ಮೆಟ್ರೋ ಟ್ರ್ಯಾಕ್ ಗೆ ಜಿಗಿದು ಯುವಕ ಆತ್ಮಹತ್ಯೆ ಪ್ರಕರಣ; ಕಾರಣ ಬಯಲು

ನಮ್ಮ ಮೆಟ್ರೋ ಟ್ರ್ಯಾಕ್ ಗೆ ಜಿಗಿದು ನಿನ್ನೆ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದ. ಇದೀಗ ಯುವಕನ ಆತ್ಮಹತ್ಯೆಗೆ ಕಾರಣ ಬಯಲಾಗಿದೆ. 35ರ ಹರೆಯದ ನವೀನ್ ಕುಮಾರ್ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ಮೆಟ್ರೋ ಟ್ರ್ಯಾಕ್ ಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನವೀನ್ ಕುಮಾರ್ ಬೆಂಗಳೂರಿನಲ್ಲಿ ಹಾರ್ಡ್ ವೇರ್ ಬ್ಯುಸಿನೆಸ್ ಮಾಡಿಕೊಂಡಿದ್ದರು. ಬ್ಯುಸಿನೆಸ್ ನಲ್ಲಿ ನಷ್ಟವಾದ ಹಿನ್ನೆಲೆ, ಸಾಲ ತೀರಿಸಲು ಸಾಧ್ಯವಾಗಿಲ್ಲ. ಸಾಲ ಕೊಟ್ಟವರು ದಿನಾ ವಾಪಾಸ್ಸು ಕೇಳುತ್ತಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಬಾಲಕನಿಗೆ ಕತ್ತಲೆ ಕೋಣೆಯಲ್ಲಿ ಕೂಡಿ ಹಾಕಿ ಥಳಿತ; ರಾಜ್ಯದಲ್ಲೊಂದು ಅಮಾನವೀಯ ಘಟನೆ ವರದಿ

ಪೆನ್ನು ಕದ್ದಿದ್ದಾನೆಂದು ಆರೋಪಿಸಿ ಬಡ ಪುಟ್ಟ ವಿದ್ಯಾರ್ಥಿಯೋರ್ವನ ಮೇಲೆ ಮಠದ ಗುರೂಜಿ ಮನಬಂದಂತೆ ಹಲ್ಲೆ ನಡೆಸಿದ ಅಮಾನವೀಯ ಘಟನೆ ರಾಯಚೂರು ನಗರದ ರಾಮಕೃಷ್ಣ ಆಶ್ರಮದಲ್ಲಿ ನಡೆದಿದೆ. ಶ್ರವಣ್ ಕುಮಾರ್ ಹಲ್ಲೆಗೊಳಗಾದ ಬಾಲಕ. ರಾಮಕೃಷ್ಣ ಮಠದ ಗುರೂಜಿ ವೇಣುಗೋಪಾಲ್ ಎಂಬಾತ ಹಲ್ಲೆ ನಡೆಸಿರುವ ಆರೋಪಿ. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಶ್ರವಣ್ ಕುಮಾರ್ ನನ್ನು ಬಡತನದ ಕಾರಣಕ್ಕೆ ನಗರದ ಸ್ಟೇಷನ್ ರಸ್ತೆಯಲ್ಲಿರುವ ರಾಮಕೃಷ್ಣ ಆಶ್ರಮಕ್ಕೆ ಸೇರಿಸಲಾಗಿತ್ತು. ಆದರೆ ನಿನ್ನೆ ಆಕಸ್ಮಿಕವಾಗಿ ತಾಯಿ ಆಶ್ರಮಕ್ಕೆ ಭೇಟಿ ನೀಡಿ ಮಗುವನ್ನು ನೋಡಿದಾಗ […]
ನಮ್ಮ ಮೆಟ್ರೋ ಟ್ರ್ಯಾಕ್ ಗೆ ಹಾರಿ ಯುವಕನೋರ್ವ ಆತ್ಮಹತ್ಯೆ

ಬೆಂಗಳೂರು: ‘ನಮ್ಮ ಮೆಟ್ರೋ’ ಟ್ರ್ಯಾಕ್ಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಜೆ 5.45ರ ಸುಮಾರಿಗೆ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ನಡೆದಿದೆ. ಈ ಕುರಿತು ನಮ್ಮ ಮೆಟ್ರೋ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, 35 ವರ್ಷದ ವ್ಯಕ್ತಿಯೊಬ್ಬರು ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ 5.45 ಗಂಟೆಗೆ ಸಮೀಪಿಸುತ್ತಿರುವ ರೈಲಿನ ಮುಂದೆ ಜಿಗಿದಿದ್ದಾರೆ. ಘಟನೆಯಿಂದ ಹಸಿರು ಮಾರ್ಗದಲ್ಲಿ ಯಲಚೇನಹಳ್ಳಿ ಮತ್ತು ಸಿಲ್ಕ್ ಇನ್‌ಸ್ಟಿಟ್ಯೂಟ್ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ, ಉಳಿದ ಮಾರ್ಗದಲ್ಲಿ ಸೇವೆಗಳು ಲಭ್ಯವಿದೆ ಎಂದು ಮಾಹಿತಿ ನೀಡಿದೆ.
ಮಂಗಳೂರು; ಕಾಲೇಜು ವಿದ್ಯಾರ್ಥಿಗಳ ನಡುವೆ ಹೊಡೆದಾಟ

ವಿದ್ಯಾರ್ಥಿಗಳ ಗುಂಪೊಂದು ನಡುರಸ್ತೆಯಲ್ಲಿ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರಿನ ಪ್ರತಿಷ್ಠಿತ ಅಲೋಶಿಯಸ್ ಕಾಲೇಜು ಬಳಿ ನಡೆದಿದೆ. ಮಂಗಳೂರು ಅಲೋಶಿಯಸ್ ಕಾಲೇಜು ಗೇಟ್ ಮುಂಭಾಗದ ರಸ್ತೆಯಲ್ಲಿ ಎರಡು ಪ್ರತ್ಯೇಕ ಬಣ್ಣದ ಯುನಿಫಾರಂ ಧರಿಸಿರುವ ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟದ ವಿಡಿಯೋ ವೈರಲ್ ಆಗಿದೆ. ಕಾಲೇಜು ಬಿಟ್ಟ ಬಳಿಕ ಕ್ಷುಲ್ಲಕ ಕಾರಣಕ್ಕಾಗಿ ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಕಾರು ಮರಕ್ಕೆ ಢಿಕ್ಕಿಯಾಗಿ ಭೀಕರ ಅಪಘಾತ; ಮೂವರು ಯುವಕರು ಮೃತ್ಯು

ಆಡಿ ಕಾರು ಮರಕ್ಕೆ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಬಂಗಾರಪೇಟೆ ಮುಖ್ಯ ರಸ್ತೆಯ ಸಹಕಾರ ನಗರದ ಬಳಿ ನಡೆದಿದೆ. ಬೆಳಗ್ಗೆ 3 ಗಂಟೆಯ ಸುಮಾರಿಗೆ ಈ ಅಪಘಾತ ನಡೆದಿದ್ದು, ರೇವಾ ಯೂನಿವರ್ಸಿಟಿಯ ವಿದ್ಯಾರ್ಥಿಗಳಾದ ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್ ಹಾಗೂ ಬಂಗಾರಪೇಟೆಯ ನಿಚ್ಚಲ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬಂಗಾರಪೇಟೆ ಮೂಲದ ಸಾಯಿ ಗಗನ್ ಪಾರಾಗಿದ್ದಾನೆ. ಮನೆಯಿಂದ ಕೋಲಾರಕ್ಕೆ ಮರಳುವಾಗ ಅಪಘಾತ ಸಂಭವಿಸಿದ್ದು, ಅಪಘಾತದ ಭೀಕರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ […]
ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಪತಿ

ಪತ್ನಿಯನ್ನು ಚೂರಿಯಿಂದ ಇರಿದು ಪತಿ ಕೊಲೆ ಮಾಡಿರುವ ಘಟನೆ ಚಾಮರಾಜಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಫಾತಿಮಾ (34) ಕೊಲೆಯಾದ ಮಹಿಳೆ. ಈಕೆಯ ಪತಿ ತಬ್ರೇಜ್ ಪಾಷಾ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಕೌಟುಂಬಿಕ ವಿಚಾರವಾಗಿ ಹಲವು ದಿನಗಳಿಂದ ಪತಿ- ಪತ್ನಿ ನಡುವೆ ಗಲಾಟೆ ನಡೆಯುತ್ತಿತ್ತು. ಕುಟುಂಬದ ಹಿರಿಯರು ಬುದ್ಧಿ ಹೇಳಿ ಸಂಸಾರ ನಡೆಸಿಕೊಂಡು ಹೋಗುವಂತೆ ಬುದ್ಧಿ ಹೇಳುತ್ತಿದ್ದರು. ಆದರೆ, ಇಂದು ಬೆಳಗ್ಗೆ ಕೂಡ ಇಬ್ಬರ ಮಧ್ಯೆ ಜಗಳ ನಡೆದಿದ್ದು, ಬೆಳಗ್ಗೆ 8.30ರ ಸುಮಾರಿಗೆ ತಬ್ರೇಜ್ ಪಾಷಾ ಹೆಂಡಿತಿಗೆ ಚಾಕುವಿನಿಂದ […]
ಮಳೆ ಹವಾಂತರದಿಂದ ಕಂಗೆಟ್ಟ ಜನರಿಗೆ ಮತ್ತೊಂದು ಶಾಕ್; ಲಾ ಲಿನಾ ಮಾರುತ, ಹವಮಾನ ಇಲಾಖೆಯಿಂದ ಎಚ್ಚರಿಕೆ

ಭಾರೀ ಮಳೆಗೆ ಕರಾವಳಿ ಕರ್ನಾಟಕ ಮಾತ್ರವಲ್ಲದೆ ದೇಶದ ವಿವಿಧ ರಾಜ್ಯಗಳಲ್ಲಿ ಅನಾಹುತ ಸೃಷ್ಟಿಯಾಗಿದೆ. ಈ ಮಧ್ಯೆ ಆಘಾತಕಾರಿ ಸುದ್ದಿಯೊಂದು ಬಹಿರಂಗವಾಗಿದೆ. ಈ ಬಾರಿ ಅಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಲಾ ಲಿನಾ ಮಾರುತ ರೂಪುಗೊಳ್ಳಲಿದೆ. ಇದು ಭಾರಿ ಮಳೆಯನ್ನೇ ತರಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಗಸ್ಟ್ ಮೊದಲ ವಾರಾಂತ್ಯಕ್ಕೆ ಮಳೆ ಕಡಿಮೆಯಾಗಲಿದೆ. ಆದರೆ ಆಗಸ್ಟ್ ಅಂತ್ಯ ಹಾಗೂ ಸೆಪ್ಟೆಂಬರ್ ನಲ್ಲಿ ಲಾ ನಿನಾ ಮಾರುತ ರೂಪುಗೊಂಡು ಅವಾಂತರ ಸೃಷ್ಟಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. […]
ಉಡುಪಿ; ಮುಸುಕುಧಾರಿಗಳಿಂದ ಪ್ಲ್ಯಾಟ್ ಗೆ ನುಗ್ಗಲು ಯತ್ನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ನಾಲ್ವರು ಮುಸುಕುಧಾರಿಗಳು ಫ್ಲ್ಯಾಟ್ ವೊಂದಕ್ಕೆ ನುಗ್ಗಲು ಯತ್ನಿಸಿ, ವಿಫಲರಾಗಿ ವಾಪಾಸ್ಸಾಗಿರುವ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ. ಮುಸುಕುಧಾರಿಗಳು ಬಂದಿರುವುದು ಅಪಾರ್ಟ್ ಮೆಂಟ್ ನ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ. ನಾಲ್ವರು ಮುಸುಕುಧಾರಿಗಳು ರಾಡ್ ಗಳನ್ನು ಹಿಡಿದು ಶಸ್ತ್ರಸಜ್ಜಿತವಾಗಿ ಅಪಾರ್ಟ್ ಮೆಂಟ್ ಗೆ ನುಗ್ಗಲು ಯತ್ನಿಸಿದ್ದಾರೆ. ಅಪರಿಚಿತರು ಪ್ಲ್ಯಾಟ್ ಗೆ ಪ್ರವೇಶಿಸಲು ವಿಫಲರಾಗಿ ಸ್ಥಳದಿಂದ ಹಿಂದಿರುಗಿರುವುದು ಸಿಸಿಟಿವಿ ದೃಶ್ಯದಲ್ಲಿ ಕಂಡುಬಂದಿದೆ. ಮುಸುಕುಧಾರಿಗಳು ಒಳನುಗ್ಗಲು ಯತ್ನಿಸಿದ್ದ ಫ್ಲ್ಯಾಟ್ ನಲ್ಲಿ ವಯಸ್ಸಾದ ದಂಪತಿ ವಾಸಿಸುತ್ತಿದ್ದರು. ಈ ದಂಪತಿ ಒಂದು ವಾರದ […]
ಮಟನ್ ಊಟ ಸೇವಿಸಿ ಅಸ್ವಸ್ಥ; ರಾಯಚೂರಿನಲ್ಲಿ ಒಂದೇ ಮನೆಯ ನಾಲ್ವರು ಸಾವು

ಮಟನ್ ಊಟ ಸೇವಿಸಿದ್ದ ಒಂದೇ ಕುಟುಂಬದ ನಾಲ್ವರು ಅಸ್ವಸ್ಥರಾಗಿ ಸಾವನ್ನಪ್ಪಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಮೃತರನ್ನು ಭೀಮಣ್ಣ(60), ಈರಮ್ಮ (54), ಮಲ್ಲೇಶ್ (19) ಹಾಗೂ ಪಾರ್ವತಿ(17)ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಲ್ಲಮ್ಮ ಎಂಬುವವರ ಸ್ಥಿತಿ ಗಂಭೀರವಾಗಿದೆ. ಬುಧವಾರ ರಾತ್ರಿ ಇಡೀ ಕುಟುಂಬ ಮಟನ್ ಕೊಂಡು ತಂದು ಅಡುಗೆ ಮಾಡಿ ಜೊತೆಯಾಗಿ ಊಟ ಮಾಡಿತ್ತು. ಆ ಬಳಿಕ ಎಲ್ಲರೂ ಅಸ್ವಸ್ಥರಾಗಿದ್ದಾರೆ. ಮಟನ್ ಅಡುಗೆಯಲ್ಲಿ ಹಲ್ಲಿ […]
ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡೆ ಕುಸಿತ; ಸಂಚಾರ ಬಂದ್

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡೆ ಕುಸಿತ ಸಂಭವಿಸಿದ್ದು, ಸಂಚಾರ ಬಂದ್ ಆಗಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಮಾಣಿ- ಮೈಸೂರು ಹೆದ್ದಾರಿಯ ತೆಂಕಿಲ ಎಂಬಲ್ಲಿ ಹೆದ್ದಾರಿ ಮೇಲೆ ಗುಡ್ಡ ಕುಸಿದು ಬಿದ್ದಿದೆ. ಇದರ ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸದ್ಯ ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ. ಗುಡ್ಡ ಕುಸಿತದ ವೇಳೆ ವಾಹನ ಸಂಚಾರ ಇಲ್ಲದಿರುವುದರಿಂದ ಸಂಭವನೀಯ ಅನಾಹುತ ತಪ್ಪಿದಂತಾಗಿದೆ. ಸದ್ಯ ಮಡಿಕೇರಿ ಹಾಗೂ ಮೈಸೂರು ಕಡೆಗೆ ಪ್ರಯಾಣಿಸುವವರಿಗೆ ಬದಲಿ ರಸ್ತೆಯಾಗಿ ಪುತ್ತೂರು ಸಿಟಿ ಮೂಲಕ […]