Breaking News :

ಶಿಕ್ಷಣದ ಮೂಲಕ ಮುಖ್ಯ ವಾಹಿನಿಗೆ ಬರಲು ಗಣ್ಯರ ಕರೆ

ಶಿಕ್ಷಣದ ಮೂಲಕ ಮುಖ್ಯ ವಾಹಿನಿಗೆ ಬರಲು ಗಣ್ಯರ ಕರೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಕಲಿಕಾ ಸಾಮಗ್ರಿಗಳ ವಿತರಣೆ. ಪತ್ರಕರ್ತರು, ಸಂಘ-ಸಂಸ್ಥೆಗಳ ಸಾಮಾಜಿಕ ಕಳಕಳಿಗೆ ಗಣ್ಯರ ಮೆಚ್ಚುಗೆ ಕೊಡಗು  : ಪತ್ರಕರ್ತರು ಸುದ್ದಿಗೆ ಮಾತ್ರ ಸೀಮಿತವಾಗದೆ ಸಾಮಾಜಿಕ ಕಳಕಳಿಯೊಂದಿಗೆ ಸಮಾಜಮುಖಿ ಕಾರ್ಯಗಳನ್ನು ಮಾಡುವುದರ ಮೂಲಕ ಗ್ರಾಮೀಣ ಭಾಗದ ನೂರಾರು ವಿದ್ಯಾರ್ಥಿಗಳ ಶಿಕ್ಷಣ ಕಲಿಕಗೆ ನೆರವಾಗುತ್ತಿರುವ ಪರಿಣಾಮವೇ ಬೆಂಗಳೂರಿನ ಸಮಾಜ ಸೇವಾ ಸಂಸ್ಥೆಗಳು ಬ್ಯಾಗ್ ಕಲಿಕಾ ಪರಿಕರಗಳನ್ನು ಸರ್ಕಾರಿ ಶಾಲೆಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿತರಣೆ ಮಾಡಿ ಮಾದರಿಯಾಗಿದ್ದಾರೆ […]

ಖ್ಯಾತ ಬಹುಭಾಷಾ ನಟಿ ಸರೋಜಾ ದೇವಿ ಇನ್ನಿಲ್ಲ 

ಬೆಂಗಳೂರು : ಖ್ಯಾತ ಬಹುಭಾಷಾ ನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಸರೋಜಾದೇವಿ (87) ಯಶವಂತಪುರದಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಿ.ಸರೋಜಾದೇವಿ ಅವರು ಕನ್ನಡ ಚಿತ್ರರಂಗದ ಪ್ರಮುಖ ನಟಿ. ಅವರನ್ನು ‘ಅಭಿನಯ ಸರಸ್ವತಿ’ ಎಂದು ಕರೆಯಲಾಗುತ್ತಿತ್ತು. ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಹೆಸರುವಾಸಿಯಾಗಿದ್ದರು. ಅವರು 1955 ರಿಂದ 1984 ರವರೆಗೆ ಸತತವಾಗಿ 161 ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದರು. ಸರೋಜಾದೇವಿ ಅವರು 1969ರಲ್ಲಿ ಪದ್ಮಶ್ರೀ ಪ್ರಶಸ್ತಿ ಮತ್ತು 1992ರಲ್ಲಿ ಪದ್ಮಭೂಷಣ […]

ಮಸಣಿಕ್ಕಮ್ಮನಿಗೆ ಆಷಾಢ ವಿಶೇಷ ಪೂಜೆ : ನವರಸ ನಾಯಕ ಜಗ್ಗೇಶ್ ಭಾಗಿ

ಮೈಸೂರು : ಪಿರಿಯಪಟ್ಟಣದ ಶ್ರೀ ಮಸಣಿಕಮ್ಮ ದೇವಾಲಯಕ್ಕೆ ಭೇಟಿ ನೀಡಿದ ನವರಸ ನಾಯಕ ಜಗ್ಗೇಶ್ ಆಷಾಢ ತಿಂಗಳ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಭೇಟಿ ನೀಡಿದ ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ಅಮ್ಮನ ದರ್ಶನ ಪಡೆದುಕೊಂಡರು. ಈ ಕುರಿತು ತಮ್ಮ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಜಗ್ಗೇಶ್ “ನನ್ನ ಮನೆ ದೇವರು ಪಿರಿಯಾಪಟ್ಟಣದ ಶ್ರೀ ಮಸಣೀಕಮ್ಮ ಮಾತೆ. ನನ್ನ ತಾತ ಮಾಯಸಂದ್ರದಿಂದ ನಡೆದು ಬಂದು ಸೇವೆಮಾಡಿ ಹೋಗುತ್ತಿದ್ದರು. ನಮ್ಮ ತಾತ, ನೀನು ಈ […]

