Breaking News :

ಕಲೆ ಸಾಹಿತ್ಯಗಳು ನಾಡಿನ ಶ್ರೀಮಂತಿಕೆಯ ಪ್ರತೀಕ-ಗೋಪಾಲಕೃಷ್ಣ ಭಟ್

  ಜನವಾಹಿನಿ News ಪುತ್ತೂರು : ಸಂಗೀತ ನೃತ್ಯ ಸಾಹಿತ್ಯ ಮುಂತಾದ ಶಾಸ್ತ್ರೀಯ ಕಲೆಗಳು ನಾಡಿನ ಶ್ರೀಮಂತಿಕೆಯ ಪ್ರತೀಕ. ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಯ ಮೂಲಕ ನಮ್ಮ ಉತ್ಕೃಷ್ಟತೆಯ ಅಂಶಗಳನ್ನು ಸಮಾಜಕ್ಕೆ ತೋರಿಸಿಕೊಟ್ಟಂತಾಗುತ್ತದೆ ಎಂದು ದ್ವಾರಕಾ ಕಾರ್ಪೋರೇಷನ್ ಮುಖ್ಯಸ್ಥ ಗೋಪಾಲಕೃಷ್ಣ ಭಟ್ ಹೇಳಿದರು. ಪುತ್ತೂರು ಸಮೀಪದ ಮುರದ ಶಿವಸದನ ಹಿರಿಯ ನಾಗರಿಕರ ವಸತಿ ನಿಲಯದಲ್ಲಿ ಜರುಗಿದ ಸಂಗೀತ ಕಲಾವಿದ ಆಗಮ ಪೆರ್ಲ ಅವರ ಸಂಗೀತ ಕಚೇರಿಯನ್ನು ಉದ್ಘಾಟಿಸಿ ಅವರು ಮಾತಾಡಿದರು. ಕಲಾವಿದ ಆಗಮ ಪೆರ್ಲ ಓರ್ವ ಪ್ರತಿಭಾವಂತ […]

ಗೋಣಿಕೊಪ್ಪಲು : ಕಾರು ಬೈಕ್ ಗಳ ನಡುವೆ ಭೀಕರ ಅಪಘಾತ ; ಸವಾರರು ಸ್ಥಳದಲ್ಲೇ ಸಾವು 

ಜನವಾಹಿನಿ News ಗೋಣಿಕೊಪ್ಪ : ಕಾರು ಮತ್ತು ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಎರಡು ಬೈಕ್ ಗಳ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ತಿತಿಮತಿ ರಸ್ತೆಯಲ್ಲಿ ನಡೆದಿದೆ. ನಂಜನಗೂಡು ನಿವಾಸಿ ಶಿವಕುಮಾರ್(25) ಹಾಗೂ ಕೇರಳ ರಾಜ್ಯದ ಪಾಲಕ್ಕಾಡ್ ನಿವಾಸಿ ಮೊಹಮದ್ ಶಿಹಾಬ್(27) ಮೃತ ಯುವಕರೆಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಮೂರು ವಾಹನಗಳು ತೀವ್ರ ಜಖಂಗೊಂಡಿದ್ದು,ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಾಗಮಂಡಲ; ಜನಸ್ಪಂದನದಲ್ಲಿ ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ

ಜನವಾಹಿನಿ News ಮಡಿಕೇರಿ : ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕಿನ ಭಾಗಮಂಡಲ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಶನಿವಾರ ನಡೆದ ಜನಸ್ಪಂದನಾ ಸಭೆಯಲ್ಲಿ ಸಾರ್ವಜನಿಕರಿಂದ 85 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 15, ಗ್ರಾಮೀಣಾಭಿವೃದ್ಧಿ 7, ಪಂಚಾಯತ್ ರಾಜ್ ಸಂಬಂಧಿಸಿದಂತೆ 10, ಸೆಸ್ಕ್‌ 3, ಆಹಾರ 3, ರಸ್ತೆ ಸೇರಿದಂತೆ ವಿವಿಧ ಇಲಾಖೆಗಳ‌ 46 ಒಟ್ಟು 85 […]

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಪೊನ್ನಣ್ಣ

  ಜನವಾಹಿನಿ News ಮಡಿಕೇರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಳೆದ ಮೂರು ವರ್ಷದಲ್ಲಿ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ನಗರದ ಸುದರ್ಶನ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದರು. ಬಹು ವರ್ಷಗಳಿಂದ ಆದಿವಾಸಿ ಜನರ ಅಭಿವೃದ್ಧಿಗಾಗಿ ಕೇಳಿ ಬರುತ್ತಿದ್ದ ‘ಆದಿವಾಸಿಗಳ ಅಭಿವೃದ್ಧಿ ನಿಗಮ’ ಬಜೆಟ್ ನಲ್ಲಿ ಪ್ರಕಟಿಸುವ ಮೂಲಕ ಸರ್ಕಾರ ಈ ಜನರ ಧ್ವನಿಗೆ ಸ್ಪಂದಿಸಿದೆ. ಹಾಗೆಯೇ ಕೊಡವ ಅಭಿವೃದ್ಧಿ […]

ಗೃಹ ಬಳಕೆ ಅಡುಗೆ ಅನಿಲ ಪೂರೈಕೆ ಆತಂಕ ಅಗತ್ಯವಿಲ್ಲ: ಜಿಲ್ಲಾಧಿಕಾರಿ ಸೋಮಶೇಖರ್

  ಜನವಾಹಿನಿ News ಮಡಿಕೇರಿ : ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಂಪರ್ಕ ಹೊಂದಿರುವ ಪ್ರತಿ ಮನೆಗೂ ಅಡುಗೆ ಅನಿಲ ಸಿಲಿಂಡರ್ ಅನ್ನು ಪೂರೈಕೆ ಮತ್ತು ಬೇಡಿಕೆಗೆ ತಕ್ಕಂತೆ ಸರ್ಕಾರದ ನಿಯಮಾನುಸಾರ ಸರಬರಾಜು ಮಾಡುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಡುಗೆ ಅನಿಲ ವಿತರಕರ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ವಿರುದ್ದ ಸಾರಿರುವ ಸಮರ ತೀವ್ರಗೊಂಡಿರುವ […]

ಆನೆ ಕಂದಕ, ಸೌರಬೇಲಿ ಸಮರ್ಪಕ ನಿರ್ವಹಣೆಗೆ ಈಶ್ವರ ಖಂಡ್ರೆ ಸೂಚನೆ

  ಜನವಾಹಿನಿ News ಬೆಂಗಳೂರು :  ಕೊಡಗು ಜಿಲ್ಲೆಯಲ್ಲಿ ಮಾನವ-ಆನೆ ಸಂಘರ್ಷ ನಿಯಂತ್ರಣಕ್ಕೆ ತೋಡಲಾಗಿರುವ ಆನೆ ಕಂದಕ ಮತ್ತು ಅಳವಡಿಸಿರುವ ತೂಗು ಸೌರಬೇಲಿಯ ಸಮರ್ಪಕ ನಿರ್ವಹಣೆ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಶಾಸಕರುಗಳಾದ ಎ.ಎಸ್. ಪೊನ್ನಣ್ಣ, ಡಾ.ಮಂಥರ ಗೌಡ ಮತ್ತು ದರ್ಶನ್ ಧ್ರುವನಾರಾಯಣ್ ಅವರೊಂದಿಗೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಕೊಡಗಿನಲ್ಲಿ ವನ್ಯಜೀವಿಗಳಿಂದ ಅಮೂಲ್ಯ ಜೀವ ಹಾನಿ ಆಗುತ್ತಿರುವುದು ಆತಂಕದ […]

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡೀಪಾರು ನೋಟೀಸ್..!

  ಜನವಾಹಿನಿ News ಬೆಳ್ತಂಗಡಿ : ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮೂರನೇ ಬಾರಿಗೆ ಹೊರ ಜಿಲ್ಲೆ ಗೆ ಗಡಿಪಾರು ಮಾಡಲಾಗಿದೆ. ಅವರನ್ನು ಮಾ.16 ರಿಂದ ಸೆ.19ರ ತನಕ 6 ತಿಂಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡಿಪಾರು ಮಾಡಿ ನೋಟೀಸ್ ಜಾರಿಗೊಳಿಸಲಾಗಿದೆ. ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಗಡೀಪಾರು ಆದೇಶ ಜಾರಿಗೊಳಿಸಿದ್ದಾರೆ. ಕೆಲ ಸಮಯದ ಹಿಂದೆ ಎರಡನೇ ಬಾರಿ ದ.ಕ ಜಿಲ್ಲೆಯಿಂದ ತಿಮರೋಡಿ ಅವರನ್ಮು ಎಸಿ ಅವರು ಗಡೀಪಾರು ಮಾಡಿದ್ದರು. […]

ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

  ಜನವಾಹಿನಿ News ಮಡಿಕೇರಿ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ 12 ದಿನಗಳ ಅವಧಿಯ ಉಚಿತ ಫಾಸ್ಟ್ ಫುಡ್ (ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿ ಶಿಬಿರವನ್ನು ಏಪ್ರಿಲ್ 4 ರಿಂದ ಪ್ರಾರಂಭಿಸಲಾಗುತ್ತಿದೆ. ಈ ಶಿಬಿರದಲ್ಲಿ ಪಾನಿ ಪೂರಿ, ಬೇಲ್ ಪೂರಿ, ದಹಿ ಪೂರಿ, ಸೇವ್ ಪೂರಿ, ಚಾಟ್ ಮಸಾಲ, ಕಚೋರಿ, ಗೋಬಿ ಮಂಚೂರಿ, ಪ್ರೈಡ್ ರೈಸ್, ಸಮೋಸ ಇನ್ನಿತರೆ […]

ಸಿದ್ದಾಪುರ ವ್ಯಾಪ್ತಿಯಲ್ಲಿ ಹಲವರನ್ನು ಬಲಿ ಪಡೆದು ಆತಂಕಕ್ಕೆ ಕಾರಣವಾಗಿದ್ದ ಕಾಡಾನೆ ಸೆರೆ : ಅರಣ್ಯ ಇಲಾಖೆಯಿಂದ ಯಶಸ್ವಿ ಕಾರ್ಯಾಚರಣೆ

  ಜನವಾಹಿನಿ News ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಸಿದ್ದಾಪುರ ವ್ಯಾಪ್ತಿಯಲ್ಲಿ ಕಾಫಿ ಬೆಳೆಗಾರ ಗಣಪತಿ ಎಂಬುವವರನ್ನು ಬಲಿಪಡೆದಿದ್ದ ಸುಮಾರು 35 ವರ್ಷದ ಕಾಡಾನೆಯನ್ನು ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಚೆನ್ನೈಯನಕೋಟೆ ಬಾಡಗ ಬಾಣಂಗಾಲ ಸಮೀಪದ ಕಾಫಿ ತೋಟದಲ್ಲಿ ಯಶಸ್ವಿಯಾಗಿ ಸೆರೆ ಹಿಡಿಯಲಾಗಿದ್ದು, ಜಿಲ್ಲೆಯ ದುಬಾರೆ ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ. ಇತ್ತೀಚೆಗೆ ಸಿದ್ದಾಪುರ ಸಮೀಪದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿ ಬಲಿ ಪಡೆದ ನಂತರ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ […]

ಕಾಡಾನೆ ದಾಳಿಗೆ ಬೆಳೆಗಾರ ಬಲಿ : ಕೊಡಗಿನಲ್ಲಿ ಒಂದೇ ವಾರದಲ್ಲಿ ನಡೆದ ಎರಡನೇ ಘಟನೆ 

      ಜನವಾಹಿನಿ News ಸಿದ್ದಾಪುರ: ಕಾಡಾನೆ ದಾಳಿಗೆ ಬೆಳೆಗಾರ ಬಲಿಯಾಗಿರುವ ಘಟನೆ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಹೈ ಸ್ಕೂಲ್ ಪೈಸಾರಿ ವ್ಯಾಪ್ತಿಯಲ್ಲಿ ನಡೆದಿದೆ. ಚೌರಿರ ಕುಟುಂಬಕ್ಕೆ ಸೇರಿದ ಡಿ ಗಣಪತಿ (ಗಪ್ಪು)49, ಎಂಬುವವರೇ ಆನೆ ದಾಳಿಗೆ ಬಲಿಯಾದ ಬೆಳೆಗಾರ. ಕಾಫಿ ತೋಟ ನೋಡಲು ತೆರಳಿದ ಸಂದರ್ಭ ಕಾಡಾನೆ ದಾಳಿ ಮಾಡಿದ್ದು ಘಟನೆಯಲ್ಲಿ ಗಣಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾಡಗಲೇ ಕಾಫಿ ತೋಟದಲ್ಲಿ ಕಾಡಾನೆಗಳು ಕಾಣಿಸಿಕೊಳ್ಳುತ್ತಿದ್ದರು, ಆನೆಗಳನ್ನು ನಿಯಂತ್ರಣಕ್ಕೆ ತರಲು ಅರಣ್ಯ ಇಲಾಖೆ ವಿಫಲಗೊಂಡಿದೆ ಎಂದು […]