Breaking News :

ಕೋರಮಂಗಲ ಪಿಜಿಯಲ್ಲಿ ಯುವತಿಯ ಕೊಲೆ ವಿಡಿಯೋ ವೈರಲ್: ಸಂತ್ರಸ್ತೆ ಯಾಚಿಸಿದರೂ ಸಹಾಯಕ್ಕೆ ಮುಂದಾಗದ ಯುವತಿಯರು!

ಬೆಂಗಳೂರು: ಕೋರಮಂಗಲದ ಪಿಜಿಯೊಂದರಲ್ಲಿ ನಡೆದ ಕೃತಿ ಕುಮಾರಿ ಎಂಬ ಯುವತಿಯ ಮರ್ಡರ್ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ವಿಡಿಯೋವನ್ನು ವೈರಲ್ ಮಾಡಲಾಗಿದೆ. ಕೊಲೆಯ ವೇಳೆ  ಯುವತಿ ರಕ್ತದ ಮಡುವಿನಲ್ಲಿ ಬಿದ್ದು ಸಹಾಯಕ್ಕಾಗಿ ಯಾಚಿಸುತ್ತಿದ್ದರೂ, ಅಲ್ಲಿದ್ದ ಇತರ ಯುವತಿಯರು ಆಕೆಯ ಸಹಾಯಕ್ಕೆ ಬರದೆ ತಮ್ಮಷ್ಟಕ್ಕೇ ಹೋಗಿದ್ದು ವಿಡಿಯೋದಲ್ಲಿ ದಾಖಲಾಗಿದ್ದು, ಟೀಕೆಗೆ ಕಾರಣವಾಗಿದೆ. ಜು.23ರಂದು ಕೋರಮಂಗಲದ ಪಿಜಿಯಲ್ಲಿ ಕೃತಿ ಕುಮಾರಿ ಕೊಲೆ ನಡೆದಿತ್ತು. ಕತ್ತು, ಎದೆ, ಹೊಟ್ಟೆ ಭಾಗ ಸೇರಿ ಹಲವು ಕಡೆ ಇರಿದು ಆಕೆಯನ್ನು ಕೊಲೆ ಮಾಡಲಾಗಿದೆ‌. ಆಕೆಯ […]

ದರ್ಶನ್ ಗೆ ಕ್ಷಮೆ ನೀಡುತ್ತಾ ರೇಣುಕಾಸ್ವಾಮಿ ಕುಟುಂಬ? ರೇಣುಕಾಸ್ವಾಮಿ ತಂದೆ ಹೇಳಿದ್ದೇನು?

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಜೈಲು ಪಾಲಾಗಿದ್ದು, ಅವರ ವಿರುದ್ಧ ಬಲವಾದ ಸಾಕ್ಷ್ಯಾಗಳು ಪೊಲೀಸರಿಗೆ ಸಿಕ್ಕಿದೆ. ರೇಣುಕಾಸ್ವಾಮಿ ಕುಟುಂಬ ಬಯಸದೆ ದರ್ಶನ್ ರಕ್ಷಣೆ ಸಾಧ್ಯವಿಲ್ಲ ಎನ್ನಲಾಗಿದೆ. ದರ್ಶನ್ ಕುಟುಂಬ ರೇಣುಕಾಸ್ವಾಮಿ ಕುಟುಂಬದ ಜೊತೆ ಮಾತುಕತೆಗೆ ಪ್ರಯತ್ನಿಸುತ್ತದೆ ಎನ್ನಲಾಗಿತ್ತು. ದರ್ಶನ್ ಜೊತೆ ಕಾಂಪ್ರಮೈಸ್ ಗೆ ತಯಾರಿದ್ದಾರಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ರೇಣುಕಾಸ್ವಾಮಿ ತಂದೆ ಕಾಶೀನಾಥಯ್ಯ, ಯಾವುದೇ ಕಾರಣಕ್ಕೂ ಕಾಂಪ್ರಮೈಸ್ ಗೆ ನಾವು ಒಪ್ಪಲ್ಲ. ನನ್ನ ಮಗನಿಗೆ ನ್ಯಾಯ ದೊರಕಿಸಿಕೊಡಬೇಕು ಅಷ್ಟೇ ನಮಗಿರುವ ಗುರಿ ಎಂದಿದ್ದಾರೆ. ದರ್ಶನ್ ಇರಲಿ ಯಾರೇ […]

