ಕಾಲೇಜು ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿ ಸಾವು ಪ್ರಕರಣಕ್ಕೆ ಟ್ವಿಸ್ಟ್; ಕಾಲೇಜು ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ ಮಾಡಿದ ಕುಟುಂಬ

ಮೈಸೂರಿನ ಹೂಟಗಳ್ಳಿಯಲ್ಲಿ ಕಾಲೇಜು ಹಾಸ್ಟೆಲ್ನಲ್ಲಿ ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತಪಟ್ಟಿರುವ ಪ್ರಕರಣ ಇದೀಗ ವಿಭಿನ್ನ ತಿರುವು ಪಡೆದುಕೊಂಡಿದೆ. ಮಗಳ ಸಾವಿಗೆ ಕಾಲೇಜು ಆಡಳಿತ ಮಂಡಳಿಯೇ ಕಾರಣವೆಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದ ಜಯಪ್ರಾರ್ಥನಾ (17) ಮೃತ ವಿದ್ಯಾರ್ಥಿನಿ. ಜಯಪ್ರಾರ್ಥನಾ ಪಿಯು ಕಾಲೇಜಿನಲ್ಲಿ ದ್ವಿತೀಯ ವರ್ಷ ವ್ಯಾಸಂಗ ಮಾಡುತಿದ್ದರು. ಊಟದ ಬಳಿಕ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ವಿಚಾರ ತಿಳಿದು ಖಾಸಗಿ ಆಸ್ಪತ್ರೆಯಲ್ಲಿ ಆಡಳಿತ ಮಂಡಳಿ ಚಿಕಿತ್ಸೆ ಕೊಡಿಸಿತ್ತು. ಆದರೆ ಅನಾರೋಗ್ಯದ ವಿಚಾರವನ್ನು ಪೋಷಕರ ಗಮನಕ್ಕೆ ತರದೇ […]
ರಾಯಚೂರು: ದರ್ಗಾವೊಂದರಲ್ಲಿ ಕಂಡು ಬಂದ ಅಚ್ಚರಿಯ ಬೆಳವಣಿಗೆ; ಮೂಕ ವಿಸ್ಮಿತರಾದ ಜನ

ರಾಯಚೂರು: ದರ್ಗಾದಲ್ಲಿ ಅಚ್ವರಿಯ ಬೆಳವಣಿಗೆ ನಡೆದಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಆನಾಹೊಸೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶರಣರ ಬಾವಿ ದರ್ಗಾ ಶರೀಫ್‌ನಲ್ಲಿರುವ 3 ಮಜಾರಗಳು ಉಸಿರಾಡುತ್ತಿವೆ. ನೂರಾರು ವರ್ಷಗಳ ಧರ್ಮ ಗುರುಗಳ ಗೋರಿ ಉಸಿರಾಟ ಕುತೂಹಲ ಮೂಡಿಸಿದೆ. ಪ್ರತೀ ವರ್ಷ ಹಜರತ್ ಸೈಯದ್ ಶಾ ನಸರುದ್ದೀನ್ ನಬಿರಾ ಖಾದ್ರಿ ಉರುಸ್ ವೇಳೆಯೇ ಗೋರಿಗಳು ಉಸಿರಾಡುತ್ತವೆ ಎಂದು ಸ್ಥಳೀಯರು ಹೇಳುತ್ತಾರೆ. ಉರುಸ್‌ನ 40 ದಿನಗಳ ಕಾಲ ಮಾತ್ರ ಗೋರಿಗಳು ಉಸಿರಾಡುತ್ತವೆಯಂತೆ. ಗೋರಿಯ ಉಸಿರಾಟದಿಂದ ಹೂಗಳು ಪುಟಿಯುತ್ತವೆ. […]
ಪುತ್ತೂರು ಇರಿತ ಪ್ರಕರಣ; ಶಿಕ್ಷಕಿ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತ ಬಾಲಕಿ

