Breaking News :

ಬಿ.ಎಸ್.ಸಿ ಇನ್ ಫ್ಯಾಷನ್ ಡಿಸೈನ್ ಪದವಿಯಲ್ಲಿ ಡಿವೀನ ಸಲ್ದಾನಗೆ ಚಿನ್ನದ ಪದಕ

  ಜನವಾಹಿನಿ News ಮಡಿಕೇರಿ : ಮಂಗಳೂರು ವಿಶ್ವವಿದ್ಯಾನಿಲಯದ 2024-25 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಡೀವಿನ ಸಲ್ಡಾನ ಚಿನ್ನದ ಪದಕ ಪಡೆದು ಕೊಂಡಿದ್ದಾರೆ. ಶ್ರೀದೇವಿ ಕಾಲೇಜ್ ಆಫ್ ಫ್ಯಾಷನ್ ಡಿಸೈನ್, ಬಲ್ಲಾಳ್ ಭಾಗ್, ಮಂಗಳೂರುನಲ್ಲಿ ಬಿ.ಎಸ್.ಸಿ ಇನ್ ಫ್ಯಾಷನ್ ಡಿಸೈನ್ ವ್ಯಾಸಂಗ ಮಾಡಿದ ಇವರು ಫ್ಯಾಷನ್ ಡಿಸೈನ್ ಪದವಿ ವಿಭಾಗದಲ್ಲಿ ಅತಿ ಹೆಚ್ಚು ಅಂಕಗಳಿಸಿ ಮೊದಲ ರ್ಯಾಂಕ್ ನೊಂದಿಗೆ ಚಿನ್ನದ ಪದಕ ಪಡೆದು ಕೊಂಡಿದ್ದಾರೆ. ಡಿವೀನ ಸಲ್ದಾನ ಮೂಲತಹ ವಿರಾಜಪೇಟೆ ತಾಲೂಕಿನ ಅಪ್ಪಯ್ಯ ಸ್ವಾಮಿ […]

ಕಾಡಾನೆ ದಾಳಿಗೆ ಮೃತಪಟ್ಟ ಜಲಜಾಕ್ಷಿ ನಿವಾಸಕ್ಕೆ ಶಾಸಕ ಮಂತರ್ ಗೌಡ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

  ಜನವಾಹಿನಿ News ಮಡಿಕೇರಿ : ಕಾಡಾನೆ ದಾಳಿಯಿಂದ ಮೃತಪಟ್ಟ ಜಲಜಾಕ್ಷಿ ಅವರ ಬಾಳೆಗುಂಡಿ ಹಾಡಿ ನಿವಾಸಕ್ಕೆ ಶಾಸಕ ಡಾ.ಮಂತರ್ ಗೌಡ ಅವರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಇದೆ ಸಂದರ್ಭ ಮೊದಲ ಹಂತದ 5 ಲಕ್ಷ ಮೊತ್ತ ಪರಿಹಾರ ಚೆಕ್‌ ವಿತರಿಸಿದರು. ಬಳಿಕ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕರು ಕಾಡಾನೆ ಸೆರೆ ಸೇರಿದಂತೆ ಆನೆ ಹಾವಳಿ ನಿಯಂತ್ರಣ ಸಂಬಂಧ ಅರಣ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಶೀಘ್ರ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. […]

ಕಾಡಾನೆ ದಾಳಿಗೆ ಸಿಲುಕಿ ಗ್ರಾ.ಪಂ ಮಾಜಿ ಸದಸ್ಯೆ ಸಾವು : ಬಾಳೆಗುಂಡಿಯಲ್ಲಿ ಘಟನೆ

ಜನವಾಹಿನಿ News ಮಡಿಕೇರಿ : ಕಾಡಾನೆ ದಾಳಿಗೆ ಸಿಲುಕಿ ಗ್ರಾಮ ಪಂಚಾಯತಿ ಮಾಜಿ ಸದಸ್ಯೆಯೊಬ್ಬರು ಮೃತ ಪಟ್ಟಿರುವ ಘಟನೆ ಕುಶಾಲನಗರ ತಾಲೂಕು ಅರಣ್ಯ ವ್ಯಾಪ್ತಿಗೆ ಒಳಪಡುವ ಬಾಳೆಗುಂಡಿಯಲ್ಲಿ ನಡೆದಿದೆ. ಕೆಳೆದ ಅವಧಿಯಲ್ಲಿ ವಾಲ್ನೂರು ಗ್ರಾಮ ಪಂಚಾಯತಿಯ ಆಡಳಿತ ಮಂಡಳಿ ಸದಸ್ಯರಾಗಿದ್ದ , ಜಲಜಮ್ಮ ಅಲಿಯಾಸ್ ಜಲಜಾಕ್ಷಿ (54) ಎಂಬುವವರೇ ಆನೆ ದಾಳಿಗೆ ಸಿಲುಕಿ ಮೃತಪಟ್ಟ ದುರ್ದೈವಿ. ತೋಟಕ್ಕೆ ಕೆಲಸಕ್ಕೆ ತೆರಳಿ ಹಿಂತಿರುಗುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಘಟನೆಯಲ್ಲಿ ಜಲಜಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಘಟನೆ […]

ಟಿ20 ವಿಶ್ವಕಪ್ : ಭಾರತಕ್ಕೆ ಐತಿಹಾಸಿಕ ಗೆಲುವು ; ಮೂರನೇ ಬಾರಿ ಚಾಂಪಿಯನ್ಸ್ ಆದ ಟೀಂ ಇಂಡಿಯಾ

    ಜನವಾಹಿನಿ News ಅಹಮದಾಬಾದ್ :  2026ರ ಟಿ20 ವಿಶ್ವಕಪ್‌ನಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವದ ಟೀಂ ಇಂಡಿಯಾ ನ್ಯೂಜಿಲೆಂಡ್ ಅನ್ನು 96 ರನ್‌ಗಳಿಂದ ಸೋಲಿಸಿ, ಸತತ ಎರಡನೇ ಬಾರಿಗೆ ಮತ್ತು ದಾಖಲೆಯ ಮೂರನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ, ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಫೀಲ್ಡಿಂಗ್ ಆಯ್ಕೆ ಮಾಡುವ ಮೂಲಕ ಟೀಂ ಇಂಡಿಯಾವನ್ನು ಬ್ಯಾಟಿಂಗಿಗೆ ಆಹ್ವಾನಿಸಿತು. ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ 255/5 […]

ಕೊಡಗಿನಲ್ಲಿ ಏಪ್ರಿಲ್‌ 8 ರಿಂದ ಮೂರು ದಿನಗಳ ಕಾಲ ಪಾಸ್‌ಪೋರ್ಟ್‌ ಮೇಳ : ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಯದುವೀರ್ ಒಡೆಯರ್ ಮನವಿ

  ಸಂಸದರ ಮನವಿಗೆ ಸ್ಪಂದಿಸಿ ಆಯೋಜಿಸಿರುವ ವಿದೇಶಾಂಗ ಸಚಿವಾಲಯ ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲೆಯ ನಾಗರಿಕರಿಗೆ ಸಂತಸ ತರುವಂತಹ ಸುದ್ದಿ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್‌ಪೋರ್ಟ್‌ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ ಪಾಸ್‌ಪೋರ್ಟ್‌ ಕಚೇರಿ ನಿರ್ಧರಿಸಿದೆ. ಏಪ್ರಿಲ್‌ 8ರಿಂದ ಮೂರು ದಿನಗಳ ಕಾಲ ಕೊಡಗ ಜಿಲ್ಲೆಯಲ್ಲಿ ಪಾಸ್‌ಪೋರ್ಟ್‌ ಮೇಳ ನಡೆಯಲಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದ ಯದುವೀರ್‌ ಒಡೆಯರ್‌ […]

ಮಕ್ಕಂದೂರಿನಲ್ಲಿ ಕಾಲೋನಿ ರಸ್ತೆ ಅಭಿವೃದ್ಧಿಗೆ ಶಾಸಕ ಮಂತರ್ ಗೌಡರವರಿಂದ ಚಾಲನೆ

ಜನವಾಹಿನಿ News ಮಡಿಕೇರಿ : ಮಡಿಕೇರಿ ತಾಲೂಕಿನ ಮಕ್ಕಂದೂರು ಹೆಮ್ಮೆತಾಳ್ ಪರಿಶಿಷ್ಟ ಪಂಗಡದ ಕಾಲೋನಿಗೆ ರೂ.10 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಡಾ. ಮಂತರ್ ಗೌಡ ಶನಿವಾರ ಚಾಲನೆ ನೀಡಿದರು. ಮಕ್ಕಂದೂರು ಗಾಳೀಬೀಡು ಮಾದಾಪುರ ಶಾಂತಳ್ಳಿ ಪಂಚಾಯತ್ ವ್ಯಾಪ್ತಿಯ ಗ್ರಾಮಗಳು ವಿಭಿನ್ನವಾಗಿದ್ದು ಮುಖ್ಯ ರಸ್ತೆಯಿಂದ ದೂರದಲ್ಲಿ ಒಂದೊಂದು ಮನೆಗಳು ಇದ್ದು ರಸ್ತೆ ಮತ್ತು ವಿದ್ಯುತ್ ಸೌಕರ್ಯ ಗಳ ಸಮಸ್ಯೆಗಳನ್ನು ಅತಿಯಾಗಿ ಎದುರಿಸುತ್ತಿರುವುದು ಗಮನಕ್ಕೆ ಬಂದಿದ್ದು ಇವುಗಳ ಪರಿಹಾರಕ್ಕೆ ವಿಶೇಷ ಕಾಳಜಿವಹಿಸಲಾಗುವುದು ಎಂದು ಮಂತರ್ ಗೌಡ […]

2025 ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ : ಮಡಿಕೇರಿಯ ಕಟ್ರತನ ಲಲಿತ ಅಯ್ಯಣ್ಣ  ಸೇರಿದಂತೆ ಮೂವರಿಗೆ ಪ್ರಶಸ್ತಿ

  ಜನವಾಹಿನಿ News ಮಡಿಕೇರಿ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2025 ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟಿಸಲಾಗಿದೆ. ಇದೇ ಮಾರ್ಚ್ 14 ರಂದು ಮಂಗಳೂರಿನ ಊರ್ವ ಸ್ಟೋರ್ ಸಮೀಪದಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು 50 ಸಾವಿರ ರೂ.ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ […]

ಮಂಗಳೂರು-ಮಡಿಕೇರಿ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ : ಬೆಟ್ಟತ್ತೂರಿನಲ್ಲಿ ಕಾಡಾನೆ ದಾಳಿಗೆ ಮೃತ ಪಟ್ಟ ವಿದ್ಯಾರ್ಥಿನಿಗೆ ನ್ಯಾಯ ಕೊಡಿಸಲು ಆಗ್ರಹ

ಅರಣ್ಯ ಅಧಿಕಾರಿಗಳ ಸಹಿ ಇಲ್ಲದ ಪರಿಹಾರದ ಚೆಕ್ಕ್ ವಿತರಣೆ :ಬೇಜವಾಬ್ದಾರಿ ಪ್ರದರ್ಶಿಸಿದ ಅಧಿಕಾರಿಗಳ ವಿರುದ್ಧ ಜನಾಕ್ರೋಶ ಜನವಾಹಿನಿ News ಮಡಿಕೇರಿ : ಶನಿವಾರ ಸಂಜೆ ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ಆನೆ ದಾಳಿಗೆ ಬೆಟ್ಟತ್ತೂರು ಗ್ರಾಮದ ಗಿರೀಶ್ ಅವರ ಪುತ್ರಿ ಪೂಜಾ(17) ಮೃತ ಪಟ್ಟ ಘಟನೆಗೆ ಸಂಬಂಧಿಸಿದಂತೆ ಭಾನುವಾರ ಬೆಟ್ಟತೂರು ಗ್ರಾಮಸ್ಥರು ಮಡಿಕೇರಿ ಮಂಗಳೂರು ಹೆದ್ದಾರಿ ಮದೆ ಗ್ರಾಮದಲ್ಲಿ ಅರಣ್ಯ ಅಧಿಕಾರಿಗಳ ವಿರುದ್ಧ ರಸ್ತೆ ತಡೆ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಅರಣ್ಯ ಅಧಿಕಾರಿಗಳು ಕುಟುಂಬಸ್ಥರಿಗೆ ಪರಿಹಾರದ ಚೆಕ್ಕನ್ನು […]

