ಮಳೆ ಹವಾಂತರದಿಂದ ಕಂಗೆಟ್ಟ ಜನರಿಗೆ ಮತ್ತೊಂದು ಶಾಕ್; ಲಾ ಲಿನಾ ಮಾರುತ, ಹವಮಾನ ಇಲಾಖೆಯಿಂದ ಎಚ್ಚರಿಕೆ

ಭಾರೀ ಮಳೆಗೆ ಕರಾವಳಿ ಕರ್ನಾಟಕ ಮಾತ್ರವಲ್ಲದೆ ದೇಶದ ವಿವಿಧ ರಾಜ್ಯಗಳಲ್ಲಿ ಅನಾಹುತ ಸೃಷ್ಟಿಯಾಗಿದೆ. ಈ ಮಧ್ಯೆ ಆಘಾತಕಾರಿ ಸುದ್ದಿಯೊಂದು ಬಹಿರಂಗವಾಗಿದೆ. ಈ ಬಾರಿ ಅಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಲಾ ಲಿನಾ ಮಾರುತ ರೂಪುಗೊಳ್ಳಲಿದೆ. ಇದು ಭಾರಿ ಮಳೆಯನ್ನೇ ತರಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಗಸ್ಟ್ ಮೊದಲ ವಾರಾಂತ್ಯಕ್ಕೆ ಮಳೆ ಕಡಿಮೆಯಾಗಲಿದೆ. ಆದರೆ ಆಗಸ್ಟ್ ಅಂತ್ಯ ಹಾಗೂ ಸೆಪ್ಟೆಂಬರ್ ನಲ್ಲಿ ಲಾ ನಿನಾ ಮಾರುತ ರೂಪುಗೊಂಡು ಅವಾಂತರ ಸೃಷ್ಟಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. […]
ಉಡುಪಿ; ಮುಸುಕುಧಾರಿಗಳಿಂದ ಪ್ಲ್ಯಾಟ್ ಗೆ ನುಗ್ಗಲು ಯತ್ನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ನಾಲ್ವರು ಮುಸುಕುಧಾರಿಗಳು ಫ್ಲ್ಯಾಟ್ ವೊಂದಕ್ಕೆ ನುಗ್ಗಲು ಯತ್ನಿಸಿ, ವಿಫಲರಾಗಿ ವಾಪಾಸ್ಸಾಗಿರುವ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ. ಮುಸುಕುಧಾರಿಗಳು ಬಂದಿರುವುದು ಅಪಾರ್ಟ್ ಮೆಂಟ್ ನ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ. ನಾಲ್ವರು ಮುಸುಕುಧಾರಿಗಳು ರಾಡ್ ಗಳನ್ನು ಹಿಡಿದು ಶಸ್ತ್ರಸಜ್ಜಿತವಾಗಿ ಅಪಾರ್ಟ್ ಮೆಂಟ್ ಗೆ ನುಗ್ಗಲು ಯತ್ನಿಸಿದ್ದಾರೆ. ಅಪರಿಚಿತರು ಪ್ಲ್ಯಾಟ್ ಗೆ ಪ್ರವೇಶಿಸಲು ವಿಫಲರಾಗಿ ಸ್ಥಳದಿಂದ ಹಿಂದಿರುಗಿರುವುದು ಸಿಸಿಟಿವಿ ದೃಶ್ಯದಲ್ಲಿ ಕಂಡುಬಂದಿದೆ. ಮುಸುಕುಧಾರಿಗಳು ಒಳನುಗ್ಗಲು ಯತ್ನಿಸಿದ್ದ ಫ್ಲ್ಯಾಟ್ ನಲ್ಲಿ ವಯಸ್ಸಾದ ದಂಪತಿ ವಾಸಿಸುತ್ತಿದ್ದರು. ಈ ದಂಪತಿ ಒಂದು ವಾರದ […]
ಮಟನ್ ಊಟ ಸೇವಿಸಿ ಅಸ್ವಸ್ಥ; ರಾಯಚೂರಿನಲ್ಲಿ ಒಂದೇ ಮನೆಯ ನಾಲ್ವರು ಸಾವು

