ಯುವಕನಿಗೆ ಮಾರಣಾಂತಿಕವಾಗಿ ಥಳಿಸಿದ ಗುಂಪು

ಗುಂಪೊಂದು ಯುವಕನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ರಾಜಧಾನಿ ಬೆಂಗಳೂರಿನ ಗೆರಟಿಗನಬೆಲೆ ಗ್ರಾಮ ಇಟ್ಟಿಗೆ ಫ್ಯಾಕ್ಟರಿಯಲ್ಲಿ ನಡೆದಿದೆ. ತಾಲ್ಲೂಕಿನ ಗೆರಟಿಗನಬೆಲೆ ಗ್ರಾಮದಲ್ಲಿ ಹತ್ತಾರು ಮಂದಿ ಸೇರಿ ಓರ್ವ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಯುವಕನನ್ನ ಮಹಿಳೆ ಬಿಡಿಸಲು ಮುಂದಾದರೂ ಗುಂಪೊಂದು ಬಿಡದೆ ಹಲ್ಲೆ ನಡೆಸಿದೆ. ಹಣಕಾಸಿನ ವಿಚಾರಕ್ಕೆ ನಡೆದಿರುವ ಗಲಾಟೆ ಇದಾಗಿದ್ದು, ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ಅವರದ್ದು ಎನ್ನಲಾದ ಆಡಿಯೋ ವೈರಲ್

ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ಅವರದ್ದು ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದೆ. ಈ ಹಿಂದೆ ವಿಧಾನಸಭಾ ಚುನಾವಣೆ ವೇಳೆ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯ ಅಭ್ಯರ್ಥಿಯಾಗಿ ಅರುಣ್ ಪುತ್ತಿಲ ಭಾರಿ ಸದ್ದು ಮಾಡಿದ್ದರು. ಆದರೆ, ಈಗ ಬಿಜೆಪಿ ನಾಯಕಿಯೊಬ್ಬರ ಬಳಿ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗುತ್ತಿದೆ. ನೀವು ಬಿಜೆಪಿಗೆ ಸೇರಿದ್ದು ನಾಚಿಕೆ ಆಗಲಿಲ್ವ ಎಂದು ಮಹಿಳೆ ಕೇಳಿದ್ದಾಳೆ. ಆದರೆ, ಇದಕ್ಕೆ ಉತ್ತರಿಸಿದ ಅರುಣ್ ಪುತ್ತಿಲ ಅವರದ್ದೆನ್ನಲಾದ ಧ್ವನಿ […]
ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನವವಿವಾಹಿತೆ ಆತ್ಮಹತ್ಯೆ; ಪತಿಯ ಮನೆಯ ಬಾಗಿಲಲ್ಲೇ ಅಂತ್ಯಸಂಸ್ಕಾರ ಮಾಡಲು ಮುಂದಾದ ಕುಟುಂಬ

ವರದಕ್ಷಿಣೆ ಕಿರುಕುಳದಿಂದಾಗಿ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿಯ ಮನೆಯ ಮುಂದೆ ಶವವನ್ನು ಅಂತ್ಯಸಂಸ್ಕಾರ ಮಾಡಲು ಮಹಿಳೆಯ ಪೋಷಕರು ಯತ್ನಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಪತಿಯ ಮನೆಯವರ ವರದಕ್ಷಿಣೆ ಕಿರುಕುಳದಿಂದಾಗಿ ಕೋಲಾರದಲ್ಲಿ ನವವಿವಾಹಿತೆ ಮಾನಸ ಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೋಲಾರ ತಾಲೂಕಿನ ತೂರಾಂಡಹಳ್ಳಿ ಗ್ರಾಮದಲ್ಲಿರುವ ಪತಿ ಉಲ್ಲಾಸ್ ಗೌಡ ಮನೆಯ ಎದುರು ಪತ್ನಿ ಮಾನಸ ಗೌಡ ಅವರ ಶವವನ್ನಿಟ್ಟು ಪ್ರತಿಭಟನೆ ಮಾಡಿದ್ದಾರೆ. 24 ವರ್ಷದ ಮಾನಸ ಗೌಡ ಹಾಗೂ ತೂರಾಂಡಹಳ್ಳಿ ಗ್ರಾಮದ ಉಲ್ಲಾಸ್ ಗೌಡ ನಡುವೆ ಕಳೆದ ವರ್ಷ […]
ನದಿಯಲ್ಲಿ ಈಜಲು ತೆರಳಿದ ಯುವಕ ನೀರುಪಾಲು

