Breaking News :

ಮೌಲಾನ ಮೇಲೆ ಹಲ್ಲೆ; ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ ಜನ

ಬಾಗಲಕೋಟೆ : ತರಕಾರಿ ಮಾರುಕಟ್ಟೆಯಲ್ಲಿ ನಡೆದ ಸಣ್ಣ‌ ಜಗಳ, ವಿಕೋಪಕ್ಕೆ ತಿರುಗಿ ಮೌಲಾನಾ ಮೇಲೆ‌ ಹಲ್ಲೆ ನಡೆಸಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮೌಲಾನಾ ಮೇಲೆ‌ ಕಾರ್ತಿಕ‌ ಮತ್ತು ಪ್ರೀತಮ್, ನಾಗರಾಜ ಎಂಬುವವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ,‌ ಮುಸ್ಲಿಂ ಸಮುದಾಯದ ಪ್ರಮುಖರು, ರಾತ್ರಿ ನವನಗರ‌ ಪೊಲೀಸ್ ಠಾಣೆ ಎದುರು ಜಮಾಯಿಸಿ ಆಕ್ರೋಶ ಹೊರ ಹಾಕಿದ್ದಾರೆ. ಮುಸ್ಲಿಂ‌ ಮುಖಂಡರನ್ನು ಪೊಲೀಸರು ಸಮಾಧಾನಪಡಿಸಿದ್ದು, ಆರೋಪಿಗಳಾದ ಕಾರ್ತಿಕ‌ ಮತ್ತು ಪ್ರೀತಮ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಗರಾಜ ಎಂಬಾತ […]

ವಿಟ್ಲ; ಉರಿಮಜಲು ಬಳಿ ಆಟೋ ಚಾಲಕನಿಗೆ ಚೂರಿ ಇರಿತ ಪ್ರಕರಣ; ತನಿಖೆಯ ವೇಳೆ ಕಾರಣ ಬಯಲು

ವಿಟ್ಲದ ಉರಿಮಜಲು ಎಂಬಲ್ಲಿ ಹಾಡಹಗಲೇ ರಿಕ್ಷಾ ಚಾಲಕನಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಮಾಹಿತಿ ಲಭ್ಯವಾಗಿದೆ. ಎಂಎಂಎಸ್ ಆಟೋ ಚಾಲಕ ಶರೀಫ್ ಗೆ ಕಾರ್ಯಡಿ ನಿವಾಸಿ ಆಪೀ ಚೂರಿಯಿಂದ ಇರಿದಿದ್ದ. ಹುಡುಗಿ ವಿಚಾರಕ್ಕೆ ಸಂಬಂಧಿಸಿ ಶರೀಫ್ ಜೊತೆ ತಗಾದೆಯನ್ನು ತೆಗೆದ ಆಫೀ ಬಳಿಕ ಚೂರಿಯಿಂದ ಇರಿದಿದ್ದಾನೆ ಎಂದು ಹೇಳಲಾಗಿದೆ. ಇಡ್ಕಿದು ಪಂಚಾಯತ್ ಎದುರಲ್ಲಿ ಈ ಘಟನೆ ಸಂಭವಿಸಿತ್ತು. ಗಾಯಗೊಂಡಿರುವ ಶರೀಫ್ ನ್ನು ಸ್ಥಳೀಯರು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ […]

ರಾಜ್ಯಪಾಲ ಆಗೋಕೆ ನೀನು ನಾಲಾಯಕ್; ಗೆಹ್ಲೂಟ್ ವಿರುದ್ಧ ಕಾಂಗ್ರೆಸ್ ಶಾಸಕ ತೀವ್ರ ವಾಗ್ಧಾಳಿ

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದಕ್ಕೆ ಕಾಂಗ್ರೆಸ್ ನಿಂದ ಭಾರಿ ವಿರೋಧ ವ್ಯಕ್ತವಾಗಿದೆ. ರಾಜ್ಯಪಾಲರ ನಿಲುವನ್ನು ವಿರೋಧಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆ ವ್ಯಕ್ತವಾಗಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ  ಕಾಂಗ್ರೆಸ್ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ರಾಜ್ಯಪಾಲರನ್ನು ಟೀಕಿಸುವ ಭರದಲ್ಲಿ ನಾಲಿಗೆ ಹರಿಬಿಟ್ಟಿದ್ದಾರೆ. ಸುಪ್ರೀಂ ಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡ ಅಯೋಗ್ಯ ಅರ್ಜಿ ಕೊಡ್ತಾನೆ. ಅವನ ಅರ್ಜಿ ಇಟ್ಕೊಂಡು ನೋಟಿಸ್ ಕೊಡ್ತಿರಲ್ಲಪ್ಪ. ರಾಜ್ಯಪಾಲ ಆಗೋಕೆ ನೀನು ನಾಲಾಯಕ್ […]

ಪ್ರಾಸಿಕ್ಯೂಷನ್​ಗೆ ಅನುಮತಿ; ಸಿದ್ದರಾಮಯ್ಯ ಮುಂದಿನ ನಡೆಯೇನು?

ಮುಡಾ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ನಿನ್ನೆ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮೋದನೆ ನೀಡಿದ್ದಾರೆ. ಇದರ ಬೆನ್ನಲ್ಲಿ ದೂರುದಾರರ ದೂರಿಗೆ ತೂಕ ಬಂದಿದೆ. ಇದೀಗ ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಲ್ಲಿ ಇದನ್ನು ಪ್ರಶ್ನಿಸುವ ಅಧಿಕಾರವಿದೆ. ಈ ಪ್ರಕರಣದ ವಿಚಾರಣೆ ನಡೆಸಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆಯೂ ಹಲವಾರು ಆಯ್ಕೆಗಳಿವೆ. ಮೇಲ್ನೋಟಕ್ಕೆ ತನಿಖೆಗೆ ಅರ್ಹ ಎಂದು ಕಂಡು ಬಂದರೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅದೇಶ ನೀಡಬಹುದು. ನ್ಯಾಯಾಲಯದ ಮುಂದೆ ಹಾಜರಾಗಲು ಮುಖ್ಯಮಂತ್ರಿಗಳಿಗೆ ಸಮನ್ಸ್‌ ನೀಡಬಹುದು. ಈ ದೂರಿನಲ್ಲಿ ಯಾವುದೇ ಹುರುಳಿಲ್ಲ […]

ಕ್ಷೌರ ಮಾಡುವ ವಿಚಾರದಲ್ಲಿ ಗಲಾಟೆ: ಓರ್ವನ ಕೊಲೆ

ಕೊಪ್ಪಳ: ಕ್ಷೌರ ಮಾಡುವ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ದಲಿತರೊಬ್ಬರನ್ನು ಕೊಲೆ ಮಾಡಿರುವ  ಘಟನೆ ಯಲಬುರ್ಗಾದ ಸಂಗನಾಳದಲ್ಲಿ ನಡೆದಿದೆ. ಯಮನೂರಸ್ವಾಮಿ ಬಂಡಿಹಾಳ ಕೊಲೆಯಾದ ವ್ಯಕ್ತಿಯಾಗಿದ್ದಾರೆ. ಕ್ಷೌರಿಕ ಮುದುಕಪ್ಪ ಹಡಪದ ಕೊಲೆ ಆರೋಪಿಯಾಗಿದ್ದಾನೆ. ಕಟಿಂಗ್ ಮಾಡುವ ಕತ್ತರಿಯಿಂದ ಚುಚ್ಚಿ ಕೊಲೆ ಮಾಡಲಾಗಿದೆ. ನಿನ್ನೆ ಕಟಿಂಗ್ ಮಾಡಿಸಿಕೊಳ್ಳಲು ಯಮನೂರಸ್ವಾಮಿ ಬಂಡಿಹಾಳ ಕಟಿಂಗ್ ಶಾಪ್​ಗೆ ಬಂದಿದ್ದರು.ಈ ವೇಳೆ ಕ್ಷೌರಿಕ ಮುದಕಪ್ಪ ಹಡಪದ ಹಾಗೂ ಯಮನೂರಸ್ವಾಮಿ ಬಂಡಿಹಾಳ ನಡುವೆ ಜಗಳ ಶುರುವಾಗಿತ್ತು. ಆಗ ಮುದಕಪ್ಪ ತನ್ನ ಕೈಯಲ್ಲಿದ್ದ ಕತ್ತರಿಯಿಂದ ಚುಚ್ಚಿ ಕೊಲೆ ಮಾಡಿದ್ದಾನೆ ಎಂಬ […]

ಸರಕಾರಿ ಬಸ್ & ಕಾರು ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ದುರ್ಮರಣ

ಗದಗ: ಸರ್ಕಾರಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ(45), ಮಗಳು ಐಶ್ವರ್ಯ (16), ಮಗ ವಿಜಯ(12) ಮೃತ ದುರ್ದೈವಿಗಳು. ಮೃತ ಕುಟುಂಬ ಶ್ರಾವಣ ಮಾಸದ ನಿಮಿತ್ಯ ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟ್ಟಿತ್ತು. ಹೀಗಾಗಿ ಕಲ್ಲಾಪೂರ ಕಡೆಗೆ ಹೊರಟ್ಟಿದ್ದ ಕಾರು […]

