Breaking News :

ಮಾನಹಾನಿಕರ ಸುದ್ದಿ ಪ್ರಸಾರಕ್ಕೆ ನಿರ್ಬಂಧ ಕೋರಿ ಕೋರ್ಟ್ ಮೊರೆ ಹೋದ ಬಸವರಾಜ್ ಬೊಮ್ಮಯಿ

ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಕೋರಿ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಅವರು ಸಿವಿಲ್ ಕೋರ್ಟಗೆ ಅರ್ಜಿ ಸಲ್ಲಿಸಿದ್ದಾರೆ. ಇದಲ್ಲದೆ ವಕೀಲ ಜಗದೀಶ್ ಮಹದೇವ್ ವಿರುದ್ಧವು ಕೂಡ ನಿರ್ಬಂಧಕಾಜ್ಞೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ಅಥವಾ ಸುದ್ದಿ ಪ್ರಸಾರ ಮಾಡಿದಂತೆ ದಾವೇ ಹೂಡಿದ್ದಾರೆ. ಬಸವರಾಜ್ ಬೊಮ್ಮಾಯಿ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ನಾಳೆ ಕೋರ್ಟ್ ಆದೇಶ ಪ್ರಕಟಿಸಲಿದೆ ಎಂದು ಹೇಳಲಾಗುತ್ತಿದೆ.

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ; ಸಿಬಿಐ ವರದಿ ಎತ್ತಿ ಹಿಡಿದ ಸುಪ್ರೀಂಕೋರ್ಟ್, ಕೆ.ಜೆ ಜಾರ್ಜ್ ಗೆ ರಿಲೀಫ್ ಕೊಟ್ಟ ವರದಿಯಲ್ಲೇನಿತ್ತು?

DySP ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ ಜಾರ್ಜ್ ಅವರಿಗೆ ಸುಪ್ರೀಂಕೋರ್ಟ್‌ನಲ್ಲಿ ಕ್ಲೀನ್ ಚಿಟ್ ಸಿಕ್ಕಿದೆ. ಸಿಬಿಐ ವರದಿ ಎತ್ತಿಹಿಡಿದ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಸಿಬಿಐ ಕ್ರಮ ಪ್ರಶ್ನಿಸಿ ಗಣಪತಿ ಸಹೋದರಿ ಸಬಿತಾ ಹಾಗು ಮತ್ತಿತರರು ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ಅರ್ಜಿಯನ್ನು ವಜಾ ಮಾಡಿದೆ. ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆಸಿದ್ದ ಸಿಬಿಐ, 2019ರಲ್ಲಿ ವರದಿ ನೀಡಿ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಕ್ಲೀನ್ ಚಿಟ್ ನೀಡಿತ್ತು. ಅಲ್ಲದೆ, ಗಣಪತಿ ಆತ್ಮಹತ್ಯೆಗೆ ಕಿರುಕುಳ ಕಾರಣವಲ್ಲ. ಬದಲಾಗಿ ಒಂದೆರಡು […]

ಚಿಕ್ಕಮಗಳೂರು: ಸರಕಾರದ ಹಣವನ್ನು ಪ್ರಿಯತಮೆಯ ಖಾತೆಗೆ ಹಾಕಿದ ಅಧಿಕಾರಿ

ಚಿಕ್ಕಮಗಳೂರು ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿ.ಆರ್.ಎಫ್.ಓ. ಅಧಿಕಾರಿ ಓರ್ವ ರಾಣಿಝರಿ, ಬಂಡಾಜೆ ಫಾಲ್ಸ್ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ವಂಚಿಸಿ, ಸರ್ಕಾರಕ್ಕೆ ಬರುವ ಲಕ್ಷಾಂತರ ರೂಪಾಯಿಯನ್ನು ಆತನ ಪ್ರಿಯತಮೆಯ ಖಾತೆಗೆ ವರ್ಗಾಯಿಸಿರುವ ಬಗ್ಗೆ ವರದಿಯಾಗಿದೆ. ಡಿ.ಆರ್.ಎಫ್.ಓ. ಚಂದನ್ ಗೌಡ ಸರ್ಕಾರದ ಹಣವನ್ನು ಪ್ರಿಯತಮೆ ಖಾತೆಗೆ ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲ್ಲೂಕಿನಲ್ಲಿ ನಡೆದಿದೆ.9000ರೂ. ಸರ್ಕಾರದ ಹಣವನ್ನು ಪ್ರಿಯತಮೆ ಖಾತೆಗೆ ವರ್ಗಾವಣೆ ಮಾಡಿದ್ದಾರೆ ಎನ್ನಲಾಗಿದೆ. ಬಂಡಾಜೆ ಫಾಲ್ಸ್ ಬಳಿ 200ಕ್ಕೂ ಅಧಿಕ ಜನರು ಬಂಡಾಜೆ ಫಾಲ್ಸ್ ನೋಡಲು ತೆರಳಿದ್ದರು. […]

