ಮಂಗಳೂರು: ಅಪಘಾತದಲ್ಲಿ ಯುವಕ ಮೃತ್ಯು

ಮಂಗಳೂರು: ಭೀಕರ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್ ನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಹಳೆಯಂಗಡಿ ಇಂದಿರಾನಗರ ನಿವಾಸಿ ಗಣೇಶ ದೇವಾಡಿಗ(27) ಮೃತ ದುರ್ದೈವಿ. ಗಣೇಶ ಅವರು ಪಣಂಬೂರಿಗೆ ಕೆಲಸಕ್ಕೆ ಹೋಗುವಾಗ ಮುಕ್ಕ ಜಂಕ್ಷನ್ ನಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಬಳಿ ಸ್ಕೂಟರ್ ಗೆ ವಾಹನವೊಂದು ಢಿಕ್ಕಿ ಹೊಡೆದಿದೆ. ಗಂಭೀರವಾಗಿದ್ದ ಅವರನ್ನು ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ. ಈ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ […]
ಉದ್ಯೋಗ ಸುದ್ದಿ: ನಮ್ಮ ಮೆಟ್ರೋದಲ್ಲಿರುವ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಜನರಲ್ ಮ್ಯಾನೇಜರ್, ಸಿಗ್ನಲ್ ಮ್ಯಾನೇಜರ್ ಸೇರಿದಂತೆ ಕಲ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಸೆಪ್ಟೆಂಬರ್ 25 ಆನ್ ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ತಿಂಗಳಿಗೆ 2,06,250 ರೂಪಾಯಿ ಸಂಬಳ ಪಡೆಯಲಿದ್ದಾರೆ. 5 ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಜನರಲ್ ಮ್ಯಾನೇಜರ್( ಕಾಂಟ್ರಾಕ್ಟ್/ ಸ್ಟೋರ್) ಜನರಲ್ ಮ್ಯಾನೇಜರ್ (ಟ್ರಾಕ್ಷನ್), ಜನರಲ್ ಮ್ಯಾನೇಜರ್(ಪಿ ವೇ) ಹಾಗೂ ಜನರಲ್ […]
ಹಿಜಾಬ್ ವಿವಾದ: ಕುಂದಾಪುರ ಕಾಲೇಜಿನ ಪ್ರಾಂಶುಪಾಲರನ್ನು ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಯಿಂದ ಕೈಬಿಟ್ಟ ಸರಕಾರ

ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಟೀಕೆಗೆ ಗುರಿಯಾಗಿದ್ದ ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಜಿ.ರಾಮಕೃಷ್ಣ ಅವರನ್ನು ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರ ಪಟ್ಟಿಯಿಂದ ಕೊನೆಯ ಕ್ಷಣದಲ್ಲಿ ರಾಜ್ಯ ಸರಕಾರ ಕೈಬಿಟ್ಟಿದೆ. ಬಿಜೆಪಿ ಸರಕಾರದ ಅವಧಿಯಲ್ಲಿ ಹಿಜಾಬ್ ವಿವಾದ ಸೃಷ್ಟಿಯಾಗಿದ್ದಾಗ ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರನ್ನು ಕಾಲೇಜಿನ ಆವರಣದಲ್ಲೇ ತಡೆದು ಪ್ರವೇಶ ನಿರಾಕರಿಸಿದ್ದರು. ಇದೀಗ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಅವರಿಗೆ ರಾಜ್ಯ ಪ್ರಶಸ್ತಿ ಪ್ರಕಟಗೊಂಡಿದ್ದರ ಬಗ್ಗೆ ಒಂದು ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಆಕ್ರೋಶಕ್ಕೆ ಮಣಿದ […]
ಮಂಗಳೂರು: ಕ್ರಿಕೆಟ್ ಆಡುವಾಗ ಹೃದಯಾಘಾತದಿಂದ ಯುವಕ ಮೃತ್ಯು

ಮಂಗಳೂರು: ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಯುವಕನೋರ್ವ ಸಾವನ್ನಪ್ಪಿದ ಘಟನೆ ಮೂಡುಪೆರಾರ ಕಾಯರಾಣೆಯಲ್ಲಿ ನಡೆದಿದೆ. ಮೂಡುಪೆರಾರ ಕಾಯರಾಣೆ ನಿವಾಸಿ ಪ್ರದೀಪ್ ಪೂಜಾರಿ(31)ಮೃತ ದುರ್ದೈವಿ. ಭಾನುವಾರ ಸಂಜೆ ಮೂಡುಪೆರಾರ ಕಾಯಾರಣೆಯಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಪ್ರದೀಪ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಮೊದಲಿಗೆ ಕೈಕಂಬದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು, ನಂತರ ಬಜ್ಪೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ನಂತರ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಪ್ರದೀಪ್ ಪಡುಪೆರಾರ ಗ್ರಾಮ ಪಂಚಾಯತ್ […]
ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆಗೆ ಕಾರಣ ಬಿಚ್ಚಿಟ್ಟ ಶಶಿಕಾಂತ್ ಸೆಂಥಿಲ್

ದಕ್ಷಿಣಕನ್ನಡ ಜಿಲ್ಲಾಧಿಕಾರಿಯಾಗಿದ್ದ ಶಶಿಕಾಂತ್ ಸೆಂಥಿಲ್ ಇದೀಗ ತಮಿಳುನಾಡಿನಲ್ಲಿ ಸಂಸದರಾಗಿದ್ದಾರೆ. ಜಿಲ್ಲಾಧಿಕಾರಿ ಹುದ್ದೆಗೆ ದಿಡೀರ್ ರಾಜೀನಾಮೆ ನೀಡಿ ಎಲ್ಲರನ್ನು ಅಚ್ಚರಿಗೊಳಿಸಿದ್ದ ಶಶಿಕಾಂತ್ ಸೆಂಥಿಲ್ ಇದೀಗ ತನ್ನ ರಾಜೀನಾಮೆಯ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಮಂಗಳೂರಿನಲ್ಲಿ ನಾನು ಜಿಲ್ಲಾಧಿಕಾರಿಯಾಗಿದ್ದಾಗ ಹೆಂಡತಿಯೊಟ್ಟಿಗೆ ಕುಳಿತು ಟಿವಿ ನೋಡುವಾಗ, ಆಕೆ ನೀನು ಕಾಲೇಜು ದಿನಗಳಲ್ಲಿ ಎಷ್ಟು ರೆಬೆಲ್ ಆಗಿದ್ದೆ ನೆನಪಿದೆಯಾ.? ಎಂದು ಹೇಳಿದಳು. ಈ ಒಂದೇ ಒಂದು ಮಾತಿನಿಂದ ರಾತ್ರಿಯಿಡೀ ಮನಸ್ಸಿಗೆ ಭಾರಿ ನೋವುಂಟಾಯಿತು.ಮರುದಿನ ಬೆಳಗ್ಗೆ ನನ್ನ ಹೆಂಡತಿಗೆ ಡಿಸಿ ಹುದ್ದೆಗೆ ರಾಜೀನಾಮೆ ಕೊಡುವುದಾಗಿ ತಿಳಿಸಿದೆ. […]
ಬೆಂಗಳೂರು: ಅಝಾನ್ ವೇಳೆ ಭಾಷಣ ನಿಲ್ಲಿಸಿ ಗೌರವ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಆಜಾನ್ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿ ಮೌನವಾಗಿ ನಿಂತು ಗೌರವವನ್ನು ಸೂಚಿಸಿದ್ದಾರೆ. ಬೆಂಗಳೂರಿನ ಶಿವಾಜಿನಗರದಲ್ಲಿ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಬಳಿಕ ಭಾಷಣ ಆರಂಭಿಸುತ್ತಿದ್ದಂತೆಯೇ ಆಜಾನ್ ಶುರುವಾಗಿದೆ.ಆಜಾನ್ ಕೂಗು ಕೇಳಿಸಿದ ಸಿದ್ದರಾಮಯ್ಯನವರು ತಮ್ಮ ಭಾಷಣವನ್ನು ನಿಲ್ಲಿಸಿ ಮೌನವಾಗಿ ನಿಂತರುವ ಪ್ರಸಂಗ ನಡೆದಿದೆ. ಆಜಾನ್ ಮುಗಿಯುವವರೆಗೂ ಅಂದರೆ ಸುಮಾರು ಐದು ನಿಮಿಷಗಳ ಕಾಲ ಏನು ಮಾತನಾಡದೇ ಮೌನಕ್ಕೆ ಶರಣಾಗಿದ್ದಾರೆ. ನಂತರ ಆಜಾನ್ ಮುಗಿದ ಬಳಿಕ ಸಿದ್ದರಾಮಯ್ಯನವರು ತಮ್ಮ ಭಾಷಣವನ್ನು ಮುಂದುವರಿಸಿದರು. ಶಿವಾಜಿನಗರದ ಬ್ರಾಡ್ […]
ಉಡುಪಿ: ತಾಯಿ ಮಕ್ಕಳ ಕೊಲೆ ಪ್ರಕರಣ, ಆರೋಪಿಯ ವಿಚಾರಣೆಗಿದ್ದ ತಡೆಯಾಜ್ಞೆ ತೆರವು