ಪುತ್ತೂರಿನ ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬಾಲಕಿಯ ಕೈಗೆ ಇರಿತ ಪ್ರಕರಣಕ್ಕೆ ಸಂಬಂಧಿಸಿ ಶಿಕ್ಷಕಿ ವಿರುದ್ಧ ಸಂತ್ರಸ್ತ ವಿದ್ಯಾರ್ಥಿನಿ ಗಂಭೀರವಾದ ಆರೋಪವನ್ನು ಮಾಡಿದ್ದಾರೆ. ಈ ಕುರಿತು ಬಾಲಕಿಯ ಹೇಳಿಕೆಯ ವಿಡಿಯೋ ವೈರಲ್ ಆಗಿದೆ. ಆಸ್ಪತ್ರೆಯಲ್ಲಿ ಹೆಸರು ಬದಲಾಯಿಸಿ ಹೇಳುವಂತೆ ಹಾಗೂ ಕೈಗೆ ಗಾಜು ತಾಗಿ ಗಾಯವಾಗಿದೆ ಎಂದು ಹೇಳಲು ಶಿಕ್ಷಕಿ ಒತ್ತಡ ಹೇರಿದ್ದಾರೆ ಎಂದು ಬಾಲಕಿಯು ಗಂಭೀರವಾದ ಆರೋಪ ಮಾಡಿದ್ದಾಳೆ. ಈ ಹಿನ್ನೆಲೆ ಶಿಕ್ಷಕಿ ವಿರುದ್ಧ ಕ್ರಮವನ್ನು ಕೈಗೊಳ್ಳುವಂತೆ ವ್ಯಾಪಕವಾದ ಆಗ್ರಹ ವ್ಯಕ್ತವಾಗಿದೆ. ಇದರ ಬೆನ್ನಲ್ಲಿ […]
ಪುತ್ತೂರು; ವಿದ್ಯಾರ್ಥಿನಿಗೆ ಇರಿತ ಪ್ರಕರಣ; ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಪುತ್ತೂರು; ಕೊಂಬೆಟ್ಟು ಕಾಲೇಜು ವಿದ್ಯಾರ್ಥಿನಿಗೆ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಆರೋಪಿ ವಿದ್ಯಾರ್ಥಿಯ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ ವಿದ್ಯಾರ್ಥಿನಿ ಕಾಲೇಜಿಗೆ ಹೋಗುವಾಗ ಬಂದ ಪರಿಚಯಸ್ಥ ವಿದ್ಯಾರ್ಥಿ ಆಕೆಗೆ ಪ್ರೇಮ ನಿವೇದನೆ ಮಾಡಿದ್ದಾನೆ. ಇದನ್ನು ನಿರಾಕರಿಸಿದಾಗ ಬಾಲಕಿಗೆ ಆತನ ಕೈಯ್ಯಲ್ಲಿದ್ದ ಹರಿತವಾದ ಆಯುಧದಿಂದ ಇರಿದು ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಂಗಳೂರು: ಪುಟ್ಬಾಲ್ ಆಟದ ವಿಚಾರದಲ್ಲಿ ಕಿಡ್ನಾಪ್ ಮಾಡಿ ವಿದ್ಯಾರ್ಥಿಗಳ ಮೇಲೆ ಹಲ್ಲೆ

ಮಂಗಳೂರು: ಫುಟ್ಬಾಲ್ ಆಟದ ವೇಳೆ ವಿದ್ಯಾರ್ಥಿಗಳ ನಡುವೆ ಜಗಳ ನಡೆದು, ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಎರಡು ಕಾಲೇಜಿನ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಮಂಗಳೂರಿನ ಯೆನಪೊಯ ಮತ್ತು ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳ ನಡುವೆ ಜಗಳ ನಡೆದಿದೆ. ಘಟನೆಯಲ್ಲಿ ಮಹಮ್ಮದ್ ಶುರೈ, ಮಹಮ್ಮದ್ ಅಫ್ರಾನ್, ಇಬ್ರಾಹಿಂ ಖಲೀಲ್ ಮತ್ತು ಮಹಮ್ಮದ್ ಜನ್ಮದ್ ಎಂಬ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿದ ದಿಯಾನ್, ಅನ್ನೈ, ತಸ್ಮಿನ್, ಸಲ್ಮಾನ್, ಅನಾಸ್ ಎಂಬ ವಿದ್ಯಾರ್ಥಿಗಳನ್ನು ಪೊಲೀಸರು […]
ಟೀ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೆ ಬೆದರಿಸಿ ಲಿಂಗ ಪರಿವರ್ತನೆ? ಮಂಗಳ ಮುಖಿಯರ ವಿರುದ್ಧ ಗಂಭೀರ ಆರೋಪ