ವೀಲಿಂಗ್ ಮಾಡುತ್ತಿದ್ದ ಪುಂಡರಿಂದ ಬೇಸತ್ತು ಸ್ಕೂಟರ್ ಕಿತ್ತುಕೊಂಡು ಫ್ಲೈಓವರ್ ನಿಂದ ಎಸೆದ ಜನ

ಬೆಂಗಳೂರಿನಲ್ಲಿ ರಸ್ತೆಯಲ್ಲಿ ಅಪಾಯಕಾರಿ ವೀಲಿಂಗ್  ಮಾಡುತ್ತಿದ್ದ  ಪುಂಡರ ಕೃತ್ಯದಿಂದ ಬೇಸತ್ತ ಸಾರ್ವಜನಿಕರು, ವೀಲಿಂಗ್ ಮಾಡುತ್ತಿದ್ದವರ ಸ್ಕೂಟರ್ ಗಳನ್ನು ಕಿತ್ತುಕೊಂಡು ನೆಲಮಂಗಲ ಮೇಲ್ಸೇತುವೆಯಿಂದ ಕೆಳಗೆ ಎಸೆದಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಹಿಂಬದಿ ಸವಾರರು ಸೇರಿದಂತೆ ಇಬ್ಬರು ಯುವಕರು ತಮ್ಮ ಸ್ಕೂಟರ್‌ಗಳಲ್ಲಿ ವ್ಹೀಲಿಂಗ್‌ ಮಾಡುತ್ತಿದ್ದರು. ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರಲ್ಲಿ ಒಬ್ಬ ವಾಹನವೊಂದಕ್ಕೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಸಿಟ್ಟಿಗೆದ್ದ ವಾಹನ ಸವಾರರು ಆತನ ಮತ್ತು ಮತ್ತೊಬ್ಬ ಯುವಕನ ಸ್ಕೂಟರ್​ಅನ್ನು […]

ಮೈಸೂರಿನಲ್ಲಿ ಸುಳ್ಯದ ಸಹೋದರರಿಬ್ಬರು ಆತ್ಮಹತ್ಯೆ

ಮೈಸೂರಿ‌ನಲ್ಲಿ ಸುಳ್ಯದ ಸಹೋದರರಿಬ್ಬರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸುಳ್ಯದ ಧರ್ಮಪಾಲ ಮುಂಡೋಡಿ ದಂಪತಿಯ ಪುತ್ರರಾದ ನಾಗೇಂದ್ರ ಮುಂಡೋಡಿ (39) ಸನತ್‌ ಮುಂಡೋಡಿ (36) ಮಾನಸಿಕ ಖನ್ನತೆಗೊಳಗಾಗಿ ತಮ್ಮ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಇವರ ಅಂತ್ಯಸಂಸ್ಕಾರವನ್ನು ಆ.16ರಂದು ಮೈಸೂರಿನಲ್ಲಿ  ನಡೆಸಲಾಗಿದೆ.

ಉಪ್ಪಿನಂಗಡಿ; ನೀರಿನಲ್ಲಿ ಮುಳುಗಿ ಬಾಲಕ ಮೃತ್ಯು

ಉಪ್ಪಿನಂಗಡಿ; ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯ ತುರ್ಕಳಿಕೆ ಎಂಬಲ್ಲಿ ನಡೆದಿದೆ. ಮುಸ್ತಫಾ ಎಂಬವರ ಮಗ ಮೊಹಮ್ಮದ್ ತಂಝೀರ್(14) ಮೃತ ಬಾಲಕ. ಮಧ್ಯಾಹ್ನ ಶಾಲೆಯಿಂದ ಸ್ನೇಹಿತರ ಜೊತೆ ಈಜಲು ತೆರಳಿ ಬಾಲಕ ಅವಘಢಕ್ಕೆ ಸಿಲುಕಿ ಮೃತಪಟ್ಟಿದ್ದಾನೆ. ಮುಸ್ತಫಾ ಅವರ ತಾಯಿ ಇತ್ತೀಚೆಗೆ ನಿಧನ ಹೊಂದಿದ್ದರು. ಆ ಬಳಿಕ‌ ಮುಸ್ತಫಾ ಅವರ ಸಹೋದರನ ಪತ್ನಿ ಅನಾರೋಗ್ಯದಿಂದ ನಿಧನರಾಗಿದ್ದರು. ಇದರ ಬೆನ್ನಲ್ಲೇ ತಂಝೀರ್ ಆಕಸ್ಮಿಕವಾಗಿ ನಿಧನರಾಗಿದ್ದು, ಕುಟುಂಬ ಮತ್ತಷ್ಟು ಆಘಾತಕ್ಕೆ ಒಳಗಾಗಿದೆ.      

ಪ್ರಾಸಿಕ್ಯುಷನ್ ಗೆ ಅನುಮತಿ: ರಾಜ್ಯಪಾಲರ ನಿರ್ಧಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನೆಲ್ಲಾ ಹೇಳಿದ್ರು?

ಮುಡಾ ಸೈಟ್​ ಹಂಚಿಕೆ ಹಗರಣದಲ್ಲಿ ತಮ್ಮ ವಿರುದ್ಧ ಪ್ರಾಸಿಕ್ಯುಷನ್  ಗೆ ಅನುಮತಿ ಕೊಟ್ಟಿರುವ ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ಧಾಳಿಯನ್ನು ನಡೆಸಿದ್ದಾರೆ. ಗೌರವಾನ್ವಿತ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ನನ್ನ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವುದು ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಟ್ಟ ಪಿತೂರಿಯಲ್ಲದೆ ಬೇರೇನೂ ಅಲ್ಲ. ಇದು ಪ್ರಜಾಪ್ರಭುತ್ವಕ್ಕೆ ನೇರ ಬೆದರಿಕೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ರಾಜ್ಯಪಾಲರನ್ನು ಬಿಜೆಪಿ ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ನನ್ನ ರಾಜೀನಾಮೆಗೆ ಒತ್ತಾಯಿಸಲು ಅವರಿಗೆ ಯಾವುದೇ […]