Breaking News :

ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು

ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರದ ಹೊಸ ಬೆಟ್ಟು ಎಂಬಲ್ಲಿ  ನಡೆದಿದೆ‌. ಮೃತರನ್ನು ಯಶವಂತ(21) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಮನೆಯ ಟೆರೇಸ್ ನಲ್ಲಿ ಬಿದ್ದಿದ್ದ ತೆಂಗಿನ ಗರಿಯನ್ನು ತೆಗೆಯಲು ತೆರಳಿದ್ದಾಗ ಅಲ್ಲೇ ಹತ್ತಿರದಲ್ಲಿ ಹಾದು ಹೋಗಿದ್ದ ಹೈಟೆನ್ಶನ್ ವಿದ್ಯುತ್ ತಂತಿಗೆ ತಗುಲಿದ್ದು, ಯಶವಂತ ವಿದ್ಯುತ್ ಶಾಕ್ ಹೊಡೆದು  ಮೃತಪಟ್ಟಿದ್ದಾರೆ. ಬಹಳ ಹೊತ್ತು ಕಳೆದರೂ ಯಶವಂತ ಕೆಳಗೆ ಬಾರದ ಕಾರಣ ಅವರ ಸಹೋದರಿ ಟೆರೇಸ್ ಗೆ ಮೇಲೇರಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ […]

ಮೂಡಾ ಹಗರಣ; ಸಿದ್ದರಾಮಯ್ಯ ವಿರುದ್ಧದ ಆರೋಪದ ಬಗ್ಗೆ ಸಹೋದರ ಹೇಳಿದ್ದೇನು ಗೊತ್ತಾ?

ಮೂಡಾ ಹಗರಣಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ವಿರುದ್ಧದ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಸಹೋದರ ಸಿದ್ದೇಗೌಡ, ನಮ್ಮಣ್ಣ ಯಾವ ತಪ್ಪೂ ಮಾಡಿಲ್ಲ. ಅವರು ರಾಜೀನಾಮೆ ಕೊಡುವುದೂ ಇಲ್ಲ. ಅವನು ಯಾವದಕ್ಕೂ ಜಗ್ಗಲ್ಲ ಎಂದು ಹೇಳಿದ್ದಾರೆ. ಮುಡಾ ಹಗರಣ ಸಂಬಂಧ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದೇಗೌಡ, ಬಿಜೆಪಿ-ಜೆಡಿಎಸ್‌ನವರ ಕೈವಾಡದಿಂದ ರಾಜ್ಯಪಾಲರು ಹೀಗೆ ಮಾಡ್ತಿದ್ದಾರೆ. ಎಚ್‌.ಡಿ. ಕುಮಾರಸ್ವಾಮಿ ಹೇಳಿದಂತೆ ಕುಣಿಯುತ್ತಿದ್ದಾರೆ ಎಂದು ಹೇಳಿದ್ದಾರೆ. ಅಷ್ಟು ಸುಲಭದಲ್ಲಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ. […]

ಬೆಳ್ತಂಗಡಿ; ನದಿಯಲ್ಲಿ ದಿಡೀರ್ ಹರಿದು ಬಂದ ಮಣ್ಣು ಮಿಶ್ರಿತ ನೀರು, ಆತಂಕಗೊಂಡ ಜನ

ಸೋಮವಾರ ಸಂಜೆ ಬೆಳ್ತಂಗಡಿ ತಾಲೂಕಿನ ಹಲವೆಡೆ ನದಿಯಲ್ಲಿ ಏಕಾಏಕಿ ಮಣ್ಣುಮಿಶ್ರಿತ ನೀರಿನ ಪ್ರವಾಹ ಬಂದಿದ್ದು  ಜನರು ಆತಂಕಕ್ಕೆ ಒಳಗಾಗಿದ್ದರು. ಒಂದು ವಾರದಿಂದ ಮಳೆ ಕಡಿಮೆಯಾಗಿ ಶಾಂತವಾಗಿದ್ದ ನೇತ್ರಾವತಿ ಮತ್ತು ಮೃತ್ಯುಂಜಯ ನದಿಗಳಲ್ಲಿ ಪ್ರವಾಹದ ಪರಿಸ್ಥಿತಿ ಸೋಮವಾರ ಸಂಜೆ ಕಂಡುಬಂದಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಸೋಮವಾರ ಮಧ್ಯಾಹ್ನ ಸಾಮಾನ್ಯ ಮಳೆಯಾಗಿತ್ತು. ಆದರೆ ಸಂಜೆ 5ರ ವೇಳೆಗೆ ನದಿಗಳು ಏಕಾಏಕಿ ತುಂಬಿ ಹರಿಯ ತೊಡಗಿದವು. ಮುಂಡಾಜೆ, ಕಲ್ಮಂಜ, ಕಡಿರುದ್ಯಾವರ, ಮಿತ್ತಬಾಗಿಲು ಮೊದಲಾದ ಗ್ರಾಮಗಳ ಕಡೆ ಹೆಚ್ಚಿನ ತೋಟಗಳಿಗೆ ಪ್ರವಾಹದ ನೀರು ನುಗ್ಗಿ […]

ಬಾಂಗ್ಲಾ ಪ್ರಧಾನಿಗೆ ಆದ ಗತಿಯೇ ನಿಮಗೂ ಆಗುತ್ತದೆ; ರಾಜ್ಯಪಾಲರಿಗೆ ಎಚ್ಚರಿಸಿದ ಐವನ್ ಡಿಸೋಜಾ, ಬಿಜೆಪಿಯಿಂದ ಆಕ್ಷೇಪ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ವಿರುದ್ಧ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಮಂಗಳೂರಿನಲ್ಲಿ ಕಾಂಗ್ರೆಸ್ MLC ಐವನ್ ಡಿಸೋಜಾ ನೇತೃತ್ವದಲ್ಲಿ  ಪ್ರತಿಭಟನೆ ನಡೆದಿದೆ. ಪ್ರತಿಭಟನೆ ವೇಳೆ ಮಾತನಾಡಿದ ಐವನ್ ಡಿಸೋಜಾ, ಬಾಂಗ್ಲಾದೇಶದ ಹಿಂದಿನ ಪ್ರಧಾನಿಗೆ ಆದ ಗತಿಯೇ ನಿಮಗೂ ಆಗುತ್ತದೆ. ನೀವು ರಾಜ್ಯ ಬಿಟ್ಟು ಪಲಾಯನ ಮಾಡಬೇಕಾಗುತ್ತದೆ ಎಂದು ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರಿಗೆ ಎಚ್ಚರಿಸಿದ್ದಾರೆ. ರಾಜಭವನ ಚಲೋ ಆಂದೋಲನ ನಡೆಸುವುದು ನಮ್ಮ […]

BREAKING ಪ್ರಾಸಿಕ್ಯೂಷನ್ ಗೆ ತಡೆ ಕೋರಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟಿಗೆ 712 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ನಲ್ಲಿ ಈ ಒಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ವಿಚಾರಣೆಯನ್ನು 29ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ. ರಿಟ್ ಅರ್ಜಿ ವಿಚಾರಣೆ ಆರಂಭಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಪರವಾಗಿ ಅಭಿಷೇಕ್ ಮನುಸಿಂಗ್ವಿ ವಾದ ಮಂಡಿಸುತ್ತಿದ್ದು, ಇನ್ನೂ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಕೀಲ ತುಷಾರ ಮೆಹ್ತಾ ವಾದ ಮಂಡಿಸಿದರು. […]

ಸಿದ್ದರಾಮಯ್ಯ ಪರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡುವಾಗ ಕುಸಿದು ಬಿದ್ದು ಮೃತಪಟ್ಟ ಕುರುಬರ ಸಂಘದ ಅಧ್ಯಕ್ಷ

ಮುಡಾ ಅವ್ಯವಹಾರಕ್ಕೆ ಸಂಬಂಧಿಸದಂತೆ ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಮಾತನಾಡುತ್ತಿದ್ದಾಗ ಕೋಲಾರ ಜಿಲ್ಲೆ ಕುರುಬರ ಸಂಘದ ಅಧ್ಯಕ್ಷ ರವಿಚಂದ್ರ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಬೆಂಗಳೂರಿನ ಲಾಲ್ ಬಾಗ್ ಅವರಣದಲ್ಲಿರುವ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ಕುರಿತು ಕುರುಬರ ಸಂಘದ ಅಧ್ಯಕ್ಷರಾಗಿರುವ ರವಿಚಂದ್ರನ್, ರಾಜ್ಯಪಾಲರ ವಿರುದ್ಧ ಮಾತನಾಡುವಾಗ ಕುಸಿದು ಬಿದ್ದಿದ್ದಾರೆ. ಇನ್ನು ಅವರನ್ನು ಹತ್ತಿರದ ಪೊರ್ಟೀಸ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿಯೇ ರವಿಚಂದ್ರನ್ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕೋಲಾರದ ಚಿಂತಾಮಣಿ ಮೂಲದ ಸಿ.ಕೆ ರವಿಚಂದ್ರನ್ […]

ಕ್ಯಾಬಿನೆಟ್ ಸಲಹೆ ತಿರಸ್ಕರಿಸಿ ಆದೇಶ ನೀಡುವಂತಿಲ್ಲ; ಸಿದ್ದರಾಮಯ್ಯ ಪರ ಹಿರಿಯ ವಕೀಲ ಮನು ಸಿಂಘ್ವಿ ಕೋರ್ಟ್ ನಲ್ಲಿ ವಾದ

ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ಕ್ಯಾಬಿನೆಟ್ ಸಲಹೆ ತಿರಸ್ಕರಿಸಿ ನೀಡಿರುವಂತ ಆದೇಶವಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಪರವಾಗಿ ಮನು ಸಿಂಘ್ವಿ ವಾದಿಸಿದರು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ವೇಳೆ ಮಾತನಾಡಿದ ಹಿರಿಯ ವಕೀಲ ಮನು ಸಿಂಘ್ವಿ , ಕ್ಯಾಬಿನೆಟ್ ಸಲಹೆಯನ್ನು ತಿರಸ್ಕರಿಸಿ ಆದೇಶವನ್ನು ನೀಡುವಂತಿಲ್ಲ ಎಂಬುದಾಗಿ ಹೇಳಿದರು. ಅಲ್ಲದೇ ಇದಕ್ಕೆ ಸಂಬಂಧಿಸಿದಂತ ಮಧ್ಯಪ್ರದೇಶದ ತೀರ್ಪುಗಳನ್ನು ಉಲ್ಲೇಖಿಸಿದರು. ರಾಜ್ಯಪಾಲರಿಗೆ […]

ರಾಜ್ಯಪಾಲರ ವಿರುದ್ಧ ತೀವ್ರಗೊಂಡ ಕಾಂಗ್ರೆಸ್ ಪ್ರತಿಭಟನೆ; ಟೈರ್ ಗೆ ಬೆಂಕಿ, ಕೈ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಸಿಎಂ ಸಿದ್ದರಾಮಯ್ಯ’ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಬೆಂಗಳೂರು, ಮಂಗಳೂರು , ಚಿಕ್ಕಬಳ್ಳಾಪುರ, ಹಾವೇರಿ, ದಾವಣಗೆರೆ, ಮೈಸೂರು ಸೇರಿ ರಾಜ್ಯದ ವಿವಿಧೆಡೆ ಪ್ರತಿಭಟನೆ ತೀವ್ರಗೊಂಡಿದೆ. ರಾಜ್ಯಪಾಲ ಗೆಹ್ಲೋಟ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ಮಂಗಳೂರಿನಲ್ಲಿ ಖಾಸಗಿ ಬಸ್ ಗೆ ಕಲ್ಲು ತೂರಾಟ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಲವು ಕಡೆ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಇನ್ನೂ ಬೆಂಗಳೂರಿನ […]

ಮಂಗಳೂರು; ರಾಜ್ಯಪಾಲರ ವಿರುದ್ಧದ ಪ್ರತಿಭಟನೆ ವೇಳೆ ಬಸ್ ಗೆ ಕಲ್ಲು ತೂರಾಟ; ಮಹಿಳೆಗೆ ಗಾಯ

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕೆಲವು ಕಿಡಿಗೇಡಿಗಳು ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ನಿಂದ ಜೋಕಟ್ಟೆಗೆ ಹೋಗುವ ಸಿಟಿ ಬಸ್ ಗೆ ಲಾಲ್ ಬಾಗ್ ನಲ್ಲಿ  ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪ್ರಯಾಣಿಕ ಮಹಿಳೆಯೊಬ್ಬರಿಗೆ ಗಾಯವಾಗಿದೆ. ಬಸ್ನಲ್ಲಿ ಹತ್ತು ಮಂದಿ ಪ್ರಯಾಣಿಕರಿದ್ದರು. ಚಾಲಕನ ಸೀಟಿನ ಹಿಂದೆ ಕುಳಿತಿದ್ದ ಮಹಿಳೆಗೆ ಗಾಯವಾಗಿದೆ. ಈ ಬಸ್ ನೌಫಾಲ್ ಎಂಬ ಬಿಜೆಪಿ ನಾಯಕರಿಗೆ ಸೇರಿದ್ದಾಗಿದೆ ಎಂದು ತಿಳಿದು ಬಂದಿದೆ.

ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆ

ಸಾಲಬಾದೆ ತಾಳಲಾರದೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ನಾರಾಯಣಸ್ವಾಮಿ ಗುಡಿ ಬೀದಿಯಲ್ಲಿ ನಡೆದಿದೆ. ನಾಗೇಶ(56), ಸತ್ಯಲಕ್ಷ್ಮೀ (46) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಕಳೆದ ಆರು ತಿಂಗಳಿಂದ ಮೈಸೂರಿನಲ್ಲಿ ವಾಸವಾಗಿದ್ದ ದಂಪತಿ ಶನಿವಾರ ರಾತ್ರಿ ಚಾಮರಾಜ ನಗರದ ಕೊಳ್ಳೇಗಾಲಕ್ಕೆ ಬಂದಿದ್ದಾರೆ. ಬೆಳಗಿನ ಜಾವ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕೊಳ್ಳೇಗಾಲ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.