Breaking News :

ಪ್ರಜ್ವಲ್ ರೇವಣ್ಣ ವಿಡಿಯೋ ಅಸಲಿ, ತಿರುಚಲಾಗಿಲ್ಲ; ಎಫ್ ಎಸ್ ಎಲ್ ವರದಿಯಲ್ಲಿ ಬಹಿರಂಗ

ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಹಾಗೂ ವಿಡಿಯೋ ಚಿತ್ರೀಕರಣ ಮಾಡಿರುವ ಆರೋಪ ಎದುರಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಸಂಬಂಧಿಸಿದ ವಿಡಿಯೋಗಳು ಅಸಲಿಯಾಗಿದ್ದು, ವಿಡಿಯೋಗಳನ್ನು ತಿರುಚಿಲ್ಲ ಎಂದು ವಿಧಿ ವಿಜ್ಞಾನ ಪ್ರಯೋಗಾಲಯವು (FSL) ವರದಿ ನೀಡಿದೆ. ಹಾಸನ ಅಶ್ಲೀಲ ವಿಡಿಯೋ ಕೇಸ್‌ಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳು ಹಾಗೂ ಪೆನ್‌ಡ್ರೈವ್‌ಗಳಿಂದ  ಅಶ್ಲೀಲ ವಿಡಿಯೋಗಳನ್ನು ಎಸ್‌ಐಟಿ ತಂಡ ಸಂಗ್ರಹಿಸಿತ್ತು. ಖಚಿತತೆ ಪಡೆದುಕೊಳಲು ಈ ಎಲ್ಲಾ ವಿಡಿಯೋಗಳನ್ನು FSLಗೆ ಕಳುಹಿಸಲಾಗಿತ್ತು. ಪ್ರಯೋಗಾಲದಿಂದ ಈ ವಿಡಿಯೋಗಳ ಬಗ್ಗೆ ಎಸ್‌ಐಟಿ ಅಧಿಕಾರಿಗಳಿಗೆ ವರದಿ ತಲುಪಿಸಿದ್ದು, […]

ಭಾರೀ ಮಳೆ ಹಿನ್ನೆಲೆ; ಆ.2ರಂದು ಉಡುಪಿ ಜಿಲ್ಲಾ- ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಆ.2ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.  

ಹಾಡಹಗಲೇ ಯುವಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ

ಹಾಡಹಗಲೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಶೇಷಾದ್ರಿ ಪುರಂ ಪೊಲೀಸ್ ಠಾಣೆ ಬಳಿ ನಡೆದಿದೆ. ಅಜಿತ್ ಕುಮಾರ್‌ (25) ಕೊಲೆಯಾದವನು. ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ರಶಿಲ್ಲಾರ್ ಸ್ಟ್ರೀಟ್‌ನಲ್ಲಿ ಅಜಿತ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹಂತಕರಿಗಾಗಿ ಹುಡುಕಾಟ […]

ಪುನೀತ್ ಕೆರೆಹಳ್ಳಿ, ಪ್ರತಾಪ್ ಸಿಂಹ ವಿರುದ್ಧ ಮತ್ತೆ ಎಫ್ ಐಆರ್

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಇದೀಗ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಸೇರಿದಂತೆ ಮತ್ತಿತರರ ವಿರುದ್ಧ ಇದೀಗ ಬಸವೇಶ್ವರನಗರದಲ್ಲಿ ಎಫ್‌ಐಆರ್ ದಾಖಲಾಗಿದೆ. ಕುರಿ ಮಾಂಸವನ್ನು ನಾಯಿ ಮಾಂಸ ಎಂದು ಆಪಾದಿಸಿ ರಾದ್ದಾಂತ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಲಾಗಿತ್ತು.  ಬಂಧಿಸಿದ ಕಾರಣಕ್ಕೆ ಪೊಲೀಸ್ ಠಾಣೆ ಮುಂದೆ ಇಂದು ಕಾರ್ಯಕರ್ತರು ಸೇರಿದಂತೆ ಇನ್ನಿತರರು ಅಕ್ರಮವಾಗಿ ಗುಂಪುಗೂಡಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರ […]

ಶಿರಾಡಿ ಘಾಟ್ ನ ದೊಡ್ಡತಪ್ಲು ಬಳಿ ಭೂಕುಸಿತ

ಶಿರಾಡಿ ಘಾಟ್ ನ ದೊಡ್ಡತಪ್ಲು ಬಳಿ ಮತ್ತೆ ಭೂಕುಸಿತ ಸಂಭವಿಸಿದ್ದು, ಎರಡು ಕಂಟೇನರ್ ಗಳು ಮಣ್ಣಲ್ಲಿ ಮುಳುಗಿದ್ದು, ಟ್ಯಾಂಕರ್‌ನಲ್ಲಿ ಸಿಲುಕಿದ್ದ ಚಾಲಕರನ್ನು ರಕ್ಷಿಸಲಾಗಿದೆ. ಮೂವರು ಚಾಲಕರನ್ನು ರಕ್ಷಿಲಾಗಿದ್ದು, ಸ್ಥಳದಲ್ಲಿ ಮತ್ತಷ್ಟು ಗುಡ್ಡ ಕುಸಿತ ಸಂಭವಿಸುವ ಸಾಧ್ಯತೆ ಇದೆ. ಗುಡ್ಡ ಕುಸಿತದಿಂದ ಮಣ್ಣಿನಡಿ ಸಿಲುಕಿದ ಕಂಟೇನರ್ ರೈಲ್ವೆ ಹಳಿ‌ ಮೇಲೆ ಬೀಳುವ ಆತಂಕ ಎದುರಾಗಿದೆ. ರೈಲ್ವೆ ಹಳಿ‌ ಮೇಲೆ ಹಾದು ಹೋಗಿರುವ ರಸ್ತೆಯ ತುದಿಯಲ್ಲಿ ಕಂಟೇನರ್‌ ಉರುಳಿಬಿದ್ದಿದೆ. ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ನಲ್ಲಿ […]

ರಾಜ್ಯಪಾಲರಿಂದ ಸಿದ್ದರಾಮಯ್ಯಗೆ ನೊಟೀಸ್ ; ಕೈಪಾಳಯದಲ್ಲಿ ತಳಮಳ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ಕೋರಿ ವಕೀಲ ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬೆನ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ನೋಟಿಸ್‌ ನೀಡಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ಕೋರಲಾಗಿದೆ. ಆರೋಪಗಳ ಕುರಿತು ವಿವರಣೆ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯ ಅವರಿಗೆ ನೋಟಿಸ್‌ ನೀಡಿದ್ದಾರೆ. ಇಂದಿನ ಸಚಿವ […]

ಬೈಕ್ ಗೆ ಲಾರಿ ಢಿಕ್ಕಿಯಾಗಿ ಭೀಕರ ಅಪಘಾತ; ಇಬ್ಬರು ಯುವಕರು ಮೃತ್ಯು

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ  ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಸಂತೇಕಲ್ಲಹಳ್ಳಿ ಬಳಿ ನಡೆದಿದೆ. ಚಿಂತಾಮಣಿ ತಾಲೂಕಿನ ಭುವನ್ (30) ಹಾಗೂ ಭಾನು ಪ್ರಕಾಶ್ (30) ಮೃತ ದುರ್ದೈವಿಗಳು. ಇವರು ಹೊಸಕೋಟೆ ಪಿಲ್ಲಗುಂಪೆ ಫ್ಯಾಕ್ಟರಿಯಲ್ಲಿ ಕೆಲಸ ಮುಗಿಸಿ ವಾಪಸ್‌ ಮನೆಗೆ ಬರುವಾಗ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಡಿವೈಎಸ್‌ಪಿ ಮುರುಳಿಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ‌‌.

ಎಸಿಪಿ ಚಂದನ್ ಗೆ ಧಮ್ಕಿ ಹಾಕಿದ ಸಂಸದ ಪ್ರತಾಪ್ ಸಿಂಹ

ಬೆಂಗಳೂರಿನಲ್ಲಿ ಮಾಂಸಕ್ಕೆ ಸಂಬಂಧಿಸಿ ವಿವಾದ ಸೃಷ್ಟಿಸಿದ್ದ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದ ಪೊಲೀಸ್ ಅಧಿಕಾರಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಧಮ್ಕಿ ಹಾಕಿದ್ದು, ಇದಕ್ಕೆ ಸಾಮಾಜಿಕ ಜಾಲತಾಣ ಬಳಕೆದಾರರು ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಪುನೀತ್ ಕೆರೆಹಳ್ಳಿಗೆ ಲಾಕಪ್ ನಲ್ಲಿ ಬಟ್ಟೆ ಬಿಚ್ಚಿ ಕೂರಿಸುವ ಮೂಲಕ ಅವರನ್ನು ಅಪಮಾನಿಸಿದ್ದಾರೆಂದು ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿ ACP ಚಂದನ್‌ ಅವರಿಗೆ ಠಾಣೆಗೆ ಬರ್ತಿನಿ ನೀವು ಇರಬೇಕು ಎಂದು ಧಮ್ಕಿ ಹಾಕಿದ್ದಾರೆ.   ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಜೈಪುರದಿಂದ ರೈಲೊಂದರಲ್ಲಿ […]

ಮಸೀದಿಯೊಳಗೆ ಬಿಯರ್ ಬಾಟಲಿ ಎಸೆತ: ಪ್ರತಿಭಟನೆ

ರಾಯಚೂರು; ಮಸೀದಿಯೊಳಗೆ ಮದ್ಯದ ಬಾಟಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಕೆಲ ಆಗಂತುಕರು ಮದ್ಯ ಕುಡಿದು ಬಿಯರ್ ಬಾಟಲಿಯನ್ನು ಮಸೀದಿ ಒಳಗಡೆ ಎಸೆದಿದ್ದರು. ವಿಷಯ ತಿಳಿದು ಸ್ಥಳೀಯರು ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ತಡರಾತ್ರಿ ಮುಖ್ಯರಸ್ತೆ ತಡೆದು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರಾತ್ರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ, ಎಎಸ್ಪಿ ಶಿವಕುಮಾರ, ಡಿವೈಎಸ್ಪಿ ಬಿಎಸ್ ತಳವಾರ, ಸಿಪಿಐ ಶಶಿಕಾಂತ, ಪಿಎಸ್‌ಐ ಗುರುಚಂದ್ರ […]

ವಯನಾಡು ಭೂಕುಸಿತಕ್ಕೆ ಮೃತರ ಸಂಖ್ಯೆ 143ಕ್ಕೆ ಏರಿಕೆ: ಸಂಪರ್ಕಕ್ಕೆ ಸಿಗದ ಚಾಮರಾಜನಗರದ ಎರಡು ಕುಟುಂಬದ ಸದಸ್ಯರು

ಚಾಮರಾಜನಗರ: ಕೇರಳದ ವಯನಾಡು ಜಿಲ್ಲೆಯ ಗುಡ್ಡೆ ಕುಸಿತದ ಸ್ಥಳದಿಂದ ಈಗಾಗಲೇ 143 ಮೃತದೇಹಗಳನ್ನು ಪತ್ತೆ ಹಚ್ಚಲಾಗಿದೆ. ಹಲವರು ಇನ್ನು ಕೂಡ ನಾಪತ್ತೆಯಾಗಿದ್ದಾರೆ. ಗುಡ್ಡ ಕುಸಿದ ಪರಿಣಾಮ ಭಾರೀ ಸಾವು-ನೋವು ಸಂಭವಿಸಿದೆ. ಈ ದುರಂತದಲ್ಲಿ ಚಾಮರಾಜನಗರದ ದಂಪತಿ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ 3-4 ವರ್ಷಗಳಿಂದ ಚೂರಲ್​ಮಲನಲ್ಲಿ ಕೆಲಸ ಮಾಡಿಕೊಂಡಿದ್ದ ಚಾಮರಾಜನಗರದ ಸೋಮವಾರಪೇಟೆಯ ದಂಪತಿ ರತ್ನಮ್ಮ ಹಾಗೂ ರಾಜೇಂದ್ರ ನಾಪತ್ತೆಯಾಗಿದ್ದಾರೆ. ದುರಂತದ ಬಳಿಕ ಚಾಮರಾಜನಗರದಲ್ಲಿರುವ ಕುಟುಂಬಸ್ಥರು, ರತ್ನಮ್ಮ ಹಾಗೂ ರಾಜೇಂದ್ರ ದಂಪತಿಗೆ ಕರೆ ಮಾಡಿದ್ದಾರೆ. ಆದರೆ ದಂಪತಿ […]