ಉಡುಪಿಯ ನೇಜಾರಿನಲ್ಲಿ ನಡೆದಿದ್ದ ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣದ ವಿಚಾರಣೆಗೆ ನೀಡಿದ ತಡೆಯಾಜ್ಞೆಯನ್ನು ತೆರವುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಇದಲ್ಲದೆ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆಯನ್ನು ಮುಂದುವರೆಸಲು ಅನುಮತಿ ನೀಡಿದೆ. ಬೆದರಿಕೆಯ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾ ಯಿಸುವಂತೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದನು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆಯನ್ನು […]
ಲೈಂಗಿಕ ದೌರ್ಜನ್ಯ ಆರೋಪ: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಲೈಂಗಿಕ ದೌರ್ಜನ್ಯದ ಫೋಟೊ, ಸೆಲ್ಫಿ ವೀಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡಿರುವುದಾಗಿ ಆರೋಪಿಸಲಾಗಿದೆ. ಅರುಣ್ ಕುಮಾರ್ ಪುತ್ತಿಲ ವಿರುದ್ಧ ಐಪಿಸಿ ಸೆಕ್ಷನ್ 417, 354A, 506ರಡಿ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿದೆ. 47 ವರ್ಷದ ಮಹಿಳೆಯಿಂದ ಬೆಂಗಳೂರಿನ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದ್ದು, 2023 ಜೂನ್ನಲ್ಲಿ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯವೆಸಗಿ ಫೋಟೊ, […]
ಮಂಡ್ಯ; ಅಪ್ರಾಪ್ತ ಬಾಲಕರಿಂದ ಕಿರುಕುಳ: ಬಾಲಕಿ ಆತ್ಮಹತ್ಯೆ

ಮಂಡ್ಯ: ಅಪ್ರಾಪ್ತ ಬಾಲಕರಿಂದ ಕಿರುಕುಳ ಹಿನ್ನಲೆ 15 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ಮಂಡ್ಯ ತಾಲೂಕಿನ ಹನಕೆರೆ ಗ್ರಾಮದಲ್ಲಿ ನಡೆದಿದೆ. ಇಂಪನ(15) ಮೃತ ಬಾಲಕಿ. ಬಾಲಕಿಯನ್ನು ಪ್ರೀತಿಸುವ ವಿಚಾರವಾಗಿ ಯುವಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಾಲಕಿಗೆ ಪ್ರೀತಿಸುವಂತೆ ಕೂಡ ಬಾಲಕರು ಒತ್ತಾಯ ಮಾಡಿದ್ದಾರೆ. ಇವರ ಮಾತಿನ ಚಕಮಕಿಯ ಆಡಿಯೋ ವೈರಲ್ ಆಗಿದೆ. ಇದಲ್ಲದೆ ಆಡಿಯೊವನ್ನು ಮೃತ ಬಾಲಕಿಯ ತಾಯಿಯ ವಾಟ್ಸಪ್ಗೂ ಬಾಲಕರು ಕಳುಹಿಸಿದ್ದಾರೆ. ಇದರಿಂದ ಮನನೊಂದು ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆ […]
ಸಿಎಂ ಕೈ ಸೇರಿದ ಬಿಜೆಪಿ ಅವಧಿಯ ಕೋವಿಡ್ ಹಗರಣದ ವರದಿ; ಮುಡಾ ಹಗರಣದ ಆರೋಪದ ಮಧ್ಯೆ ಮಹತ್ವ ಪಡೆದುಕೊಂಡ ಬೆಳವಣಿಗೆ

ಬಿಜೆಪಿ ಸರ್ಕಾರದ ಸವಧಿಯಲ್ಲಿ ನಡೆದ ಕೋವಿಡ್ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಜಸ್ಟಿನ್ ಜಾನ್ ಮೈಕಲ್ ಡಿ.ಕುನ್ಹಾ ನೇತೃತ್ವದ ಆಯೋಗ ವರದಿಯನ್ನು ಸಲ್ಲಿಕೆ ಮಾಡಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಹಗರಣ ಭಾರೀ ಸದ್ದು ಮಾಡಿತ್ತು. ವೆಂಟಿಲೇಟರ್, ಆಕ್ಸಿಜನ್ ಉಪಕರಣಗಳ ಖರೀದಿ, ನಿರ್ವಹಣೆ ಲೋಪ, ಕೋವಿಡ್-19 ನಿರ್ವಹಣಾ ಉಪಕರಣಗಳು, ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್‌ಗಳ ಖದೀದಿ ಮತ್ತು ಸಂಗ್ರಹಣೆಯಲ್ಲಿ ಅಕ್ರಮ ನಡೆದ ಆರೋಪಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಎಕ್ಸ್ […]