ಬಂಟ್ವಾಳ: ಈದ್ ಮಿಲಾದ್ ಹಬ್ಬದ ಹಿನ್ನೆಲೆ ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು; ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಚಿಯಲ್ಲಿ ‌ಸೆ.16 ರಂದು ನಡೆದಿದೆ. ಮಂಚಿ ಗ್ರಾಮದ ಮೋಂತಿಮಾರು ನಿವಾಸಿ ಆಸ್ಮ ಎಂಬವರ ಮನೆಯಿಂದ ಕಳವು ನಡೆದಿದೆ. ‌ಸೆ.16ರ ಸೋಮವಾರ ಬೆಳಿಗ್ಗೆ ಈದ್ ಮಿಲಾದ್ ‌ಹಬ್ಬದ ಪ್ರಯುಕ್ತ ಮಕ್ಕಳ ಕಾರ್ಯಕ್ರಮ ನೋಡಲು ಮನೆಗೆ ಬೀಗ ಹಾಕಿ ಮಸೀದಿಗೆ ತೆರಳಿದ್ದ ವೇಳೆ ಈ ಕಳ್ಳತನ ನಡೆದಿದೆ ಎನ್ನಲಾಗಿದೆ. ರಾತ್ರಿ […]

ಉಡುಪಿ; ಸಂಬಂಧಿ ಮಹಿಳೆಯ ಪ್ರಾಣ ರಕ್ಷಿಸಿ ಜೀವ ಕಳೆದುಕೊಂಡ ಉಪನ್ಯಾಸಕಿ

ಉಪನ್ಯಾಸಕಿಯೊಬ್ಬರು ಸಂಬಂಧಿಯೊಬ್ಬರ ಜೀವ ಉಳಿಸಿಲು ಹೋಗಿ ತಮ್ಮದೇ ಪ್ರಾಣ ಕಳೆದಕೊಂಡ ಹೃದಯವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕೋಟೇಶ್ವರದಲ್ಲಿ ನಡೆದಿದೆ‌. ಕುಂದಾಪುರ ತಾಲ್ಲೂಕಿನ ಕೋಟೇಶ್ವರದಲ್ಲಿ ಉಪನ್ಯಾಸಕಿಯಾಗಿ ಕೆಲ ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದ ಅರ್ಚನಾ ಕಾಮತ್‌(34) ಜೀವ ಕಳೆದುಕೊಂಡವರು. ಮೃತರು ಪತಿ ಚಾರ್ಟರ್ಡ್‌ ಅಕೌಂಟೆಂಟ್‌ ಚೇತನ ಕಾಮತ್, 4 ವರ್ಷದ ಮಗು, ತಂದೆ, ತಾಯಿಯನ್ನು ಅಗಲಿದ್ದಾರೆ 69 ವರ್ಷದ ಹಿರಿಯ ಸಂಬಂಧಿಕ ಮಹಿಳೆಗೆ ಯಕೃತ್ತಿನ ಕಸಿಗೆ ದಾನಿಯಾಗಲು ಅರ್ಚನಾ ಬಯಸಿದ್ದರು. ಯಕೃತ್ ದಾನ ಮಾಡಲು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ […]

ಕಾಟಿಪಳ್ಳ ಮಸೀದಿಗೆ ಕಲ್ಲೆಸೆತ ಪ್ರಕರಣ; ಐವರು ಆರೋಪಿಗಳ ಬಂಧನ

ಸುರತ್ಕಲ್: ಕಾಟಿಪಳ್ಳ 3ನೇ ಬ್ಲಾಕ್ ನ ಮಸ್ಜಿದುಲ್ ಹುದಾ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು  ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಆಶ್ರಯ ಕಾಲನಿ ನಿವಾಸಿ ಭರತ್, ಕಟ್ಲ ಆಶ್ರಯ ಕಾಲನಿ ನಿವಾಸಿ ಚೆನ್ನಪ್ಪ, ಹಳೆಯಂಗಡಿ ಚೇಳಾಯರು ಖಂಡಿಗೆ ಪಾಡಿ ನಿವಾಸಿ ನಿತಿನ್, ಈಶ್ವರ ನಗರ ನಿವಾಸಿ ಮನು ಮತ್ತು ಮುಂಚೂರು ನಿವಾಸಿ ಸುಜಿತ್ ಎಂಬವರು ಬಂಧಿತ ಆರೋಪಿಗಳು. ನಿನ್ನೆ ರಾತ್ರಿ ಬೈಕಿನಲ್ಲಿ ಬಂದ ಆರೋಪಿಗಳು ಮಸೀದಿಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದರು.

ಬರೊಬ್ಬರಿ 50ಕ್ಕೂ ಅಧಿಕ ಪ್ರಕರಣಗಳ ಆರೋಪಿ ಕುಖ್ಯಾತ ರೌಡಿ ಶೀಟರ್ ಅರೆಸ್ಟ್

ಬೆಂಗಳೂರು: ಕುಖ್ಯಾತ ರೌಡಿಶೀಟರ್ ಬ್ಯಾಟರಿ ಜಯಂತ್ ನನ್ನು ಪೊಲೀಸರು ಬಂಧಿಸಿದ್ದು, 3 ಬೈಕ್ ಗಳು, ಸೇರಿ ಮೊಬೈಲ್ ಜಪ್ತಿ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಪೊಲೀಸರು ಕುಖ್ಯಾತ ರೌಡಿಶೀಟರ್ ಬ್ಯಾಟರಿ ಜಯಂತ್ ನನ್ನು  ಬಂಧಿಸಿದ್ದಾರೆ ಬ್ಯಾಟರಿ ಜಯಂತ್ ವಿರುದ್ಧ ಕೊಲೆ, ಕೊಲೆಯತ್ನ, ದರೋಡೆ ಸೇರಿ ಬರೋಬ್ಬರಿ 56 ಪ್ರಕರಣಗಳಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಜಯಂತ್ ವಿರುದ್ಧ ಕೊಲೆ, ಕೊಲೆ ಯತ್ನ, ಕಳ್ಳತನ, ದರೋಡೆ ಸೇರಿದಂತೆ ಹಲವು ಪ್ರಕರಣಗಳಿವೆ. ಸದ್ಯ ಜಾಮೀನಿನ […]

ಬಿಜೆಪಿ ಶಾಸಕ ಮುನಿರತ್ನ ಪೊಲೀಸ್ ವಶಕ್ಕೆ!

ಕೋಲಾರ: ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೋಲಾರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ ವಿರುದ್ದ ಎರಡು FIR ದಾಖಲು ಮಾಡಲಾಗಿದೆ. ಒಂದು ಗುತ್ತಿಗೆದಾರ ಚೆಲುವರಾಜ್‌ಗೆ ಜೀವ ಬೆದರಿಕೆ ಹಾಕಿರುವುದು ಮತ್ತು ಇನ್ನೊಂದು ಜಾತಿ ನಿಂದನೆ ಅಡಿಯಲ್ಲಿ ದೂರನ್ನು ಬೆಂಗಳೂರಿನ ವೈಯಾಲಿಕಾವಲ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿರುವುದಾಗಿ ಆರೋಪಿಸಿರುವ ಚೆಲುವರಾಜು, ಶಾಸಕ ಮುನಿರತ್ನ ವಿರುದ್ಧ […]

ಉಳ್ಳಾಲ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

ಉಳ್ಳಾಲ:ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದಲ್ಲಿ ನಡೆದಿದೆ. ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ಈ ಘಟನೆ ನಡೆದಿದೆ ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ (25) ಆತ್ಮಹತ್ಯೆಗೈದ ಯುವಕನಾಗಿದ್ದಾನೆ. ವೃತ್ತಿಯಲ್ಲಿ ಎಲೆಕ್ಟ್ರೀಶಿಯನ್ ಆಗಿದ್ದ ಶ್ರವಣ್ ಗುರುವಾರ ರಾತ್ರಿ ಸ್ನೇಹಿತನನ್ನು ಭೇಟಿಯಾಗಿ ಮನೆಗೆ ಬಂದು ಊಟ ಮಾಡಿ ಟಿವಿ ವೀಕ್ಷಿಸಿ ಬಳಿಕ ಮಲಗಲು ತನ್ನ ಕೋಣೆಗೆ ಹೋಗಿದ್ದಾನೆ. ಮಧ್ಯರಾತ್ರಿ ಶ್ರವಣ್ ಅಣ್ಣ ಕೆಲಸ ಮುಗಿಸಿ ಮನೆಗೆ ಬಂದಾಗ ಶ್ರವಣ್ ಬೆಡ್ […]

ಬೈಕ್ ಗೆ ಲಾರಿ ಢಿಕ್ಕಿ: ಮೂವರು ವಿದ್ಯಾರ್ಥಿಗಳು ದುರ್ಮರಣ

ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಯಲಹಂಕ ಸಮೀಪ ನಡೆದಿದೆ. ಜಿಕೆವಿಕೆ ಆವರಣದಲ್ಲಿ ಇರುವ ಬಾಗಲಕೋಟೆಯ ತೋಟಗಾರಿಕೆ ವಿವಿಯ ವಿದ್ಯಾರ್ಥಿಗಳಾದ ರೋಹಿತ್ (21), ಹರ್ಷವರ್ಧನ್ (22) ಹಾಗೂ ಸುಚಿತ್ (22) ಮೃತರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಮಂಗಳವಾರ ರಾತ್ರಿ 1 ಗಂಟೆಗೆ ಒಂದೇ ಬೈಕ್‌ನಲ್ಲಿ ಮೂವರು ವಿದ್ಯಾರ್ಥಿಗಳು ಜಾಲಿ ರೈಡ್‌ಗೆ ಹೋಗಿ ಹಾಸ್ಟೆಲ್‌ಗೆ ಮರಳುವಾಗ ಚಿಕ್ಕಜಾಲ ಸಮೀಪದ ಡ್ಯಾಶ್ ಸ್ಯ್ಕಾವರ್ ಮುಂದೆ ಅವಘಡ ಸಂಭವಿಸಿದೆ. ಅಪಘಾತದ ಬಳಿಕ […]