ಕಾರ್ಕಳ ಯುವತಿ ಮೇಲಿನ ಅತ್ಯಾಚಾರ ಪ್ರಕರಣ; ಐಜಿಪಿ ಅಮಿತ್ ಸಿಂಗ್ ಪ್ರತಿಕ್ರಿಯೆ, ಪ್ರಕರಣದಲ್ಲಿನ ಗೊಂದಲದ ಬಗ್ಗೆ ಸ್ಪಷ್ಟೀಕರಣ

ಉಡುಪಿ ಜಿಲ್ಲೆಯ ಕಾರ್ಕಳದ ಹಿಂದೂ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಮಾಡಿದ ಪ್ರಕರಣದಲ್ಲಿನ ಕೆಲವು ಗೊಂದಲದ ಬಗ್ಗೆ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ. ಕಾರ್ಕಳದಲ್ಲಿ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡ ಯುವತಿಯನ್ನು ಕೇವಲ 3 ತಿಂಗಳಲ್ಲಿ ಪುಸಲಾಯಿಸಿದ ಯುವಕರಿಬ್ಬರು, ಕಾರಿನಲ್ಲಿ ಪಾರ್ಟಿ ಮಾಡುವುದಾಗಿ ಕರೆದೊಯ್ದು ಬಿಯರ್‌ನಲ್ಲಿ ಡ್ರಗ್ಸ್ ಮಿಶ್ರಣ ಮಾಡಿ ಕೊಟ್ಟು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿದ್ದಾರೆ. ಇದರಲ್ಲಿ ಯುವಕ ಅಲ್ತಾಫ್ ಅತ್ಯಾಚಾರ ಮಾಡಿದ್ದು, ಇದು ಗ್ಯಾಂಗ್ ರೇಪ್ ಅಲ್ಲವೆಂದು ಉಡುಪಿ ಪಶ್ಚಿಮ […]
ಭೀಕರ ಅಪಘಾತ; ಒಂದೇ ಕುಟುಂಬದ ಮೂವರು ದುರ್ಮರಣ

ಜಾಫರ್,ಮುಸ್ತಫಾ, ಶೊಹೇಬ್ ಮೃತರು. ಓಮ್ನಿ ಕಾರಿನ ಟಯರ್ ಸ್ಫೋಟಗೊಂಡು ಮುಂದೆ ಬರುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರ ಗ್ರಾಮದ ಬಳಿ ನಡೆದಿದೆ. ಮೃತರೆಲ್ಲರೂ ಒಂದೇ ಕುಟುಂಬದರಾಗಿದ್ದು, ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾಗಿದ್ದಾರೆ ಮೃತರನ್ನು ಜಾಫರ್ ಸಾಬ್(60), ಮುಸ್ತಫಾ ಸಾಹೇಬ್ (36) ಶೊಹೇಬ್(06) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇನ್ನೂ ಮೂವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಎಸ್‌ಡಿಎಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ […]
ಕಾರ್ಕಳ: ಯುವತಿಯನ್ನು ಅಪಹರಿಸಿ ಅತ್ಯಾಚಾರ; ಇಬ್ಬರು ಆರೋಪಿಗಳ ಬಂಧನ

ಕಾರ್ಕಳದಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಆರೋಪಿಗಳ ಬಂಧನದ ಕುರಿತು ಕುದ್ದು ಉಡುಪಿ ಜಿಲ್ಲಾ ಎಸ್ಪಿ ಕೆ ಅರುಣ್ ಮಾಹಿತಿಯನ್ನು ನೀಡಿದ್ದಾರೆ. ಪ್ರಕರಣದ ಆರೋಪಿಗಳಾದ ಅಲ್ತಾಫ್ ಹಾಗೂ ಇನ್ನೋರ್ವನನ್ನು ಬಂಧಿಸಲಾಗಿದ್ದು ಇವರು ಕೃತ್ಯಕ್ಕೆ ಬಳಸಿದ ಎರಡು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಸಂತ್ರಸ್ತೆ ಮತ್ತು ಆರೋಪಿ ಅಲ್ತಾಫ್ ಮೂರು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದ ಮೂಲಕ ಪರಸ್ಪರ ಪರಿಚಯವಾಗಿದ್ದರು. ಅಲ್ತಾಫ್ ಶುಕ್ರವಾರ ಸಂತ್ರಸ್ತೆಗೆ ಕರೆ ಮಾಡಿ ಒಂದು ಕಡೆಗೆ […]
ಪ್ರಾಂಶುಪಾಲರು ಬೈದಿದ್ದಕ್ಕೆ ಕಟ್ಟಡದಿಂದ ಜಿಗಿದ ವಿದ್ಯಾರ್ಥಿನಿ; ಸ್ಥಿತಿ ಗಂಭೀರ

ಪ್ರಾಂಶುಪಾಲರು ಬೈದರೆಂದು ಮನನೊಂದು ವಿದ್ಯಾರ್ಥಿನಿಯೊಬ್ಬಳು ಶಾಲಾ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ವಿಫಲ ಪ್ರಯತ್ನ ಮಾಡಿದ್ದಾಳೆ. ಈ ಘಟನೆ ಬೆಂಗಳೂರಿ ಬಾಪೂಜಿನಗರದ A1 ಫಹಾದ್ ಶಾಲೆಯಲ್ಲಿ ನಡೆದಿದೆ. ಕಟ್ಟಡದಿಂದ ಜಿಗಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿದೆ. ತಕ್ಷಣವೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯಂತ್ರಕ್ಕೆ ಸಿಕ್ಕಿ ಸಂಪೂರ್ಣವಾಗಿ ಕಟ್ ಆಗಿದ್ದ ಕೈಯನ್ನು ಜೋಡಿಸಿದ ವೈದ್ಯರು; ಭಾರೀ ಪ್ರಶಂಸೆಗೆ ಕಾರಣವಾದ ಪ್ರಕರಣ

ಶಿವಮೊಗ್ಗದ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಟ್ ಆಗಿರುವ ಮುಂಗೈಯನ್ನು ಯಶಸ್ವಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಸರಿಪಡಿಸಲಾಗಿದೆ. ಶಿಕಾರಿಪುರ ತಾಲೂಕಿನ ಮಿಲ್ ಒಂದರಲ್ಲಿ ಕೆಲಸ ಮಾಡುವ ವೇಳೆ ಕಾರ್ಮಿಕನ ಮುಂಗೈ ಸಂಪೂರ್ಣವಾಗಿ ಕಟ್ ಆಗಿದೆ. ಕೂಡಲೇ ತುಂಡಗಿದ್ದ ಮುಂಗೈಯನ್ನು ಐಸ್ ಬಾಕ್ಸ್ ನಲ್ಲಿ ಇಟ್ಟುಕೊಂಡು ಆಸ್ಪತ್ರೆಗೆ ಬರಲಾಗಿದೆ. ತಕ್ಷಣಕ್ಕೆ ಕಾರ್ಯ ಪ್ರವೃತ್ತರಾಗಿದ್ದ ವ್ಯಾಸ್ಕ್ಯುಲರ್ ಸರ್ಜನ್ ಡಾ.ಚೇತನ್ ಹಾಗೂ ಮೂಳೆ ರೋಗ ತಜ್ಞ ಡಾ. ಮಂಜುನಾಥ್ ನೇತೃತ್ವದ ತಂಡ ಸತತ ಏಳು ಗಂಟೆ ಶಸ್ತ್ರ ಚಿಕಿತ್ಸೆಯಲ್ಲಿ ಮುಂಗೈನ ಮಾಂಸ […]
ಹಲ್ಲೆಯಿಂದ ಮನನೊಂದು ಯುವಕನೋರ್ವ ಆತ್ಮಹತ್ಯೆ