ನದಿಗೆ ಈಜಲು ಹೋಗಿದ್ದ ಯುವಕನೋರ್ವ ನೀರು ಪಾಲಾಗಿರುವ ಘಟನೆ ವಿಜಯಪುರದ ಶ್ರೀ ಛಾಯಾ ಭಗವತಿಯ ತೀರದಲ್ಲಿ ನಡೆದಿದೆ. ಮಹ್ಮದ್ ಆದಿಲ್(27)ನೀರು ಪಾಲಾದ ಯುವಕನಾಗಿದ್ದು, ವಿಜಯಪುರ ಜಿಲ್ಲೆಯ ತಾಳಿಕೋಟಿಯಿಂದ ಸ್ನೇಹಿತರೊಂದಿಗೆ ಶುಕ್ರವಾರ ಛಾಯಾ ಭಗವತಿ ವೀಕ್ಷಣೆಗೆ ತೆರೀದ್ದ. ಈಜಲು ನದಿಗೆ ಇಳಿದಾಗ ನೀರಿನ ಸೆಳೆತಕ್ಕೆ ಸಿಲುಕಿ ನೀರು ಪಾಲಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ವಿಷಯ ತಿಳಿದು ಸ್ಥಳಕ್ಕೆ ಸ್ಥಳೀಯ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದಿಲ್ ದೆಹಲಿ ಮೂಲದವರಾಗಿದ್ದು, ತಾಳಿಕೋಟಿಯಲ್ಲಿ ಕಳೆದ ಹಲವು ವರ್ಷಗಳಿಂದ ಕಟಿಂಗ್ […]
ಮಾಜಿ ಸಿಎಂ ಓರ್ವರ ಸಿಡಿ ರಿಲೀಸ್ ಮಾಡುವುದಾಗಿ ಹೇಳಿದ ಮಾಜಿ ಶಾಸಕ; ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ ಹೇಳಿಕೆ

ರಾಜ್ಯದ ಮಾಜಿ ಸಿಎಂ ಓರ್ವರಿಗೆ ಸಂಬಂಧಿಸಿದ ಅಶ್ಲೀಲ ಸಿಡಿ ಶೀಘ್ರವೇ ರಿಲೀಸ್ ಆಗಲಿದೆ ಎಂದು ಕಾಂಗ್ರೆಸ್ನ ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿಕೆಯನ್ನು ನೀಡಿದ್ದು, ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ರಾಜ್ಯದ ಅದರಲ್ಲೂ ಬಿಜೆಪಿಯ ಮಾಜಿ ಸಿಎಂ ಓರ್ವರ ಅಶ್ಲೀಲ ಸಿಡಿ ಬಿಡುಗಡೆಯಾಗಲಿದೆ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಇದೀಗ ಭಾರೀ ಕುತೂಹಲ ಮೂಡಿಸಿದ್ದಾರೆ. ಅಲ್ಲದೇ ಆ CDಯು ಭಾರತೀಯ ಜನತಾ ಪಕ್ಷದ ನಾಯಕನದ್ದೇ ಎಂದು ಅವರು ಒತ್ತಿ-ಒತ್ತಿ ಹೇಳಿದ್ದಾರೆ. ಅದು ಯಾರಿಗೆ ಸಂಬಂಧಿಸಿದ […]
ಅನಾಥ ಯುವತಿಗೆ ಮುಂದೆ ನಿಂತು ವಿವಾಹ ಮಾಡಿಸಿಕೊಟ್ಟ ಉಡುಪಿ ಡಿಸಿ

ಅನಾಥೆಯಾಗಿದ್ದ ವಧುವನ್ನು ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಮುಂದೆ ನಿಂತು ಶಾಸ್ತ್ರೋಕ್ತವಾಗಿ ಕನ್ಯಾದಾನ ಮಾಡಿದ್ದಾರೆ. 15 ವರ್ಷಗಳಿಂದ ಅನಾಥೆಯಾಗಿ ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಆಶ್ರಯ ಪಡೆದುಕೊಂಡಿದ್ದ ಖುಷ್ಬು ಸುಮೇರಾ (21) ಅವರನ್ನು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಅಂಬುತೀರ್ಥದ ದಿನೇಶ್ ಎ.ಪಿ.ಅವರ ಪುತ್ರ ಕೃಷಿಕ ಹಾಗೂ ಕೇಟರಿಂಗ್ ಉದ್ಯಮ ನಡೆಸುವ ಮಧುರಾಜ್ ಎ.ಡಿ.(29) ಅವರು ಹಿಂದೂ ಸಂಪ್ರದಾಯದಂತೆ ವಿವಾಹವಾದರು. ಉಡುಪಿ ಸಮೀಪದ ನಿಟ್ಟೂರಿನಲ್ಲಿರುವ ರಾಜ್ಯ ಮಹಿಳಾ ನಿಲಯದಲ್ಲಿ ವಿವಾಹ ಕಾರ್ಯಕ್ರಮ ನಡೆದಿದ್ದು, ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರು ಶುಭಮುಹೂರ್ತದಲ್ಲಿ ಮುಂದೆ […]
ಕಾರ್ಕಳ ಯುವತಿ ಮೇಲಿನ ಅತ್ಯಾಚಾರ ಪ್ರಕರಣ; ಐಜಿಪಿ ಅಮಿತ್ ಸಿಂಗ್ ಪ್ರತಿಕ್ರಿಯೆ, ಪ್ರಕರಣದಲ್ಲಿನ ಗೊಂದಲದ ಬಗ್ಗೆ ಸ್ಪಷ್ಟೀಕರಣ

