Breaking News :

ಬೆಳಗಾವಿ; ಅಗ್ನಿ ದುರಂತದಲ್ಲಿ ಮೃತ ಯುವಕನ ಮೂಳೆಗಳನ್ನು ಚೀಲದಲ್ಲಿ ಹಾಕಿಕೊಟ್ಟ ಆಡಳಿತ; ಹೃದಯವಿದ್ರಾಹಕ ಘಟನೆ ವರದಿ

ಬೆಳಗಾವಿಯ ನಾವಗೆ ಗ್ರಾಮದ ಕಾರ್ಖಾನೆಯ ಅಗ್ನಿ ಅವಘಡದಲ್ಲಿ ಕಾರ್ಮಿಕ ಯಲ್ಲಪ್ಪ ಸಣ್ಣಗೌಡ ಗುಂಡ್ಯಾಗೋಳ (20) ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ನಾವಗೆ ಗ್ರಾಮದ ಹೊರ ವಲಯದಲ್ಲಿ ಇರುವ ಸ್ನೇಹಂ ಟೇಪ್ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು,  ಮಾರ್ಕಂಡೇಯ ನಗರ ನಿವಾಸಿಯಾಗಿದ್ದ ಯಲ್ಲಪ್ಪ ಗುಂಡ್ಯಾಗೋಳ(20) ಬೆಂಕಿಯಲ್ಲಿ ಬೆಂದು ಪ್ರಾಣ ಕಳೆದುಕೊಂಡಿದ್ದಾರೆ. ಕಾರ್ಯಾಚರಣೆಯ ಬಳಿಕ ಸಿಕ್ಕ ಅವರ ದೇಹದ ಮೂಳೆಗಳನ್ನು, ಅಧಿಕಾರಿಗಳು ಪ್ಲಾಸ್ಟಿಕ್‌ ಚೀಲದಲ್ಲಿ ಹಾಕಿ ತಂದೆಯ ಕೈಗೆ ಕೊಟ್ಟು ಕಳುಹಿಸಿದ್ದಾರೆ. ಸುಟ್ಟುಹೋದ ಮಗನ ದೇಹದ ಅಲ್ಪಸ್ವಲ್ಪ ಅಂಗಾಂಗಗಳನ್ನು ತಂದೆ ಸಣ್ಣಗೌಡ […]

ಪತ್ನಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಪೊಲೀಸರಿಂದ ತಪ್ಪಿಸಿಕೊಳ್ಳುವಾಗ ಕಟ್ಟಡದಿಂದ ಬಿದ್ದು ಮೃತ್ಯು

ಬೆಂಗಳೂರು; ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ ತಬ್ರೇಝ್ ಎಂಬಾತ ಕಟ್ಟಡದಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಚಾಮರಾಜಪೇಟೆಯಲ್ಲಿ ಕೊಲೆ ನಡೆದ 5 ದಿನದ ಬಳಿಕ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ತಬ್ರೇಝ್ ಕಟ್ಟಡದಿಂದ ಜಿಗಿದಿದ್ದಾನೆ. ಕೋಲಾರದ ಚಿಕ್ಕಮ್ಮನ ಮನೆಗೆ ತೆರಳಿ ತಲೆಮರೆಸಿಕೊಂಡಿದ್ದ ತಬ್ರೇಝ್ ನನ್ನು ಬಂಧಿಸಲು ಪೊಲೀಸರು ಧಾವಿಸಿದಾಗ ಅವರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಕಟ್ಟಡದಿಂದ ಜಿಗಿದಿದ್ದಾನೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ತಬ್ರೇಝ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. 9 […]

ಶಾಲೆಗೆ ಜಮೀನು ಕೊಟ್ಟರೂ, ಎಸ್ ಡಿಎಂಸಿ ಅಧ್ಯಕ್ಷನನ್ನಾಗಿ ಮಾಡಿಲ್ಲ ಎಂದು ಶಾಲೆಗೆ ಬೀಗ ಜಡಿದ ಆಸಾಮಿ; ಮಕ್ಕಳು ಕಂಗಾಲು

ನಾನು ಶಾಲೆಗೆ ಜಮೀನು ಕೊಟ್ಟಿದ್ದೇನೆ, ಆದ್ದರಿಂದ ಸರ್ಕಾರಿ ಶಾಲೆಗೆ ತನ್ನನ್ನು ಶಾಶ್ವತವಾಗಿ ಎಸ್.ಡಿ.ಎಂ.ಸಿ. ಅಧ್ಯಕ್ಷನಾಗಿ ಮಾಡುವಂತೆ ಆಗ್ರಹಿಸಿ ವ್ಯಕ್ತಿಯೊಬ್ಬ ಶಾಲೆಗೆ ಬೀಗ ಜಡಿದಿದ್ದು, ಮಕ್ಕಳು ಶಾಲೆಯ ಹೊರಗೆ ಕುಳಿತ ವಿಚಿತ್ರ ಘಟನೆ ವಿಜಯಪುರದಲ್ಲಿ ನಡೆದಿದೆ‌. ರಾಮನಗೌಡ ದೋರನಹಳ್ಳಿ ಎಂಬಾತ ತಾಳಿಕೋಟೆ ತಾಲೂಕಿನ ಬಳಗಾನೂರ ಕ್ರಾಸ್ ಬಳಿ ಇರುವ ಸರ್ಕಾರಿ ಪೂರ್ವ ಪ್ರಾಥಮಿಕ ಶಾಲೆಗೆ  ಬೀಗ ಜಡಿದಿದ್ದಾನೆ. ಸರ್ಕಾರಿ ಶಾಲೆಗೆ ನಮ್ಮ ಕುಟುಂಬದಿಂದ 3 ಗುಂಟೆ ಭೂಮಿ ದಾನ ನೀಡಿದ್ದೇವೆ. ಹೀಗಾಗಿ ಈ ಶಾಲೆಗೆ ನಾನೇ ಶಾಶ್ವತವಾಗಿ ಎಸ್.ಡಿ.ಎಂ.ಸಿ. […]

ಉಡುಪಿ; ಹಾಡಹಗಲೇ ಕಾರಿನಲ್ಲಿ ಅನೈತಿಕ ಚಟುವಟಿಕೆ; ಕಾರು ಅಲುಗಾಟ ಕಂಡು ಹೋದ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದ ಜೋಡಿ

ಉಡುಪಿ ನಗರದಲ್ಲಿ ಹಾಡ ಹಗಲಲ್ಲೇ ಕಾರಿನೊಳಗೆ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಜೋಡಿಯನ್ನು  ಸಾರ್ವಜನಿಕರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದು, ಈ ವೇಳೆ ಜೋಡಿ ಪರಾರಿಯಾಗಿದ್ದಾರೆ. ಉಡುಪಿಯ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಎದುರು, ಕಾರು ನಿಲುಗಡೆಗೊಳಿಸಿತ್ತು. ಕಾರಿನ ಗಾಜಿಗೆ ಒಳಭಾಗದಿಂದ ಕಪ್ಪು ಬಣ್ಣದ ಪರದೆ ಹಾಕಿಕೊಂಡಿತ್ತು. ನಿಂತಿದ್ದ ಕಾರನ್ನು  ಅಲುಗಾಟ ಕಂಡು ಸಂಶಯಗೊಂಡ ಸ್ಥಳಿಯರು ಇಣುಕಿ ನೋಡಿದಾಗ ಅನೈತಿಕ ಕೃತ್ಯ ಬೆಳಕಿಗೆ ಬಂದಿದೆ. ಈ ವೇಳೆ ಯುವಕ ಮತ್ತು ಯುವತಿಯ ಕಾರನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. […]

ಶಿರೂರು ಗುಡ್ಡೆ ಕುಸಿತ; ಅರ್ಜುನ್ ಮೃತದೇಹ ಪತ್ತೆ? ಏನಿದು ಬೆಳವಣಿಗೆ?

ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿ  ಗುಡ್ಡ ಕುಸಿತಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಹತ್ವದ ಬೆಳವಣಿಗೆ ನಡೆದಿದ್ದು, ಗುಡ್ಡ ಕುಸಿತಗೊಂಡ ಸ್ಥಳದಿಂದ 25 ಕಿಮೀ ದೂರದಲ್ಲಿನ ಹೊನ್ನಾವರ ಸಮುದ್ರದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಈ ಶವ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋದ ಲಾರಿ ಚಾಲಕ ಅರ್ಜುನ್​ (30) ಅವರದ್ದು ಎಂದು ಶಂಕಿಸಲಾಗಿದೆ. ಮೃತದೇಹ ಯಾರದ್ದು ಎಂಬುದು ಇನ್ನೂ ದೃಢವಾಗಿಲ್ಲ. ಸದ್ಯ ಕರಾವಳಿ ಪೊಲೀಸರು ಮೃತದೇಹವನ್ನು ದಡಕ್ಕೆ ತಂದು, ಡಿಎನ್​ಎ ಪರೀಕ್ಷೆಗೆ ಕಳುಹಿಸಿದ್ದಾರೆ. ಡಿಎನ್​ಎ ಪರೀಕ್ಷೆಗಾಗಿ ಅರ್ಜುನ್​ […]

ಟಿಪ್ಪರ್ ಲಾರಿ ಹರಿದು ಗರ್ಭಿಣಿ ಸಾವು; ಭೀಕರ ಅಪಘಾತಕ್ಕೆ ಗರ್ಭಿಣಿಯ ಹೊಟ್ಟೆಯಿಂದ ಹೊರ ಬಂದ ಮಗು

ಟಿಪ್ಪರ್ ಲಾರಿ ಡಿಕ್ಕಿಯಾಗಿ 8 ತಿಂಗಳ ಗರ್ಭಿಣಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿ ನಡೆದಿದೆ. ಎಡೇಹಳ್ಳಿ ಗ್ರಾಮದ ಸಿಂಚನ (30) ಮೃತರು. ಸಿಂಚನಾ ಬೈಕ್ ನಲ್ಲಿ ಹೋಗುವಾಗ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಸಾವನ್ನಪ್ಪಿದ್ದಾರೆ. ಟಿಪ್ಪರ್ ಹರಿದ ಪರಿಣಾಮ ಅವರ ಹೊಟ್ಟೆಯಲ್ಲಿದ್ದ ಮಗು ಕೂಡ ಹೊರಗೆ ಬಂದಿದೆ. ಪತಿ ಮಂಜುನಾಥ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ಬಳಿಕ ಟಿಪ್ಪರ್ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ […]

ಸೇತುವೆ ಕುಸಿದು ನದಿಗೆ ಬಿದ್ದ ಲಾರಿ; ಶಿರೂರು ದುರ್ಘಟನೆ ಬೆನ್ನಲ್ಲಿ ಉತ್ತರಕನ್ನಡದಲ್ಲಿ ಮತ್ತೊಂದು ದುರಂತ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್ ಬಳಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ 66ರ ಬಳಿ ನಿರ್ಮಿಸಿದ್ದ ಸೇತುವೆ ಕುಸಿದಿದೆ. ಸೇತುವೆ ಮೇಲೆ ತಮಿಳುನಾಡು ಮೂಲದ ಲಾರಿ ಚಲಿಸುವಾಗ ಘಟನೆ ಸಂಭವಿಸಿದ್ದು ಲಾರಿ ಸಮೇತ ಚಾಲಕ ಕಾಳಿ ನದಿಗೆ ಬಿದ್ದಿದ್ದಾನೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ 41 ವರ್ಷಗಳ ಹಳೆ ಸೇತುವೆ ಕುಸಿದು ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿ 66ರ ನಿರ್ಮಾಣದ ವೇಳೆ ಒಂದೇ ಒಂದು ಹೊಸ ಸೇತುವೆ ನಿರ್ಮಾಣ ಮಾಡಲಾಗಿತ್ತು. ಇನ್ನೊಂದು ಮಾರ್ಗಕ್ಕೆ […]

ಮಂಗಳೂರು; ಜೋಕಟ್ಟೆಯಲ್ಲಿ ಬಾಲಕಿಯ ಕೊಲೆ ಪ್ರಕರಣ; ಇಬ್ಬರು ವಶಕ್ಕೆ!

ಮಂಗಳೂರು: ಅಪ್ರಾಪ್ತ ಬಾಲಕಿಯನ್ನು  ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆಯಲ್ಲಿ ನಡೆದಿದೆ. ಪಣಂಬೂರಿನ ಬಾಡಿಗೆ ಮನೆಯೊಂದರಲ್ಲಿ ಬೆಳಗಾವಿ ಮೂಲದ ಹನುಮಂತ ಎಂಬವರು ವಾಸವಾಗಿದ್ದು ಅವರ ಮನೆಯಲ್ಲಿ ಕಳೆದ 4 ದಿನಗಳ ಹಿಂದೆ ತಮ್ಮನ ಮಗಳಾದ 13 ವರ್ಷದ ಬಾಲಕಿಯು ಕೈ ನೋವಿನ ಚಿಕಿತ್ಸೆ ಪಡೆಯಲು ಬೆಳಗಾವಿಯಿಂದ ಬಂದು ಉಳಿದುಕೊಂಡಿದ್ದಳು . ಮನೆಯಲ್ಲಿರುವವರೆಲ್ಲಾ ಕೆಲಸಕ್ಕೆ ಹೋದ ನಂತರ ಬೆಳ್ಳಿಗ್ಗೆ ಸರಿ ಸುಮಾರು 10.30 ಗಂಟೆಗೆ ಅಪ್ರಾಪ್ತ ಮೃತ ಬಾಲಕಿಯ ತಾಯಿಯು ಪಕ್ಕದ ಮನೆಯವರಿಗೆ ಕರೆ […]

ಹಾವು ಕಡಿದು 15 ವರ್ಷದ ಬಾಲಕಿ‌ ಮೃತ್ಯು

ಹಾವು ಕಡಿದು ವಿದ್ಯಾರ್ಥಿನಿ ಸಾವಿಗೀಡಾದ ಘಟನೆ  ಹೂವಿನಹಡಗಲಿ ತಾಲ್ಲೂಕಿನ ಹೊನ್ನನಾಯಕನಹಳ್ಳಿಯಲ್ಲಿ ನಡೆದಿದೆ. ಪಟ್ಟಣದ ಸೊಪ್ಪಿನ ಕಾಳಮ್ಮ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಜಹಿರಾಬೀ ಹಾರೋಗೇರಿ (15) ಮೃತ ವಿದ್ಯಾರ್ಥಿನಿ. ಬಾಲಕಿ ತನ್ನ ತಾಯಿಯೊಂದಿಗೆ ಹೊಲಕ್ಕೆ ಹೋಗಿದ್ದ ವೇಳೆ ಹಾವು ಕಡಿದಿದೆ. ತಕ್ಷಣ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಬಾಲಕಿಯನ್ನು ಕರೆ ತಂದು ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಗದಗ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ. ಈ ಕುರಿತು ಪಟ್ಟಣ ಠಾಣೆಯಲ್ಲಿ […]

ಇನ್‌ಸ್ಪೆಕ್ಟರ್​ ತಿಮ್ಮೇಗೌಡ ಆತ್ಮಹತ್ಯೆಯಲ್ಲ, ಕೊಲೆ; ಕುಟುಂಬಸ್ಥರ ಆರೋಪ

ಪೊಲೀಸ್ ಇನ್‌ಸ್ಪೆಕ್ಟರ್​ ತಿಮ್ಮೇಗೌಡ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ ಪ್ರಕರಣ ವಿಭಿನ್ನ ತಿರುವನ್ನು ಪಡೆದುಕೊಂಡಿದ್ದು, ಕುಟುಂಬಸ್ಥರು ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಆರೋಪಿಸಿದ್ದಾರೆ. ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಸೋಮವಾರ ಇನ್ಸ್ ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಿಮ್ಮೇಗೌಡ ಅವರು ಈ ಹಿಂದೆ ಕುಂಬಳಗೋಡಿನ ಇನ್‌ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಎರಡು ತಿಂಗಳ ಹಿಂದೆ ಸಿಸಿಬಿಗೆ ವರ್ಗಾವಣೆಗೊಂಡಿದ್ದರು. ಬೆಂಗಳೂರು ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರ ತಮ್ಮ ತೋಟದ ಜಾಗದಲ್ಲಿ ಮರಕ್ಕೆ […]