ತಂದೆ ಮಾಡಿದ್ದ ಸಾಲಕ್ಕೆ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ಭದ್ರಾವತಿಯ ಪೇಪರ್ ಟೌನ್ ಬಡಾವಣೆಯಲ್ಲಿ ನಡೆದಿದ್ದು, ಘಟನೆಯಲ್ಲಿ ಮನನೊಂದು ಹಲ್ಲೆಗೊಳಗಾದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾನೆ. ಸ್ವೀಪನ್ ತಂದೆ ಜೋಸೆಫ್ ಅವರು ಪರಶುರಾಮ್ ಎಂಬುವರ ಬಳಿ 2 ಲಕ್ಷ ರೂ. ಸಾಲ ಪಡೆದಿದ್ದರು. ಸಾಲ ಪಡೆದುಕೊಂಡು ತೀರಿಸಲಾಗದೇ ಜೋಸೆಫ್ ಮನೆ ಬಿಟ್ಟು ಹೊರ ರಾಜ್ಯಕ್ಕೆ ತೆರಳಿದ್ದರು. ಸಾಲ ವಸೂಲಿಗಾಗಿ ಸ್ಟೀಪನ್ ಗೆ ಕರೆದುಕೊಂಡು ಹೋಗಿ ಪರಶುರಾಮ ಹಲ್ಲೆ ನಡೆಸಿದ್ದರು. ಹಲ್ಲೆಯಿಂದ ಮನನೊಂದ ಸ್ಟೀಪನ್ ಮನೆಗೆ […]
ಉಡುಪಿ: ಮಹಿಳೆಯ ಬರ್ಬರ ಕೊಲೆ, ಪತಿಯೇ ಕೃತ್ಯ ನಡೆಸಿರುವ ಶಂಕೆ

ಉಡುಪಿ;8 ತಿಂಗಳ ಹಿಂದೆ ವಿವಾಹವಾಗಿದ್ದ ಮಹಿಳೆಯೋರ್ವರು ದಾರುಣವಾಗಿ ಕೊಲೆಗೀಡಾದ ಘಟನೆ ಸಾಲಿಗ್ರಾಮದಲ್ಲಿ ಸಂಭವಿಸಿದೆ. ಮೂಲತಃ ಕೊಪ್ಪಳದ ನಿವಾಸಿ ಜಯಶ್ರೀ ಹತ್ಯೆಗೀಡಾದವರು. ಜಯಶ್ರೀಗೆ ಗುಂಡ್ಮಿ ಗ್ರಾಮದ ಕಿರಣ್ ಉಪಾಧ್ಯ ಅವರೊಂದಿಗೆ 8 ತಿಂಗಳ ಹಿಂದೆ ವಿವಾಹವಾಗಿತ್ತು. ವಿವಾಹದ ನಂತರ ಇವರಿಬ್ಬರು ಕಾರ್ಕಡದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆದರೆ ಇಂದು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಜಯಶ್ರಿಗೆ ಕೌಟುಂಬಿಕ ಕಲಹದಿಂದ ಪತಿ ಕಿರಣ್ ಹತ್ಯೆ ನಡೆಸಿದ್ದಾನೆ ಎನ್ನಲಾಗಿದ್ದು, ಕೋಟ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ರಾಜ್ಯಪಾಲರನ್ನು ವಾಪಾಸ್ಸು ಕರೆಸಿಕೊಳ್ಳುವಂತೆ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ರಾಷ್ಟ್ರಪತಿಗಳಿಗೆ ಒಮ್ಮತದ ಒತ್ತಾಯ

ರಾಜ್ಯ ಸರ್ಕಾರದ ವಿರುದ್ಧ ಪ್ರಾಸಿಕ್ಯೂಷನ್ ಅಸ್ತ್ರ ಪ್ರಯೋಗಿಸುತ್ತಿರುವ ರಾಜ್ಯಪಾಲ ಗೆಹ್ಲೂಟ್ ಅವರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕೆಂದು ಆಗ್ರಹಿಸಿ ರಾಷ್ಟ್ರಪತಿ ಬಳಿಗೆ ನಿಯೋಗ ಕೊಂಡೊಯ್ಯಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆಗ್ರಹಿಸಿದೆ. ಈ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ರಾಷ್ಟ್ರಪತಿ ಬಳಿಗೆ ನಿಯೋಗ ಒಯ್ಯಬೇಕು ಎಂಬ ಬಗ್ಗೆ ಹೈಕಮಾಂಡ್ ಜತೆ ಶುಕ್ರವಾರ ಚರ್ಚಿಸುವೆ. ಹೈಕಮಾಂಡ್ ಸಲಹೆಯಂತೆ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ. ಪ್ರಾಸಿಕ್ಯೂಷನ್ ವಿಚಾರದಲ್ಲಿ ವಿವೇಚನಾರಹಿತ ನಿರ್ಧಾರ ಹಾಗೂ ತಾರತಮ್ಯ ಧೋರಣೆ ಅನುಸರಿಸಿರುವ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ರಾಷ್ಟ್ರಪತಿಗಳ ಬಳಿಗೆ ನಿಯೋಗ […]
ವಾಲ್ಮಿಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ; ಚಾರ್ಜ್ ಶೀಟ್ ನಲ್ಲಿ ಸ್ಪೋಟಕ ಅಂಶಗಳು ಉಲ್ಲೇಖ

ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಶಿವಮೊಗ್ಗ ಕೋರ್ಟ್ ಗೆ 300ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ವರದಿಯಲ್ಲಿ ಮಹತ್ವದ ಅಂಶಗಳು ಉಲ್ಲೇಖಿಸಲಾಗಿದೆ. ಚಂದ್ರಶೇಖರ್ ಅವರು ಒತ್ತಡದಿಂದ ಮತ್ತು ಭಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಿಐಡಿ ಅಧಿಕಾರಿಗಳು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ. ಚಂದ್ರಶೇಖರ್ ಆತ್ಮಹತ್ಯೆಗೆ ನಿಗಮದ ಎಂ.ಡಿ. ಪದ್ಮನಾಭನ್ ಮತ್ತು ಪರಶುರಾಮ್ ಕಾರಣ ಎಂದು ಚಾರ್ಜ್ ಶೀಟ್ ವರದಿಯಲ್ಲಿ ಉಲ್ಲೇಖಿಸಲಾಗಿದ್ದು, ಚಂದ್ರಶೇಖರ್ ಅವರು ಕೂಡ ನಿಗಮದ ಹಗರಣದಲ್ಲಿ ಹಣವನ್ನು ಪಡೆದಿದ್ದರು […]
ಸರಕಾರ ಕಳುಹಿಸಿದ 6 ಮಸೂದೆಗಳನ್ನು ರಿಜೆಕ್ಟ್ ಮಾಡಿದ ರಾಜ್ಯಪಾಲರು!

ಮಂಗಳೂರು: ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷ ಮತ್ತೆ ತಾರಕಕ್ಕೇರುವ ಎಲ್ಲಾ ಲಕ್ಷಣಗಳು ಕಂಡು ಬಂದಿದೆ. ರಾಜ್ಯಪಾಲರು ಆಗಸ್ಟ್ ಮಾಸದಲ್ಲಿ ಆರು ಪ್ರಮುಖ ವಿಧೇಯಕಗಳನ್ನು ಹೆಚ್ಚಿನ ಮಾಹಿತಿ ಕೋರಿ ರಾಜ್ಯ ಸರ್ಕಾರಕ್ಕೆ ಹಿಂತಿರುಗಿಸಿದ್ದಾರೆ. ಕರ್ನಾಟಕ ಸಾರ್ವಜನಿಕ ಪರೀಕ್ಷಾ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ತಡೆಯುವ ಕ್ರಮಗಳು) ವಿಧೇ ಯಕ, ಕರ್ನಾಟಕ ಧಾರ್ಮಿಕ ದತ್ತಿ (ತಿದ್ದುಪಡಿ) ವಿಧೇಯಕ, ಕರ್ನಾಟಕ ಟೌನ್ ಅಂಡ್ ಕಂಟ್ರಿ ಪ್ಲಾನಿಂಗ್ (ತಿದ್ದುಪಡಿ) ವಿಧೇಯಕಗಳನ್ನು ಎರಡನೇ ಬಾರಿಗೆ ಹಿಂದಕ್ಕೆ ಕಳುಹಿಸಲಾಗಿದೆ. ಮುಖ್ಯಮಂತ್ರಿಗಳ ಕಾರ್ಯದರ್ಶಿ ಹುದ್ದೆಗೆ […]