Breaking News :

BREAKING ಎರಡು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾರಿದ ಮಹಿಳೆ; ಹೃದಯವಿದ್ರಾಹಕ ಘಟನೆ ವರದಿ

ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾಹಕ ಘಟನೆ ಹೊಸನಗರದಲ್ಲಿ ನಡೆದಿದೆ. ಚಂಪಕಾಪುರ ನಿವಾಸಿ ರಾಜೇಶ್ ಎಂಬವರ ಪತ್ನಿ ವಾಣಿ(32) ಇಬ್ಬರು ಮಕ್ಕಳಾದ ಸಮರ್ಥ(12), ಸಂಪದ (6) ಅವರನ್ನು ಬಾವಿಗೆ ಎಸೆದು ತಾನು ಕೂಡ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರ ಠಾಣೆ ಪಿಎಸ್‌ಐ ರಮೇಶ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಬಾವಿಯಿಂದ ತೆಗೆದು ಆಸ್ಪತ್ರೆಗೆ ಸೇರಿಸಿದ್ದಾರೆ‌. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ಮದುವೆ ದಿನ ಹೊಡೆದಾಡಿಕೊಂಡು ವಧು-ವರ ಸಾವು ಪ್ರಕರಣ: ಮರಣೋತ್ತರ ಪರೀಕ್ಷೆ ವರದಿ ಬಯಲು, ಸಾವಿನ ಬಗ್ಗೆ ದಟ್ಟವಾದ ಸಂಶಯ

ವಧು- ವರ ಮದುವೆ ದಿನ ಹೊಡೆದಾಡಿಕೊಂಡು ಮೃತಪಟ್ಟ ಆತಂಕಕಾರಿ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯಲ್ಲಿ ನಡೆದಿತ್ತು ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯ ನವೀನ್ (29) ಹಾಗೂ ಲಿಖಿತಶ್ರೀ (20) ದುರಂತ ಅಂತ್ಯ ಕಂಡ ಜೋಡಿಯಾಗಿದ್ದಾರೆ. ಜೋಡಿ ಮದುವೆಯಾದ ದಿನವೇ ರೂಮ್‌ಗೆ ಹೋಗುತ್ತಿದ್ದಂತೆ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಪ್ರಕರಣದಲ್ಲಿ ಮೂರನೇ ವ್ಯಕ್ತಿಯ ಕೈವಾಡದ ಬಗ್ಗೆ ಕೂಡ ಶಂಕೆ ಮೂಡಿತ್ತು. ಈಗ ನವೀನ್ (29) ಹಾಗೂ ಲಿಖಿತಶ್ರೀ (20) ಮರಣೋತ್ತರ ಪರೀಕ್ಷೆ ವರದಿ ಕುಟುಂಬಸ್ಥರ ಹಾಗೂ ಪೊಲೀಸರ […]

ಕುಮಾರಸ್ವಾಮಿ ವಿರುದ್ಧ ದೂರು ನೀಡಿ 10 ತಿಂಗಳಾದರೂ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದ ರಾಜ್ಯಪಾಲರು; ವರದಿ

ಗಣಿ ಅಕ್ರಮ ಪ್ರಕರಣದಲ್ಲಿ 2014ರಿಂದ ವಿಚಾರಣೆ ನಡೆಸಿದ ಲೋಕಾಯುಕ್ತದ ಎಸ್‌ಐಟಿಯು ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ರಾಜ್ಯಪಾಲರಿಗೆ 10 ತಿಂಗಳ ಹಿಂದೆಯೇ ಮನವಿ ಮಾಡಿಕೊಂಡಿದೆ, ಆದರೆ ಅವರು ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ವರದಿಯಾಗಿದೆ. ದಿನಾಂಕ 10/9/2014ರ ಕ್ರೈಮ್‌ ನಂ. 16/14 ಈ ಕೇಸಿನಲ್ಲಿ ಲೋಕಾಯುಕ್ತದ ಅಡಿಯಲ್ಲಿ ಗಣಿ ಅಕ್ರಮಗಳ ತನಿಖೆ ನಡೆಸುತ್ತಿರುವ ಎಸ್‌ಐಟಿ ವತಿಯಿಂದ ರಾಜ್ಯಪಾಲರಿಗೆ ಪತ್ರ ಕಳುಹಿಸಲಾಗಿದೆ. 21/11/2023ರಂದು ಲೋಕಾಯುಕ್ತದ ಎಡಿಜಿಪಿ ಚಂದ್ರಶೇಖರ್‌ ಅವರೇ ಖುದ್ದಾಗಿ ಪತ್ರವನ್ನು ಕಳುಹಿಸಿದ್ದಾರೆ. ಸಾಯಿ ವೆಂಕಟೇಶ್ವರ […]

ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮೇಲೆ ಕಲ್ಲು ಎತ್ತಿ ಹಾಕಿದ ದುಷ್ಕರ್ಮಿ; ಮಹಿಳೆಯ ಸ್ಥಿತಿ ಗಂಭೀರ, ಆರೋಪಿಗೆ ಧರ್ಮದೇಟು

ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮೇಲೆ ಕಲ್ಲು ಎತ್ತಿ ಹಾಕಿರುವ ಆಘಾತಕಾರಿ ಘಟನೆ ಕೊಡಿಗೇಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಸಹಕಾರ ನಗರದಲ್ಲಿ  ನಡೆದಿದೆ. ಸಹಕಾರ ನಗರದಲ್ಲಿ ಸುನಿತಾ (38) ಎಂಬ ಮಹಿಳೆ ಗುರುವಾರ ಸಂಜೆ ನಡೆದುಕೊಂಡು ಹೋಗುವಾಗ ದುಷ್ಕರ್ಮಿಯೋರ್ವ ಅವರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿದ್ದಾನೆ. ಬಳಿಕ ಕಲ್ಲಿನಿಂದ ಅವರ ತಲೆಯನ್ನು ಜಜ್ಜಿದ್ದಾನೆ. ಇದರಿಂದಾಗಿ ಮಹಿಳೆಯು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು, ದುಷ್ಕರ್ಮಿಗೆ ಹಿಡಿದು ಧರ್ಮದೇಟು ಕೊಟ್ಟಿದ್ದಾರೆ. ಬಳಿಕ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೊಡಿಗೇಹಳ್ಳಿ […]

ದಟ್ಟ ಕಾಡಿನೊಳಗೆ ಆಧುನಿಕ ಟೆಕ್ನಾಲಜಿ ಬಳಸಿ ನಿಧಿಗಾಗಿ ಶೋಧ ನಡೆಸುತ್ತಿದ್ದ ನಿಧಿಗಳ್ಳರ ಬಂಧನ

ಆಧುನಿಕ ಟೆಕ್ನಾಲಜಿ ಬಳಸಿ ನಿಧಿ ಶೋಧನೆ ನಡೆಸುತ್ತಿದ್ದ ಆಂಧ್ರದ ನಿಧಿಗಳ್ಳರನ್ನು ಬಳ್ಳಾರಿಯ ಸಂಡೂರು ಅರಣ್ಯ ಪ್ರದೇಶದಲ್ಲಿ  ಪೊಲೀಸರು ಬಂಧಿಸಿದ್ದಾರೆ. ಆಂಧ್ರ ಮೂಲದ ಶ್ರೀನಿವಾಸ್(45), ಆಕಾಶ್( 20) , ಶ್ರೀನಿವಾಸ್, ವೆಂಕಟ್ ರಾವ್ ಹಾಗೂ ಗದಗ ಮೂಲದ ಭಗತ್ ಸಿಂಗ್ ದೊಡ್ಡಮನಿ(50) ಬಂಧಿತ ಆರೋಪಿಗಳು. ಇವರು ದಟ್ಟ ಕಾಡಿನ ಮಧ್ಯದಲ್ಲಿರುವ ಗುಹೆಗಳಲ್ಲಿ ನಿಧಿಗಾಗಿ ಹುಡುಕಾಟ ನಡೆಸಿದ್ದಾರೆ. ಇವರು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದೋಣಿ ಮಲೈ ಅರಣ್ಯ ವ್ಯಾಪ್ತಿಯಲ್ಲಿ ಚಿನ್ನ, ವಜ್ರಕ್ಕಾಗಿ ಹುಡುಕಾಡಿದ್ದಾರೆ. ಗುಹೆಯೊಳಗಡೆ ಸುರಂಗವನ್ನು ಕೂಡ ಕೊರೆಯಲು […]

