Breaking News :

ಕರ್ನಾಟಕದ ಐದು ಜಿಲ್ಲೆಗಳಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ; ರೆಡ್ ಅಲರ್ಟ್ ಘೋಷಣೆ

ಕರ್ನಾಟಕದಾದ್ಯಂತ ಇಂದಿನಿಂದ ಮತ್ತೆ ಭಾರಿ ಮಳೆ ಸುರಿವ ಸಾಧ್ಯತೆ ಇದೆ. ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿರಲಿದೆ ಎಂದು ತಿಳಿದು ಬಂದಿದೆ. ಮಳೆ ಹಿನ್ನೆಲೆ 5 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಹಾಸನ, ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್​, ಬೆಳಗಾವಿ, ಮೈಸೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕಳಸ, ನಾಪೊಕ್ಲು, ಧರ್ಮಸ್ಥಳ, ಕೊಪ್ಪ, […]

ಸಕಲೇಶಪುರ ಬಳಿ ಭೂ ಕುಸಿತಕ್ಕೆ ಕೊಚ್ಚಿಕೊಂಡು ಹೋದ ರಸ್ತೆ; ಹಲವು ಗ್ರಾಮಗಳ ಸಂಪರ್ಕ ಕಡಿತ

ಹಾಸನ:  ಭಾರೀ ಮಳೆಗೆ ಸಕಲೇಶಪುರ ಬಳಿ ಗುಡ್ಡ ಕುಸಿತದಿಂದ  ಸುಮಾರು 200 ಅಡಿಗಳಷ್ಟು ದೂರದ ರಸ್ತೆ ಕುಸಿದುಕೊಂಡು ಹೋಗಿದ್ದು, 10 ಗ್ರಾಮಗಳ ಜನತೆ ಸಂಪರ್ಕ  ಕಳೆದುಕೊಂಡಿದ್ದಾರೆ. ಸಕಲೇಶಪುರ ತಾಲೂಕಿನ ಕುಂಬರಡಿ ಸಮೀಪ ಘಟನೆ ನಡೆದಿದೆ. ಕುಂಬರಡಿ ಹಾಗೂ ಹಾರ್ಲೇ ಎಸ್ಟೇಟ್ ಮಧ್ಯೆ ಭೂ ಕುಸಿತವಾಗಿದೆ. 200 ಮೀಟರ್‌ಗೂ ಹೆಚ್ಚು ದೂರ ರಸ್ತೆ ಕೊಚ್ಚಿಹೋಗಿದ್ದು, ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಈ ರಸ್ತೆಯ ಪಕ್ಕದಲ್ಲಿ ಎತ್ತಿನಹೊಳೆ ಕಾಮಗಾರಿಗಾಗಿ ಕೆಲಸ ಮಾಡಲಾಗಿತ್ತು. ಎತ್ತಿನಹೊಳೆ ಅವೈಜ್ಞಾನಿಕ ಕಾಮಗಾರಿಯಿಂದಲೇ ಭೂಕುಸಿತವಾಗಿದೆ ಎಂದು ಆರೋಪಿಸಲಾಗಿದೆ.

ಬೆಳ್ತಂಗಡಿ; ಭಾರೀ ಮಳೆ ಹಿನ್ನೆಲೆ; ಇಂದು ತಾಲೂಕಿನ ಶಾಲೆಗಳಿಗೆ ರಜೆ

ಬೆಳ್ತಂಗಡಿ; ಭಾರೀ ಮಳೆಯ ಹಿನ್ನೆಲೆ ಬೆಳ್ತಂಗಡಿ ತಾಲೂಕಿನಲ್ಲಿ  ಎಲ್ಲ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ನೀಡಿ ಬೆಳ್ತಂಗಡಿ ತಹಶೀಲ್ದಾರ್ ಅವರು ಆದೇಶ ಹೊರಡಿಸಿದ್ದಾರೆ. ಬೆಳ್ತಂಗಡಿ ತಾಲೂಕಿನಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ ನದಿಗಳಲ್ಲಿ ನೀರಿನ ಮಟ್ಟ ಏರುತ್ತಿದ್ದು, ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ. ಹಲವೆಡೆ ನದಿಗಳು ಉಕ್ಕಿ ಹರಿಯುತ್ತಿದೆ. ಇದರಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ವಾಹನ ಚಾಲಕರಿಗೆ ಬಹುಮುಖ್ಯ ಮಾಹಿತಿ: ನೀವು ಈ ತಪ್ಪು ಮಾಡಿದ್ರೆ ಆ.1ರಿಂದ ದಂಡ ಗ್ಯಾರೆಂಟಿ

ವಾಹನ ಚಾಲಕರಿಗೆ ಇದು ಬಹುಮುಖ್ಯ ಮಾಹಿತಿಯಾಗಿದ್ದು, ಆಗಸ್ಟ್ 1ರಿಂದ 130 ಕಿ.ಮೀ.ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಎಫ್‌ಐಆರ್ ದಾಖಲಾಗಲಿದೆ. ಈ ಕುರಿತು ಮಾತನಾಡಿದ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್, ಸ್ಪಾಟ್ ಸ್ಪೀಡ್ ಮತ್ತು ಸೆಕ್ಷನಲ್ ಸ್ಪೀಡ್ ಆಧಾರದಲ್ಲಿ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗುವುದು ಎಂದು ಹೇಳಿದ್ದಾರೆ. ರಾಜ್ಯಾದ್ಯಂತ 130 ಕಿ.ಮೀ.ಗಿಂತ ಹೆಚ್ಚಿನ ವೇಗದಲ್ಲಿ ವಾಹನ ಚಾಲನೆ ಮಾಡಿದಲ್ಲಿ ಎಫ್‌ಐಆರ್ ದಾಖಲಿಸಲಾಗುವುದು. ಈ […]

ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿ ಭೂಹಳ್ಳಿ ಪುಟ್ಟಸ್ವಾಮಿ ಆತ್ಮಹತ್ಯೆ; ಆತ್ಮಹತ್ಯೆಗೆ ಮೊದಲು ಹಾಕಿದ ಪೋಸ್ಟ್‌ನಲ್ಲಿ ಏನಿದೆ?

ಸಾಹಿತಿ ಹಾಗೂ ಪರಿಸರವಾದಿಯಾಗಿದ್ದ ಭೂಹಳ್ಳಿ ಪುಟ್ಟಸ್ವಾಮಿ (76) ಭಾನುವಾರ ತಡ ರಾತ್ರಿ ಚನ್ನಪಟ್ಟಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪುಟ್ಟಸ್ವಾಮಿ ಅವರ ಕುಟುಂಟ ಮೈಸೂರಿನಲ್ಲಿ ನೆಲೆಸಿದೆ.  ಪುಟ್ಟಸ್ವಾಮಿ ಅವರು ಮಾತ್ರ ಚನ್ನಪಟ್ಟಣದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ನನ್ನ ಸಾವಿಗೆ ನಾನೇ ಕಾರಣ. ಅನಾರೋಗ್ಯದಿಂದ ಬೇಸರಗೊಂಡ ಜೀವನ ಯಾತ್ರೆ ಮುಗಿಸುತ್ತಿದ್ದೇನೆ. 28.07.24 ರಾತ್ರಿ 2.40 ಇಂತಿ ಭೂಹಳ್ಳಿ ಪುಟ್ಟಸ್ವಾಮಿ ಎಂದು ಪೋಸ್ಟ್ ಮಾಡಿ ಚನ್ನಪಟ್ಟಣದಲ್ಲಿ ನೇಣಿಗೆ ಶರಣಾಗಿದ್ದಾರೆ. ವೃತ್ತಿಯಲ್ಲಿ ಇತಿಹಾಸ ಉಪನ್ಯಾಸಕರಾಗಿದ್ದ […]

ಕಡಬ; ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

-ಮುಸ್ತಫಾ ಆತ್ಮಹತ್ಯೆ ಮಾಡಿಕೊಂಡ ಯುವಕ ಕಡಬ; ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬದ ಕಳಾರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಳಾರ ನಿವಾಸಿ ಮುಸ್ತಫಾ( 33) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಮುಸ್ತಫಾ ಅವರನ್ನು ಹುಡುಕಾಟ ನಡೆಸಿದಾಗ ಹಳೆಯ ಮನೆಯೊಂದರಲ್ಲಿ ಮೊಬೈಲ್ ರಿಂಗ್ ಆಗುತ್ತಿತ್ತು. ಸ್ಥಳಕ್ಕೆ ಹೋಗಿ ನೋಡಿದಾಗ ಮುಸ್ತಫಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮುಸ್ತಫಾ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.   […]

ಕಾರ್ಕಳ; ಬೈಕ್ ಗೆ ಟಿಪ್ಪರ್ ಢಿಕ್ಕಿ; ಯುವಕ ಮೃತ್ಯು

ಕಾರ್ಕಳ: ಟಿಪ್ಪರ್ ಮತ್ತು ಬೈಕ್ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಕಾರ್ಕಳ ಪುಕ್ಕೇರಿ ಬಳಿಯ ಫುಡ್ ಬಾಸ್ಕೆಟ್ ಮುಂಭಾಗದಲ್ಲಿ ನಡೆದಿದೆ. ಮೃತ ಯುವಕನನ್ನು ಬೈಪಾಸ್ ನಿವಾಸಿ, ಕಾರ್ ಮೆಕ್ಯಾನಿಕ್ ನಿಝಾಂ (21) ಎಂದು ಗುರುತಿಸಲಾಗಿದೆ. ಕಾರ್ಕಳದಿಂದ ಬೈಪಾಸ್ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಬೈಪಾಸ್ ನಿಂದ ಕಾರ್ಕಳದತ್ತ ಬರುತ್ತಿದ್ದ ಬೈಕ್ ಮುಖಾಮುಖಿ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಸವಾರ ಕಾರ್ ಮೆಕ್ಯಾನಿಕ್ ನಿಝಾಂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ಕಾರ್ಕಳ ಸರ್ಕಾರಿ ಮೃತದೇಹ ಆಸ್ಪತ್ರೆಯಲ್ಲಿ […]

ಏಳನೇ ಡೈವೋರ್ಸ್ ಗೆ ಅರ್ಜಿ ಸಲ್ಲಿಸಿದ ಮಹಿಳೆ: ಜಡ್ಜ್ ಶಾಕ್

ಬೆಂಗಳೂರಿನಲ್ಲಿ 6 ವಿವಾಹವಾಗಿ ಪತಿಯಿಂದ ಡೈವೋರ್ಸ್ ಪಡೆದುಕೊಂಡಿದ್ದ ಮಹಿಳೆ 7ನೇ ವಿವಾಹದ ಡೈವೋರ್ಸ್ ಕೇಸ್ ಕೋರ್ಟ್ ಮೆಟ್ಟಿಲೇರಿದ್ದು, ನ್ಯಾಯಾಧೀಶರೇ ಅಚ್ಚರಿಗೊಂಡಿದ್ದಾರೆ. ಡಿವೋರ್ಸ್ ಪ್ರಕರಣದಲ್ಲಿ ಮಹಿಳೆ ಮಾಜಿ ಪತಿಗಳಿಂದ ನಿರ್ವಹಣೆ ವೆಚ್ಚ ಪಡೆಯುತ್ತಿದ್ದಾಳೆ. ಇದೀಗ 7ನೇ ಪತಿ ವಿರುದ್ಧವೂ ಪ್ರಕರಣ ದಾಖಲಿಸಿದ್ದಾಳೆ. ಮಹಿಳೆ ವರ್ಷಕ್ಕೆ ಒಂದರಂತೆ ಗಂಡಂದಿರನ್ನು ಬದಲಾಯಿಸಿದ್ದಾಳೆ. ಮದುವೆಯಾದ ಬಳಿಕ 6 ತಿಂಗಳು ಸಂಸಾರ ನಡೆಸಿ ಬಳಿಕ 6 ತಿಂಗಳಲ್ಲಿ ಪತಿ ವಿರುದ್ಧ ದೈಹಿಕ ಹಾಗೂ ಹಿಂಸೆ, ಕ್ರೌರ್ಯ ಸೇರಿದಂತೆ ಸಕ್ಷನ್ 498ಎ ಅಡಿ ಪ್ರಕರಣ ದಾಖಲಿಸಿ […]

8 ತಿಂಗಳಿನಿಂದ ಕೋಮಾದಲ್ಲಿರುವ ನಿಫಾ ಸೋಂಕಿತರ ಆರೈಕೆ ಮಾಡಿದ್ದ ಕಡಬದ ಯುವಕ

ಕೇರಳದಲ್ಲಿ  ನಿಫಾ ವೈರಸ್ ಬಾಧಿಸಿದ್ದ ರೋಗಿಗೆ ಆರೈಕೆ ನೀಡಿದ್ದ ಕಡಬದ ಯುವ ನರ್ಸ್ ಓರ್ವರು ನಿಫಾ ವೈರಸ್ ಗೆ ತುತ್ತಾಗಿ ಕಳೆದ ಎಂಟು ತಿಂಗಳಿನಿಂದ ಕೋಮಾದಲ್ಲಿ ದಿನ ದೂಡುತ್ತಿರುವ ಬಗ್ಗೆ ವರದಿಯಾಗಿದೆ. ಕಡಬ ತಾಲೂಕಿನ ಐತ್ತೂರು ಗ್ರಾಮದ ಮರ್ಧಾಳ ಸಮೀಪದ ತುಂಬ್ಯ ನಿವಾಸಿ ತೋಮಸ್ ಟಿ.ಸಿ. ಎಂಬವರ ಪುತ್ರ ಟಿಟ್ಟೋ ತೋಮಸ್(24) ಜೀವನ್ಮರಣ ಸ್ಥಿತಿಯಲ್ಲಿ ದಿನದೂಡುತ್ತಿರುವ ಯುವಕ. ಬಿಎಸ್ಸಿ ನರ್ಸಿಂಗ್ ಪದವೀಧರನಾಗಿರುವ ಟಿಟ್ಟೋ ತೋಮಸ್ ಕೇರಳದ ಕ್ಯಾಲಿಕಟ್ ನಲ್ಲಿರುವ ಇಕ್ರಾ ಇಂಟರ್ನ್ಯಾಷನಲ್ ಹಾಸ್ಪಿಟಲ್ ಆಯಂಡ್ ರಿಸರ್ಚ್ ಸೆಂಟರ್ […]

ಕುಂದಾಪುರ: ಪೊಲೀಸರ ಸೋಗಿನಲ್ಲಿ ಉದ್ಯಮಿಯ ಮನೆಗೆ ಬಂದ ಅಪರಿಚಿತರ ತಂಡ

ಕುಂದಾಪುರ: ಬೆಳ್ಳಂಬೆಳಗ್ಗೆ ಎರಡು ಕಾರುಗಳಲ್ಲಿ ಪೊಲೀಸ್‌ ಹಾಗೂ ಅಧಿಕಾರಿಗಳ ಸೋಗಿನಲ್ಲಿ ಮಣೂರಿನ ಉದ್ಯಮಿಯೊಬ್ಬರ ಮನೆಗೆ ಅಪರಿಚಿತರ ತಂಡವೊಂದು ಬಂಧಿರುವ ಬಗ್ಗೆ ವರದಿಯಾಗಿದೆ. ಮನೆ ಮಾಲಕಿ ಮಣೂರು ಗ್ರಾಮದ ಕವಿತಾ (34) ಈ ಕುರಿತು ಕೋಟ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಜು.25ರಂದು ಬೆಳಗ್ಗೆ 8.30 ಗಂಟೆಗೆ ಮನೆಯ ಹೊರಗಿನಿಂದ ಯಾರೋ ಬಾಗಿಲು ಬಡಿದ ಶಬ್ದವಾಗಿತ್ತು. ಆಗ ನಿರ್ಲಕ್ಷಿಸಿದ್ದು, 9 ಗಂಟೆಗೆ ಹೊರಗೆ ಬಂದು ನೋಡಿದಾಗ ಯಾರೂ ಇರಲಿಲ್ಲ. ಈ ನಡುವೆ ಮನೆಯ ಸಿಸಿಟಿವಿ ಮೇಲೆ ನಿಗಾ ಇಡುತ್ತಿರುವ ಕುಂದಾಪುರದ […]