ಗೂಗಲ್ ಪೇ, ಪೋನ್ ಪೇ ಸ್ಕ್ಯಾನರ್ ಬಳಸುವಾಗ ಇರಲಿ ಎಚ್ಚರ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಗ್ಯಾಂಗ್

ಗ್ರಾಹಕರ ಸೋಗಿನಲ್ಲಿ ಹೋಟೆಲ್ ಗೆ ಬಂದ ನಾಲ್ವರ ಗುಂಪು ಹೊಟ್ಟೆತುಂಬ ಊಟ ಮಾಡಿ ಬಳಿಕ ಫೋನ್ ಪೇ ಮೂಲಕ ಬಿಲ್ ಪೇ ಮಾಡಿದಂತೆ ಯಾಮಾರಿಸುತ್ತಿದ್ದ ಖತರ್ನಾಕ್ ಕಳ್ಳರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿರುವ ಘಟನೆ ನಡೆದಿದೆ. ಬೆಂಗಳೂರಿನ ಹೋಟೆಲ್ ಒಂದರಲ್ಲಿ ಈ ಘಟನೆ ನಡೆದಿದ್ದು, ಹೋಟೆಲ್ ವ್ಯವಸ್ಥಾಪಕರೊಬ್ಬರು ವಂಚಕರನ್ನು ರೆಡ್ ಹ್ಯಾಂಡ್ ಆಗಿಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಓರ್ವ ಮಹಿಳೆಯೊಂದಿಗೆ ಹೋಟೆಲ್ ಗೆ ಬಂದ ಮೂವರು ಯುವಕರು ಹೋಟೆಲ್ ನಲ್ಲಿ ಊಟ ಮಾಡಿದ್ದಾರೆ. 750 ರೂ ಬಿಲ್ ಆಗಿದೆ. […]
ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳಿಬ್ಬರು ಆತ್ಮಹತ್ಯೆ

ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆಯ ರಬಕವಿ-ಬನಹಟ್ಟಿ ತಾಲೂಕಿನ ನಂದಗಾಂವ್ ಗ್ರಾಮದಲ್ಲಿ ನಡೆದಿದೆ. ಸಚಿನ್ ದಳವಾಯಿ(22), ಪ್ರಿಯಾ ಮಡಿವಾಳರ(19) ಮೃತ ಪ್ರೇಮಿಗಳಾಗಿದ್ದು, ಮಹಾಲಿಂಗಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇವರಿಬ್ಬರ ಜಾತಿ ಬೇರೆಯಾಗಿದ್ದರಿಂದ ಹುಡುಗನ ಮನೆಯವರು ಅಂತರ್ಜಾತಿ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಮನನೊಂದ ಜೋಡಿ ಆತ್ಮಹತ್ಯೆಯನ್ನು ಮಾಡಿಕೊಂಡಿದೆ.
ಹಾವು ಕಡಿದು ಬಾಣಂತಿ ಮೃತ್ಯು; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಮೇವು ತರಲು ಹೋಗಿದ್ದ ವೇಳೆ ಹಾವು ಕಡಿದು ಬಾಣಂತಿಯೊಬ್ಬರು ಮೃತಪಟ್ಟಿರುವ ಘಟನೆ ಸಾಗರ ತಾಲ್ಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ರಂಜಿತಾ (22) ಎಂದು ಗುರುತಿಸಲಾಗಿದೆ. ಮೇವು ತರಲು ಹೋಗಿದ್ದ ವೇಳೆ ಪೊದೆಯಲ್ಲಿದ್ದ ಹಾವೊಂದು ಮಹಿಳೆಗೆ ಕಡಿದಿದೆ ಎನ್ನಲಾಗಿದೆ. ಹಾವು ಕಡಿದ ಕೆಲಹೊತ್ತಿನ ಬಳಿಕ ಹಾವು ಕಚ್ಚಿರುವುದು ಅವರ ಅರಿವಿಗೆ ಬಂದಿದೆ. ಕುಟುಂಬಸ್ಥರು ನೋಡಿದಾಗ ರಂಜಿತಾ ಗದ್ದೆಯಲ್ಲಿ ಕುಸಿದು ಬಿದ್ದಿದ್ದರು. ಇದನ್ನು ಗಮನಿಸಿ ತಕ್ಷಣ ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ […]
ಉಳ್ಳಾಲ ಮೂಲದ ಮದ್ರಸಾ ಶಿಕ್ಷಕ ಹಠಾತ್ ನಿಧನ