ಬಂಟ್ವಾಳ; ಎಸೆಸೆಲ್ಸಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬಂಟ್ವಾಳ: ಎಸ್ಸೆಸೆಲ್ಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಜನಪದವು ಬಳಿ ನಡೆದಿದೆ. ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಬಡಕಬೈಲಿನ ಖಾಸಗಿ ಶಾಲೆಯಲ್ಲಿ  ಈತ 10ನೇ ತರಗತಿಯ ವಿದ್ಯಾರ್ಥಿಯಾಗಿದ್ದ.  ನಿನ್ನೆ ರಾತ್ರಿ ಸ್ನಾನ ಮಾಡಲೆಂದು ಬಾತ್ ರೂಂಗೆ ತೆರಳಿದ ಮಗ 8 ಗಂಟೆಯಾದರೂ ವಾಪಸ್ ಬಾರದೇ ಇರುವುದನ್ನು ಕಂಡ ತಾಯಿ ಬಾಗಿಲು ಬಡಿದರೂ ಬಾಗಿಲು ತೆಗೆಯದ ಹಿನ್ನೆಲೆಯಲ್ಲಿ ಬಾಗಿಲು ಮುರಿದು ಒಳಗೆ ನುಗ್ಗಿದಾಗ […]

BREAKING ಶಾಲಾ ಕೊಠಡಿಯಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಮುಖ್ಯ ಶಿಕ್ಷಕನ ಮೃತದೇಹ ಪತ್ತೆ

ಶಾಲೆಯ ಮುಖ್ಯೋಪಾಧ್ಯಾಯನೋರ್ವ ಶಾಲೆಯಲ್ಲೆ  ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಸಮೀಪದ ನಾಗೂರ ಗ್ರಾಮದಲ್ಲಿ ನಡೆದಿದೆ. ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯ ಸಿ ಎಸ್ ಹಡಪದ ಶಾಲೆಯ ಶಿಕ್ಷಕರ ಕೊಠಡಿಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕರಣ ತಿಳಿದುಬಂದಿಲ್ಲ, ಘಟನೆಗೆ ಸರ್ಕಾರಿ ನೌಕರರ ಸಂಘ ಆಘಾತ ವ್ಯಕ್ತಪಡಿಸಿದೆ. ನೌಕರರ ಸಂಘದ ಶಿವಾನಂದ ಮಂಗಾನವರ ಮಾತನಾಡಿ, ಶಿಕ್ಷಕನ ಸಾವಿನ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು […]