ಆನೆ ದಾಳಿಗೆ ವಿದ್ಯಾರ್ಥಿನಿ ಬಲಿ : ಮಡಿಕೇರಿ ಸಮೀಪದ ಬೆಟ್ಟತ್ತೂರಿನಲ್ಲಿ ಘಟನೆ 

ಜನವಾಹಿನಿ News ಮಡಿಕೇರಿ : ಮಡಿಕೇರಿ ತಾಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಶಾಲಾ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಶನಿವಾರ ಸಂಜೆ ಸಂಭವಿಸಿದೆ. ಮೃತ ಬಾಲಕಿಯನ್ನು ಮದೆ ಬೆಟ್ಟತ್ತುರು ಗ್ರಾಮದ ಗಿರೀಶ್ ಅವರ ಪುತ್ರಿ ಪೂಜಾ (16) ಎಂದು ಗುರುತಿಸಲಾಗಿದೆ. ಮಡಿಕೇರಿಯ ಸಂತ ಮೈಕಲರ ಶಾಲೆಯ ಪ್ರಥಮ PUC ಯಲ್ಲಿ ವ್ಯಾಸಂಗ ಮಾಡುತಿದ್ದ ಪೂಜಾ ನಿನ್ನೆ ಸಂಜೆ 5:30 ಕ್ಕೆ ಬೆಟ್ಟತ್ತೂರಿನ ತನ್ನ ಮನೆಗೆ ಬಸ್ಸಿನಲ್ಲಿ ಬಂದು ಇಳಿದು ಸ್ವಲ್ಪ ದೂರ ನಡೆಯುವಾಗ ಏಕಏಕಿ […]

ಕೊಡವ ಸಾಹಿತ್ಯ-ಸಂಸ್ಕೃತಿರ ಅಂದೋಳ : ಜಿಲ್ಲೆ ಚಿಕ್ಕದು, ಕೊಡುಗೆ ದೊಡ್ಡದು: ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ

  ಜನವಾಹಿನಿ News ಮಡಿಕೇರಿ : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯ-ಸಂಸ್ಕೃತಿ, ಭಾಷೆಯ ರಕ್ಷಣೆ ಮುಖ್ಯವಾದ ಜವಾಬ್ದಾರಿಯಾಗಿದ್ದು, ಸತ್ಕಾರಣಕ್ಕಾಗಿ ಸರ್ಕಾರ ಅಕಾಡೆಮಿ ಗಳನ್ನು ರಚಿಸಿದೆ. ಇದಕ್ಕೆ ಪೂರಕವಾಗಿ ಕೊಡವ ಸಾಹಿತ್ಯ ಅಕಾಡೆಮಿಯು ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯರವರ ನೇತೃತ್ವದಲ್ಲಿ ಕಾರ್ಯಕ್ರಮಗಳನ್ನು ಯಶಸ್ಸಾಗಿ ನಡೆಸುತ್ತಿದ್ದು, ಸರ್ವ ಸದಸ್ಯರ ಸಹಕಾರ ಎದ್ದು ಕಾಣುತ್ತಿದೆ. ಎಲ್ಲಾರೂ ಒಗ್ಗಟ್ಟಾಗಿ ಕೆಲಸ ಮಾಡಿದರೆ ಯಶಸ್ಸು ಖಂಡಿತಾ ಎಂದು ಶಾಸಕರು ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಹೇಳಿದರು. ಕರ್ನಾಟಕ ಕೊಡವ […]