ಮಟನ್ ಊಟ ಸೇವಿಸಿದ್ದ ಒಂದೇ ಕುಟುಂಬದ ನಾಲ್ವರು ಅಸ್ವಸ್ಥರಾಗಿ ಸಾವನ್ನಪ್ಪಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಮೃತರನ್ನು ಭೀಮಣ್ಣ(60), ಈರಮ್ಮ (54), ಮಲ್ಲೇಶ್ (19) ಹಾಗೂ ಪಾರ್ವತಿ(17)ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಲ್ಲಮ್ಮ ಎಂಬುವವರ ಸ್ಥಿತಿ ಗಂಭೀರವಾಗಿದೆ. ಬುಧವಾರ ರಾತ್ರಿ ಇಡೀ ಕುಟುಂಬ ಮಟನ್ ಕೊಂಡು ತಂದು ಅಡುಗೆ ಮಾಡಿ ಜೊತೆಯಾಗಿ ಊಟ ಮಾಡಿತ್ತು. ಆ ಬಳಿಕ ಎಲ್ಲರೂ ಅಸ್ವಸ್ಥರಾಗಿದ್ದಾರೆ. ಮಟನ್ ಅಡುಗೆಯಲ್ಲಿ ಹಲ್ಲಿ […]
ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡೆ ಕುಸಿತ; ಸಂಚಾರ ಬಂದ್

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡೆ ಕುಸಿತ ಸಂಭವಿಸಿದ್ದು, ಸಂಚಾರ ಬಂದ್ ಆಗಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಮಾಣಿ- ಮೈಸೂರು ಹೆದ್ದಾರಿಯ ತೆಂಕಿಲ ಎಂಬಲ್ಲಿ ಹೆದ್ದಾರಿ ಮೇಲೆ ಗುಡ್ಡ ಕುಸಿದು ಬಿದ್ದಿದೆ. ಇದರ ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸದ್ಯ ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ. ಗುಡ್ಡ ಕುಸಿತದ ವೇಳೆ ವಾಹನ ಸಂಚಾರ ಇಲ್ಲದಿರುವುದರಿಂದ ಸಂಭವನೀಯ ಅನಾಹುತ ತಪ್ಪಿದಂತಾಗಿದೆ. ಸದ್ಯ ಮಡಿಕೇರಿ ಹಾಗೂ ಮೈಸೂರು ಕಡೆಗೆ ಪ್ರಯಾಣಿಸುವವರಿಗೆ ಬದಲಿ ರಸ್ತೆಯಾಗಿ ಪುತ್ತೂರು ಸಿಟಿ ಮೂಲಕ […]
ಪ್ರಜ್ವಲ್ ರೇವಣ್ಣ ವಿಡಿಯೋ ಅಸಲಿ, ತಿರುಚಲಾಗಿಲ್ಲ; ಎಫ್ ಎಸ್ ಎಲ್ ವರದಿಯಲ್ಲಿ ಬಹಿರಂಗ

ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಹಾಗೂ ವಿಡಿಯೋ ಚಿತ್ರೀಕರಣ ಮಾಡಿರುವ ಆರೋಪ ಎದುರಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ವಿಡಿಯೋಗಳು ಅಸಲಿಯಾಗಿದ್ದು, ವಿಡಿಯೋಗಳನ್ನು ತಿರುಚಿಲ್ಲ ಎಂದು ವಿಧಿ ವಿಜ್ಞಾನ ಪ್ರಯೋಗಾಲಯವು (FSL) ವರದಿ ನೀಡಿದೆ. ಹಾಸನ ಅಶ್ಲೀಲ ವಿಡಿಯೋ ಕೇಸ್‌ಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳು ಹಾಗೂ ಪೆನ್‌ಡ್ರೈವ್‌ಗಳಿಂದ ಅಶ್ಲೀಲ ವಿಡಿಯೋಗಳನ್ನು ಎಸ್‌ಐಟಿ ತಂಡ ಸಂಗ್ರಹಿಸಿತ್ತು. ಖಚಿತತೆ ಪಡೆದುಕೊಳಲು ಈ ಎಲ್ಲಾ ವಿಡಿಯೋಗಳನ್ನು FSLಗೆ ಕಳುಹಿಸಲಾಗಿತ್ತು. ಪ್ರಯೋಗಾಲದಿಂದ ಈ ವಿಡಿಯೋಗಳ ಬಗ್ಗೆ ಎಸ್‌ಐಟಿ ಅಧಿಕಾರಿಗಳಿಗೆ ವರದಿ ತಲುಪಿಸಿದ್ದು, […]
ಭಾರೀ ಮಳೆ ಹಿನ್ನೆಲೆ; ಆ.2ರಂದು ಉಡುಪಿ ಜಿಲ್ಲಾ- ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಆ.2ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.
ಹಾಡಹಗಲೇ ಯುವಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ

ಹಾಡಹಗಲೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಶೇಷಾದ್ರಿ ಪುರಂ ಪೊಲೀಸ್ ಠಾಣೆ ಬಳಿ ನಡೆದಿದೆ. ಅಜಿತ್ ಕುಮಾರ್ (25) ಕೊಲೆಯಾದವನು. ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ರಶಿಲ್ಲಾರ್ ಸ್ಟ್ರೀಟ್‌ನಲ್ಲಿ ಅಜಿತ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹಂತಕರಿಗಾಗಿ ಹುಡುಕಾಟ […]
ಪುನೀತ್ ಕೆರೆಹಳ್ಳಿ, ಪ್ರತಾಪ್ ಸಿಂಹ ವಿರುದ್ಧ ಮತ್ತೆ ಎಫ್ ಐಆರ್

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಇದೀಗ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಸೇರಿದಂತೆ ಮತ್ತಿತರರ ವಿರುದ್ಧ ಇದೀಗ ಬಸವೇಶ್ವರನಗರದಲ್ಲಿ ಎಫ್‌ಐಆರ್ ದಾಖಲಾಗಿದೆ. ಕುರಿ ಮಾಂಸವನ್ನು ನಾಯಿ ಮಾಂಸ ಎಂದು ಆಪಾದಿಸಿ ರಾದ್ದಾಂತ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಲಾಗಿತ್ತು. ಬಂಧಿಸಿದ ಕಾರಣಕ್ಕೆ ಪೊಲೀಸ್ ಠಾಣೆ ಮುಂದೆ ಇಂದು ಕಾರ್ಯಕರ್ತರು ಸೇರಿದಂತೆ ಇನ್ನಿತರರು ಅಕ್ರಮವಾಗಿ ಗುಂಪುಗೂಡಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರ […]
ಶಿರಾಡಿ ಘಾಟ್ ನ ದೊಡ್ಡತಪ್ಲು ಬಳಿ ಭೂಕುಸಿತ

ಶಿರಾಡಿ ಘಾಟ್ ನ ದೊಡ್ಡತಪ್ಲು ಬಳಿ ಮತ್ತೆ ಭೂಕುಸಿತ ಸಂಭವಿಸಿದ್ದು, ಎರಡು ಕಂಟೇನರ್ ಗಳು ಮಣ್ಣಲ್ಲಿ ಮುಳುಗಿದ್ದು, ಟ್ಯಾಂಕರ್‌ನಲ್ಲಿ ಸಿಲುಕಿದ್ದ ಚಾಲಕರನ್ನು ರಕ್ಷಿಸಲಾಗಿದೆ. ಮೂವರು ಚಾಲಕರನ್ನು ರಕ್ಷಿಲಾಗಿದ್ದು, ಸ್ಥಳದಲ್ಲಿ ಮತ್ತಷ್ಟು ಗುಡ್ಡ ಕುಸಿತ ಸಂಭವಿಸುವ ಸಾಧ್ಯತೆ ಇದೆ. ಗುಡ್ಡ ಕುಸಿತದಿಂದ ಮಣ್ಣಿನಡಿ ಸಿಲುಕಿದ ಕಂಟೇನರ್ ರೈಲ್ವೆ ಹಳಿ ಮೇಲೆ ಬೀಳುವ ಆತಂಕ ಎದುರಾಗಿದೆ. ರೈಲ್ವೆ ಹಳಿ ಮೇಲೆ ಹಾದು ಹೋಗಿರುವ ರಸ್ತೆಯ ತುದಿಯಲ್ಲಿ ಕಂಟೇನರ್ ಉರುಳಿಬಿದ್ದಿದೆ. ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ನಲ್ಲಿ […]
ರಾಜ್ಯಪಾಲರಿಂದ ಸಿದ್ದರಾಮಯ್ಯಗೆ ನೊಟೀಸ್ ; ಕೈಪಾಳಯದಲ್ಲಿ ತಳಮಳ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ಕೋರಿ ವಕೀಲ ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬೆನ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ನೋಟಿಸ್ ನೀಡಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ಕೋರಲಾಗಿದೆ. ಆರೋಪಗಳ ಕುರಿತು ವಿವರಣೆ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದಾರೆ. ಇಂದಿನ ಸಚಿವ […]