Breaking News :

ಕಂದಾಯ ಇಲಾಖೆಯ ಕೆಲವು ಮಸೂದೆಗಳಿಗೆ ತಿದ್ದುಪಡಿ ತರಲು ಶಾಸಕ ಪೊನ್ನಣ್ಣ ಮನವಿ

ಕೊಡಗು : ರಾಜ್ಯ ಸರಕಾರದ ಮಾನ್ಯ ಕಂದಾಯ ಸಚಿವರಾದ  ಕೃಷ್ಣ ಬೈರೇಗೌಡ ರವರನ್ನು, ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ವಿಕಾಸ ಸೌಧದ ಮಾನ್ಯ ಸಚಿವರ ಕೊಠಡಿಯಲ್ಲಿ ಭೇಟಿ ಮಾಡಿ, ಕಂದಾಯ ಇಲಾಖೆಯ ಕೆಲವು ಮಸೂದೆಗಳಿಗೆ ತಿದ್ದುಪಡಿ ತರುವಂತೆ ಮನವಿ ಸಲ್ಲಿಸಿದರು. ವಿಶೇಷವಾಗಿ, ಕೊಡಗಿನವರ ಜಮ್ಮಬಾಣೆಗೆ ಕಂದಾಯ ನಿಗದಿ, ಪಟ್ಟೇದಾರರ ಸಮಸ್ಯೆ ಮತ್ತು ಪಹಣಿ ಪತ್ರದಲ್ಲಿ P ನಂಬರ್ ಗಳ ಸಮಸ್ಯೆಯನ್ನ ನಿವಾರಣೆ ಮಾಡಲು ಸೂಕ್ತ ತಿದ್ದುಪಡಿಯನ್ನು ಕರ್ನಾಟಕ […]

ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಹೆಚ್ಚಳದ ಆತಂಕ : ಕೇಂದ್ರಕ್ಕೆ ಯದುವೀರ್ ಮಾಹಿತಿ

ಅಮಿತ್‌ ಶಾ ಭೇಟಿ ಮಾಡಿದ ಯದುವೀರ್‌ ಒಡೆಯರ್‌ ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಕೊಡಗು ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಆತಂಕದ ಬಗ್ಗೆ ಕೇಂದ್ರ ಗೃಹ ಸಚಿವರಿಗೆ ಮಾಹಿತಿ. ಮೈಸೂರು : ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ನಮ್ಮ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಇತರೆ ಪ್ರಮುಖ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ನವದೆಹಲಿಯಲ್ಲಿ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ […]

ಅಗ್ನಿ ಅವಘಡ 2 ಮನೆಗಳಿಗೆ ಹಾನಿ

ಕೊಡಗು : ಅಗ್ನಿ ಅವಘಡದಿಂದ 2 ಮನೆಗಳಿಗೆ ಹಾನಿಯಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ. ವಿರಾಜಪೇಟೆಯ ಮುಖ್ಯ ರಸ್ತೆಯ ಶ್ರೀ ಗಣಪತಿ ದೇವಾಲಯದ ಹಿಂಭಾಗದಲ್ಲಿ ನಡೆದಿದೆ.  ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ಸಂಭವಿಸಿರಬಹುದೆಂದು ಹೇಳಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಈ ಘಟನೆ ನಡೆದಿದೆ. ಇದರಿಂದಾಗಿ ಭಾರೀ ಅನಾಹುತ ತಪ್ಪಿದಂತಾಗಿದೆ. ಆದರೆ ಮನೆಯಲ್ಲಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ನಿಯಂತ್ರಿಸಿತು.

ಕೊಡಗು ಜಿಲ್ಲಾಸ್ಪತ್ರೆಯಿಂದ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಕೊಡಗು: ಜಿಲ್ಲಾಸ್ಪತ್ರೆಯಿಂದ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ ಕೊಡಗು :  ಜು.11 ರಂದು ಮಡಿಕೇರಿಯ ಜಿಲ್ಲಾಸ್ಪತ್ರೆಯಿಂದ ಕಾಣೆಯಾಗಿದ್ದ  37 ವರ್ಷದ ರಘು ಮೃತದೇಹ ಇಂದು ಸರ್ಕಾರಿ ಆಸ್ಪತ್ರೆಯ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಸಮೀಪದ ನೀರಿನ ಹೊಂಡದಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರೇಕಾಡುವಿನಲ್ಲಿ ತನ್ನ ತಾಯಿಯೊಂದಿಗೆ ವಾಸವಾಗಿದ್ದ ಮೃತ ರಘು ಪತ್ನಿ ರಾಜೇಶ್ವರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಕೊಡಗಿನ ಆಟೋ ಚಾಲಕಿಗೆ ಜೀವಮಾನದ ಸಾಧಕ ಪ್ರಶಸ್ತಿ

ಮಡಿಕೇರಿ : ಹೆಸರಾಂತ ಖಾಸಗೀ ವಾಹಿನಿಯೊಂದರ ವತಿಯಿಂದ ಕೊಡಮಾಡುವ (Lifetime Achievement Award) ಜೀವಮಾನದ ಸಾಧಕ ಪ್ರಶಸ್ತಿಯನ್ನು ಕೊಡಗಿನ ಆಟೋ ಚಾಲಕಿ ಸುಜಾತ ರವರಿಗೆ ನೀಡಿ ಗೌರವಿಸಲಾಗಿದೆ. ಬೆಂಗಳೂರಿನ ಯಲಹಂಕದ ಅಂಬೇಡ್ಕರ್ ಭವನದಲ್ಲಿ ಜು. 13ರಂದು ನಡೆದೆ ಸಮಾರಂಭದಲ್ಲಿ ಸುಜಾತ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ವಿವಿಧ ಕ್ಷೇತ್ರಗಳ ಮುಖೇನ ಉತ್ತಮ ಸಮಾಜ ಸೇವೆ ಸಲ್ಲಿಸಿರುವ 80 ಕ್ಕೂ ಅಧಿಕ ಮಂದಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುಜಾತ ಮೂಲತಃ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನೆಲ್ಯಹುದಿಕೇರಿ […]

ಶಿಕ್ಷಣದ ಮೂಲಕ ಮುಖ್ಯ ವಾಹಿನಿಗೆ ಬರಲು ಗಣ್ಯರ ಕರೆ

ಶಿಕ್ಷಣದ ಮೂಲಕ ಮುಖ್ಯ ವಾಹಿನಿಗೆ ಬರಲು ಗಣ್ಯರ ಕರೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಕಲಿಕಾ ಸಾಮಗ್ರಿಗಳ ವಿತರಣೆ. ಪತ್ರಕರ್ತರು, ಸಂಘ-ಸಂಸ್ಥೆಗಳ ಸಾಮಾಜಿಕ ಕಳಕಳಿಗೆ ಗಣ್ಯರ ಮೆಚ್ಚುಗೆ ಕೊಡಗು  : ಪತ್ರಕರ್ತರು ಸುದ್ದಿಗೆ ಮಾತ್ರ ಸೀಮಿತವಾಗದೆ ಸಾಮಾಜಿಕ ಕಳಕಳಿಯೊಂದಿಗೆ ಸಮಾಜಮುಖಿ ಕಾರ್ಯಗಳನ್ನು ಮಾಡುವುದರ ಮೂಲಕ ಗ್ರಾಮೀಣ ಭಾಗದ ನೂರಾರು ವಿದ್ಯಾರ್ಥಿಗಳ ಶಿಕ್ಷಣ ಕಲಿಕಗೆ ನೆರವಾಗುತ್ತಿರುವ ಪರಿಣಾಮವೇ ಬೆಂಗಳೂರಿನ ಸಮಾಜ ಸೇವಾ ಸಂಸ್ಥೆಗಳು ಬ್ಯಾಗ್ ಕಲಿಕಾ ಪರಿಕರಗಳನ್ನು ಸರ್ಕಾರಿ ಶಾಲೆಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿತರಣೆ ಮಾಡಿ ಮಾದರಿಯಾಗಿದ್ದಾರೆ […]

ಖ್ಯಾತ ಬಹುಭಾಷಾ ನಟಿ ಸರೋಜಾ ದೇವಿ ಇನ್ನಿಲ್ಲ 

ಬೆಂಗಳೂರು : ಖ್ಯಾತ ಬಹುಭಾಷಾ ನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಸರೋಜಾದೇವಿ (87) ಯಶವಂತಪುರದಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಿ.ಸರೋಜಾದೇವಿ ಅವರು ಕನ್ನಡ ಚಿತ್ರರಂಗದ ಪ್ರಮುಖ ನಟಿ. ಅವರನ್ನು ‘ಅಭಿನಯ ಸರಸ್ವತಿ’ ಎಂದು ಕರೆಯಲಾಗುತ್ತಿತ್ತು. ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಹೆಸರುವಾಸಿಯಾಗಿದ್ದರು. ಅವರು 1955 ರಿಂದ 1984 ರವರೆಗೆ ಸತತವಾಗಿ 161 ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದರು. ಸರೋಜಾದೇವಿ ಅವರು 1969ರಲ್ಲಿ ಪದ್ಮಶ್ರೀ ಪ್ರಶಸ್ತಿ ಮತ್ತು 1992ರಲ್ಲಿ ಪದ್ಮಭೂಷಣ […]