ಬಳ್ಳಾರಿ; ಉಳ್ಳಾಲ ಮೂಲದ ಮದ್ರಸಾ ಶಿಕ್ಷಕರೋರ್ವರು ಬಳ್ಳಾರಿಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ ಮೃತಪಟ್ಟ ಮದ್ರಸಾ ಶಿಕ್ಷಕರನ್ನು ಝೈನುದ್ದೀನ್ ಸಹದಿ ಎಂದು ಗುರುತಿಸಲಾಗಿದೆ. ಶುಕ್ರವಾರದ ನಮಾಝ್ ಗೆ ಸಿದ್ಧತೆ ನಡೆಸುತ್ತಿದ್ದಾಗ ಹಠಾತ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇವರು ಮಂಗಳೂರಿನಿಂದ ಬಳ್ಳಾರಿಗೆ ಹೋಗಿ ಮದ್ರಸಾ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದರು. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
BREAKING ಎರಡು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾರಿದ ಮಹಿಳೆ; ಹೃದಯವಿದ್ರಾಹಕ ಘಟನೆ ವರದಿ

ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾಹಕ ಘಟನೆ ಹೊಸನಗರದಲ್ಲಿ ನಡೆದಿದೆ. ಚಂಪಕಾಪುರ ನಿವಾಸಿ ರಾಜೇಶ್ ಎಂಬವರ ಪತ್ನಿ ವಾಣಿ(32) ಇಬ್ಬರು ಮಕ್ಕಳಾದ ಸಮರ್ಥ(12), ಸಂಪದ (6) ಅವರನ್ನು ಬಾವಿಗೆ ಎಸೆದು ತಾನು ಕೂಡ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರ ಠಾಣೆ ಪಿಎಸ್‌ಐ ರಮೇಶ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಬಾವಿಯಿಂದ ತೆಗೆದು ಆಸ್ಪತ್ರೆಗೆ ಸೇರಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮದುವೆ ದಿನ ಹೊಡೆದಾಡಿಕೊಂಡು ವಧು-ವರ ಸಾವು ಪ್ರಕರಣ: ಮರಣೋತ್ತರ ಪರೀಕ್ಷೆ ವರದಿ ಬಯಲು, ಸಾವಿನ ಬಗ್ಗೆ ದಟ್ಟವಾದ ಸಂಶಯ

ವಧು- ವರ ಮದುವೆ ದಿನ ಹೊಡೆದಾಡಿಕೊಂಡು ಮೃತಪಟ್ಟ ಆತಂಕಕಾರಿ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯಲ್ಲಿ ನಡೆದಿತ್ತು ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯ ನವೀನ್ (29) ಹಾಗೂ ಲಿಖಿತಶ್ರೀ (20) ದುರಂತ ಅಂತ್ಯ ಕಂಡ ಜೋಡಿಯಾಗಿದ್ದಾರೆ. ಜೋಡಿ ಮದುವೆಯಾದ ದಿನವೇ ರೂಮ್‌ಗೆ ಹೋಗುತ್ತಿದ್ದಂತೆ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಪ್ರಕರಣದಲ್ಲಿ ಮೂರನೇ ವ್ಯಕ್ತಿಯ ಕೈವಾಡದ ಬಗ್ಗೆ ಕೂಡ ಶಂಕೆ ಮೂಡಿತ್ತು. ಈಗ ನವೀನ್ (29) ಹಾಗೂ ಲಿಖಿತಶ್ರೀ (20) ಮರಣೋತ್ತರ ಪರೀಕ್ಷೆ ವರದಿ ಕುಟುಂಬಸ್ಥರ ಹಾಗೂ ಪೊಲೀಸರ […]
ಕುಮಾರಸ್ವಾಮಿ ವಿರುದ್ಧ ದೂರು ನೀಡಿ 10 ತಿಂಗಳಾದರೂ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದ ರಾಜ್ಯಪಾಲರು; ವರದಿ

ಗಣಿ ಅಕ್ರಮ ಪ್ರಕರಣದಲ್ಲಿ 2014ರಿಂದ ವಿಚಾರಣೆ ನಡೆಸಿದ ಲೋಕಾಯುಕ್ತದ ಎಸ್‌ಐಟಿಯು ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ರಾಜ್ಯಪಾಲರಿಗೆ 10 ತಿಂಗಳ ಹಿಂದೆಯೇ ಮನವಿ ಮಾಡಿಕೊಂಡಿದೆ, ಆದರೆ ಅವರು ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ವರದಿಯಾಗಿದೆ. ದಿನಾಂಕ 10/9/2014ರ ಕ್ರೈಮ್ ನಂ. 16/14 ಈ ಕೇಸಿನಲ್ಲಿ ಲೋಕಾಯುಕ್ತದ ಅಡಿಯಲ್ಲಿ ಗಣಿ ಅಕ್ರಮಗಳ ತನಿಖೆ ನಡೆಸುತ್ತಿರುವ ಎಸ್‌ಐಟಿ ವತಿಯಿಂದ ರಾಜ್ಯಪಾಲರಿಗೆ ಪತ್ರ ಕಳುಹಿಸಲಾಗಿದೆ. 21/11/2023ರಂದು ಲೋಕಾಯುಕ್ತದ ಎಡಿಜಿಪಿ ಚಂದ್ರಶೇಖರ್ ಅವರೇ ಖುದ್ದಾಗಿ ಪತ್ರವನ್ನು ಕಳುಹಿಸಿದ್ದಾರೆ. ಸಾಯಿ ವೆಂಕಟೇಶ್ವರ […]
ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮೇಲೆ ಕಲ್ಲು ಎತ್ತಿ ಹಾಕಿದ ದುಷ್ಕರ್ಮಿ; ಮಹಿಳೆಯ ಸ್ಥಿತಿ ಗಂಭೀರ, ಆರೋಪಿಗೆ ಧರ್ಮದೇಟು

ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮೇಲೆ ಕಲ್ಲು ಎತ್ತಿ ಹಾಕಿರುವ ಆಘಾತಕಾರಿ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸಹಕಾರ ನಗರದಲ್ಲಿ ನಡೆದಿದೆ. ಸಹಕಾರ ನಗರದಲ್ಲಿ ಸುನಿತಾ (38) ಎಂಬ ಮಹಿಳೆ ಗುರುವಾರ ಸಂಜೆ ನಡೆದುಕೊಂಡು ಹೋಗುವಾಗ ದುಷ್ಕರ್ಮಿಯೋರ್ವ ಅವರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿದ್ದಾನೆ. ಬಳಿಕ ಕಲ್ಲಿನಿಂದ ಅವರ ತಲೆಯನ್ನು ಜಜ್ಜಿದ್ದಾನೆ. ಇದರಿಂದಾಗಿ ಮಹಿಳೆಯು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು, ದುಷ್ಕರ್ಮಿಗೆ ಹಿಡಿದು ಧರ್ಮದೇಟು ಕೊಟ್ಟಿದ್ದಾರೆ. ಬಳಿಕ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೊಡಿಗೇಹಳ್ಳಿ […]
ದಟ್ಟ ಕಾಡಿನೊಳಗೆ ಆಧುನಿಕ ಟೆಕ್ನಾಲಜಿ ಬಳಸಿ ನಿಧಿಗಾಗಿ ಶೋಧ ನಡೆಸುತ್ತಿದ್ದ ನಿಧಿಗಳ್ಳರ ಬಂಧನ

ಆಧುನಿಕ ಟೆಕ್ನಾಲಜಿ ಬಳಸಿ ನಿಧಿ ಶೋಧನೆ ನಡೆಸುತ್ತಿದ್ದ ಆಂಧ್ರದ ನಿಧಿಗಳ್ಳರನ್ನು ಬಳ್ಳಾರಿಯ ಸಂಡೂರು ಅರಣ್ಯ ಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆಂಧ್ರ ಮೂಲದ ಶ್ರೀನಿವಾಸ್(45), ಆಕಾಶ್( 20) , ಶ್ರೀನಿವಾಸ್, ವೆಂಕಟ್ ರಾವ್ ಹಾಗೂ ಗದಗ ಮೂಲದ ಭಗತ್ ಸಿಂಗ್ ದೊಡ್ಡಮನಿ(50) ಬಂಧಿತ ಆರೋಪಿಗಳು. ಇವರು ದಟ್ಟ ಕಾಡಿನ ಮಧ್ಯದಲ್ಲಿರುವ ಗುಹೆಗಳಲ್ಲಿ ನಿಧಿಗಾಗಿ ಹುಡುಕಾಟ ನಡೆಸಿದ್ದಾರೆ. ಇವರು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದೋಣಿ ಮಲೈ ಅರಣ್ಯ ವ್ಯಾಪ್ತಿಯಲ್ಲಿ ಚಿನ್ನ, ವಜ್ರಕ್ಕಾಗಿ ಹುಡುಕಾಡಿದ್ದಾರೆ. ಗುಹೆಯೊಳಗಡೆ ಸುರಂಗವನ್ನು ಕೂಡ ಕೊರೆಯಲು […]
ಬಂಟ್ವಾಳ; ಎಸೆಸೆಲ್ಸಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬಂಟ್ವಾಳ: ಎಸ್ಸೆಸೆಲ್ಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಜನಪದವು ಬಳಿ ನಡೆದಿದೆ. ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಬಡಕಬೈಲಿನ ಖಾಸಗಿ ಶಾಲೆಯಲ್ಲಿ ಈತ 10ನೇ ತರಗತಿಯ ವಿದ್ಯಾರ್ಥಿಯಾಗಿದ್ದ. ನಿನ್ನೆ ರಾತ್ರಿ ಸ್ನಾನ ಮಾಡಲೆಂದು ಬಾತ್ ರೂಂಗೆ ತೆರಳಿದ ಮಗ 8 ಗಂಟೆಯಾದರೂ ವಾಪಸ್ ಬಾರದೇ ಇರುವುದನ್ನು ಕಂಡ ತಾಯಿ ಬಾಗಿಲು ಬಡಿದರೂ ಬಾಗಿಲು ತೆಗೆಯದ ಹಿನ್ನೆಲೆಯಲ್ಲಿ ಬಾಗಿಲು ಮುರಿದು ಒಳಗೆ ನುಗ್ಗಿದಾಗ […]