BREAKING ಶಾಲಾ ಕೊಠಡಿಯಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಮುಖ್ಯ ಶಿಕ್ಷಕನ ಮೃತದೇಹ ಪತ್ತೆ

ಶಾಲೆಯ ಮುಖ್ಯೋಪಾಧ್ಯಾಯನೋರ್ವ ಶಾಲೆಯಲ್ಲೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಸಮೀಪದ ನಾಗೂರ ಗ್ರಾಮದಲ್ಲಿ ನಡೆದಿದೆ. ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯ ಸಿ ಎಸ್ ಹಡಪದ ಶಾಲೆಯ ಶಿಕ್ಷಕರ ಕೊಠಡಿಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕರಣ ತಿಳಿದುಬಂದಿಲ್ಲ, ಘಟನೆಗೆ ಸರ್ಕಾರಿ ನೌಕರರ ಸಂಘ ಆಘಾತ ವ್ಯಕ್ತಪಡಿಸಿದೆ. ನೌಕರರ ಸಂಘದ ಶಿವಾನಂದ ಮಂಗಾನವರ ಮಾತನಾಡಿ, ಶಿಕ್ಷಕನ ಸಾವಿನ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು […]
ಯುವಕನೋರ್ವ ಹೃದಯಾಘಾತದಿಂದ ಮೃತ್ಯು; ಒಂದು ವಾರದಿಂದ ಮೃತದೇಹಕ್ಕಾಗಿ ಕಾಯುತ್ತಿರುವ ಹೆತ್ತವರು

ಕುಷ್ಟಗಿಯ ಯುವಕನೋರ್ವ ಐರ್ಲೆಂಡ್‌ನಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಶ್ರೀಧರ ನಾಡಗೌಡ ವಾರದ ಹಿಂದೆಯೇ ಹೃದಯಾಘಾತದಿಂದ ಮೃತಪಟ್ಟಿದ್ದು, ಇವರು ತಾಲ್ಲೂಕು ಪಂಚಾಯಿತಿ ನಿವೃತ್ತ ವ್ಯವಸ್ಥಾಪಕ ರೇವಣ್ಣ ನಾಡಗೌಡ ದಂಪತಿಯ ದ್ವಿತೀಯ ಪುತ್ರ. ಇವರು ಕಳೆದ ಜೂನ್‌ನಲ್ಲಿ ಐರ್ಲೆಂಡ್‌ಗೆ ತೆರಳಿದ್ದರು. ತುಮಕೂರಿನಲ್ಲಿ ಎಂಜಿನಿಯರಿಂಗ್ ಪದವಿ ಪಡೆದ ನಂತರ ಐರ್ಲೆಂಡ್ ರಾಜಧಾನಿ ಡಬ್ಲಿನ್‌ನಲ್ಲಿ ಉನ್ನತ ವ್ಯಾಸಂಗ ಮುಗಿಸಿ ನಂತರ ಅದೇ ದೇಶದ ಗಾಲ್ವೆಯಲ್ಲಿನ ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗ ಕಂಡುಕೊಂಡಿದ್ದರು. ಶ್ರೀಧರ ಜುಲೈ 31ರಂದು ಮೃತಪಟ್ಟಿದ್ದು, ಕಂಪನಿಯ ಮೂಲಕ ಹೆತ್ತವರಿಗೆ ವಿಷಯ […]
ಜೋಕಟ್ಟೆಯಲ್ಲಿ ಬಾಲಕಿಯ ಕೊಲೆ ಪ್ರಕರಣ; ತನಿಖೆಯ ವೇಳೆ ಮಹತ್ವದ ಅಂಶಗಳು ಬಯಲು

ಮಂಗಳೂರು: ಜೋಕಟ್ಟೆಯಲ್ಲಿ ಬೆಳಗಾವಿ ಮೂಲದ 14 ವರ್ಷದ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆಯ ವೇಳೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಬಯಲಾಗಿದೆ. ಆರೋಪಿಯನ್ನು ಫಕೀರಪ್ಪ ಹಣಮಪ್ಪ ಮಾದರ(51) ಎಂದು ಗುರುತಿಸಲಾಗಿದ್ದು, ಆತನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ದೂರುದಾರರಿಗೆ ಫಕೀರಪ್ಪ ಪರಿಚಯವಿದ್ದು, ಅವರ ಬಾಡಿಗೆ ಮನೆಗೆ ಆಗಾಗ ಬಂದು ಹೋಗುತ್ತಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ. ಆಗಸ್ಟ್ 6 ರಂದು ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ […]
ರಾಜ್ಯದಲ್ಲೊಂದು ಶಾಕಿಂಗ್ ಸುದ್ದಿ; ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಮಧ್ಯೆ ಹೊಡೆದಾಟ; ವಧು ಸಾವು, ವರನ ಸ್ಥಿತಿ ಗಂಭೀರ

ಮದುವೆಯಾದ ಕೆಲವೇ ಗಂಟೆಯಲ್ಲಿ ವಧು-ವರ ಹೊಡೆದಾಡಿಕೊಂಡು ವಧು ಮೃತಪಟ್ಟು, ವರ ಗಂಭೀರವಾಗಿರುವ ಆತಂಕಕಾರಿ ಘಟನೆ ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕು ಚಂಬರಸನಹಳ್ಳಿ ಗ್ರಾಮದಲ್ಲಿ ಇಂದು ಲಿಖಿತ ಶ್ರೀ ಹಾಗೂ ನವೀನ್ ಅವರ ಮದುವೆ ನಡೆದಿದೆ. ಬಳಿಕ ರೂಮ್ಗೆ ತೆರಳಿದ ಜೋಡಿ ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ಇದರ ಪರಿಣಾಮ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಇಬ್ಬರನ್ನು ಕೆಜಿಎಫ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ವಧು ಲಿಖಿತ ಶ್ರೀ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಗಂಭೀರವಾಗಿ […]
ಬೆಳಗಾವಿ; ಅಗ್ನಿ ದುರಂತದಲ್ಲಿ ಮೃತ ಯುವಕನ ಮೂಳೆಗಳನ್ನು ಚೀಲದಲ್ಲಿ ಹಾಕಿಕೊಟ್ಟ ಆಡಳಿತ; ಹೃದಯವಿದ್ರಾಹಕ ಘಟನೆ ವರದಿ

ಬೆಳಗಾವಿಯ ನಾವಗೆ ಗ್ರಾಮದ ಕಾರ್ಖಾನೆಯ ಅಗ್ನಿ ಅವಘಡದಲ್ಲಿ ಕಾರ್ಮಿಕ ಯಲ್ಲಪ್ಪ ಸಣ್ಣಗೌಡ ಗುಂಡ್ಯಾಗೋಳ (20) ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ನಾವಗೆ ಗ್ರಾಮದ ಹೊರ ವಲಯದಲ್ಲಿ ಇರುವ ಸ್ನೇಹಂ ಟೇಪ್ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮಾರ್ಕಂಡೇಯ ನಗರ ನಿವಾಸಿಯಾಗಿದ್ದ ಯಲ್ಲಪ್ಪ ಗುಂಡ್ಯಾಗೋಳ(20) ಬೆಂಕಿಯಲ್ಲಿ ಬೆಂದು ಪ್ರಾಣ ಕಳೆದುಕೊಂಡಿದ್ದಾರೆ. ಕಾರ್ಯಾಚರಣೆಯ ಬಳಿಕ ಸಿಕ್ಕ ಅವರ ದೇಹದ ಮೂಳೆಗಳನ್ನು, ಅಧಿಕಾರಿಗಳು ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ ತಂದೆಯ ಕೈಗೆ ಕೊಟ್ಟು ಕಳುಹಿಸಿದ್ದಾರೆ. ಸುಟ್ಟುಹೋದ ಮಗನ ದೇಹದ ಅಲ್ಪಸ್ವಲ್ಪ ಅಂಗಾಂಗಗಳನ್ನು ತಂದೆ ಸಣ್ಣಗೌಡ […]
ಪತ್ನಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಪೊಲೀಸರಿಂದ ತಪ್ಪಿಸಿಕೊಳ್ಳುವಾಗ ಕಟ್ಟಡದಿಂದ ಬಿದ್ದು ಮೃತ್ಯು

