Breaking News :

ವಯನಾಡಿನ ರೀತಿಯ ದುರಂತದ ಭೀತಿಯಲ್ಲಿ ಮಂಗಳೂರಿನ ಕೆತ್ತಿಕಲ್ ನಿವಾಸಿಗಳು

ವಯನಾಡಿನಲ್ಲಿ ಭೀಕರ ಭೂ ಕುಸಿತ ದುರಂತದಲ್ಲಿ ಮೃತರ ಸಂಖ್ಯೆ 360ರ ಗಡಿ ದಾಟಿದೆ. ಇನ್ನು ಕೂಡ 300 ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಈ ಭೀಕರ ದುರಂತಕ್ಕೆ ದೇಶವೇ ಬೆಚ್ಚಿಬಿದ್ದಿದೆ. ಸಾಂಭವ್ಯ ಘಟನೆಯನ್ನು ತಡೆಯಲು ವಿವಿಧ ರಾಜ್ಯಗಳು ಮುಂದಾಗಿದೆ. ಈ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬಳಿಯೂ ಅಂಥದ್ದೇ ಅನಾಹುತ ಸಂಭವಿಸಬಹುದಾದ ಭೀತಿ ಎದುರಾಗಿದೆ. ಮಂಗಳೂರು ನಗರ ಹೊರವಲಯದ ವಾಮಂಜೂರು ಸಮೀಪದ ಕೆತ್ತಿಕಲ್ ಬಳಿ ಗುಡ್ಡೆ ಮಣ್ಣು ಕುಸಿಯುತ್ತಲೇ ಇದ್ದು ಆತಂಕ ಸೃಷ್ಟಿಸಿದೆ. ಈ ಗುಡ್ಡದ […]

BIG NEWS ಸಿಸಿಬಿ ಇನ್ಸ್ ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ; ಪಿಎಸ್ಐ ಪರಶುರಾಮ್ ಪ್ರಕರಣದ ಬೆನ್ನಲ್ಲೇ ನಡೆದ ಮತ್ತೊಂದು ಘಟನೆ

ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಬಿಡದಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಪಿಎಸ್‌ಐ ಪರಶುರಾಮ್ ಸಾವು ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಮ್ಮೇಗೌಡ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಸಂಪಾಜೆಯಲ್ಲಿ ಬೈಕ್ ಅಪಘಾತ; ಧರ್ಮಸ್ಥಳಕ್ಕೆ ಬರುತ್ತಿದ್ದ ಇಬ್ಬರು ಯುವಕರು ಮೃತ್ಯು

ಮಡಿಕೇರಿ; ರಸ್ತೆ ಬದಿಯ ಮೋರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಪಾಜೆ ಅರಣ್ಯ ಇಲಾಖಾ ಕಚೇರಿ ಬಳಿ ನಡೆದಿದೆ. ಮೃತರನ್ನು ಮೈಸೂರು ಮೂಲದ ಪವನ್ ಹಾಗೂ ಮನೋಜ್ ಎಂದು ಗುರುತಿಸಲಾಗಿದೆ. ಇವರು ಬುಲೆಟ್ ಬೈಕ್ ನಲ್ಲಿ ಮೈಸೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕೊಯ್ನಾಡಿನ ಫಾರೆಸ್ಟ್ ಐಬಿ ಬಳಿ ಮುಖ್ಯರಸ್ತೆಯಲ್ಲಿ ರಸ್ತೆ ಬದಿಯ ಮೋರಿಗೆ ವೇಗವಾಗಿದ್ದ ಬೈಕ್ ಢಿಕ್ಕಿ ಹೊಡೆದಿದೆ. ಈ ವೇಳೆ ಚರಂಡಿಗೆ ಇಬ್ಬರು ಯುವಕರು ಎಸೆಯಲ್ಪಟ್ಟು […]

ಮಗಳ ಮದುವೆ ಆಮಂತ್ರಣ ಹಂಚಿ ಬಂದವ ಅಪಘಾತದಲ್ಲಿ ಮೃತ್ಯು; ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ

ಮಗಳ ಮದುವೆಗಾಗಿ ಭರ್ಜರಿ ತಯಾರಿ ನಡೆಸುತ್ತಿದ್ದ ತಂದೆಯೋರ್ವ ಅಪಘಾತದಲ್ಲಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಂಜುನಾಥ್ ಮೃತ ದುರ್ದೈವಿ. ಇವರು ಅಧಿಕಾರಿಯಾಗಿ ಕೆಲಸ‌ ಮಾಡುತ್ತಿದ್ದರು. ಇವರು ಬೆಳಗ್ಗೆ ಆಮಂತ್ರಣ ಪತ್ರಿಕೆ ಹಂಚಿ ರಾತ್ರಿ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಎಲೆಕ್ಟ್ರಾನಿಕ್​ ಸಿಟಿ ಫ್ಲೈಓವರ್​​ ಮೇಲೆ ಕಾರು ಕೆಟ್ಟು ನಿಂತಿದೆ ಎಂದು ಅದನ್ನು ಟೋಯಿಂಗ್ ವೆಹಿಕಲ್ ಕರೆಸಿ ತೆರವು ಮಾಡಿಸುವಾಗ ವೇಗವಾಗಿ ಬಂದ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದಿದ್ದು ಅಧಿಕಾರಿ ಮಂಜುನಾಥ್ ಮೃತಪಟ್ಟಿದ್ದಾರೆ. ಆಗಸ್ಟ್ 10ರಂದು ಮೃತ […]

ಮೆಟ್ರೋ ಟ್ರ್ಯಾಕ್ ಗೆ‌ ಜಿಗಿದು ಯುವಕ ಆತ್ಮಹತ್ಯೆ ಪ್ರಕರಣ; ಕಾರಣ ಬಯಲು

ನಮ್ಮ ಮೆಟ್ರೋ ಟ್ರ್ಯಾಕ್ ಗೆ ಜಿಗಿದು ನಿನ್ನೆ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದ. ಇದೀಗ ಯುವಕನ ಆತ್ಮಹತ್ಯೆಗೆ ಕಾರಣ ಬಯಲಾಗಿದೆ. 35ರ ಹರೆಯದ ನವೀನ್ ಕುಮಾರ್ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ  ಮೆಟ್ರೋ ಟ್ರ್ಯಾಕ್ ಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನವೀನ್ ಕುಮಾರ್ ಬೆಂಗಳೂರಿನಲ್ಲಿ ಹಾರ್ಡ್ ವೇರ್ ಬ್ಯುಸಿನೆಸ್ ಮಾಡಿಕೊಂಡಿದ್ದರು. ಬ್ಯುಸಿನೆಸ್ ನಲ್ಲಿ ನಷ್ಟವಾದ ಹಿನ್ನೆಲೆ, ಸಾಲ ತೀರಿಸಲು ಸಾಧ್ಯವಾಗಿಲ್ಲ. ಸಾಲ ಕೊಟ್ಟವರು ದಿನಾ ವಾಪಾಸ್ಸು ಕೇಳುತ್ತಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಬಾಲಕನಿಗೆ ಕತ್ತಲೆ ಕೋಣೆಯಲ್ಲಿ ಕೂಡಿ ಹಾಕಿ ಥಳಿತ; ರಾಜ್ಯದಲ್ಲೊಂದು ಅಮಾನವೀಯ ಘಟನೆ ವರದಿ

ಪೆನ್ನು ಕದ್ದಿದ್ದಾನೆಂದು ಆರೋಪಿಸಿ ಬಡ ಪುಟ್ಟ ವಿದ್ಯಾರ್ಥಿಯೋರ್ವನ ಮೇಲೆ ಮಠದ ಗುರೂಜಿ ಮನಬಂದಂತೆ ಹಲ್ಲೆ ನಡೆಸಿದ ಅಮಾನವೀಯ ಘಟನೆ ರಾಯಚೂರು ನಗರದ ರಾಮಕೃಷ್ಣ ಆಶ್ರಮದಲ್ಲಿ ನಡೆದಿದೆ. ಶ್ರವಣ್ ಕುಮಾರ್ ಹಲ್ಲೆಗೊಳಗಾದ ಬಾಲಕ. ರಾಮಕೃಷ್ಣ ಮಠದ ಗುರೂಜಿ ವೇಣುಗೋಪಾಲ್ ಎಂಬಾತ ಹಲ್ಲೆ ನಡೆಸಿರುವ ಆರೋಪಿ. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ  ಶ್ರವಣ್ ಕುಮಾರ್ ನನ್ನು ಬಡತನದ ಕಾರಣಕ್ಕೆ ನಗರದ ಸ್ಟೇಷನ್ ರಸ್ತೆಯಲ್ಲಿರುವ ರಾಮಕೃಷ್ಣ ಆಶ್ರಮಕ್ಕೆ ಸೇರಿಸಲಾಗಿತ್ತು. ಆದರೆ ನಿನ್ನೆ ಆಕಸ್ಮಿಕವಾಗಿ ತಾಯಿ ಆಶ್ರಮಕ್ಕೆ ಭೇಟಿ ನೀಡಿ ಮಗುವನ್ನು ನೋಡಿದಾಗ […]

ನಮ್ಮ‌ ಮೆಟ್ರೋ ಟ್ರ್ಯಾಕ್ ಗೆ ಹಾರಿ ಯುವಕನೋರ್ವ ಆತ್ಮಹತ್ಯೆ

ಬೆಂಗಳೂರು: ‘ನಮ್ಮ ಮೆಟ್ರೋ’ ಟ್ರ್ಯಾಕ್​ಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಜೆ 5.45ರ ಸುಮಾರಿಗೆ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ನಡೆದಿದೆ. ಈ ಕುರಿತು ನಮ್ಮ ಮೆಟ್ರೋ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, 35 ವರ್ಷದ ವ್ಯಕ್ತಿಯೊಬ್ಬರು ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ 5.45 ಗಂಟೆಗೆ ಸಮೀಪಿಸುತ್ತಿರುವ ರೈಲಿನ ಮುಂದೆ ಜಿಗಿದಿದ್ದಾರೆ. ಘಟನೆಯಿಂದ ಹಸಿರು ಮಾರ್ಗದಲ್ಲಿ ಯಲಚೇನಹಳ್ಳಿ ಮತ್ತು ಸಿಲ್ಕ್ ಇನ್‌ಸ್ಟಿಟ್ಯೂಟ್ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ, ಉಳಿದ ಮಾರ್ಗದಲ್ಲಿ ಸೇವೆಗಳು ಲಭ್ಯವಿದೆ ಎಂದು ಮಾಹಿತಿ ನೀಡಿದೆ.  

ಮಂಗಳೂರು; ಕಾಲೇಜು ವಿದ್ಯಾರ್ಥಿಗಳ ನಡುವೆ ಹೊಡೆದಾಟ

ವಿದ್ಯಾರ್ಥಿಗಳ ಗುಂಪೊಂದು ನಡುರಸ್ತೆಯಲ್ಲಿ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರಿನ ಪ್ರತಿಷ್ಠಿತ ಅಲೋಶಿಯಸ್ ಕಾಲೇಜು ಬಳಿ ನಡೆದಿದೆ. ಮಂಗಳೂರು ಅಲೋಶಿಯಸ್ ಕಾಲೇಜು ಗೇಟ್ ಮುಂಭಾಗದ ರಸ್ತೆಯಲ್ಲಿ ಎರಡು ಪ್ರತ್ಯೇಕ ಬಣ್ಣದ ಯುನಿಫಾರಂ ಧರಿಸಿರುವ ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟದ ವಿಡಿಯೋ ವೈರಲ್ ಆಗಿದೆ. ಕಾಲೇಜು ಬಿಟ್ಟ ಬಳಿಕ ಕ್ಷುಲ್ಲಕ ಕಾರಣಕ್ಕಾಗಿ ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕಾರು ಮರಕ್ಕೆ ಢಿಕ್ಕಿಯಾಗಿ ಭೀಕರ ಅಪಘಾತ; ಮೂವರು ಯುವಕರು ಮೃತ್ಯು

ಆಡಿ ಕಾರು ಮರಕ್ಕೆ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಬಂಗಾರಪೇಟೆ ಮುಖ್ಯ ರಸ್ತೆಯ ಸಹಕಾರ ನಗರದ ಬಳಿ ನಡೆದಿದೆ. ಬೆಳಗ್ಗೆ 3 ಗಂಟೆಯ ಸುಮಾರಿಗೆ ಈ ಅಪಘಾತ ನಡೆದಿದ್ದು, ರೇವಾ ಯೂನಿವರ್ಸಿಟಿಯ ವಿದ್ಯಾರ್ಥಿಗಳಾದ ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ‌ ಬಸವರಾಜ್ ಹಾಗೂ ಬಂಗಾರಪೇಟೆಯ ನಿಚ್ಚಲ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ  ಬಂಗಾರಪೇಟೆ ಮೂಲದ ಸಾಯಿ ಗಗನ್ ಪಾರಾಗಿದ್ದಾನೆ. ಮನೆಯಿಂದ ಕೋಲಾರಕ್ಕೆ ಮರಳುವಾಗ ಅಪಘಾತ ಸಂಭವಿಸಿದ್ದು, ಅಪಘಾತದ ಭೀಕರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ […]

ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಪತಿ

ಪತ್ನಿಯನ್ನು  ಚೂರಿಯಿಂದ ಇರಿದು ಪತಿ ಕೊಲೆ ಮಾಡಿರುವ ಘಟನೆ ಚಾಮರಾಜಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಫಾತಿಮಾ‌ (34) ಕೊಲೆಯಾದ ಮಹಿಳೆ. ಈಕೆಯ ಪತಿ ತಬ್ರೇಜ್ ಪಾಷಾ ಕೊಲೆ ಮಾಡಿ ಪರಾರಿಯಾಗಿದ್ದಾನೆ‌. ಕೌಟುಂಬಿಕ ವಿಚಾರವಾಗಿ ಹಲವು ದಿನಗಳಿಂದ ಪತಿ- ಪತ್ನಿ ನಡುವೆ ಗಲಾಟೆ ನಡೆಯುತ್ತಿತ್ತು. ಕುಟುಂಬದ ಹಿರಿಯರು ಬುದ್ಧಿ ಹೇಳಿ ಸಂಸಾರ ನಡೆಸಿಕೊಂಡು ಹೋಗುವಂತೆ ಬುದ್ಧಿ ಹೇಳುತ್ತಿದ್ದರು. ಆದರೆ, ಇಂದು ಬೆಳಗ್ಗೆ ಕೂಡ ಇಬ್ಬರ ಮಧ್ಯೆ ಜಗಳ ನಡೆದಿದ್ದು, ಬೆಳಗ್ಗೆ 8.30ರ ಸುಮಾರಿಗೆ ತಬ್ರೇಜ್ ಪಾಷಾ ಹೆಂಡಿತಿಗೆ ಚಾಕುವಿನಿಂದ […]