ಯುವಕನೋರ್ವ ಹೃದಯಾಘಾತದಿಂದ ಮೃತ್ಯು; ಒಂದು ವಾರದಿಂದ ಮೃತದೇಹಕ್ಕಾಗಿ ಕಾಯುತ್ತಿರುವ ಹೆತ್ತವರು

ಕುಷ್ಟಗಿಯ ಯುವಕನೋರ್ವ ಐರ್ಲೆಂಡ್‌ನಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಶ್ರೀಧರ ನಾಡಗೌಡ ವಾರದ ಹಿಂದೆಯೇ ಹೃದಯಾಘಾತದಿಂದ ಮೃತಪಟ್ಟಿದ್ದು, ಇವರು ತಾಲ್ಲೂಕು ಪಂಚಾಯಿತಿ ನಿವೃತ್ತ ವ್ಯವಸ್ಥಾಪಕ ರೇವಣ್ಣ ನಾಡಗೌಡ ದಂಪತಿಯ ದ್ವಿತೀಯ ಪುತ್ರ. ಇವರು ಕಳೆದ ಜೂನ್‌ನಲ್ಲಿ ಐರ್ಲೆಂಡ್‌ಗೆ ತೆರಳಿದ್ದರು. ತುಮಕೂರಿನಲ್ಲಿ ಎಂಜಿನಿಯರಿಂಗ್ ಪದವಿ ಪಡೆದ ನಂತರ ಐರ್ಲೆಂಡ್‌ ರಾಜಧಾನಿ ಡಬ್ಲಿನ್‌ನಲ್ಲಿ ಉನ್ನತ ವ್ಯಾಸಂಗ ಮುಗಿಸಿ ನಂತರ ಅದೇ ದೇಶದ ಗಾಲ್ವೆಯಲ್ಲಿನ ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗ ಕಂಡುಕೊಂಡಿದ್ದರು. ಶ್ರೀಧರ ಜುಲೈ 31ರಂದು ಮೃತಪಟ್ಟಿದ್ದು, ಕಂಪನಿಯ ಮೂಲಕ ಹೆತ್ತವರಿಗೆ ವಿಷಯ […]

ಜೋಕಟ್ಟೆಯಲ್ಲಿ ಬಾಲಕಿಯ ಕೊಲೆ ಪ್ರಕರಣ; ತನಿಖೆಯ ವೇಳೆ ಮಹತ್ವದ ಅಂಶಗಳು ಬಯಲು

ಮಂಗಳೂರು: ಜೋಕಟ್ಟೆಯಲ್ಲಿ ಬೆಳಗಾವಿ ಮೂಲದ 14 ವರ್ಷದ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆಯ ವೇಳೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಬಯಲಾಗಿದೆ. ಆರೋಪಿಯನ್ನು ಫಕೀರಪ್ಪ ಹಣಮಪ್ಪ ಮಾದರ(51) ಎಂದು ಗುರುತಿಸಲಾಗಿದ್ದು, ಆತನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ದೂರುದಾರರಿಗೆ ಫಕೀರಪ್ಪ ಪರಿಚಯವಿದ್ದು, ಅವರ ಬಾಡಿಗೆ ಮನೆಗೆ ಆಗಾಗ ಬಂದು ಹೋಗುತ್ತಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ. ಆಗಸ್ಟ್ 6 ರಂದು ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ […]

ರಾಜ್ಯದಲ್ಲೊಂದು ಶಾಕಿಂಗ್ ಸುದ್ದಿ; ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಮಧ್ಯೆ ಹೊಡೆದಾಟ; ವಧು ಸಾವು, ವರನ ಸ್ಥಿತಿ ಗಂಭೀರ

ಮದುವೆಯಾದ ಕೆಲವೇ ಗಂಟೆಯಲ್ಲಿ ವಧು-ವರ ಹೊಡೆದಾಡಿಕೊಂಡು ವಧು ಮೃತಪಟ್ಟು, ವರ ಗಂಭೀರವಾಗಿರುವ ಆತಂಕಕಾರಿ ಘಟನೆ ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕು ಚಂಬರಸನಹಳ್ಳಿ ಗ್ರಾಮದಲ್ಲಿ ಇಂದು ಲಿಖಿತ ಶ್ರೀ ಹಾಗೂ ನವೀನ್ ಅವರ  ಮದುವೆ ನಡೆದಿದೆ. ಬಳಿಕ ರೂಮ್​​ಗೆ ತೆರಳಿದ ಜೋಡಿ ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ಇದರ ಪರಿಣಾಮ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಇಬ್ಬರನ್ನು ಕೆಜಿಎಫ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ​ ವಧು ಲಿಖಿತ ಶ್ರೀ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಗಂಭೀರವಾಗಿ […]