Breaking News :

ಉಚಿತ ಸೆಲ್ ಪೋನ್  ರಿಪೇರಿ ತರಬೇತಿ

ಉಚಿತ ಸೆಲ್ ಪೋನ್  ರಿಪೇರಿ ತರಬೇತಿ ಮಡಿಕೇರಿ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಆಗಸ್ಟ್, 05 ರಿಂದ 30 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸೆಲ್ ಫೆÇೀನ್ ತರಬೇತಿ ಶಿಬಿರವನ್ನು ಏರ್ಪಡಿಸಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, […]

ಜು.26 ರಂದು ದಸರಾ ಆಚರಣೆ ಪೂರ್ವಭಾವಿ ಸಭೆ ಹಾಗೂ ಪ್ರಥಮ ಪೂಜೆ

ಜು.26 ರಂದು ದಸರಾ ಆಚರಣೆ ಪೂರ್ವಭಾವಿ ಸಭೆ ಹಾಗೂ ಪ್ರಥಮ ಪೂಜೆ ಮಡಿಕೇರಿ : ನಗರ ದಸರಾ ಸಮಿತಿಯ 2024ನೇ ಸಾಲಿನ ಜಮಾ ಖರ್ಚು ಮಂಡನೆ ಹಾಗೂ 2025 ರ ಅಕ್ಟೋಬರ್ ಮಾಹೆಯಲ್ಲಿ ಜರುಗುವ ಮಡಿಕೇರಿ ದಸರಾ ಆಚರಣೆಯ ಪೂರ್ವ ಸಿದ್ಧತೆ ಬಗ್ಗೆ ಜುಲೈ, 26 ರಂದು ಸಂಜೆ 4 ಗಂಟೆಗೆ ನಗರ ದಸರಾ ಸಮಿತಿಯ ಅಧ್ಯಕ್ಷರು ಹಾಗೂ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ನಗರದ ಹೋಟೆಲ್ ರಾಜ್ ದರ್ಶನ್ ಇಲ್ಲಿ ದಸರಾ ಆಚರಣೆಯ ಪೂರ್ವಭಾವಿ […]

ಕಂದಾಯ ಸಚಿವರ ಕೊಡಗು ಜಿಲ್ಲಾ ಪ್ರವಾಸ

ಕಂದಾಯ ಸಚಿವರ ಕೊಡಗು ಜಿಲ್ಲಾ ಪ್ರವಾಸ ಮಡಿಕೇರಿ : ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರು ಜುಲೈ, 25 ರಂದು ನಾಳೆ ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಜುಲೈ, 25 ರಂದು ಬೆಳಗ್ಗೆ 11.30 ಗಂಟೆಗೆ ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ರವಿ […]

ಸ್ವಾತಂತ್ರ್ಯ ಉತ್ಸವದ ವಿಶೇಷ ರಾಯಭಾರಿಯನ್ನು ಸನ್ಮಾನಿಸಿದ ಡಾ ಮಂತರ್ ಗೌಡ.

ಸ್ವಾತಂತ್ರ್ಯ ಉತ್ಸವದ ವಿಶೇಷ ರಾಯಭಾರಿಯನ್ನು ಸನ್ಮಾನಿಸಿದ ಡಾ ಮಂತರ್ ಗೌಡ. ಮಡಿಕೇರಿ : ಆಗಷ್ಟ್ 15 ರಂದು ದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯ ಉತ್ಸವದಲ್ಲಿ ವಿಶೇಷ ಯುವ ರಾಯಭಾರಿಯಾಗಿ ಪ್ರಧಾನ ಮಂತ್ರಿ ಸೇರಿದಂತೆ ಗಣ್ಯರೊಂದಿಗೆ ವೇದಿಕೆ ಹಂಚಿಕೊಳ್ಳುವ ಅವಕಾಶ ಪಡೆದ ಕೊಡಗು ಜಿಲ್ಲೆಯ ಪ್ರತಿಭಾನ್ವಿತ ಯುವಕ ಯಶಸ್ ರೈ ರವರನ್ನು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ರವರು ಇಂದು ಸುದರ್ಶನ ಅತಿಥಿಗೃಹದಲ್ಲಿ ಶಾಲು ಹೊದಿಸಿ ಸನ್ಮಾನಿಸಿದರು. ಮಡಿಕೇರಿ ತಾಲೂಕಿನ ಮೂರ್ನಾಡು ಗ್ರಾಮದ ಲವ […]

ವಿದೇಶದಲ್ಲಿ ಮೃತಪಟ್ಟ ವ್ಯಕ್ತಿಯ ಪಾರ್ಥಿವ ಶರೀರ ಭಾರತಕ್ಕೆ ತರಲು ಸರಕಾರದಿಂದ ನೆರವು 

ವಿದೇಶದಲ್ಲಿ ಮೃತಪಟ್ಟ ವ್ಯಕ್ತಿಯ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಸರಕಾರದಿಂದ ನೆರವು ಮಡಿಕೇರಿ : ಶಾಸಕ ಪೊನ್ನಣ್ಣ ರವರ ಪ್ರಯತ್ನದಿಂದ, ಅಮೆರಿಕದ ಗಯಾನ ದೇಶದಲ್ಲಿ ನಿಧನರಾದ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮದೆನಾಡು ಗ್ರಾಮದ, ಗಿರೀಶ್ ಪಾಲೆ ಬಾಬು ರವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ರಾಜ್ಯ ಸರ್ಕಾರದಿಂದ ಹಣಕಾಸಿನ ನೆರವು. ಇತ್ತೀಚೆಗೆ ಅಮೆರಿಕದ ಗಯಾನದಲ್ಲಿ ಅನಾರೋಗ್ಯದಿಂದ ಮೃತಪಟ್ಟ ಗಿರೀಶ್ ರವರ ಮೃತ ದೇಹವನ್ನು ಭಾರತಕ್ಕೆ ತರಲು ಅವರ ಬಡ ಕುಟುಂಬಕ್ಕೆ ಸಾಧ್ಯವಾಗದನ್ನು ಸ್ಥಳೀಯರಿಂದ ಮಾಹಿತಿ ಪಡೆದ […]

ವಾಹನ ಅಪಘಾತ: ಗುತ್ತಿಗೆದಾರ ದುರ್ಮರಣ

ವಾಹನ ಅಪಘಾತ: ಗುತ್ತಿಗೆದಾರ ದುರ್ಮರಣ ಕುಶಾಲನಗರ : ಪಿರಿಯಾಪಟ್ಟಣ ತಾಲೂಕಿನ ಮಂತನಹಳ್ಳಿ ಬಳಿ ನಡೆದ ವಾಹನ ಅಪಘಾತದಲ್ಲಿ ಗುತ್ತಿಗೆದಾರ ಬೈಲುಕೊಪ್ಪದ ಅರುಣ (45) ಮೃತಪಟ್ಟಿದ್ದಾರೆ. ರಾತ್ರಿ ಸ್ನೇಹಿತರೊಂದಿಗೆ ಬೈಲುಕೊಪ್ಪದತ್ತ ತಮ್ಮ ಕಾರಿನಲ್ಲಿ ಆಗಮಿಸುತ್ತಿದ್ದ ಸಂದರ್ಭ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಅರುಣ ಸ್ಥಳದಲ್ಲಿ ಮೃತರಾದರು. ಕಾರಿನಲ್ಲಿದ್ದ ಮತ್ತೋರ್ವ ಅರುಣ ಹಾಗೂ ರವಿ ಎಂಬವರಿಗೆ ಗಾಯಗಳಾಗಿದೆ.  

ಕರ್ನಾಟಕ ಕಬಡ್ಡಿ ತಂಡದ ನಾಯಕನಾಗಿ ಸಚಿನ್ ಪೂವಯ್ಯ ಆಯ್ಕೆ 

ಕರ್ನಾಟಕ ಕಬಡ್ಡಿ ತಂಡವನ್ನು ನಾಯಕನಾಗಿ ಮುನ್ನಡೆಸಲಿರುವ ಕೊಡಗಿನ ಸಚಿನ್ ಮಡಿಕೇರಿ : ಜುಲೈ 25 ರಿಂದ ಪಂಜಾಬಿನ ಚಂಡೀಗಡದ ಪಂಚಕುಲದಲ್ಲಿ ಆಮೇಚೂರ್ ಕಬಡ್ಡಿ ಫೆಡರೇಷನ್ ಆಪ್ ಇಂಡಿಯಾ ಸಂಸ್ಥೆ ವತಿಯಿಂದ ನಡೆಯಲಿರುವ 72ನೇ ಹಿರಿಯರ ರಾಷ್ಟ್ರ ಮಟ್ಟದ ಕಬಡ್ಡಿ ಟೂರ್ನಿಯಲ್ಲಿ ಪಾಲ್ಗೊಳ್ಳಲಿರುವ ಕರ್ನಾಟಕ ತಂಡಕ್ಕೆ ಆಯ್ಕೆಗೊಂಡಿರುವ ಕೊಡಗಿನ ಸಚಿನ್ ಪೂವಯ್ಯ, ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಈ ವಿಚಾರವನ್ನು ಕರ್ನಾಟಕ ತಂಡದ ಮ್ಯಾನೇಜ್ಮೆಂಟ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಕರ್ನಾಟಕ ತಂಡಕ್ಕೆ ಆಯ್ಕೆಗೊಂಡಿರುವ ಆಟಗಾರರನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಬೆಂಗಳೂರಿನಲ್ಲಿರುವ ತಮ್ಮ […]

ಶಾಸಕ ಪೊನ್ನಣ್ಣರವರನ್ನು ಮಂತ್ರಿ ಮಾಡಬೇಕೆಂದು ಕೊಡಗು ಅರೆಭಾಷೆ ಗೌಡ ಸಮಾಜದ ಪ್ರಮುಖರಿಂದ ಮುಖ್ಯಮಂತ್ರಿಗೆ ಮನವಿ

ಶಾಸಕ ಪೊನ್ನಣ್ಣರವರನ್ನು ಮಂತ್ರಿ ಮಾಡಬೇಕೆಂದು ಕೊಡಗು ಅರೆಭಾಷೆ ಗೌಡ ಸಮಾಜದ ಪ್ರಮುಖರಿಂದ ಮುಖ್ಯಮಂತ್ರಿಗೆ ಮನವಿ ಮಡಿಕೇರಿ : ಅರೆಭಾಷೆ ಗೌಡ ಸಮುದಾಯದ ಹಲವು ಬೇಡಿಕೆಗಳನ್ನೊಳಗೊಂಡ ಮನವಿಯೊಂದಿಗೆ, ಸಮಾಜದ ಪ್ರಮುಖರು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ ರವರ ನೇತೃತ್ವದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು, ಅವರ ನಿವಾಸದಲ್ಲಿ ಭೇಟಿಯಾದರು. ಈ ಸಂದರ್ಭ ಪ್ರಮುಖ ಬೇಡಿಕೆಯಾಗಿ ಮಾನ್ಯ ಪೊನ್ನಣ್ಣ ರವರನ್ನು ಮುಂದಿನ ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಪ್ರಮುಖ ಖಾತೆಯೊಂದಿಗೆ ಸಂಪುಟ ದರ್ಜೆ ಸಚಿವ ಸ್ಥಾನ […]

ಕೊಡಗು ಗೌಡ ಸಮಾಜದ ಮುಖಂಡರಿಂದ ಶಾಸಕ ಎ.ಎಸ್.ಪೊನ್ನಣ್ಣರಿಗೆ ಅಭಿನಂದನೆ

ಕೊಡಗು ಗೌಡ ಸಮಾಜದ ಮುಖಂಡರಿಂದ ಶಾಸಕ ಎ.ಎಸ್.ಪೊನ್ನಣ್ಣರಿಗೆ ಅಭಿನಂದನೆ ಮಡಿಕೇರಿ  : ಕೊಡಗು ಗೌಡ ಸಮಾಜದ ಮುಖಂಡರಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಇತ್ತೀಚೆಗೆ ಭಾಗಮಂಡಲ ಗೌಡ ಸಮಾಜದ ನಿಯೋಗವು ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ನೀಡಿದ ಮನವಿಗೆ ಸ್ಪಂದಿಸಿ, ಸಮುದಾಯ ಭವನ ನಿರ್ಮಾಣಕ್ಕೆ ರೂ.1 ಕೋಟಿ ಅನುದಾನ ಮಂಜೂರು ಮಾಡುವ ಭರವಸೆ ನೀಡಿದ ಹಿನ್ನೆಲೆ ಬೆಂಗಳೂರಿನ ವಿಧಾನಸೌಧದ ಕಚೇರಿಗೆ ಭೇಟಿ ನೀಡಿದ ಕೊಡಗು ಗೌಡ ಸಮಾಜದ […]