ಸಿಲಿಕಾನ್ ಸಿಟಿಯಲ್ಲಿ ಮಂಗಳಮುಖಿಯರು ಟೀ ಅಂಗಡಿಯಲ್ಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದ ಯುವಕನನ್ನು ಲಿಂಗ ಪರಿವರ್ತನೆ ಮಾಡಿ ಭಿಕ್ಷಾಟನೆಗೆ ಒತ್ತಾಯಿಸಿದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಫ್ರೇಜರ್ ಟೌನ್ ನಲ್ಲಿ ಚಿತ್ರಾ, ಪ್ರೀತಿ, ಕಾಜಲ್, ಅಶ್ವಿನಿ, ಮುಗಿಲಿ ಎನ್ನುವ ಐದು ಮಂದಿ ವಿರುದ್ಧ ಕಸೀಪಾ ಅಲಿಯಾಸ್ ಮೊಹಮ್ಮದ್ ಅಬೂಬಕ್ಕರ್ ಸೇಠ್ ಪುಲಿಕೇಶಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಏನಿದೆ? ನಾನು ಮೂರು ವರ್ಷಗಳ ಹಿಂದೆ ಅಂಬೇಡ್ಕರ್ ಕಾಲೇಜ್ ಬಳಿ ಬರ್ಕತ್ ಎಂಬುವವರ ಟೀ ಅಂಗಡಿಯಲ್ಲಿ […]
ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು

ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರದ ಹೊಸ ಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಯಶವಂತ(21) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಮನೆಯ ಟೆರೇಸ್ ನಲ್ಲಿ ಬಿದ್ದಿದ್ದ ತೆಂಗಿನ ಗರಿಯನ್ನು ತೆಗೆಯಲು ತೆರಳಿದ್ದಾಗ ಅಲ್ಲೇ ಹತ್ತಿರದಲ್ಲಿ ಹಾದು ಹೋಗಿದ್ದ ಹೈಟೆನ್ಶನ್ ವಿದ್ಯುತ್ ತಂತಿಗೆ ತಗುಲಿದ್ದು, ಯಶವಂತ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿದ್ದಾರೆ. ಬಹಳ ಹೊತ್ತು ಕಳೆದರೂ ಯಶವಂತ ಕೆಳಗೆ ಬಾರದ ಕಾರಣ ಅವರ ಸಹೋದರಿ ಟೆರೇಸ್ ಗೆ ಮೇಲೇರಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ […]
ಮೂಡಾ ಹಗರಣ; ಸಿದ್ದರಾಮಯ್ಯ ವಿರುದ್ಧದ ಆರೋಪದ ಬಗ್ಗೆ ಸಹೋದರ ಹೇಳಿದ್ದೇನು ಗೊತ್ತಾ?

ಮೂಡಾ ಹಗರಣಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ವಿರುದ್ಧದ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಸಹೋದರ ಸಿದ್ದೇಗೌಡ, ನಮ್ಮಣ್ಣ ಯಾವ ತಪ್ಪೂ ಮಾಡಿಲ್ಲ. ಅವರು ರಾಜೀನಾಮೆ ಕೊಡುವುದೂ ಇಲ್ಲ. ಅವನು ಯಾವದಕ್ಕೂ ಜಗ್ಗಲ್ಲ ಎಂದು ಹೇಳಿದ್ದಾರೆ. ಮುಡಾ ಹಗರಣ ಸಂಬಂಧ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದೇಗೌಡ, ಬಿಜೆಪಿ-ಜೆಡಿಎಸ್‌ನವರ ಕೈವಾಡದಿಂದ ರಾಜ್ಯಪಾಲರು ಹೀಗೆ ಮಾಡ್ತಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಹೇಳಿದಂತೆ ಕುಣಿಯುತ್ತಿದ್ದಾರೆ ಎಂದು ಹೇಳಿದ್ದಾರೆ. ಅಷ್ಟು ಸುಲಭದಲ್ಲಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ. […]
ಬೆಳ್ತಂಗಡಿ; ನದಿಯಲ್ಲಿ ದಿಡೀರ್ ಹರಿದು ಬಂದ ಮಣ್ಣು ಮಿಶ್ರಿತ ನೀರು, ಆತಂಕಗೊಂಡ ಜನ

ಸೋಮವಾರ ಸಂಜೆ ಬೆಳ್ತಂಗಡಿ ತಾಲೂಕಿನ ಹಲವೆಡೆ ನದಿಯಲ್ಲಿ ಏಕಾಏಕಿ ಮಣ್ಣುಮಿಶ್ರಿತ ನೀರಿನ ಪ್ರವಾಹ ಬಂದಿದ್ದು ಜನರು ಆತಂಕಕ್ಕೆ ಒಳಗಾಗಿದ್ದರು. ಒಂದು ವಾರದಿಂದ ಮಳೆ ಕಡಿಮೆಯಾಗಿ ಶಾಂತವಾಗಿದ್ದ ನೇತ್ರಾವತಿ ಮತ್ತು ಮೃತ್ಯುಂಜಯ ನದಿಗಳಲ್ಲಿ ಪ್ರವಾಹದ ಪರಿಸ್ಥಿತಿ ಸೋಮವಾರ ಸಂಜೆ ಕಂಡುಬಂದಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಸೋಮವಾರ ಮಧ್ಯಾಹ್ನ ಸಾಮಾನ್ಯ ಮಳೆಯಾಗಿತ್ತು. ಆದರೆ ಸಂಜೆ 5ರ ವೇಳೆಗೆ ನದಿಗಳು ಏಕಾಏಕಿ ತುಂಬಿ ಹರಿಯ ತೊಡಗಿದವು. ಮುಂಡಾಜೆ, ಕಲ್ಮಂಜ, ಕಡಿರುದ್ಯಾವರ, ಮಿತ್ತಬಾಗಿಲು ಮೊದಲಾದ ಗ್ರಾಮಗಳ ಕಡೆ ಹೆಚ್ಚಿನ ತೋಟಗಳಿಗೆ ಪ್ರವಾಹದ ನೀರು ನುಗ್ಗಿ […]
ಬಾಂಗ್ಲಾ ಪ್ರಧಾನಿಗೆ ಆದ ಗತಿಯೇ ನಿಮಗೂ ಆಗುತ್ತದೆ; ರಾಜ್ಯಪಾಲರಿಗೆ ಎಚ್ಚರಿಸಿದ ಐವನ್ ಡಿಸೋಜಾ, ಬಿಜೆಪಿಯಿಂದ ಆಕ್ಷೇಪ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ವಿರುದ್ಧ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಮಂಗಳೂರಿನಲ್ಲಿ ಕಾಂಗ್ರೆಸ್ MLC ಐವನ್ ಡಿಸೋಜಾ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಪ್ರತಿಭಟನೆ ವೇಳೆ ಮಾತನಾಡಿದ ಐವನ್ ಡಿಸೋಜಾ, ಬಾಂಗ್ಲಾದೇಶದ ಹಿಂದಿನ ಪ್ರಧಾನಿಗೆ ಆದ ಗತಿಯೇ ನಿಮಗೂ ಆಗುತ್ತದೆ. ನೀವು ರಾಜ್ಯ ಬಿಟ್ಟು ಪಲಾಯನ ಮಾಡಬೇಕಾಗುತ್ತದೆ ಎಂದು ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರಿಗೆ ಎಚ್ಚರಿಸಿದ್ದಾರೆ. ರಾಜಭವನ ಚಲೋ ಆಂದೋಲನ ನಡೆಸುವುದು ನಮ್ಮ […]