BREAKING ನೀಟ್ ಪರೀಕ್ಷೆ ರದ್ದು, ಒಂದು ದೇಶ, ಒಂದು ಚುನಾವಣೆ ವಿರುದ್ಧ ಕರ್ನಾಟಕ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ನೀಟ್ ಪರೀಕ್ಷೆ ರದ್ದು ಹಾಗೂ ಕೇಂದ್ರ ಸರ್ಕಾರದ ಒಂದು ದೇಶ, ಒಂದು ಚುನಾವಣೆ ವಿರೋಧಿಸಿ ಕರ್ನಾಟಕ ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದು, ವಿಧಾನಸಭೆ ಅದನ್ನು ಅಂಗೀಕರಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜುಲೈ 22ರಂದು ನಡೆದ ನಡೆದ ಸಂಪುಟ ಸಭೆಯಲ್ಲಿ ನೀಟ್‌ ಪರೀಕ್ಷೆ ಮತ್ತು ಕೇಂದ್ರ ಸರ್ಕಾರ ಒಂದು ದೇಶ, ಒಂದು ಚುನಾವಣೆ ವಿರೋಧಿಸಲು ನಿರ್ಧರಿಸಲಾಗಿತ್ತು. ಈ ಕುರಿತು ನಿರ್ಣಯ ಮಂಡಿಸಿದ ಕಾನೂನು ಸಚಿವ ಹೆಚ್.ಕೆ  ಪಾಟೀಲ್,  ಕೇಂದ್ರ ಸರ್ಕಾರದ ‘ಒಂದು ದೇಶ, ಒಂದು ಚುನಾವಣೆ’ ಪರಿಕಲ್ಪನೆ ಮತ್ತು […]

ಯುವಕನ ಕೈಕಡಿದ ಪ್ರಕರಣ: ಆರೋಪಿಗಳ ಬಂಧನ

ಕನಕಪುರದ ಮಳಗಾಳು ಗ್ರಾಮದ ಎನ್.ಕೆ. ಕಾಲೊನಿಯಲ್ಲಿ  ದಲಿತ ಯುವಕನ‌ ಕೈ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕನಕಪುರ ಟೌನ್ ಪೊಲೀಸರು ಮಂಗಳವಾರ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಶಾಂಕ್, ದರ್ಶನ್, ಪ್ರತೀಕ್ ಹಾಗೂ ಶಿವಶಂಕರ್ ಬಂಧಿತ ಆರೋಪಿಗಳು. ಘಟನೆಯ  ಪ್ರಮುಖ ಆರೋಪಿ ಹರ್ಷ  ಸೇರಿದಂತೆ ಉಳಿದ ಮೂವರು ತಲೆ ಮರೆಸಿಕೊಂಡಿದ್ದಾರೆ. ಕೇಂದ್ರ ವಲಯದ ಐಜಿಪಿ ಲಾಬೂ ರಾಮ್ ಅವರು ಬೆಳಿಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಅವರೊಂದಿಗೆ ಕಾಲೊನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಐಜಿಪಿ […]

ಪುರಸಭಾ ಸದಸ್ಯನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ; ಧರ್ಮಸ್ಥಳಕ್ಕೆ ಬಂದು ನಿನ್ನೆಯಷ್ಠೇ ವಾಪಾಸ್ಸಾಗಿದ್ದವನನ್ನು ಹೊಂಚು ಹಾಕಿ ಹತ್ಯೆ

ಪುರಸಭೆ ಸದಸ್ಯನನ್ನು ಮಾರಕಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಆನೇಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾದನಪುರದಲ್ಲಿ ನಡೆದಿದೆ. ಬಾದನಪುರ ಕಾರ್ಪೊರೇಟರ್ ರವಿ ಕೊಲೆಯಾದ ದುರ್ದೈವಿ ಎಂದು ತಿಳಿದುಬಂದಿದೆ. ಬೆಂಗಳೂರು ಆನೇಕಲ್ ತಾಲೂಕಿನ ಪುರಸಭೆಯ ಸದಸ್ಯ ರವಿ ನಿನ್ನೆಯಷ್ಟೇ ಧರ್ಮಸ್ಥಳ ಮಂಜುನಾಥನ ದರ್ಶನಕ್ಕೆ ತೆರಳಿ ಮನೆಗೆ ವಾಪಸ್ ಆಗಿದ್ದರು. ಬಳಿಕ ರಾತ್ರಿ 8:45ಕ್ಕೆ ಮನೆ ಹೊರಗೆ ಹೋಗಿದ್ದ ಅವರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಬಾದನಪುರ ಮೂಲದ ಹರೀಶ್ ಹಾಗೂ ವಿನಯ್ ಮತ್ತು ಕರ್ಪೂರ ಗ್ರಾಮದ ಜೆಕೆ ಈ […]

ಸೌದಿಯಿಂದ ಬಂದು ಸ್ವಂತ ಅಣ್ಣನ ಮಗನನ್ನೇ ಕೊಲೆ‌ ಮಾಡಿದ ಚಿಕ್ಕಪ್ಪ

ಚಿಕ್ಕಬಳ್ಳಾಪುರ: ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಕೊಲೆ ಮಾಡಲೆಂದು ಊರಿಗೆ ಬಂದು ತನ್ನ ಸ್ವಂತ ಅಣ್ಣನ ಮಗನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಗುಡಿಬಂಡೆ ತಾಲ್ಲೂಕು ಹಂಪಸಂದ್ರದಲ್ಲಿ ನಡೆದಿದೆ. ನಜೀರ್‌ ಅಹ್ಮದ್‌ ಕೊಲೆಯಾಗಿರುವ ವ್ಯಕ್ತಿಯಾಗಿದ್ದಾರೆ. ಈತನನ್ನು ಚಿಕ್ಕಪ್ಪ ಬಶೀರ್‌ ಅಹ್ಮದ್‌(66) ಕೊಲೆ ಮಾಡಿದ್ದಾರೆ. ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ಬಶೀರ್ ಅಹ್ಮದ್  ಇತ್ತೀಚೆಗೆ ಊರಿಗೆ ಬಂದಿದ್ದ. ಯಾವುದೋ ಕಾರಣಕ್ಕೆ ಜಗಳವಾಗಿದ್ದು, ಪಿಸ್ತೂಲ್‌ ತೆಗೆದು ಸ್ವಂತ ಅಣ್ಣನ ಮಗ ನಜೀರ್‌ ಅಹ್ಮದ್‌ನನ್ನು ಕೊಲೆ ಮಾಡಿದ್ದಾರೆ. ಇತ್ತ, ಗಲಾಟೆ […]

ಅಂಕೋಲಾ ಗುಡ್ಡೆ ಕುಸಿತ ಸ್ಥಳದಲ್ಲಿ ಪೊಕಲೇನ್ ಯಂತ್ರದ ಮೂಲಕ ಕಾರ್ಯಾಚರಣೆ; ಏನಿದು ಯಂತ್ರ?

ಉತ್ತರ ಕನ್ನಡ,: ಅಂಕೋಲಾ ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 8 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ನಾಪತ್ತೆಯಾದವರ ಮೃತದೇಹ ಪತ್ತೆಗೆ ಹುಡುಕಾಟ ಮುಂದುವರಿದಿದೆ. ಗಂಗಾವಳಿ ನದಿಯಲ್ಲಿ ಪೊಕಲೇನ್ (poclain) ಮೂಲಕ ಕಾರ್ಯಾಚರಣೆ ನಡೆಸಲಾಗುತ್ತದೆ ಈ ಪೊಕಲೇನ್ ವೆಹಿಕಲ್, ನದಿಯ ಆಳದಲ್ಲಿರುವ ಮಣ್ಣನ್ನು ತೆರವು ಮಾಡುವ ಯಾಂತ್ರವಾಗಿದೆ. ನದಿಯಲ್ಲಿ ಇನ್ನುಳಿದ ಮೃತ ದೇಹಗಳು ಇರುವ ಶಂಕೆ ವ್ಯಕ್ತವಾಗಿದ್ದು, ಕರ್ನಾಟಕದ ಇಬ್ಬರು ಮತ್ತು ಕೇರಳದ ಓರ್ವರ‌ ಮೃತದೇಹ ಪತ್ತೆ ಮಾಡಬೇಕಿದೆ. 60 ಅಡಿ ಉದ್ದವಾದ […]

ಬಜೆಟ್ ನಲ್ಲಿ ನಿರ್ಲಕ್ಷ್ಯ; ನೀತಿ ಆಯೋಗದ ಸಭೆ ಬಹಿಷ್ಕರಿಸಿದ ಕರ್ನಾಟಕ‌ ಸೇರಿ ನಾಲ್ಕು ರಾಜ್ಯಗಳ ಸಿಎಂಗಳು

