Breaking News :

ಕುಂದಾಪುರ: ಖಾಸಗಿ ಬಸ್ ಗೆ ಲಾರಿ ಢಿಕ್ಕಿ; ವಿದ್ಯಾರ್ಥಿಗಳಿಗೆ ಗಾಯ

ಕುಂದಾಪುರ; ಖಾಸಗಿ ಬಸ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಘಟನೆ ತಲ್ಲೂರು ಪ್ರವಾಸಿ ಬಳಿ ನಡೆದಿದ್ದು, ಓರ್ವ ವಿದ್ಯಾರ್ಥಿ ಗಾಯಗೊಂಡ ಘಟನೆ ಕುಂದಾಪುರದಲ್ಲಿ ನಡೆದಿದೆ. ಅಪಘಾತದ ಪರಿಣಾಮ ವೆಂಕಟರಮಣ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರಸಾದ್ ಎಂಬಾತ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾನೆ. ಇನ್ನು ಅದೇ ಶಾಲೆಯ ವಿದ್ಯಾರ್ಥಿಗಳಾದ ಶ್ರೇಯಸ್ ಪೂಜಾರಿ, ದೀಪಶ್ರೀ, ತನುಷ್, ಪ್ರೀತಮ್, ಕೋಟ ಆಶ್ರಿತಾ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿಯರಾದ ಅಶ್ಮಿತಾ ಹಾಗೂ ಅಶ್ವಿನಿ, ಇತರ ಪ್ರಯಾಣಿಕರಾದ ಶಿವರಾಂ, ವಿದ್ಯಾ, ಸತೀಶ್, ದೀಪ […]

ಹೆಬ್ರಿ; ಕೆರೆಯಲ್ಲಿ ಮುಳುಗಿ ಬಾಲಕ‌ ಮೃತ್ಯು

ಹೆಬ್ರಿ: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ಶಿವಪುರದ ಹಾಳ್‌ಬೆಟ್ಟು ಎಂಬಲ್ಲಿ ನಡೆದಿದೆ. ಹಾಳ್‌ಬೆಟ್ಟು ನಿವಾಸಿ ಸಿದ್ವಿಕ್‌ ಶೆಟ್ಟಿ (16) ಮೃತ ವಿದ್ಯಾರ್ಥಿ. ಸಿದ್ವಿಕ್‌ ಶೆಟ್ಟಿ ನಿನ್ನೆ ಸ್ನಾನಕ್ಕೆಂದು ಕೆರೆಗೆ ಹೋಗಿದ್ದಾಗ ಅಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂಗನವಾಡಿ ಮಕ್ಕಳ ತಟ್ಟೆಯಲ್ಲಿ ಮೊಟ್ಟೆ ಇಟ್ಟು ಪೋಟೋ ಕ್ಲಿಕ್ಕಿಸಿ ಮತ್ತೆ ಕಸಿದುಕೊಳ್ಳುವ ವಿಡಿಯೋ ವೈರಲ್; ಇಬ್ಬರು ಸಿಬ್ಬಂದಿಗಳು ಅಮಾನತು

ಕೊಪ್ಪಳ: ಅಂಗನವಾಡಿ ಮಕ್ಕಳ ತಟ್ಟೆಯಲ್ಲಿ ಮೊಟ್ಟೆಯಿಟ್ಟು ಪ್ರಾರ್ಥನೆ ಬಳಿಕ ಕಸಿದುಕೊಳ್ಳುವ ವಿಡಿಯೋ ವೈರಲ್ ಆಗಿದ್ದು,  ಇದರ ಬೆನ್ನಲ್ಲಿ ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮೀ, ಸಹಾಯಕಿ ಶೈನಜಾಬೇಗಂ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆ, ಸಿಬ್ಬಂದಿಯನ್ನು ಅಮಾನತು ಮಾಡಿ ಮಹಿಳಾ‌ & ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಆದೇಶ ಹೊರಡಿಸಿದ್ದಾರೆ. ಮಕ್ಕಳಿಗೆ ಮೊಟ್ಟೆ ಕೊಟ್ಟು ಫೋಟೋ ಕ್ಲಿಕ್ಕಿಸಿ ನಂತರ ಮೊಟ್ಟೆ ಕಸಿದುಕೊಳ್ಳುವ ವಿಡಿಯೋ ವೈರಲ್ ಆಗಿದೆ. ಈ ಬಗ್ಗೆ ವ್ಯಾಪಕವಾಗಿ ಟೀಕೆ […]

ಮನೆ ಕುಸಿದು ಬಿದ್ದು ಬಾಲಕಿ ಮೃತ್ಯು; ಹೃದಯವಿದ್ರಾಹಕ ಘಟನೆ ವರದಿ

ಮನೆಯೊಂದು‌ ಕುಸಿದ ಪರಿಣಾಮ ಆಟವಾಡಲು ತೆರಳಿದ್ದ ಬಾಲಕಿಯೊಬ್ಬಳು‌ ಮೃತಪಟ್ಟ ಘಟನೆ‌ ಧಾರವಾಡ ಜಿಲ್ಲೆಯಕುಂದಗೋಳ ಪಟ್ಟಣದ ಸಾದಗೇರಿ ಓಣಿಯಲ್ಲಿನ ಮನೆಯೊಂದರಲ್ಲಿ ನಡೆದಿದೆ. ಅಮೃತಾ ಗದಿಗೆಪ್ಪ ಮೆಣಸಗೊಂಡ (5) ಮೃತಪಟ್ಟ ಬಾಲಕಿಯಾಗಿದ್ದಾಳೆ. ನಾಗರ ಪಂಚಮಿಯಂದು ಆಟವಾಡುವ ಸಲುವಾಗಿ ಬಾಲಕಿಯು ಪಕ್ಕದ‌ ರಾಮಣ್ಣ ಕಾಳಪ್ಪ ಅರ್ಕಸಾಲಿ ಅವರ ಮನೆಗೆ ತೆರಳಿದ್ದಳು. ಇದೇ ಸಮಯ ಮಣ್ಣಿನ‌ ಮೇಲ್ಚಾವಣಿ ಕುಸಿದ ಪರಿಣಾಮ ಬಾಲಕಿ ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾಳೆ. ಮೃತ ಬಾಲಕಿಯ ಜೊತೆ ಆಟವಾಡುತ್ತಿದ್ದ ಇನ್ನೋರ್ವ ಬಾಲಕಿ ನಿಹಾರಿಕಾ ಕಮ್ಮಾರ (2) ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಘಟನಾ […]

ನನಗೆ ಸ್ವಂತ ಮನೆಯಿಲ್ಲ, ಹಣದ ಮೋಹ ಇದ್ದಿದ್ದರೆ ಕೋಟಿ ಕೋಟಿ ಮಾಡಬಹುದಿತ್ತು; ಮೂಡ ಹಗರಣದ ಆರೋಪದ ಬಗ್ಗೆ ಸಿದ್ದರಾಮಯ್ಯ ಭಾವುಕ ಟ್ವೀಟ್

ಮೂಡ ಹಗರಣದ ಆರೋಪದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಭಾವುಕ ಟ್ವೀಟ್ ಮಾಡಿದ್ದಾರೆ. ನಾನು 15 ಬಜೆಟ್ ಮಂಡಿಸಿದ್ದೇನೆ. ನನಗೆ ಹಣದ ಮೋಹ ಇದ್ದಿದ್ದರೆ ಕೋಟಿ ಕೋಟಿ ಮಾಡಬಹುದಿತ್ತು. ಇಷ್ಟು ದಿನವಾದರೂ ನನಗೆ ಮೈಸೂರಲ್ಲಿ ಮನೆ ಇಲ್ಲ, ಈಗ ಕಟ್ಟಿಸುತ್ತಿದ್ದೇನೆ. ಹಿಂದಿದ್ದ ಮನೆ ಸಾಲ ತಗೊಂಡು ಕಟ್ಟಿಸಿದ್ದೆ ಎಂದು ಹೇಳಿದ್ದಾರೆ. ಈಗ ಸಾಲ ತೀರಿಸಲಾಗದೆ ಆ ಮನೆ ಮಾರಿಬಿಟ್ಟೆ. ಬಾಡಿಗೆ ಮನೆಯಲ್ಲಿ ಇದ್ದುಕೊಂಡೇ ವಿಧಾನಸಭೆ, ಲೋಕಸಭೆ ಚುನಾವಣೆ ಮಾಡಿದೆ. ಈಗ ಕಟ್ಟುತ್ತಿರುವ ಮನೆ ಬಿಟ್ಟು ನನ್ನ ಹೆಸರಲ್ಲಿ ಒಂದೇ […]

ಮಹಿಳೆಯರನ್ನು ಕೊಲೆ ಮಾಡಿ ಲಿಪ್ ಸ್ಟಿಕ್, ರವಿಕೆ ಕೊಂಡೊಯ್ಯುತ್ತಿದ್ದ ಸೀರಿಯಲ್ ಕಿಲ್ಲರ್ ಅರೆಸ್ಟ್; ಈತ ಎಷ್ಟು ಮಂದಿಯನ್ನು ಕೊಲೆ ಮಾಡಿದ್ದಾನೆ ಗೊತ್ತಾ?

14 ತಿಂಗಳೊಳಗೆ 9 ಮಂದಿ ಮಹಿಳೆಯರನ್ನು ಸೀರೆಯಿಂದಲೇ ಕೊಲೆಗೈದ ಆರೋಪಿಯನ್ನು ಬಂಧಿಸುವಲ್ಲಿ ಉತ್ತರಪ್ರದೇಶದ ಬರೇಲಿ ಪೊಲೀಸರು ಬಂಧಿಸಿದ್ದಾರೆ. ಬರೇಲಿಯ ಬಕರ್‌ಗಂಜ್ ನಿವಾಸಿ, ಸೀರಿಯಲ್ ಕಿಲ್ಲರ್ ಆರೋಪಿಯನ್ನು ಕುಲದೀಪ್‌ ಎಂದು ಗುರುತಿಸಲಾಗಿದೆ. ಈತ ಗ್ರಾಮದಲ್ಲಿ ಒಂಟಿಯಾಗಿ ತಿರುಗಾಡುತ್ತಿದ್ದ ಈತ ಎಲ್ಲಿಯಾದರೂ ಒಂಟಿ ಮಹಿಳೆ ಕಂಡರೆ ಮೊದಲು ಆಕೆಯನ್ನು ಹಿಂಬಾಲಿಸುತ್ತಿದ್ದ. ನಂತರ ತನ್ನ ಮಾತಿನಲ್ಲಿಯೇ ಆಕೆಯನ್ನು ತನ್ನ ಬಲೆಗೆ ಬೀಳಿಸುತ್ತಿದ್ದ. ಇದಾದ ಬಳಿಕ ಆಕೆಯ ಮೇಲೆ ಹಲ್ಲೆ ನಡೆಸುತ್ತಿದ್ದ. ಅಲ್ಲದೇ ಸೀರೆ ಅಥವಾ ದುಪ್ಪಟ್ಟಾದಿಂದ ಕತ್ತಿಗೆ ಬಿಗಿದು ಸಾಯಿಸುತ್ತಿದ್ದ ಎನ್ನುವುದು […]

ಗೂಗಲ್ ಪೇ, ಪೋನ್ ಪೇ ಸ್ಕ್ಯಾನರ್ ಬಳಸುವಾಗ ಇರಲಿ ಎಚ್ಚರ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಗ್ಯಾಂಗ್

ಗ್ರಾಹಕರ ಸೋಗಿನಲ್ಲಿ ಹೋಟೆಲ್ ಗೆ ಬಂದ ನಾಲ್ವರ ಗುಂಪು ಹೊಟ್ಟೆತುಂಬ ಊಟ ಮಾಡಿ ಬಳಿಕ ಫೋನ್ ಪೇ ಮೂಲಕ ಬಿಲ್ ಪೇ ಮಾಡಿದಂತೆ ಯಾಮಾರಿಸುತ್ತಿದ್ದ ಖತರ್ನಾಕ್ ಕಳ್ಳರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿರುವ ಘಟನೆ ನಡೆದಿದೆ. ಬೆಂಗಳೂರಿನ ಹೋಟೆಲ್ ಒಂದರಲ್ಲಿ ಈ ಘಟನೆ ನಡೆದಿದ್ದು, ಹೋಟೆಲ್ ವ್ಯವಸ್ಥಾಪಕರೊಬ್ಬರು ವಂಚಕರನ್ನು ರೆಡ್ ಹ್ಯಾಂಡ್ ಆಗಿಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಓರ್ವ ಮಹಿಳೆಯೊಂದಿಗೆ ಹೋಟೆಲ್ ಗೆ ಬಂದ ಮೂವರು ಯುವಕರು ಹೋಟೆಲ್ ನಲ್ಲಿ ಊಟ ಮಾಡಿದ್ದಾರೆ. 750 ರೂ ಬಿಲ್ ಆಗಿದೆ. […]

ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳಿಬ್ಬರು ಆತ್ಮಹತ್ಯೆ

ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆಯ ರಬಕವಿ-ಬನಹಟ್ಟಿ ತಾಲೂಕಿನ ನಂದಗಾಂವ್ ಗ್ರಾಮದಲ್ಲಿ ನಡೆದಿದೆ. ಸಚಿನ್ ದಳವಾಯಿ(22), ಪ್ರಿಯಾ ಮಡಿವಾಳರ(19) ಮೃತ ಪ್ರೇಮಿಗಳಾಗಿದ್ದು, ಮಹಾಲಿಂಗಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇವರಿಬ್ಬರ ಜಾತಿ ಬೇರೆಯಾಗಿದ್ದರಿಂದ ಹುಡುಗನ ಮನೆಯವರು ಅಂತರ್ಜಾತಿ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಮನನೊಂದ ಜೋಡಿ ಆತ್ಮಹತ್ಯೆಯನ್ನು  ಮಾಡಿಕೊಂಡಿದೆ.

ಹಾವು ಕಡಿದು ಬಾಣಂತಿ ಮೃತ್ಯು; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಮೇವು ತರಲು ಹೋಗಿದ್ದ ವೇಳೆ ಹಾವು ಕಡಿದು ಬಾಣಂತಿಯೊಬ್ಬರು ಮೃತಪಟ್ಟಿರುವ ಘಟನೆ ಸಾಗರ ತಾಲ್ಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ರಂಜಿತಾ (22) ಎಂದು ಗುರುತಿಸಲಾಗಿದೆ. ಮೇವು ತರಲು ಹೋಗಿದ್ದ ವೇಳೆ ಪೊದೆಯಲ್ಲಿದ್ದ ಹಾವೊಂದು ಮಹಿಳೆಗೆ ಕಡಿದಿದೆ ಎನ್ನಲಾಗಿದೆ. ಹಾವು ಕಡಿದ ಕೆಲಹೊತ್ತಿನ ಬಳಿಕ ಹಾವು ಕಚ್ಚಿರುವುದು ಅವರ ಅರಿವಿಗೆ ಬಂದಿದೆ. ಕುಟುಂಬಸ್ಥರು ನೋಡಿದಾಗ ರಂಜಿತಾ ಗದ್ದೆಯಲ್ಲಿ ಕುಸಿದು ಬಿದ್ದಿದ್ದರು. ಇದನ್ನು ಗಮನಿಸಿ ತಕ್ಷಣ ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ […]

ಉಳ್ಳಾಲ ಮೂಲದ ಮದ್ರಸಾ ಶಿಕ್ಷಕ ಹಠಾತ್ ನಿಧನ

ಬಳ್ಳಾರಿ; ಉಳ್ಳಾಲ ಮೂಲದ ಮದ್ರಸಾ ಶಿಕ್ಷಕರೋರ್ವರು ಬಳ್ಳಾರಿಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ‌ ಮೃತಪಟ್ಟ ಮದ್ರಸಾ ಶಿಕ್ಷಕರನ್ನು ಝೈನುದ್ದೀನ್ ಸಹದಿ ಎಂದು ಗುರುತಿಸಲಾಗಿದೆ. ಶುಕ್ರವಾರದ ನಮಾಝ್ ಗೆ ಸಿದ್ಧತೆ ನಡೆಸುತ್ತಿದ್ದಾಗ ಹಠಾತ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇವರು ಮಂಗಳೂರಿನಿಂದ ಬಳ್ಳಾರಿಗೆ ಹೋಗಿ ಮದ್ರಸಾ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದರು. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.