ಮಸಣಿಕ್ಕಮ್ಮನಿಗೆ ಆಷಾಢ ವಿಶೇಷ ಪೂಜೆ : ನವರಸ ನಾಯಕ ಜಗ್ಗೇಶ್ ಭಾಗಿ

ಮೈಸೂರು : ಪಿರಿಯಪಟ್ಟಣದ ಶ್ರೀ ಮಸಣಿಕಮ್ಮ ದೇವಾಲಯಕ್ಕೆ ಭೇಟಿ ನೀಡಿದ ನವರಸ ನಾಯಕ ಜಗ್ಗೇಶ್ ಆಷಾಢ ತಿಂಗಳ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಭೇಟಿ ನೀಡಿದ ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ಅಮ್ಮನ ದರ್ಶನ ಪಡೆದುಕೊಂಡರು. ಈ ಕುರಿತು ತಮ್ಮ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಜಗ್ಗೇಶ್ “ನನ್ನ ಮನೆ ದೇವರು ಪಿರಿಯಾಪಟ್ಟಣದ ಶ್ರೀ ಮಸಣೀಕಮ್ಮ ಮಾತೆ. ನನ್ನ ತಾತ ಮಾಯಸಂದ್ರದಿಂದ ನಡೆದು ಬಂದು ಸೇವೆಮಾಡಿ ಹೋಗುತ್ತಿದ್ದರು. ನಮ್ಮ ತಾತ, ನೀನು ಈ […]

ಬಂಟ್ವಾಳ: ಈದ್ ಮಿಲಾದ್ ಹಬ್ಬದ ಹಿನ್ನೆಲೆ ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು; ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಚಿಯಲ್ಲಿ ‌ಸೆ.16 ರಂದು ನಡೆದಿದೆ. ಮಂಚಿ ಗ್ರಾಮದ ಮೋಂತಿಮಾರು ನಿವಾಸಿ ಆಸ್ಮ ಎಂಬವರ ಮನೆಯಿಂದ ಕಳವು ನಡೆದಿದೆ. ‌ಸೆ.16ರ ಸೋಮವಾರ ಬೆಳಿಗ್ಗೆ ಈದ್ ಮಿಲಾದ್ ‌ಹಬ್ಬದ ಪ್ರಯುಕ್ತ ಮಕ್ಕಳ ಕಾರ್ಯಕ್ರಮ ನೋಡಲು ಮನೆಗೆ ಬೀಗ ಹಾಕಿ ಮಸೀದಿಗೆ ತೆರಳಿದ್ದ ವೇಳೆ ಈ ಕಳ್ಳತನ ನಡೆದಿದೆ ಎನ್ನಲಾಗಿದೆ. ರಾತ್ರಿ […]

ಉಡುಪಿ; ಸಂಬಂಧಿ ಮಹಿಳೆಯ ಪ್ರಾಣ ರಕ್ಷಿಸಿ ಜೀವ ಕಳೆದುಕೊಂಡ ಉಪನ್ಯಾಸಕಿ

ಉಪನ್ಯಾಸಕಿಯೊಬ್ಬರು ಸಂಬಂಧಿಯೊಬ್ಬರ ಜೀವ ಉಳಿಸಿಲು ಹೋಗಿ ತಮ್ಮದೇ ಪ್ರಾಣ ಕಳೆದಕೊಂಡ ಹೃದಯವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕೋಟೇಶ್ವರದಲ್ಲಿ ನಡೆದಿದೆ‌. ಕುಂದಾಪುರ ತಾಲ್ಲೂಕಿನ ಕೋಟೇಶ್ವರದಲ್ಲಿ ಉಪನ್ಯಾಸಕಿಯಾಗಿ ಕೆಲ ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದ ಅರ್ಚನಾ ಕಾಮತ್‌(34) ಜೀವ ಕಳೆದುಕೊಂಡವರು. ಮೃತರು ಪತಿ ಚಾರ್ಟರ್ಡ್‌ ಅಕೌಂಟೆಂಟ್‌ ಚೇತನ ಕಾಮತ್, 4 ವರ್ಷದ ಮಗು, ತಂದೆ, ತಾಯಿಯನ್ನು ಅಗಲಿದ್ದಾರೆ 69 ವರ್ಷದ ಹಿರಿಯ ಸಂಬಂಧಿಕ ಮಹಿಳೆಗೆ ಯಕೃತ್ತಿನ ಕಸಿಗೆ ದಾನಿಯಾಗಲು ಅರ್ಚನಾ ಬಯಸಿದ್ದರು. ಯಕೃತ್ ದಾನ ಮಾಡಲು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ […]