ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ರಜೆ ನೀಡಲು ಸೂಚನೆ

ಜನವಾಹಿನಿ News ಮಡಿಕೇರಿ : ಕರ್ನಾಟಕ ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿಗಾರ್ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು)ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ, 1961 ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ/ಗುತ್ತಿಗೆ/ಹೊರಗುತ್ತಿಗೆ ಮಹಿಳಾ ನೌಕರರಿಗೆ ಅವರ ಆರೋಗ್ಯ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿ […]
ಕೇರಳ ಚುನಾವಣಾ ಪ್ರಚಾರದಲ್ಲಿ ಶಾಸಕ ಎ.ಎಸ್. ಪೊನ್ನಣ್ಣ

ಜನವಾಹಿನಿ News ಮಡಿಕೇರಿ : ಕೇರಳದ ಕೊಟ್ಟಾಯಂ ಜಿಲ್ಲೆಯ ಚಂಗನಶ್ಶೇರಿಯಲ್ಲಿ, ಇಂದು ನಡೆದ ಚುನಾವಣಾ ಪ್ರಚಾರದಲ್ಲಿ ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ.ಜೆ ಜಾರ್ಜ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು, ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರದಲ್ಲಿ ಪಾಲ್ಗೊಂಡರು.
ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮನ್ ರೇಗಾ ಬಚಾವ್ ಸಂಗ್ರಾಮ : ಬಡವರ ಮೇಲೆ ಬಿಜೆಪಿ ದಾಳಿ : ಶಾಸಕ ಪೊನ್ನಣ್ಣ ಆರೋಪ

ಜನವಾಹಿನಿ News ವಿರಾಜಪೇಟೆ : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ)ಯಿಂದ ಮಹಾತ್ಮಗಾಂಧಿ ಹೆಸರನ್ನು ಕೈಬಿಟ್ಟಿರುವ ಕೇಂದ್ರ ಸರ್ಕಾರದ ವಿರುದ್ಧ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕಾವೇರಿ ಕಾಲೇಜು ಸಮೀಪದಿಂದ ಆರಂಭವಾದ ಮನ್ ರೇಗಾ ಬಚಾವ್ ಸಂಗ್ರಾಮದ ಪಾದಯಾತ್ರೆಯು ವಿರಾಜಪೇಟೆ ಕಾರುನಿಲ್ದಾಣದಲ್ಲಿ ಸಮಾರೋಪಗೊಂಡಿತು. ಈ ವೇಳೆ ಪ್ರತಿಭಟನಾನಿರತರು ಕೇಂದ್ರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು. ಬೃಹತ್ ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ […]
ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಜನವಾಹಿನಿ News ಮಡಿಕೇರಿ : ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕ್‍ಗಳು/ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿದೆ. ನಗರ ಪ್ರದೇಶದ ವಿಧಾನಸಭಾ ಕ್ಷೇತ್ರವಾದ ಮಡಿಕೇರಿ ವಿಧಾನಸಭಾ […]
ಕೊಡಗು ಪೊಲೀಸರಿಂದ ಕ್ಷಿಪ್ರ ಕಾರ್ಯಾಚರಣೆ : ಕಳವಾದ ಬರೋಬ್ಬರಿ 100 ಮೊಬೈಲ್ ಪತ್ತೆ.!

ಜನವಾಹಿನಿ News ಮಡಿಕೇರಿ : ಕಳೆದ ಒಂದು ತಿಂಗಳಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಕೊಡಗು ಪೊಲೀಸರು ಜಿಲ್ಲೆಯ ವಿವಿಧೆಡೆಗಳಿಂದ ಕಳುವಾಗಿದ್ದ ಸುಮಾರು 11 ಲಕ್ಷ ರೂ.ಮೌಲ್ಯದ 100 ಮೊಬೈಲ್’ಗಳನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮಡಿಕೇರಿಯಲ್ಲಿರುವ ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ವಾರಸುದಾರರಿಗೆ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರು ಮಂಗಳವಾರ ಈ ಮೊಬೈಲ್‌ಗಳನ್ನು ಹಸ್ತಾಂತರಿಸಿದರು. ಈ ಸಂದರ್ಭ ಮಾತನಾಡಿದ ಎಸ್‌ಪಿ ಬಿಂದುಮಣಿ, ಮೊಬೈಲ್ ಫೋನ್‌ಗಳ ಪತ್ತೆಗೆ ಒಂದು ತಿಂಗಳ ಕಾರ್ಯಾಚರಣೆ ಆರಂಭಿಸಲಾಗಿತ್ತು. 2021-22 ರಲ್ಲಿ ಕೆಲವು ಮೊಬೈಲ್‌ಗಳು […]
ಶನಿವಾರಸಂತೆಯಲ್ಲಿ ನೂತನವಾಗಿ ನಿರ್ಮಿಸಿರುವ ಬಸ್ ನಿಲ್ದಾಣ ಉದ್ಘಾಟನೆ : ಕೊಡ್ಲಿಪೇಟೆಯಲ್ಲಿಯೂ ಜಾಗ ಒದಗಿಸಿದ್ದಲ್ಲಿ ಬಸ್ ನಿಲ್ದಾಣ ನಿರ್ಮಾಣ: ರಾಮಲಿಂಗಾರೆಡ್ಡಿ

ಜನವಾಹಿನಿ News ಮಡಿಕೇರಿ : ಶನಿವಾರಸಂತೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬಸ್ ನಿಲ್ದಾಣಕ್ಕೆ ರಾಷ್ಟ್ರದ ಪ್ರಥಮ ಸೇನಾ ಮಹಾದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವತಿಯಿಂದ ಶನಿವಾರಸಂತೆಯಲ್ಲಿ 105 ಲಕ್ಷ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಬಸ್ ನಿಲ್ದಾಣ ಲೋಕಾರ್ಪಣೆಗೊಳಿಸಿ ಸಚಿವರು ಮಾತನಾಡಿದರು. ಶನಿವಾರಸಂತೆ ಗ್ರಾಮದಲ್ಲಿ ಹುಟ್ಟಿ ಬೆಳೆದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಸೇನಾ ಕ್ಷೇತ್ರದಲ್ಲಿನ ಸೇವೆಯನ್ನು ಸ್ಮರಿಸಿ […]
ಕಂಬಳದಲ್ಲಿ ಹೊಸ ದಾಖಲೆ ಸೃಷ್ಠಿಸಿದ ಪೃಥ್ವಿರಾಜ್

ಜನವಾಹಿನಿ News ಪುತ್ತೂರು : ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ನಡೆದ ಕೋಟಿ ಚೆನ್ನಯ ಜೋಡುಕರೆ ಕಂಬಳದಲ್ಲಿ ಕೋಣ ಓಡಿಸುವ ವೇಗದಲ್ಲಿ ಹೊಸ ದಾಖಲೆ ನಿರ್ಮಾಣ ಗೊಂಡಿದೆ ಎಂದು ಕಂಬಳದ ಆಯೋಜಕರು ತಿಳಿಸಿದ್ದಾರೆ. ಶ್ರೀ ಪಂಚಲಿಂಗೇಶ್ವರ ಉರುವಾಲು ನಾರಾಳುಗುತ್ತು ಸದಾನಂದ ಗೌಡ ಅವರ ಕುಟ್ಟಿ – ಕಾಲೆ ಕೋಣಗಳ ಜೋಡಿ ನೇಗಿಲು ಕಿರಿಯ ವಿಭಾಗ ಸ್ಪರ್ಧೆಯಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ಈ ಕೋಣಗಳನ್ನು ಪಡು ಸಾಂತೂರಿನ 22 ವರ್ಷ ಪ್ರಾಯದ ಪೃಥ್ವಿರಾಜ್ ಪೂಜಾರಿ ಎಂಬ ಯುವಕ […]
ಫೆನಾಯಿಲ್ ಘಟಕದ ಹೆಸರಲ್ಲಿ ಡ್ರಗ್ಸ್ ತಯಾರಿಕೆ : ಗುಜರಾತ್ ಪೆಡ್ಲರ್‌ನಿಂದ ಸಿಕ್ಕ ಮಾಹಿತಿ – ಕೇಂದ್ರ ಮಾದಕ ದ್ರವ್ಯ ನಿಯಂತ್ರಣ ಅಧಿಕಾರಿಗಳಿಂದ ದಾಳಿ

ಜನವಾಹಿನಿ News ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಡ್ರಗ್ಸ್ ತಯಾರಿಕೆಗೆ ಸೇಫ್ ಜೋನ್ ಆಗ್ತಿದೆಯಾ ಎಂಬ ಅನುಮಾನ ಕಾಡುತ್ತಿದೆ. ಇವತ್ತು ಕೇಂದ್ರ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಅಧಿಕಾರಿಗಳು ಭಾರೀ ಪ್ರಮಾಣದ ಡ್ರಗ್ಸ್ ತಯಾರಿಕೆಯ ಘಟಕದ ಮೇಲೆ ದಾಳಿ ಮಾಡಿದ್ದಾರೆ. ನಗರದ ಹೆಬ್ಬಾಳದಲ್ಲಿರುವ ಟುಕ್ ಟುಕ್ ಹೌಸ್ ಹೋಲ್ಡ್ ಕೆಮಿಕಲ್ಸ್ ಪ್ರೊಡಕ್ಷನ್ ಸಲ್ಯೂಷನ್ ತಯಾರಿಕಾ ಘಟಕದ ಮೇಲೆ ಈ ದಾಳಿ ನಡೆದಿದೆ. ಈ ಘಟಕ ಬೋರೇಗೌಡ ಎಂಬ ವ್ಯಕ್ತಿಗೆ ಸೇರಿದ್ದು, 1 ವರ್ಷದ ಹಿಂದೆ […]
ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಜಿಲ್ಲೆಯಲ್ಲಿ ಮತ್ತೊಂದು ಜೀವ ಬಲಿ : ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸ್ಥಳದಲ್ಲೇ ಸಾವು

ಜನವಾಹಿನಿ News ಸಿದ್ದಾಪುರ : ಕಾಡಾನೆ ತುಳಿತಕ್ಕೆ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ಸಿದ್ದಾಪುರ ಸಮೀಪದ ಗೌರಿಬೆಟ್ಟ ವ್ಯಾಪ್ತಿಯಲ್ಲಿ ನಡೆದಿದೆ. ಬಜೆಗೊಳ್ಳಿ ಬಳಿಯ ಗೌರಿಬೆಟ್ಟ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದ್ದು, ಹುಂಡಿ ನಿವಾಸಿ ಲತೀಫ್ (65) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಘಟನೆಯ ಸುದ್ದಿ ಹರಡುತ್ತಿದ್ದಂತೆ ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಸೇರಿದ್ದು, ನಿರಂತರ ಆನೆ ದಾಳಿಯಿಂದ ಜೀವ ಭಯದಲ್ಲಿ ಬದುಕುತ್ತಿರುವುದಾಗಿ ಆಕ್ರೋಶ ವ್ಯಕ್ತಪಡಿಸಿದರು. ಅರಣ್ಯ ಇಲಾಖೆಯ […]
ಸಮಾಜದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸರಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧ : ಸಚಿವ ಭೋಸರಾಜು

ಜನವಾಹಿನಿ News ಮಡಿಕೇರಿ : ಸಮಾಜದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಶ್ರಮಿಸುವ ಪೊಲೀಸರಿಗೆ ವಸತಿ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ತಿಳಿಸಿದ್ದಾರೆ. ನಗರದ ಪೊಲೀಸ್ ಮೈತ್ರಿ ಭವನದ ಬಳಿ ಸುಮಾರು 5.30 ಕೋಟಿ ರೂ ವೆಚ್ಚದಲ್ಲಿ ಪೊಲೀಸ್ ವಸತಿ ಗೃಹ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಸಚಿವರು ಮಾತನಾಡಿದರು. ಸಮಾಜದಲ್ಲಿ ಪ್ರತಿಯೊಬ್ಬರೂ ನೆಮ್ಮದಿಯಾಗಿ ಬದುಕುವಲ್ಲಿ ಪೊಲೀಸರ ಶ್ರಮ ಹೆಚ್ಚಿನದ್ದಾಗಿದೆ. ಆ ದಿಸೆಯಲ್ಲಿ ಪೊಲೀಸ್ […]