ಗೃಹಲಕ್ಷ್ಮಿ ಹಣ ಕೂಡಿಟ್ಟು ಸೊಸೆಗೆ ಫ್ಯಾನ್ಸಿ ಅಂಗಡಿ ಹಾಕಿ ಕೊಟ್ಟ ಅತ್ತೆ

ಅತ್ತೆಯೋರ್ವಳು ತನಗೆ ಬಂದ ಗೃಹಲಕ್ಷ್ಮೀ ಹಣವನ್ನು ಕೂಡಿಟ್ಟು ಸೊಸೆಯ ಜೀವನೋಪಾಯಕ್ಕೆ ಹೊಸ ದಾರಿ ಮಾಡಿಕೊಟ್ಟು ಸುದ್ದಿಯಾಗಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲ್ಲೂಕು ನೀರಲಗಿಯಲ್ಲಿ ಅತ್ತೆಯೊಬ್ಬರು ತನಗೆ ಬಂದ ಗೃಹಲಕ್ಷ್ಮೀ ಹಣವನ್ನು ಕೂಡಿಟ್ಟು ಸೊಸೆಗೆ ಫ್ಯಾನ್ಸಿ ಅಂಗಡಿಯನ್ನು ಮಾಡಿಕೊಟ್ಟಿದ್ದಾರೆ. ಈ ಮೂಲಕ ಆದರ್ಶ ಅತ್ತೆಯಾಗಿ ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇದೀಗ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಪ್ರಯೋಜನವನ್ನು ಪಡೆದು ಸೊಸೆಯ ಬದುಕಿಗೆ ಅತ್ತೆ ಹೊಸ ದಾರಿ ಕಂಡುಕೊಂಡಿದ್ದಾರೆ. ಈ ಮೂಲಕ ಈ ಅತ್ತೆ ಸೊಸೆ […]

ದರ್ಶನ್ ವಿರುದ್ದ ಮತ್ತೆ ಮೂರು ಪ್ರಕರಣ ದಾಖಲು

ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಹಿನ್ನೆಲೆಯಲ್ಲಿ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತೀಮಾ ಅವರು ಪ್ರಕರಣದ ತನಿಖೆಗೆ ಮೂರು ವಿಶೇಷ ತಂಡಗಳ ರಚನೆ ಮಾಡಿದ್ದಾರೆ. ಬೇಗೂರು ಇನ್ಸ್‌ಪೆಕ್ಟರ್ ಕೃಷ್ಣ ಕುಮಾರ್, ರೌಡಿಶೀಟರ್‌ಗಳ ಜತೆ ದರ್ಶನ್ ಬೇರೆತಿದ್ದು ಹೇಗೆ? ಲಾನ್‌ನಲ್ಲಿ ಎಲ್ಲರು ಒಟ್ಟಿಗೆ ಕೂರಲು ಚೇರ್ ವ್ಯವಸ್ಥೆ ಮಾಡಿದವರು ಯಾರು? ಕಾಫಿ ಮಗ್ ಹೇಗೆ ಬಂತು, ಹಾಗೂ ಜೈಲಿನಲ್ಲಿ ಸಿಗರೇಟ್, ಮದ್ಯ, ಮಾದಕವಸ್ತು ನಿಷೇಧ ಇದ್ದರೂ ಸಿಗರೇಟ್ ಹೇಗೆ ಸಿಕ್ಕಿತು ಎಂದು ತನಿಖೆ ನಡೆಸಲಿದ್ದಾರೆ. ಇನ್ನೂ ಎರಡನೇ ಪ್ರಕರಣದ […]

ಕಾರ್ಕಳ; ಅತ್ಯಾಚಾರ ಪ್ರಕರಣದಲ್ಲಿ ಬಂಧಿತ 3ನೇ ಆರೋಪಿ ಬಿಜೆಪಿ ಕಾರ್ಯಕರ್ತ!

ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಮೂರನೇ ಆರೋಪಿ ಕಾರ್ಕಳ ತೆಲ್ಲರು ನಿವಾಸಿ ಅಭಯ್ ನನ್ನು ಬಂಧಿಸಲಾಗಿದೆ. ಈತ ಬಿಜೆಪಿ ಮತ್ತು ಭಜರಂಗದಳದ ಕಾರ್ಯಕರ್ತ ಎಂದು ವರದಿಯಾಗಿದೆ. ಅಭಯ್ ಕಾಪುವಿನ ವ್ಯಕ್ತಿಯೊಂದಿಗೆ ಸೇರಿಕೊಂಡು ಟಿಪ್ಪರ್ ಖರೀದಿಸಿದ್ದ ಆದರೆ ಲೋನ್ ಕಂತು ಬಾಕಿ ಇರಿಸಿದ್ದ ಕಾರಣ ಆತನ ವಾಹನವನ್ನು ಫೈನಾನ್ಸ್ ಕಂಪನಿ ಮುಟ್ಟುಗೋಲು ಹಾಕಿಕೊಂಡ ನಂತರ ಬೆಂಗಳೂರಿನಲ್ಲಿ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. ಅಲ್ತಾಫ್ ಹಾಗೂ ಅಭಯ್ ಇಬ್ಬರೂ ಕಾರ್ಕಳ ಜೋಡುರಸ್ತೆ ಬಳಿ ಟಿಪ್ಪರ್ ನಿಲ್ಲಿಸುತ್ತಿದ್ದರು. […]

ಅನ್ಯಕೋಮಿನ ಜೋಡಿ ಬೈಕ್ ನಲ್ಲಿ ತೆರಳುವಾಗ ತಡೆದು ಪ್ರಶ್ನಿಸಿದ ಗುಂಪು

ಅನ್ಯಕೋಮಿನ ಜೋಡಿ ಬೈಕ್ ನಲ್ಲಿ ಹೋಗುವಾಗ ಅಡ್ಡಗಟ್ಟಿ ಜನರು ಪ್ರಶ್ನಿಸಿರುವ ಘಟನೆ ಕೋಲಾರ ನಗರದ ಅಂತರಗಂಗೆ ರಸ್ತೆಯಲ್ಲಿ ನಿನ್ನೆ ಘಟನೆ ನಡೆದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಮಹಿಳೆ ಹಾಗೂ ಆಕೆಯ ಮಗುವನ್ನು ಬೈಕ್‌ನಲ್ಲಿ ಕೆರದುಕೊಂಡು ಹೋಗುತ್ತಿದ್ದ ಯುವಕನ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಯುವಕನಿಂದ ಬೆದರಿಕೆ ಹಾಕಿರುವ ಕುರಿತು ದೂರು ಪಡೆದಿದ್ದಾರೆ. ಜಿಲ್ಲೆಯ ಮಾಲೂರು ತಾಲ್ಲೂಕು ಶಿವಾರಪಟ್ಟಣದ ವಿಷ್ಣು ಎಂಬ ಯುವಕ ಅದೇ ಗ್ರಾಮದ ಸಮೀನಾ ತಾಜ್ ಎಂಬ ಮಹಿಳೆಯನ್ನು […]

