಯಾಗಿ […]

ಕಾಡಾನೆ ಕಾರ್ಯಚರಣೆ ಏಳಕ್ಕೂ ಅಧಿಕ ಆನೆಗಳು ಮರಳಿ ಅರಣ್ಯಕ್ಕೆ

ಕಾಡಾನೆ ಕಾರ್ಯಚರಣೆ ಏಳಕ್ಕೂ ಅಧಿಕ ಆನೆಗಳು ಮರಳಿ ಅರಣ್ಯಕ್ಕೆ : ಉಳಿದ ಆನೆಗಳಿಗಾಗಿ ಮುಂದುವರೆಯಲಿರುವ ಕಾರ್ಯಾಚರಣೆ ಕೊಡಗು : ಪಾಲಿಬೆಟ್ಟ ಸಮೀಪದ ಬಜೆಗೊಲ್ಲಿ, ಮೇಕೂರು, ಹೊಳಮಾಲ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯ ಅಟ್ಟುವ ಕಾರ್ಯಚರಣೆ ನಡೆಯಿತು. ವಿರಾಜಪೇಟೆ ವಲಯ ಉಪ ವಿಭಾಗ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಹಾಗೂ ಎಸಿಎಫ್ ಗೋಪಾಲ್ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಗಂಗಾಧರ್ ನೇತೃತ್ವದಲ್ಲಿ ಬಜೆಗೊಲ್ಲಿಯಿಂದ ಆರಂಭವಾದ ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಶಶಿಧರ್ ಸೇರಿದಂತೆ ತಿತಿಮತಿ ಅರಣ್ಯ ವಲಯದ ಚೆನ್ನಾಂಗಿ ಶಾಖೆಯ […]

ಕೊಡಗು ಜಿಲ್ಲೆಯಲ್ಲಿ ಮನೆ ಬಳಿಗೆ ಆರೋಗ್ಯ ಸೇವೆ : ‘ಗೃಹ ಆರೋಗ್ಯ’ ಯೋಜನೆಗೆ ಶಾಸಕರಾದ ಡಾ.ಮಂತರ್ ಗೌಡ ಚಾಲನೆ 

ಕೊಡಗು ಜಿಲ್ಲೆಯಲ್ಲಿ ಮನೆ ಬಳಿಗೆ ಆರೋಗ್ಯ ಸೇವೆ : ‘ಗೃಹ ಆರೋಗ್ಯ’ ಯೋಜನೆಗೆ ಶಾಸಕರಾದ ಡಾ.ಮಂತರ್ ಗೌಡ ಚಾಲನೆ ಮಡಿಕೇರಿ : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ‘ವೈದ್ಯಕೀಯ ತರಬೇತಿ ಕೇಂದ್ರ’ ಆರಂಭಿಸಲು ಚಿಂತಿಸಲಾಗಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಇವರ ವತಿಯಿಂದ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆದ […]

ವೀರಭದ್ರೇಶ್ವರ ವರ್ಧಂತಿ ಮಹೋತ್ಸವಕ್ಕೆ ಮಾಜಿ ಪ್ರಧಾನಿ ದೇವೇಗೌಡರಿಗೆ ಆಹ್ವಾನ

ವೀರಭದ್ರೇಶ್ವರ ವರ್ಧಂತಿ ಮಹೋತ್ಸವ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯಿಂದ ಹೆಚ್.ಡಿ.ದೇವೇಗೌಡರಿಗೆ ಆಹ್ವಾನ ಕೊಡಗು : ವೀರಭದ್ರೇಶ್ವರ ವರ್ಧಂತಿ ಮಹೋತ್ಸವಕ್ಕೆ ರಾಷ್ಟ್ರದ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರನ್ನು ಆಹ್ವಾನಿಸಲಾಯಿತು.  ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ವತಿಯಿಂದ ಮುಂದಿನ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಿರುವ ರಾಷ್ಟ್ರೀಯ ವೀರಭದ್ರೇಶ್ವರ ವರ್ಧಂತಿ ಮಹೋತ್ಸವಕ್ಕೆ ಆಗಮಿಸುವಂತೆ ಕೋರಿ ಮಠಧೀಷರ ನೇತೃತ್ವದಲ್ಲಿ ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ನಿವಾಸಕ್ಕೆ ತೆರಳಿ ದೇವೇಗೌಡರನ್ನು ಭೇಟಿಮಾಡಿದ ತಂಡ ವೀರಭದ್ರೇಶ್ವರ ಜಯಂತಿಯ ಮಹತ್ವ ಹಾಗೂ ಆಚರಣೆಯ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಈ […]

ಕುಶಾಲನಗರ : ಕೊಡಗು ಪತ್ರಕರ್ತರ ಸಂಘದಲ್ಲಿ ದತ್ತಿನಿಧಿ ಸ್ಥಾಪನೆ

ಕುಶಾಲನಗರ : ಕೊಡಗು ಪತ್ರಕರ್ತರ ಸಂಘದಲ್ಲಿ ದತ್ತಿನಿಧಿ ಸ್ಥಾಪನೆ ಮಡಿಕೇರಿ  : ಕೊಡಗು ಪತ್ರಕರ್ತರ ಸಂಘ, ಕುಶಾಲನಗರ ತಾಲ್ಲೂಕು ಘಟಕದಲ್ಲಿ ಕೊಡವಂಡ ವಸಂತಿ ಪೊನ್ನಪ್ಪ ಅವರು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ದತ್ತಿನಿಧಿಯನ್ನು ಸ್ಥಾಪಿಸಿದ್ದಾರೆ. ತಾಲ್ಲೂಕು ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಅವರಿಗೆ ರೂ.25 ಸಾವಿರ ಮೊತ್ತದ ಚೆಕ್ ಅನ್ನು ಹಸ್ತಾಂತರ ಮಾಡಿದರು. ಈ ಸಂದರ್ಭ ಕೊರವಂಡ ಪೊನ್ನಪ್ಪ, ಸಂಘದ ಗೌರವಾಧ್ಯಕ್ಷ ಕೆ.ತಿಮ್ಮಪ್ಪ, ಉಪಾಧ್ಯಕ್ಷ ಬಿ.ಸಿ.ದಿನೇಶ್, ನಿರ್ದೇಶಕರಾದ ಶಿವಣ್ಣ, ಅನಿಲ್ ಇದ್ದರು.