ಸ್ವಾತಂತ್ರ್ಯೋತ್ಸವದ ಪೂರ್ವಭಾವಿ ಸಭೆ : ಅರ್ಥಪೂರ್ಣ ಆಚರಣೆಗೆ ಕೊಡಗು ಜಿಲ್ಲಾಡಳಿತ ನಿರ್ಧಾರ

ಸ್ವಾತಂತ್ರ್ಯೋತ್ಸವದ ಪೂರ್ವಭಾವಿ ಸಭೆ : ಅರ್ಥಪೂರ್ಣ ಆಚರಣೆಗೆ ಕೊಡಗು ಜಿಲ್ಲಾಡಳಿತ ನಿರ್ಧಾರ ಮಡಿಕೇರಿ :* ಪ್ರತಿ ವರ್ಷದಂತೆ ಈ ಬಾರಿಯೂ ಆ.15 ರಂದು ನಗರದ ಕೋಟೆ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಕೊಡಗು ಜಿಲ್ಲಾಡಳಿತ ನಿರ್ಧರಿಸಿದೆ. ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಕಳೆದ ಬಾರಿಯಂತೆ ಸ್ವಾಗತ, ಧ್ವಜಾರೋಹಣ, ವೇದಿಕೆ, ಕವಾಯತ್ತು ಉಪಹಾರ, ಭಾಷಣ, ಬಹುಮಾನ ಹೀಗೆ ವಿವಿಧ ಆಯಾಯ ಉಪ ಸಮಿತಿಗಳು ತಮ್ಮ […]
ನೀರು ಕೇಳುವ ನೆಪದಲ್ಲಿ ಹಲ್ಲೆ ನಡೆಸಿ ಕಳ್ಳತನ : ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ನೀರು ಕೇಳುವ ನೆಪದಲ್ಲಿ ಹಲ್ಲೆ ನಡೆಸಿ ಕಳ್ಳತನ : ಆರೋಪಿಯನ್ನು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು ಮಡಿಕೇರಿ : ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕತ್ತಿನಲ್ಲಿದ್ದ ಸರ ಕದ್ದೊಯ್ದಿರುವ ಘಟನೆ ಕೊಂಡಗೇರಿಯಲ್ಲಿ ಇಂದು ಮಧ್ಯಾಹ್ನ ನಡೆದಿದ್ದು, ಜಿಲ್ಲೆಯ ಜನ ಬೆಚ್ಚಿ ಬೀಳುವಂತೆ ಮಾಡಿದೆ. ಕೊಂಡಂಗೇರಿಯ ಸಾರಮ್ಮ ಎಂಬುವವರೇ ಹಲ್ಲೆಗೊಳಗಾದ ಮಹಿಳೆಯಾಗಿದ್ದಾರೆ. ಏನಿದು ಪ್ರಕರಣ :: ಸಾರಮ್ಮ ತನ್ನ ಸೊಸೆಯೊಂದಿಗೆ ಮನೆಯಲ್ಲಿದ್ದು, ʼನಾನು ಪಕ್ಕದಲ್ಲಿ ಕೆಲಸಕ್ಕೆ ಬಂದಿದ್ದೇನೆ. ಕುಡಿಯೋಕೆ ನೀರು ಕೊಡಿʼ ಅಂತ ವ್ಯಕ್ತಿಯೊಬ್ಬ […]
ಭಾಗಮಂಡಲ ಭಗಂಡೇಶ್ವರ ದೇವಾಲಯದ ಆವರಣ ಸ್ವಚ್ಛಗೊಳಿಸಿದ ಗಜಾನನ ಯುವಕ ಸಂಘ ಸದಸ್ಯರು

ಭಾಗಮಂಡಲ ಭಗಂಡೇಶ್ವರ ದೇವಾಲಯದ ಆವರಣ ಸ್ವಚ್ಛಗೊಳಿಸಿದ ಗಜಾನನ ಯುವಕ ಸಂಘ ಸದಸ್ಯರು… ಭಾಗಮಂಡಲ : ಇಲ್ಲಿನ ಗಜಾನನ ಯುವಕ ಸಂಘದ ವತಿಯಿಂದ ಭಗಂಡೇಶ್ವರ ದೇವಾಲಯದ ಆವರಣವನ್ನು ಶುಚಿಗೊಳಿಸಲಾಯಿತು. ಎರಡು ತಿಂಗಳಿನಿಂದ ಸುರಿಯುತ್ತಿರುವ ನಿರಂತರ ಮಳೆಯ ಪರಿಣಾಮ ದೇವಾಲಯದ ಆವರಣದಲ್ಲಿ ಹಾವಸೆ(ಪಾಚಿ) ನಿರ್ಮಾಣವಾಗಿತ್ತು. ಇದರಿಂದಾಗಿ ದೇವಾಲಯಕ್ಕೆ ಆಗಮಿಸುವ ಭಕ್ತರು ಪ್ರಾಂಗಣದಲ್ಲಿ ಪ್ರದಕ್ಷಿಣೆ ಹಾಕುವಾಗ ಜಾರುವ ಪರಿಸ್ಥಿತಿ ಎದುರಾಗಿತ್ತು. ಈ ಬಗ್ಗೆ ಇಲ್ಲಿನ ಅರ್ಚಕರು ಇತ್ತೀಚೆಗೆ ಯುವಕ ಸಂಘದ ಪದಾಧಿಕಾರಿಗಳ ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಯುವಕ ಸಂಘದ ಸದಸ್ಯರು […]
ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ ತನಿಖೆ : ಎಸ್ಐಟಿಗೆ ವಹಿಸಿದ ಸರ್ಕಾರ

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ ತನಿಖೆ ಎಸ್ಐಟಿಗೆ ವಹಿಸಿದ ಸರ್ಕಾರ ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆದಿರುವುದಾಗಿ ಆರೋಪಿಸಲಾದ ಸರಣಿ ಹತ್ಯೆಗಳು ಮತ್ತು ಶವಗಳನ್ನು ಹೂತಿಡುವ ಪ್ರಕರಣದ ಸಮಗ್ರ ತನಿಖೆಗಾಗಿ ರಾಜ್ಯ ಸರ್ಕಾರವು 4 ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ SIT ತಂಡವನ್ನು ರಚಿಸಿದೆ. ಈ ತಂಡವನ್ನು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಡಾ. ಪ್ರಣವ್ ಮೊಹಾಂತಿ ಅವರ ನೇತೃತ್ವದಲ್ಲಿ ರಚಿಸಲಾಗಿದ್ದು, ಅನುಚೇತ್, ಸೌಮ್ಯಲತಾ, ಜಿತೇಂದ್ರಕುಮಾರ್ ಅವರನ್ನು ಎಸ್ಐಟಿ ಸದಸ್ಯರಾಗಿ ನಿಯೋಜಿಸಲಾಗಿದೆ. ಮಹಿಳಾ […]
ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ಹೆಗ್ಗಡದೇವನಕೋಟೆ ಬಳಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಈ ಸಂದರ್ಭ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ಪ್ರೌಢಶಾಲಾ ಶಿಕ್ಷಕರನ್ನು ಬಿಎಲ್‌ಒಗಳನ್ನಾಗಿ ನೇಮಕ ಮಾಡದಂತೆ ಜಿಲ್ಲಾಧಿಕಾರಿಗೆ ಮನವಿ

ಪ್ರೌಢಶಾಲಾ ಶಿಕ್ಷಕರನ್ನು ಬಿಎಲ್‌ಒಗಳನ್ನಾಗಿ ನೇಮಕ ಮಾಡದಂತೆ ಡಿಸಿಗೆ ಮನವಿ ಮಡಿಕೇರಿ : ಪ್ರೌಢಶಾಲಾ ಶಿಕ್ಷಕರುಗಳನ್ನು ಬಿಎಲ್‌ಒಗಳನ್ನಾಗಿ ನೇಮಕ ಮಾಡುತ್ತಿರುವುದನ್ನು ಕೈಬಿಡಬೇಕೆಂದು ಕೋರಿ ಪ್ರೌಢಶಾಲಾ ಸಹಶಿಕ್ಷಕರ ಸಂಘ ಕೊಡಗು ಘಟಕ ವತಿಯಿಂದ ಜಿಲ್ಲಾಧಿಕಾರಿ ವೆಂಕಟರಾಜಾ ರವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಚ್.ಜೆ.ಕುಮಾರ್, ಪ್ರೌಢಶಾಲಾ ಸಹಶಿಕ್ಷಕರುಗಳಿಗೆ ಈಗಾಗಲೇ ಪಾಠಪ್ರವಚನಗಳ ಹೆಚ್ಚು ಕಾರ್ಯಭಾರವಿದೆ. ಇಲಾಖೆಯ ಹತ್ತು ಹಲವು ಕಾರ್ಯಕ್ರಮಗಳ ಅನುಷ್ಠಾನ ಸೇರಿದಂತೆ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಫಲಿತಾಂಶ ತರಬೇಕಾದ ಒತ್ತಡವಿರುವುದರಿಂದ ಬಿಎಲ್‌ಒ ಕರ್ತವ್ಯ ನಿಭಾಯಿಸುವುದು […]
ರಾಜ್ಯದ ಜನರ ಮನೆ ಬಾಗಿಲಿಗೆ ನಮ್ಮ ಯೋಜನೆಗಳ ಮೂಲಕ ತಲುಪಿದ್ದೇವೆ : ಸಿಎಂ ಸಿದ್ದರಾಮಯ್ಯ

ರಾಜ್ಯದ ಜನರ ಮನೆ ಬಾಗಿಲಿಗೆ ನಮ್ಮ ಯೋಜನೆಗಳ ಮೂಲಕ ತಲುಪಿದ್ದೇವೆ : ಮೈಸೂರಿನಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಮೈಸೂರು : ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ನಮ್ಮ ಯೋಜನೆಗಳ ಮೂಲಕ ತಲುಪಿದ್ದೇವೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ₹2,578 ಕೋಟಿಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭ ಹಾಗೂ ರಾಜ್ಯ ಸರ್ಕಾರದ ಎರಡು […]
ಪ್ರತಿಭೆ ಯಾರ ಸ್ವತ್ತೂ ಅಲ್ಲ ಅವಕಾಶ ಸಿಕ್ಕರೆ ಪ್ರತಿಯೊಬ್ಬರ ಪ್ರತಿಭೆ ಹೊರ ಬರುತ್ತೆ : ಸಿಎಂ ಸಿದ್ದರಾಮಯ್ಯ

ಪ್ರತಿಭೆ ಯಾರ ಸ್ವತ್ತೂ ಅಲ್ಲ ಅವಕಾಶ ಸಿಕ್ಕರೆ ಪ್ರತಿಯೊಬ್ಬರ ಪ್ರತಿಭೆ ಹೊರ ಬರುತ್ತೆ : ಸಿಎಂ ಸಿದ್ದರಾಮಯ್ಯ ಬೆಂಗಳೂರು : ಪ್ರತಿಭೆ ಯಾರ ಸ್ವತ್ತೂ ಅಲ್ಲ ಅವಕಾಶ ಸಿಕ್ಕರೆ ಪ್ರತಿಯೊಬ್ಬರ ಪ್ರತಿಭೆ ಹೊರಗೆ ಬರತ್ತದೆ. ಮಕ್ಕಳ ಪ್ರತಿಭೆ ರೂಪುಗೊಳ್ಳಲು ಶಿಕ್ಷಕರಷ್ಟೇ ಪೋಷಕರ ಶ್ರಮ ಕೂಡ ಅಗತ್ಯ. ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳದಿದ್ದರೆ ಯಾರನ್ನೂ ದೂರಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ […]
ಧರ್ಮಸ್ಥಳ ಪ್ರಕರಣ : ಎಸ್‍ಐಟಿ ತನಿಖೆಗೆ ಒಪ್ಪಿಸಲು ಆಗ್ರಹಿಸಿ ಕುಶಾಲನಗರದಲ್ಲಿ ಪ್ರತಿಭಟನೆ

ಧರ್ಮಸ್ಥಳ ಪ್ರಕರಣ : ಎಸ್‍ಐಟಿ ತನಿಖೆಗೆ ಒಪ್ಪಿಸಲು ಆಗ್ರಹಿಸಿ ಕುಶಾಲನಗರದಲ್ಲಿ ಪ್ರತಿಭಟನೆ ಕುಶಾಲನಗರ : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳ ತನಿಖೆಗೆ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಎಸ್‍ಐಟಿ ತನಿಖೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಪಿಐ) ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿತು. ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಎಸ್‍ಡಿಪಿಐ ಪ್ರಮುಖರು ಹಾಗೂ ಸದಸ್ಯರು ಧರ್ಮಸ್ಥಳದಲ್ಲಿ ನಡೆದಿರುವ ಘಟನೆಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ […]
ರಾಜ್ಯ ಕಬಡ್ಡಿ ತಂಡಕ್ಕೆ ಕೊಡಗಿನ ಸಚಿನ್ ಆಯ್ಕೆ

ರಾಜ್ಯ ಕಬಡ್ಡಿ ತಂಡಕ್ಕೆ ಕೊಡಗಿನ ಸಚಿನ್ ಆಯ್ಕೆ ಕೊಡಗು : ಆಮೇಚೂರ್ ಕಬಡ್ಡಿ ಫೆಡರೇಷನ್ ಆಪ್ ಇಂಡಿಯಾ ಸಂಸ್ಥೆಯು ಪಂಜಾಬ್ ರಾಜ್ಯದ ಚಂಡೀಗಡದ ಪಂಚಕುಲದಲ್ಲಿ ಜುಲೈ 25 ರಿಂದ 28 ರವರೆಗೆ ನಡೆಸಲಿರುವ 72ನೇ ಹಿರಿಯರ ರಾಷ್ಟ್ರ ಮಟ್ಟದ ಕಬಡ್ಡಿ ಟೂರ್ನಿಯಲ್ಲಿ ಕೊಡಗು ಜಿಲ್ಲೆಯ ಸಚಿನ್ ಪೂವಯ್ಯ ಹೊಟ್ಟೆಯಂಡ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಸಚಿನ್ ಮೂಲತಃ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಉಂಜಿಗನಹಳ್ಳಿ ನಿವಾಸಿ ಪೂವಯ್ಯ.ಹೆಚ್.ಎಸ್ ಹಾಗೂ ಸರಸು.ಹೆಚ್.ಪಿ. ದಂಪತಿಗಳ ಪುತ್ರ. ಸಚಿನ್ ಈಗಾಗಲೇ ಜಿಲ್ಲೆ ಹಾಗೂ ರಾಜ್ಯ […]