ಬೆಂಗಳೂರು; ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ ತಬ್ರೇಝ್ ಎಂಬಾತ ಕಟ್ಟಡದಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಚಾಮರಾಜಪೇಟೆಯಲ್ಲಿ ಕೊಲೆ ನಡೆದ 5 ದಿನದ ಬಳಿಕ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ತಬ್ರೇಝ್ ಕಟ್ಟಡದಿಂದ ಜಿಗಿದಿದ್ದಾನೆ. ಕೋಲಾರದ ಚಿಕ್ಕಮ್ಮನ ಮನೆಗೆ ತೆರಳಿ ತಲೆಮರೆಸಿಕೊಂಡಿದ್ದ ತಬ್ರೇಝ್ ನನ್ನು ಬಂಧಿಸಲು ಪೊಲೀಸರು ಧಾವಿಸಿದಾಗ ಅವರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಕಟ್ಟಡದಿಂದ ಜಿಗಿದಿದ್ದಾನೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ತಬ್ರೇಝ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. 9 […]
ಶಾಲೆಗೆ ಜಮೀನು ಕೊಟ್ಟರೂ, ಎಸ್ ಡಿಎಂಸಿ ಅಧ್ಯಕ್ಷನನ್ನಾಗಿ ಮಾಡಿಲ್ಲ ಎಂದು ಶಾಲೆಗೆ ಬೀಗ ಜಡಿದ ಆಸಾಮಿ; ಮಕ್ಕಳು ಕಂಗಾಲು

ನಾನು ಶಾಲೆಗೆ ಜಮೀನು ಕೊಟ್ಟಿದ್ದೇನೆ, ಆದ್ದರಿಂದ ಸರ್ಕಾರಿ ಶಾಲೆಗೆ ತನ್ನನ್ನು ಶಾಶ್ವತವಾಗಿ ಎಸ್.ಡಿ.ಎಂ.ಸಿ. ಅಧ್ಯಕ್ಷನಾಗಿ ಮಾಡುವಂತೆ ಆಗ್ರಹಿಸಿ ವ್ಯಕ್ತಿಯೊಬ್ಬ ಶಾಲೆಗೆ ಬೀಗ ಜಡಿದಿದ್ದು, ಮಕ್ಕಳು ಶಾಲೆಯ ಹೊರಗೆ ಕುಳಿತ ವಿಚಿತ್ರ ಘಟನೆ ವಿಜಯಪುರದಲ್ಲಿ ನಡೆದಿದೆ. ರಾಮನಗೌಡ ದೋರನಹಳ್ಳಿ ಎಂಬಾತ ತಾಳಿಕೋಟೆ ತಾಲೂಕಿನ ಬಳಗಾನೂರ ಕ್ರಾಸ್ ಬಳಿ ಇರುವ ಸರ್ಕಾರಿ ಪೂರ್ವ ಪ್ರಾಥಮಿಕ ಶಾಲೆಗೆ ಬೀಗ ಜಡಿದಿದ್ದಾನೆ. ಸರ್ಕಾರಿ ಶಾಲೆಗೆ ನಮ್ಮ ಕುಟುಂಬದಿಂದ 3 ಗುಂಟೆ ಭೂಮಿ ದಾನ ನೀಡಿದ್ದೇವೆ. ಹೀಗಾಗಿ ಈ ಶಾಲೆಗೆ ನಾನೇ ಶಾಶ್ವತವಾಗಿ ಎಸ್.ಡಿ.ಎಂ.ಸಿ. […]
ಉಡುಪಿ; ಹಾಡಹಗಲೇ ಕಾರಿನಲ್ಲಿ ಅನೈತಿಕ ಚಟುವಟಿಕೆ; ಕಾರು ಅಲುಗಾಟ ಕಂಡು ಹೋದ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದ ಜೋಡಿ

ಉಡುಪಿ ನಗರದಲ್ಲಿ ಹಾಡ ಹಗಲಲ್ಲೇ ಕಾರಿನೊಳಗೆ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಜೋಡಿಯನ್ನು ಸಾರ್ವಜನಿಕರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದು, ಈ ವೇಳೆ ಜೋಡಿ ಪರಾರಿಯಾಗಿದ್ದಾರೆ. ಉಡುಪಿಯ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಎದುರು, ಕಾರು ನಿಲುಗಡೆಗೊಳಿಸಿತ್ತು. ಕಾರಿನ ಗಾಜಿಗೆ ಒಳಭಾಗದಿಂದ ಕಪ್ಪು ಬಣ್ಣದ ಪರದೆ ಹಾಕಿಕೊಂಡಿತ್ತು. ನಿಂತಿದ್ದ ಕಾರನ್ನು ಅಲುಗಾಟ ಕಂಡು ಸಂಶಯಗೊಂಡ ಸ್ಥಳಿಯರು ಇಣುಕಿ ನೋಡಿದಾಗ ಅನೈತಿಕ ಕೃತ್ಯ ಬೆಳಕಿಗೆ ಬಂದಿದೆ. ಈ ವೇಳೆ ಯುವಕ ಮತ್ತು ಯುವತಿಯ ಕಾರನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. […]
ಶಿರೂರು ಗುಡ್ಡೆ ಕುಸಿತ; ಅರ್ಜುನ್ ಮೃತದೇಹ ಪತ್ತೆ? ಏನಿದು ಬೆಳವಣಿಗೆ?

ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿ ಗುಡ್ಡ ಕುಸಿತಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಗುಡ್ಡ ಕುಸಿತಗೊಂಡ ಸ್ಥಳದಿಂದ 25 ಕಿಮೀ ದೂರದಲ್ಲಿನ ಹೊನ್ನಾವರ ಸಮುದ್ರದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಈ ಶವ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋದ ಲಾರಿ ಚಾಲಕ ಅರ್ಜುನ್ (30) ಅವರದ್ದು ಎಂದು ಶಂಕಿಸಲಾಗಿದೆ. ಮೃತದೇಹ ಯಾರದ್ದು ಎಂಬುದು ಇನ್ನೂ ದೃಢವಾಗಿಲ್ಲ. ಸದ್ಯ ಕರಾವಳಿ ಪೊಲೀಸರು ಮೃತದೇಹವನ್ನು ದಡಕ್ಕೆ ತಂದು, ಡಿಎನ್ಎ ಪರೀಕ್ಷೆಗೆ ಕಳುಹಿಸಿದ್ದಾರೆ. ಡಿಎನ್ಎ ಪರೀಕ್ಷೆಗಾಗಿ ಅರ್ಜುನ್ […]
ಟಿಪ್ಪರ್ ಲಾರಿ ಹರಿದು ಗರ್ಭಿಣಿ ಸಾವು; ಭೀಕರ ಅಪಘಾತಕ್ಕೆ ಗರ್ಭಿಣಿಯ ಹೊಟ್ಟೆಯಿಂದ ಹೊರ ಬಂದ ಮಗು

ಟಿಪ್ಪರ್ ಲಾರಿ ಡಿಕ್ಕಿಯಾಗಿ 8 ತಿಂಗಳ ಗರ್ಭಿಣಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿ ನಡೆದಿದೆ. ಎಡೇಹಳ್ಳಿ ಗ್ರಾಮದ ಸಿಂಚನ (30) ಮೃತರು. ಸಿಂಚನಾ ಬೈಕ್ ನಲ್ಲಿ ಹೋಗುವಾಗ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಸಾವನ್ನಪ್ಪಿದ್ದಾರೆ. ಟಿಪ್ಪರ್ ಹರಿದ ಪರಿಣಾಮ ಅವರ ಹೊಟ್ಟೆಯಲ್ಲಿದ್ದ ಮಗು ಕೂಡ ಹೊರಗೆ ಬಂದಿದೆ. ಪತಿ ಮಂಜುನಾಥ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ಬಳಿಕ ಟಿಪ್ಪರ್ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ […]