Breaking News :

ಒರಿಯರ್ದೊರಿ ಅಸಲ್ ಖ್ಯಾತಿಯ ತುಳು ರಂಗಭೂಮಿ ಕಲಾವಿದ ಅಶೋಕ್ ಶೆಟ್ಟಿ ಇನ್ನಿಲ್ಲ

ಮಂಗಳೂರು; ಖ್ಯಾತ ತುಳು ರಂಗಭೂಮಿ ಕಲಾವಿದ, ಒರಿಯರ್ದೊರಿ ಅಸಲ್ ತುಳು ಸಿನಿಮಾದ ಖ್ಯಾತಿಯ ಅಶೋಕ್ ಶೆಟ್ಟಿ ಅಂಬ್ಲಮೊಗರು ಅವರು ಇಂದು ನಿಧನರಾಗಿದ್ದಾರೆ. ಅಂಬ್ಲಮೊಗರುವಿನ ಮನೆಯಲ್ಲಿ ಅಸ್ವಸ್ಥರಾಗಿದ್ದ  ಅಶೋಕ್ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತ ಪಟ್ಟಿದ್ದಾರೆ. ವೃತ್ತಿಪರ ಕಲಾವಿದರಾದ ಅಶೋಕ್ ಅವರು ವಿಜಯ ಕುಮಾರ್ ಕೊಡಿಯಾಲ್ ಬೈಲ್ ಅವರ ಕಲಾಸಂಗಮ ನಾಟಕ ತಂಡದಲ್ಲಿ ಕಲಾ ಸೇವೆ ಸಲ್ಲಿಸಿದ್ದರು. ಇವರ ಅಗಲಿಕೆಗೆ ತುಳು ಸಿನಿಮಾರಂಗದ ಗಣ್ಯರು ಸೇರಿದಂತೆ ಹಲವರು ಸಂತಾಪವನ್ನು ಸೂಚಿಸಿದ್ದಾರೆ.  

ವಿಟ್ಲ; ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಠಾಣೆಗೆ ಹಿಂಜಾವೇ ಮುಖಂಡರು ಭೇಟಿ

ವಿಟ್ಲ : ಜನರಲ್ ಸ್ಟೋರ್ ಗೆ ತೆರಳಿದ ಬಾಲಕಿ ಮೇಲೆ ಅಂಗಡಿ ಮಾಲಕನೋರ್ವ ಲೈಂಗಿಕ ದೌರ್ಜನ್ಯ ವೆಸಗಿರುವ ಆರೋಪ ವಿಟ್ಲ ಸಮೀಪದ ಕುದ್ದು ಪದವಿನಿಂದ ಕೇಳಿ ಬಂದಿದೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಹಿಂದೂ ಜಾಗರಣ ವೇದಿಕೆ ಮುಖಂಡರು ವಿಟ್ಲ ಠಾಣೆಗೆ ಭೇಟಿ ನೀಡಿದ್ದಾರೆ‌. ವಿಟ್ಲ ಸಮೀಪದ ಕುದ್ದು ಪದವಿನಲ್ಲಿ ಜನರಲ್ ಸ್ಟೋರ್ ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಗೆ ಅಂಗಡಿ ಮಾಲಕ ಲೈಂಗಿಕ ದೌರ್ಜನ್ಯ ವೆಸಗಿರುವ ಆರೋಪ ಕೇಳಿ ಬಂದಿದೆ. ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ […]

ವಿಟ್ಲ; ದ್ವಿಚಕ್ರ ವಾಹನಕ್ಕೆ ಬಸ್ ಢಿಕ್ಕಿ; ಸ್ಕೂಟರ್ ಸವಾರನ ಸ್ಥಿತಿ ಗಂಭೀರ

ವಿಟ್ಲ; ಸ್ಕೂಟರ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡ ಘಚನೆ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಮುಝಮ್ಮಿಲ್ ಎಂಬವರು ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಟ್ಲದಿಂದ ಮುಡಿಪು ಕಡೆ ಸಂಚರಿಸುತ್ತಿದ್ದ ಖಾಸಗಿ ಬಸ್ ಹಾಗೂ ಮೆದು ಕಡೆ ತೆರಳುತ್ತಿದ್ದ ಮುಝಮ್ಮಿಲ್ ಅವರ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ.

ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಅತ್ಮಹತ್ಯೆ; ಪತ್ನಿ ವಿರುದ್ಧ ಕಿರುಕುಳ ಆರೋಪಿಸಿದ ಕುಟುಂಬ

ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ನಗರದ ಐಯುಡಿಪಿ ಲೇಔಟ್ ನಲ್ಲಿ ನಡೆದಿದೆ. ಮಂಜುನಾಥ (38) ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಎರಡು ವರ್ಷಗಳ ಹಿಂದೆ ಚೇತನ ಎಂಬಾಕೆ ಜತೆ ಮಂಜುನಾಥ್ ವಿವಾಹವಾಗಿದ್ದರು. ಮಂಜುನಾಥ್ ಗೆ ಪತ್ನಿ ಚೇತನ ಪತಿ ಕಿರುಕುಳ ನೀಡುತ್ತಿದ್ದರು ಎಂದು ಚೇತನಾ ವಿರುದ್ಧ ಮಂಜುನಾಥ್ ಪೋಷಕರು ಆರೋಪಿಸಿದ್ದಾರೆ. ಜಿಲ್ಲಾಸ್ಪತ್ರೆ ಸಿಟಿ ಸ್ಕ್ಯಾನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಮೇಲೆ ಚೇತನ ಮಹಿಳಾ ಠಾಣೆಗೆ ದೂರು ನೀಡಿದ್ದರು. ಪತ್ನಿ […]

ಮಂಗಳೂರು; ಟಾರ್ಗೆಟ್ ಇಲ್ಯಾಸ್ ಮರ್ಡರ್ ಕೇಸ್ ಆರೋಪಿಯ ಬರ್ಬರ ಹತ್ಯೆ

ಟಾರ್ಗೆಟ್ ಗ್ರೂಪಿನ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಕಡಪ್ಪರ ಸಮೀ‌ರ್ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಯುಧಗಳಿಂದ ದಾಳಿ ನಡೆಸಿ ಹತ್ಯೆ ಮಾಡಿದ ಘಟನೆ ಕಲ್ಲಾಪು ಬಳಿ ಭಾನುವಾರ ರಾತ್ರಿ ನಡೆದಿದೆ. ತನ್ನ ತಾಯಿಯೊಂದಿಗೆ ಕಲ್ಲಾಪು ರೆಸ್ಟೋರೆಂಟ್‌ ಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದಿದ್ದ ಐದಾರು ಮಂದಿ ಇದ್ದ ತಂಡ ಹತ್ಯೆಗೈದು ಪರಾರಿಯಾಗಿದೆ. ದರೋಡೆ ಕೇಸಿನಲ್ಲಿ ಜೈಲು ಪಾಲಾಗಿದ್ದ ಸಮೀ‌ರ್ ಎರಡು ದಿನಗಳ ಹಿಂದಷ್ಟೇ ಜಾಮೀನಿನ ಮೂಲಕ ಹೊರಬಂದಿದ್ದ ಎಂದು ತಿಳಿದು ಬಂದಿದೆ.  

ಕಾರ್ಕಳ; ಓಮ್ನಿ- ಆಲ್ಟೋ ಕಾರಿನ ನಡುವೆ ಅಪಘಾತ; ಓರ್ವನ ಸ್ಥಿತಿ ಗಂಭೀರ

ಕಾರ್ಕಳ: ಓಮಿನಿ ಮತ್ತು ಆಲ್ಟೊ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ  ಓರ್ವ ಗಂಭೀರವಾಗಿ ಗಾಯಗೊಂಡು ಇತರ ಮೂವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಸಾಣೂರು ಕೋಳಿ ಫಾರಂ ಬಳಿ ನಡೆದಿದೆ. ಅಪಘಾತದಲ್ಲಿ ಓಮಿನಿ ಕಾರಿನಲ್ಲಿದ್ದ ಮೂಡಬಿದ್ರೆ ನಿವಾಸಿಗಳಾದ ಆಫ್ರಿದ್, ಗಂಭೀರವಾಗಿ ಗಾಯಗೊಂಡಿದ್ದು,  ಅನ್ವಿಸ್, ಅಶ್ವಿನ್ ಮತ್ತು ಅಗ್ಮ  ಗಾಯಗೊಂಡಿದ್ದಾರೆ. ಮೂಡುಬಿದಿರೆಯಿಂದ ಕಾರ್ಕಳದ ರೆಸಾಟ್೯ ಕಡೆಗೆ ಬರುತ್ತಿದ್ದ ಓಮಿನಿ ಕಾರು ಹಾಗೂ ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಹೋಗುತ್ತಿದ್ದ ಆಲ್ಟೋ ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿ ಸಿಲುಕಿದ್ದ […]

ಬಸ್ & ಆಟೋ ನಡುವೆ ಅಪಘಾತ; ತಾಯಿ & ಇಬ್ಬರು ಮಕ್ಕಳು ದುರ್ಮರಣ

ಬಸ್ ಮತ್ತು ಆಟೋ ನಡುವೆ ಸಂಭವಿಸಿದ ಅಪಘಾತದಲ್ಲಿ  ತಾಯಿ ಮತ್ತು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ನ ಅತಿವಾಳ ಕ್ರಾಸ್ ಬಳಿ ನಡೆದಿದೆ. ಬೀದರ್‌ನ ಹೊನ್ನಕೇರಿ ತಾಂಡಾ ನಿವಾಸಿಗಳಾದ ಅನಿತಾ ಬಾಯಿ(45) ಮತ್ತು ಅವರ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿತರ ಮೂವರು ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಲಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಜನವಾಡ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

ಪುನೀತ್ ಕೆರೆಹಳ್ಳಿ ಗ್ಯಾಂಗ್ ಸೃಷ್ಟಿಸಿದ್ದ ನಾಯಿ ಮಾಂಸ ವಿವಾದಕ್ಕೆ ಪುಲ್ ಸ್ಟಾಪ್; ಹೈದ್ರಾಬಾದ್ ಲ್ಯಾಬ್ ಅಂತಿಮ ವರದಿ ಬಹಿರಂಗ

ಇದ್ರೀಶ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಮತ್ತು ಗ್ಯಾಂಗ್ ಸೃಷ್ಟಿಸಿದ್ದ  ನಾಯಿ ಮಾಂಸ ವಿವಾದಕ್ಕೆ ಕೊನೆಗೆ ಪುಲ್ ಸ್ಟಾಪ್ ಬಿದ್ದಿದೆ. ಮಾಂಸದ ಮಾದರಿಯನ್ನು ಪರಿಶೀಲಿಸಿ ಹೈದರಾಬಾದ್‌ ಲ್ಯಾಬ್‌ ಅಂತಿಮ ವರದಿಯನ್ನು ನೀಡಿದ್ದು, ಮೆಜೆಸ್ಟಿಕ್‌ ರೈಲು ನಿಲ್ದಾಣದಲ್ಲಿ ಪತ್ತೆಯಾಗಿರುವುದು ಕುರಿ ಮಾಂಸವೇ ಹೊರತು ನಾಯಿ ಮಾಂಸವಲ್ಲ ಎಂದು ಹೇಳಿದೆ. ಕೆಲ ದಿನಗಳ ಹಿಂದೆ ರಾಜಸ್ಥಾನದಿಂದ ಉದ್ಯಮಿ ಅಬ್ದುಲ್‌ ರಜಾಕ್‌ ತರಿಸುತ್ತಿದ್ದ ಕುರಿ ಮಾಂಸದಲ್ಲಿ ನಾಯಿ ಮಾಂಸವೂ ಮಿಶ್ರಣವಾಗಿರುತ್ತದೆ ಎಂದು ಪುನೀತ್‌ ಕೆರೆಹಳ್ಳಿ ಗ್ಯಾಂಗ್ ರಾದ್ದಾಂತ ಮಾಡಿ ಪೊಲೀಸರ […]

ನನ್ನ ಬಗ್ಗೆ ಬೀದಿ ಬೀದಿಯಲ್ಲಿ ಸುಳ್ಳು ಹಬ್ಬಿಸುತ್ತಿದ್ದಾರೆ, ಇನ್ಮುಂದೆ ಪ್ರತಿಪಕ್ಷಗಳ ಯಾವ ನಾಯಕರ ಮೇಲೂ ಕರುಣೆ ತೋರುವುದಿಲ್ಲ; ಸಿಎಂ ಸಿದ್ದರಾಮಯ್ಯ

ನಾನು ಈಗ ಮೊದಲಿನ ಸಿದ್ದರಾಮಯ್ಯ ಅಲ್ಲ, ನಾನು ಬದಲಾಗುತ್ತೇನೆ. ಇನ್ಮುಂದೆ ಪ್ರತಿ ಪಕ್ಷಗಳ ಯಾವ ನಾಯಕರ ಮೇಲೂ ಕರುಣೆ ತೋರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ‌. ಮೈಸೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲರ ಬಗ್ಗೆ ಹೋಗ್ಲಿ ಬಿಡು, ಹೋಗ್ಲಿ ಬಿಡು ಅಂತ ನಾನು ಹೇಳುತ್ತಿದ್ದೆ. ಅದೇ ನನಗೆ ಈಗ ಮುಳ್ಳಾಗುತ್ತಿದೆ. ಪ್ರತಿ ಪಕ್ಷಗಳ ಎಲ್ಲಾ ನಾಯಕರ ಹಳೇ ಪ್ರಕರಣ ತೆರೆಯುತ್ತೇನೆ. ದ್ವೇಷದ ರಾಜಕಾರಣ ಅಂದರೂ ಪರವಾಗಿಲ್ಲ. ನಾನು ಇನ್ಮುಂದೆ ತಲೆಕೆಡಿಸಿಕೊಳ್ಳುವುದಿಲ್ಲ  ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ತಪ್ಪೇ ಮಾಡದ […]

ಉಡುಪಿ; ಬಸ್ ಟೈಮಿಂಗ್ಸ್ ವಿಚಾರದಲ್ಲಿ ಗಲಾಟೆ; ಪ್ರಕರಣ ದಾಖಲು

ಬಸ್‌ ಟೈಮಿಂಗ್‌ ವಿಚಾರದಲ್ಲಿ ಗಲಭೆ ಸೃಷ್ಟಿಸಿ ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಂಡ ಘಟನೆ ಉಡುಪಿಯ ಹಿರಿಯಡಕ ಜಂಕ್ಷನ್‌ ಬಳಿ ನಡೆದಿದೆ. ಘಟನೆ ಬಗ್ಗೆ ನಾಲ್ವರ ವಿರುದ್ಧ  ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟೈಮಿಂಗ್‌ ವಿಚಾರದಲ್ಲಿ ಬಸ್‌ ಅನ್ನು ರಸ್ತೆಯಲ್ಲಿ ಅಡ್ಡಲಾಗಿ ನಿಲ್ಲಿಸಿ ಗಲಭೆ ಸೃಷ್ಟಿಸಿದ ಶಶಿಕಾಂತ್‌ (25) ರಾಜೇಶ್‌ (35) ಉಮೇಶ್‌ (54) ಮತ್ತು ಪ್ರಶಾಂತ್‌ (40) ವಿರುದ್ಧ ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.