ಉಡುಪಿ ಜಿಲ್ಲೆಯ ಕಾರ್ಕಳದ ಹಿಂದೂ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಮಾಡಿದ ಪ್ರಕರಣದಲ್ಲಿನ ಕೆಲವು ಗೊಂದಲದ ಬಗ್ಗೆ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ. ಕಾರ್ಕಳದಲ್ಲಿ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡ ಯುವತಿಯನ್ನು ಕೇವಲ 3 ತಿಂಗಳಲ್ಲಿ ಪುಸಲಾಯಿಸಿದ ಯುವಕರಿಬ್ಬರು, ಕಾರಿನಲ್ಲಿ ಪಾರ್ಟಿ ಮಾಡುವುದಾಗಿ ಕರೆದೊಯ್ದು ಬಿಯರ್‌ನಲ್ಲಿ ಡ್ರಗ್ಸ್ ಮಿಶ್ರಣ ಮಾಡಿ ಕೊಟ್ಟು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿದ್ದಾರೆ. ಇದರಲ್ಲಿ ಯುವಕ ಅಲ್ತಾಫ್ ಅತ್ಯಾಚಾರ ಮಾಡಿದ್ದು, ಇದು ಗ್ಯಾಂಗ್ ರೇಪ್ ಅಲ್ಲವೆಂದು ಉಡುಪಿ ಪಶ್ಚಿಮ […]
ಭೀಕರ ಅಪಘಾತ; ಒಂದೇ ಕುಟುಂಬದ ಮೂವರು ದುರ್ಮರಣ

ಜಾಫರ್,ಮುಸ್ತಫಾ, ಶೊಹೇಬ್ ಮೃತರು. ಓಮ್ನಿ ಕಾರಿನ ಟಯರ್ ಸ್ಫೋಟಗೊಂಡು ಮುಂದೆ ಬರುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರ ಗ್ರಾಮದ ಬಳಿ ನಡೆದಿದೆ. ಮೃತರೆಲ್ಲರೂ ಒಂದೇ ಕುಟುಂಬದರಾಗಿದ್ದು, ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾಗಿದ್ದಾರೆ ಮೃತರನ್ನು ಜಾಫರ್ ಸಾಬ್(60), ಮುಸ್ತಫಾ ಸಾಹೇಬ್ (36) ಶೊಹೇಬ್(06) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇನ್ನೂ ಮೂವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಎಸ್‌ಡಿಎಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ […]
ಕಾರ್ಕಳ: ಯುವತಿಯನ್ನು ಅಪಹರಿಸಿ ಅತ್ಯಾಚಾರ; ಇಬ್ಬರು ಆರೋಪಿಗಳ ಬಂಧನ

ಕಾರ್ಕಳದಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಆರೋಪಿಗಳ ಬಂಧನದ ಕುರಿತು ಕುದ್ದು ಉಡುಪಿ ಜಿಲ್ಲಾ ಎಸ್ಪಿ ಕೆ ಅರುಣ್ ಮಾಹಿತಿಯನ್ನು ನೀಡಿದ್ದಾರೆ. ಪ್ರಕರಣದ ಆರೋಪಿಗಳಾದ ಅಲ್ತಾಫ್ ಹಾಗೂ ಇನ್ನೋರ್ವನನ್ನು ಬಂಧಿಸಲಾಗಿದ್ದು ಇವರು ಕೃತ್ಯಕ್ಕೆ ಬಳಸಿದ ಎರಡು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಸಂತ್ರಸ್ತೆ ಮತ್ತು ಆರೋಪಿ ಅಲ್ತಾಫ್ ಮೂರು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದ ಮೂಲಕ ಪರಸ್ಪರ ಪರಿಚಯವಾಗಿದ್ದರು. ಅಲ್ತಾಫ್ ಶುಕ್ರವಾರ ಸಂತ್ರಸ್ತೆಗೆ ಕರೆ ಮಾಡಿ ಒಂದು ಕಡೆಗೆ […]
ಪ್ರಾಂಶುಪಾಲರು ಬೈದಿದ್ದಕ್ಕೆ ಕಟ್ಟಡದಿಂದ ಜಿಗಿದ ವಿದ್ಯಾರ್ಥಿನಿ; ಸ್ಥಿತಿ ಗಂಭೀರ

ಪ್ರಾಂಶುಪಾಲರು ಬೈದರೆಂದು ಮನನೊಂದು ವಿದ್ಯಾರ್ಥಿನಿಯೊಬ್ಬಳು ಶಾಲಾ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ವಿಫಲ ಪ್ರಯತ್ನ ಮಾಡಿದ್ದಾಳೆ. ಈ ಘಟನೆ ಬೆಂಗಳೂರಿ ಬಾಪೂಜಿನಗರದ A1 ಫಹಾದ್ ಶಾಲೆಯಲ್ಲಿ ನಡೆದಿದೆ. ಕಟ್ಟಡದಿಂದ ಜಿಗಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿದೆ. ತಕ್ಷಣವೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.