ಉದ್ಘಾಟನೆ ಭಾಗ್ಯವಿಲ್ಲದೆ ಭೂತ ಬಂಗಲೆಯಂತಾದ ಕೋಟ್ಯಾಂತರ ವೆಚ್ಚದಲ್ಲಿ ನಿರ್ಮಿಸಿದ ಸಮುದಾಯ ಭವನ

ಬಡವರು,ಮಧ್ಯಮವರ್ಗದ ಜನರ ಕಾರ್ಯಕ್ರಮಗಳಿಗೆ ಅಂತಾ ಕೋಟಿ ಕೋಟಿ ರೂ.ವೆಚ್ಚದಲ್ಲಿ ಜಯನಗರದಲ್ಲಿ ನಿರ್ಮಿಸಿರುವ ಬಿಬಿಎಂಪಿಯ (BBMP) ಸಮುದಾಯಭವನ ಉದ್ಘಾಟನೆ ಭಾಗ್ಯ ಸಿಗದೇ ಗಬ್ಬೆದ್ದುನಾರುತ್ತಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ‌. ಭೂತಬಂಗಲೆಯಂತಾದ ಬಿಬಿಎಂಪಿಯ ಸಮುದಾಯ ಭವನ ಜಯನಗರದಲ್ಲಿ 3.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿತ್ತು. ಈ ಕಟ್ಟಡ 2020ರಲ್ಲೇ ಉದ್ಘಾಟನೆಯಾಗಬೇಕಿತ್ತು, ಆದರೆ ಮಾಜಿ ಶಾಸಕಿ ಸೌಮ್ಯರೆಡ್ಡಿ ಹಾಗೂ ಹಾಲಿ ಶಾಸಕ ಸಿ.ಕೆ.ರಾಮಮೂರ್ತಿ ಜಿದ್ದಾಜಿದ್ದಿನಿಂದ ಕಟ್ಟಡಕ್ಕೆ ಉದ್ಘಾಟನೆ ಭಾಗ್ಯ ಸಿಗದೆ ಭೂತಬಂಗಲೆಯಂತಾಗಿದೆ ಎಂದು ವರದಿಯಾಗಿದೆ. ಜಯನಗರ ಸುತ್ತಮುತ್ತಲಿನ ಜನರಿಗೆ ಕಾರ್ಯಕ್ರಮಗಳು, ಸಮಾರಂಭ ನಡೆಸೋಕೆ […]

ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಸುದ್ದಿ; ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?

ಬೆಂಗಳೂರಿನ ಸೆಂಟ್ರಲ್ ಪರಪ್ಪನ ಅಗ್ರಹಾರದಲ್ಲಿರುವ ಖೈದಿಗಳಿಗೆ ಪಂಚತಾರ ಹೋಟೆಲ್‌ನ ವ್ಯವಸ್ಥೆ ಇದೆ. ದುಡ್ಡು ಕೊಟ್ಟರೆ ಏನು ಬೇಕಾದರೂ ಕೊಂಡುಕೊಳ್ಳಬಹುದು ಎಂಬುದು ಈಗ ದರ್ಶನ್ ವಿಚಾರದಲ್ಲಿ ಅದು ಪ್ರಚಾರಕ್ಕೆ ಬಂದಿದೆ ಎಂದು ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ ಸೋಮವಾರ ಮಾಧ್ಯಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಜೈಲಿನಲ್ಲಿನ ಅವ್ಯವಸ್ಥೆ ಹೊಸದಾಗಿ ಆಗಿಲ್ಲ, ಹಿಂದಿನಿಂದಲೂ ನಡೆಯುತ್ತಾ ಇದೆ. ಹಿಂದೆ ಡಿಜಿ ಮತ್ತು ಡಿಸಿಪಿ ನಡುವೆ ದೊಡ್ಡ ಗಲಾಟೆ ಆಗಿತ್ತು. ತನಿಖೆ ನಡೆಯಬೇಕು ಎಂದು ಗಲಾಟೆ ಆಗಿತ್ತು. ಪರಪ್ಪನ ಅಗ್ರಹಾರದಲ್ಲಿರುವ […]

ದರ್ಶನ್ & ಗ್ಯಾಂಗ್ ನ್ನು ಬೇರೆ ಜೈಲಿಗೆ ಶಿಪ್ಟ್ ಮಾಡುವಂತೆ ಸಿಎಂ ಸೂಚನೆ

ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ವಿಚಾರವಾಗಿ, ಇಂದು ಟಿಜಿ & ಐಜಿಪಿ ಅಲೋಕ್ ಮೋಹನ್ ಅವರು ಸಿಎಂ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈಲಿನ ನಿಯಮ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ. ಮುಂದೆ ಈ ರೀತಿ ಆಗದಂತೆ ಎಚ್ಚರವಹಿಸಿ. ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಇದೆ ವೇಳೆ ದರ್ಶನ್ ಮತ್ತು ಇತರರನ್ನು ಬೇರೆ ಕಾರಾಗೃಹಗಳಿಗೆ ಸ್ಥಳಾಂತರಕ್ಕೆ […]