ಕಾಸರಗೋಡಿನಲ್ಲಿ ಭೀಕರ ಅಪಘಾತ; ಮಂಗಳೂರು ಕಾಲೇಜು ವಿದ್ಯಾರ್ಥಿ ಮೃತ್ಯು

ನಿಯಂತ್ರಣ ತಪ್ಪಿ ಕಾರು ಮಗುಚಿ ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಕಾಸರಗೋಡು ರಾಣಿಪುರ ಸಮೀಪದ ಪೆರುತ್ತಡಿ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ ಸುರತ್ಕಲ್ ಎನ್ ಐ ಟಿ ಕೆ ಯ ವಿದ್ಯಾರ್ಥಿ ರಾಯಚೂರು ನಿವಾಸಿ ಆರಿಬುದ್ದೀನ್ (21) ಮೃತರು. ಇನ್ನು ಗಾಯಗೊಂಡವರನ್ನು ಪೂಡಂಕಲ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪ್ರವಾಸಿ ಕೇಂದ್ರವಾದ ರಾಣಿಪುರಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ […]
ಸಿದ್ದರಾಮಯ್ಯಗೆ ಅಭಯ ನೀಡಿದ ಕಾಂಗ್ರೆಸ್ ಹೈಕಮಾಂಡ್

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸ್ಯುಕ್ಯೂಷನ್ ಗೆ ಅನುಮತಿ ನೀಡುವ ಕಡತಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ. ಇದರ ಬೆನ್ನಲ್ಲಿ ಹೈಕಮಾಂಡ್ ಸಿಎಂ ಸಿದ್ದರಾಮಯ್ಯಗೆ ಅಭಯ ನೀಡಿದ್ದು, ಎಐಸಿಸಿ ನಾಯಕರಾದ ರಣದೀಪ್ ಸುರ್ಜೆವಾಲಾ ಹಾಗೂ ಕೆ.ಸಿ. ವೇಣುಗೋಪಾಲ್ ಕರೆ ಮಾಡಿ ಸಿಎಂ ಸಿದ್ದರಾಮಯ್ಯಗೆ ಧೈರ್ಯ ತುಂಬಿದ್ದಾರೆ. ನಿಮ್ಮ ಜೊತೆಗೆ ನಾವು ಇದ್ದೇವೆ ನೀವು ಧೈರ್ಯವಾಗಿರಿ, ಏನೇ ಆದರೂ ಕಾನೂನು ಹೋರಾಟ ಮಾಡೋಣ. ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮಿಸಿದ್ದು, […]
ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ; ಪ್ರಾಸಿಕ್ಯೂಷನ್ ಗೆ ಕಾನೂನು ತಡೆಯಾಜ್ಞೆ ತರದಂತೆ ಹೈಕೋರ್ಟ್ ಗೆ ಕೇವಿಯಟ್ ಸಲ್ಲಿಕೆ

ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಯಾವುದೇ ತಡೆಯಾಜ್ಞೆ ನೀಡದಂತೆ ದೂರುದಾರರು ಹೈಕೋರ್ಟ್ ನಲ್ಲಿ ಕೇವಿಯಟ್ ಸಲ್ಲಿಸಿದ್ದಾರೆ. ದೂರುದಾರ ಪ್ರದೀಪ್ ಕುಮಾರ್ ಎಂಬುವವರು ಸಿಎಂ ಸಿದ್ದರಾಮಯ್ಯ ಕಾನೂನು ತಡೆಯಾಜ್ಞೆ ತರಬಾರದು ಎಂಬ ಕಾರಣಕ್ಕೆ ಹೈಕೋರ್ಟ್ ಗೆ ಕೇವಿಯೆಟ್ ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಸುದ್ದಿಗರರೊಂದಿಗೆ ಮಾತನಾಡಿದ ಪ್ರದೀಪ್ ಕುಮಾರ್, ಮೂಡ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಕಾನೂನು […]
ಮೈಮೇಲೆ ಡೀಸೆಲ್ ಸುರಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ

ಮೈಮೇಲೆ ಡೀಸೆಲ್ ಸುರಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಚಿಂಚೋಳಿ ತಾಲೂಕಿನ ಮನ್ನಾಎಕ್ಕೆಳ್ಳಿ ರಾಜ್ಯ ಹೆದ್ದಾರಿಯ ಫತ್ತೆಪುರ ಗ್ರಾಮದ ಕ್ರಾಸ್ ನಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ರೇಕುಳಗಿ ಗ್ರಾಮದ ಮಹೇಶ್ ಮಾರುತಿ ನಾಗನಕೇರಾ(27) ಮೃತಪಟ್ಟ ವ್ಯಕ್ತಿ. ಮಹೇಶ್ ಮಾರುತಿ ಹೆಂಡತಿಯ ತವರು ಮನೆಯಲ್ಲಿ ಹೆಂಡತಿ ಮಕ್ಕಳೊಂದಿಗೆ ವಾಸವಾಗಿರುತ್ತಿದ್ದು. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಈ ಹಿಂದೊಮ್ಮೆ ಆತ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ. ಈತ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ಚಿಂಚೋಳಿ ಪೋಲಿಸ್ ಠಾಣೆಯ […]
BIG NEWS ಮೂಡಾ ಹಗರಣ; ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರು

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಬಗ್ಗೆ ವರದಿಯಾಗಿದೆ. ಟಿ.ಜೆ.ಅಬ್ರಾಹಂ ನೀಡಿದ್ದ ದೂರಿಗೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಅಲ್ಲದೆ ಟಿ.ಜೆ.ಅಬ್ರಾಹಂ ಅವರಿಗೆ ಬೆಳಿಗ್ಗೆ 10 ಗಂಟೆಗೆ ರಾಜಭವನಕ್ಕೆ ಬಂದು ಭೇಟಿಯಾಗಲು ರಾಜ್ಯಪಾಲರು ಸೂಚಿಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಇತ್ತೀಚೆಗೆ ದೂರು ದಾಖಲಾಗಿತ್ತು. ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ […]
ಶಾಸಕ ಹರೀಶ್ ಪೂಂಜಾಗೆ ತರಾಟೆಗೆ ತೆಗೆದುಕೊಂಡ ಕ್ಷೇತ್ರದ ಜನ; ವಿಡಿಯೋ ವೈರಲ್

ಮಳೆ ಹಾನಿ ಪ್ರದೇಶಕ್ಕೆ ಶಾಸಕ ಹರೀಶ್ ಪೂಂಜಾ ತಡವಾಗಿ ಭೇಟಿ ನೀಡಿದ್ದು, ಜನರು ಹಿಗ್ಗಾ ಮುಗ್ಗಾ ಕ್ಲಾಸ್ ತೆಗೆದುಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಸವಾಣಾಲಿನಲ್ಲಿ ನಡೆದಿದೆ. ಸ್ವಕ್ಷೇತ್ರದ ಜನರೊಂದಿಗೆಯೇ ಶಾಸಕ ಹರೀಶ್ ಪೂಂಜ ಕಿರಿಕ್ ಮಾಡಿದ್ದಾರೆ. ಎಂಎಲ್‌ಎ ಗೆ ಯಾಕೆ ತಡವಾಗಿ ಬಂದೆ ಎಂದು ಪ್ರಶ್ನೆ ಮಾಡುವ ಹಕ್ಕು ನಿಮಗಿಲ್ಲ, ಆ ತರ ಪ್ರಶ್ನೆ ಮಾಡಿದ್ರೆ ದೇವರ ಮೇಲೆ ಇಡುತ್ತೇನೆ ಎಂದು ಹರೀಶ್ ಪೂಂಜ ಹೇಳಿದ್ದಾರೆ. ತೀವ್ರ ಮಳೆ ಹಾನಿ ಆದ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ […]
ಪೆರ್ನೆ ಬಳಿ ಖಾಸಗಿ ಬಸ್ಸಿಗೆ ಲಾರಿ ಢಿಕ್ಕಿ; ಲಾರಿ ಚಾಲಕ ಮೃತ್ಯು

ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಗೆ ತರಕಾರಿ ತುಂಬಿಕೊಂಡು ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಮೃತಪಟ್ಟು, ಬಸ್ಸಿನಲ್ಲಿದ್ದ ಹಲವರಿಗೆ ಗಾಯಗಳಾದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ದುರ್ಗಾಂಬಾ ಸಂಸ್ಥೆಯ ಖಸಗಿ ಬಸ್ ಗೆ ತರಕಾರಿ ತುಂಬಿಕೊಂಡು ಮಂಗಳೂರು ಕಡೆಗೆ ತೆರಳುತ್ತಿದ್ದ ಕ್ಯಾಂಟರ್ ವಾಹನ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಲಾರಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಸ್ಸಿನಲ್ಲಿದ್ದ […]
ಮೂಡಬಿದ್ರೆ; ಪೊಲೀಸ್ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ; ಮೂವರು ಪೊಲೀಸ್ ವಶಕ್ಕೆ

ಮೂಡಬಿದಿರೆ: ಪೊಲೀಸ್ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಜಾತಿ ನಿಂದನೆಗೈದ ಆರೋಪದಲ್ಲಿ ಮೂವರನ್ನು ಮೂಡುಬಿದಿರೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರನ್ನು ಮೂಡುಬಿದಿರೆ ಒಂಟಿಕಟ್ಟೆ ನಿವಾಸಿಗಳಾದ ಮುಡಾ ಸದಸ್ಯ ಪ್ರಕಾಶ್, ಅಬ್ದುಲ್ ಸತ್ತಾರ್ ಮತ್ತು ವಿಜೇತ್ ಎಂದು ತಿಳಿದು ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಪಿಎಸ್ ಐ ಕೃಷ್ಣಪ್ಪ ಎಂಬವರು ಬಸ್ ನಿಲ್ದಾಣದ ಬಳಿಯ ರಸ್ತೆಯಲ್ಲಿ ವಾಹನಗಳ ಹೈಮಾಸ್ಟ್ ದೀಪಗಳ ಪರಿಶೀಲನೆ ನಡೆಸುತ್ತಿದ್ದ ವೇಳೆ ಹೆಲ್ಮೆಟ್ ಧರಿಸದೆ ತ್ರಿಪಲ್ ರೈಡ್‌ನಲ್ಲಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಸವಾರರಿಗೆ ಪಿಎಸ್‌ಐ ಬೈದಿದ್ದಾರೆ […]
ಮಣಿಪಾಲ; ಕಾರಿನಲ್ಲಿ ಮಲಗಿದ್ದ ವ್ಯಕ್ತಿ ಉಸಿರುಗಟ್ಟಿ ಮೃತ್ಯು

ಮಣಿಪಾಲ; ಕಾರಿನ ಗ್ಲಾಸ್ ಹಾಕಿ ಕಾರಿನಲ್ಲಿ ಮಲಗಿದ್ದ ಚಾಲಕರೊಬ್ಬರು ಉಸಿರುಗಟ್ಟಿ ಮೃತಪಟ್ಟ ಘಟನೆ ಮಣಿಪಾಲದಲ್ಲಿ ನಡೆದಿದೆ. ಮೃತಪಟ್ಟವರನ್ನು ಚಿಕ್ಕಮಗಳೂರಿನ ಆನಂದ(37) ಎಂದು ಗುರುತಿಸಲಾಗಿದೆ. ಆನಂದರವರು ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆಂದು ಕಾರಿನಲ್ಲಿ ಕರೆದುಕೊಂಡು ಬಂದಿದ್ದು, ರೋಗಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ರಾತ್ರಿ ಉಳಿದುಕೊಳ್ಳಲು ಯಾವುದೇ ರೂಮ್ ಸಿಗದ ಕಾರಣ ಚಾಲಕ ಆನಂದರವರು ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನಲ್ಲಿಯೇ ಮಲಗಿದ್ದರು. ಕಾರಿನ ಗ್ಲಾಸನ್ನು ಮುಚ್ಚಿಕೊಂಡು ಮಲಗಿದ್ದ ಇವರು, ಒಳಗಡೆ ಉಸಿರುಗಟ್ಟಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. […]
ಮತ್ತೆ ಭೂಕುಸಿತ; ಮಂಗಳೂರು- ಬೆಂಗಳೂರು ರೈಲು ಸಂಚಾರ ಬಂದ್

ಹಾಸನ; ಸಕಲೇಶಪುರ ತಾಲೂಕಿನ ಆಚಂಗಿ-ದೊಡ್ಡನಾಗರ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತವಾಗಿದೆ. ಹೀಗಾಗಿ ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಥಗಿತವಾಗಿದೆ. ವಾರದ ಹಿಂದೆ ಇದೆ ಜಾಗದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿತ್ತು. ಬಳಿಕ ಮಣ್ಣು ತೆರವು ಮಾಡಿ ರೈಲು ಸಂಚಾರ ಆರಂಭ ಮಾಡಲಾಗಿತ್ತು. ಇದೀಗ ಮತ್ತೆ ಅದೇ ಜಾಗದಲ್ಲಿ ಮಣ್ಣು ಕುಸಿತವಾಗಿದೆ. ಭೂಕುಸಿತದಿಂದಾಗಿ ಮಾರ್ಗಮಧ್ಯೆ ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್ ರೈಲು ಬಾಳ್ಳುಪೇಟೆ ಬಳಿ ನಿಂತುಕೊಂಡಿದೆ. ಘಟನಾ ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದು ಪರಿಶೀಲನೆ ಮಾಡಿದ್ದಾರೆ.