ಕೇಂದ್ರ ಬಜೆಟ್‌ನಲ್ಲಿ ತಮ್ಮ ರಾಜ್ಯಗಳನ್ನು ಕಡೆಗಣಿಸಿರುವುದನ್ನು ವಿರೋಧಿಸಿ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸುವುದಾಗಿ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಜುಲೈ 27 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ  ನೀತಿ ಆಯೋಗದ ಸಭೆ ನಡೆಯಲಿದೆ. ಸಭೆಯನ್ನು ಕರ್ನಾಟಕದ ಸಿಎಂ ಸಿದ್ದರಾಮಯ್ಯ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಹಿಮಾಚಲ ಪ್ರದೇಶದ ಸುಖವಿಂದರ್ ಸಿಂಗ್ ಸುಖು ಸಭೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿದ್ದಾರೆ. ನೀತಿ ಆಯೋಗದ ಸಭೆಗೆ ಹಾಜರಾಗುವುದು ಅರ್ಥಹೀನ, ಕನ್ನಡಿಗರ ಕಾಳಜಿಯನ್ನು ಮರೆಯಲಾಗಿದೆ. ಕರ್ನಾಟಕದ […]

ಶಿವಮೊಗ್ಗ; ಪ್ರಿಯತಮೆಯನ್ನು ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಶಿವಮೊಗ್ಗ: ಯುವಕನೋರ್ವ ತನ್ನ ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ ಮಾಡಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯ ಕೊಲೆಯಾದವಳು. ಪ್ರಕರಣಕ್ಕೆ ಸಂಬಂದಿಸಿದಂತೆ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಆರೋಪಿ ಸೃಜನ್​ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ಸೌಮ್ಯ ಮದುವೆಯಾಗುವಂತೆ ಸೃಜನ್​ನನ್ನು ಕೇಳಿಕೊಂಡಿದ್ದಳು. ಇದರಿಂದ ಸೃಜನ್ ಪ್ರಿಯತಮೆಯನ್ನೇ ಕೊಲೆ ಮಾಡಿ ಮೃತದೇಹವನ್ನು ಶಿವಮೊಗ್ಗದ ಮುಂಬಾಳು ಗ್ರಾಮದ ಬಳಿ ಹೂತಿಟ್ಟಿದ್ದ. ಮಗಳು ನಾಪತ್ತೆ ಹಿನ್ನೆಲೆ ಯುವತಿಯ ಪೋಷಕರು ನಾಪತ್ತೆ ಪ್ರಕರಣ […]

ಜೈಲಿನಿಂದ ಬಿಡುಗಡೆ ಬಳಿಕ ಸೂರಜ್ ರೇವಣ್ಣ ಹೇಳಿದ್ದೇನು?

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತ ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣ ಅವರು ಜನಪ್ರತಿನಿಧಿಗಳ ನ್ಯಾಯಾಲಯವು ಜಾಮೀನು ನೀಡಿದ ಬಳಿಕ ಜೈಲಿನಿಂದ ಹೊರ ಬಂದಿದ್ದಾರೆ. ಬಳಿಕ ಸೂರಜ್‌ ರೇವಣ್ಣ ಮಾಧ್ಯಮಗಳ ಜೊತೆಗೆ ಮಾತನಾಡಿದ್ದು, ಕುಟುಂಬದ ವಿರುದ್ಧ ಷಡ್ಯಂತ್ರ ಮಾಡಿ ತೇಜೋವಧೆ ಮಾಡಿದ್ದಾರೆ. ತೇಜೋವಧೆ ಮಾಡುವ ದುರುದ್ದೇಶದಿಂದ ಕೇಸ್ ದಾಖಲಿಸಿದ್ದಾರೆ. ನಾವು ಯಾವುದಕ್ಕೂ ಹೆದರಿಕೊಂಡು ಎಲ್ಲಿಗೂ ಓಡಿ ಹೋಗಲ್ಲ.ಎರಡು ಮೂರು ದಿನದಲ್ಲಿ ಎಲ್ಲದಕ್ಕೂ ಸ್ಪಷ್ಟನೆ ಕೊಡುತ್ತೇನೆ. ತನಿಖಾಧಿಕಾರಿಗಳಿಗೆ ಸಹಕಾರ ನೀಡಿದ್ದೇನೆ. ಕಾನೂನು ನ್ಯಾಯಾಂಗದ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು […]