ಬೈಕ್ ಗೆ ಲಾರಿ ಢಿಕ್ಕಿಯಾಗಿ ಭೀಕರ ಅಪಘಾತ; ಇಬ್ಬರು ಯುವಕರು ಮೃತ್ಯು

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಸಂತೇಕಲ್ಲಹಳ್ಳಿ ಬಳಿ ನಡೆದಿದೆ. ಚಿಂತಾಮಣಿ ತಾಲೂಕಿನ ಭುವನ್ (30) ಹಾಗೂ ಭಾನು ಪ್ರಕಾಶ್ (30) ಮೃತ ದುರ್ದೈವಿಗಳು. ಇವರು ಹೊಸಕೋಟೆ ಪಿಲ್ಲಗುಂಪೆ ಫ್ಯಾಕ್ಟರಿಯಲ್ಲಿ ಕೆಲಸ ಮುಗಿಸಿ ವಾಪಸ್ ಮನೆಗೆ ಬರುವಾಗ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಡಿವೈಎಸ್‌ಪಿ ಮುರುಳಿಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಎಸಿಪಿ ಚಂದನ್ ಗೆ ಧಮ್ಕಿ ಹಾಕಿದ ಸಂಸದ ಪ್ರತಾಪ್ ಸಿಂಹ

ಬೆಂಗಳೂರಿನಲ್ಲಿ ಮಾಂಸಕ್ಕೆ ಸಂಬಂಧಿಸಿ ವಿವಾದ ಸೃಷ್ಟಿಸಿದ್ದ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದ ಪೊಲೀಸ್ ಅಧಿಕಾರಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಧಮ್ಕಿ ಹಾಕಿದ್ದು, ಇದಕ್ಕೆ ಸಾಮಾಜಿಕ ಜಾಲತಾಣ ಬಳಕೆದಾರರು ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಪುನೀತ್ ಕೆರೆಹಳ್ಳಿಗೆ ಲಾಕಪ್ ನಲ್ಲಿ ಬಟ್ಟೆ ಬಿಚ್ಚಿ ಕೂರಿಸುವ ಮೂಲಕ ಅವರನ್ನು ಅಪಮಾನಿಸಿದ್ದಾರೆಂದು ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿ ACP ಚಂದನ್ ಅವರಿಗೆ ಠಾಣೆಗೆ ಬರ್ತಿನಿ ನೀವು ಇರಬೇಕು ಎಂದು ಧಮ್ಕಿ ಹಾಕಿದ್ದಾರೆ. ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಜೈಪುರದಿಂದ ರೈಲೊಂದರಲ್ಲಿ […]
ಮಸೀದಿಯೊಳಗೆ ಬಿಯರ್ ಬಾಟಲಿ ಎಸೆತ: ಪ್ರತಿಭಟನೆ

ರಾಯಚೂರು; ಮಸೀದಿಯೊಳಗೆ ಮದ್ಯದ ಬಾಟಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಕೆಲ ಆಗಂತುಕರು ಮದ್ಯ ಕುಡಿದು ಬಿಯರ್ ಬಾಟಲಿಯನ್ನು ಮಸೀದಿ ಒಳಗಡೆ ಎಸೆದಿದ್ದರು. ವಿಷಯ ತಿಳಿದು ಸ್ಥಳೀಯರು ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ತಡರಾತ್ರಿ ಮುಖ್ಯರಸ್ತೆ ತಡೆದು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರಾತ್ರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ, ಎಎಸ್ಪಿ ಶಿವಕುಮಾರ, ಡಿವೈಎಸ್ಪಿ ಬಿಎಸ್ ತಳವಾರ, ಸಿಪಿಐ ಶಶಿಕಾಂತ, ಪಿಎಸ್‌ಐ ಗುರುಚಂದ್ರ […]
ವಯನಾಡು ಭೂಕುಸಿತಕ್ಕೆ ಮೃತರ ಸಂಖ್ಯೆ 143ಕ್ಕೆ ಏರಿಕೆ: ಸಂಪರ್ಕಕ್ಕೆ ಸಿಗದ ಚಾಮರಾಜನಗರದ ಎರಡು ಕುಟುಂಬದ ಸದಸ್ಯರು

ಚಾಮರಾಜನಗರ: ಕೇರಳದ ವಯನಾಡು ಜಿಲ್ಲೆಯ ಗುಡ್ಡೆ ಕುಸಿತದ ಸ್ಥಳದಿಂದ ಈಗಾಗಲೇ 143 ಮೃತದೇಹಗಳನ್ನು ಪತ್ತೆ ಹಚ್ಚಲಾಗಿದೆ. ಹಲವರು ಇನ್ನು ಕೂಡ ನಾಪತ್ತೆಯಾಗಿದ್ದಾರೆ. ಗುಡ್ಡ ಕುಸಿದ ಪರಿಣಾಮ ಭಾರೀ ಸಾವು-ನೋವು ಸಂಭವಿಸಿದೆ. ಈ ದುರಂತದಲ್ಲಿ ಚಾಮರಾಜನಗರದ ದಂಪತಿ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ 3-4 ವರ್ಷಗಳಿಂದ ಚೂರಲ್ಮಲನಲ್ಲಿ ಕೆಲಸ ಮಾಡಿಕೊಂಡಿದ್ದ ಚಾಮರಾಜನಗರದ ಸೋಮವಾರಪೇಟೆಯ ದಂಪತಿ ರತ್ನಮ್ಮ ಹಾಗೂ ರಾಜೇಂದ್ರ ನಾಪತ್ತೆಯಾಗಿದ್ದಾರೆ. ದುರಂತದ ಬಳಿಕ ಚಾಮರಾಜನಗರದಲ್ಲಿರುವ ಕುಟುಂಬಸ್ಥರು, ರತ್ನಮ್ಮ ಹಾಗೂ ರಾಜೇಂದ್ರ ದಂಪತಿಗೆ ಕರೆ ಮಾಡಿದ್ದಾರೆ. ಆದರೆ ದಂಪತಿ […]
ಕರ್ನಾಟಕದ ಐದು ಜಿಲ್ಲೆಗಳಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ; ರೆಡ್ ಅಲರ್ಟ್ ಘೋಷಣೆ

ಕರ್ನಾಟಕದಾದ್ಯಂತ ಇಂದಿನಿಂದ ಮತ್ತೆ ಭಾರಿ ಮಳೆ ಸುರಿವ ಸಾಧ್ಯತೆ ಇದೆ. ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿರಲಿದೆ ಎಂದು ತಿಳಿದು ಬಂದಿದೆ. ಮಳೆ ಹಿನ್ನೆಲೆ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ, ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್, ಬೆಳಗಾವಿ, ಮೈಸೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಳಸ, ನಾಪೊಕ್ಲು, ಧರ್ಮಸ್ಥಳ, ಕೊಪ್ಪ, […]
ಸಕಲೇಶಪುರ ಬಳಿ ಭೂ ಕುಸಿತಕ್ಕೆ ಕೊಚ್ಚಿಕೊಂಡು ಹೋದ ರಸ್ತೆ; ಹಲವು ಗ್ರಾಮಗಳ ಸಂಪರ್ಕ ಕಡಿತ

ಹಾಸನ: ಭಾರೀ ಮಳೆಗೆ ಸಕಲೇಶಪುರ ಬಳಿ ಗುಡ್ಡ ಕುಸಿತದಿಂದ ಸುಮಾರು 200 ಅಡಿಗಳಷ್ಟು ದೂರದ ರಸ್ತೆ ಕುಸಿದುಕೊಂಡು ಹೋಗಿದ್ದು, 10 ಗ್ರಾಮಗಳ ಜನತೆ ಸಂಪರ್ಕ ಕಳೆದುಕೊಂಡಿದ್ದಾರೆ. ಸಕಲೇಶಪುರ ತಾಲೂಕಿನ ಕುಂಬರಡಿ ಸಮೀಪ ಘಟನೆ ನಡೆದಿದೆ. ಕುಂಬರಡಿ ಹಾಗೂ ಹಾರ್ಲೇ ಎಸ್ಟೇಟ್ ಮಧ್ಯೆ ಭೂ ಕುಸಿತವಾಗಿದೆ. 200 ಮೀಟರ್‌ಗೂ ಹೆಚ್ಚು ದೂರ ರಸ್ತೆ ಕೊಚ್ಚಿಹೋಗಿದ್ದು, ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಈ ರಸ್ತೆಯ ಪಕ್ಕದಲ್ಲಿ ಎತ್ತಿನಹೊಳೆ ಕಾಮಗಾರಿಗಾಗಿ ಕೆಲಸ ಮಾಡಲಾಗಿತ್ತು. ಎತ್ತಿನಹೊಳೆ ಅವೈಜ್ಞಾನಿಕ ಕಾಮಗಾರಿಯಿಂದಲೇ ಭೂಕುಸಿತವಾಗಿದೆ ಎಂದು ಆರೋಪಿಸಲಾಗಿದೆ.
ಬೆಳ್ತಂಗಡಿ; ಭಾರೀ ಮಳೆ ಹಿನ್ನೆಲೆ; ಇಂದು ತಾಲೂಕಿನ ಶಾಲೆಗಳಿಗೆ ರಜೆ

ಬೆಳ್ತಂಗಡಿ; ಭಾರೀ ಮಳೆಯ ಹಿನ್ನೆಲೆ ಬೆಳ್ತಂಗಡಿ ತಾಲೂಕಿನಲ್ಲಿ ಎಲ್ಲ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ನೀಡಿ ಬೆಳ್ತಂಗಡಿ ತಹಶೀಲ್ದಾರ್ ಅವರು ಆದೇಶ ಹೊರಡಿಸಿದ್ದಾರೆ. ಬೆಳ್ತಂಗಡಿ ತಾಲೂಕಿನಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ ನದಿಗಳಲ್ಲಿ ನೀರಿನ ಮಟ್ಟ ಏರುತ್ತಿದ್ದು, ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ. ಹಲವೆಡೆ ನದಿಗಳು ಉಕ್ಕಿ ಹರಿಯುತ್ತಿದೆ. ಇದರಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ವಾಹನ ಚಾಲಕರಿಗೆ ಬಹುಮುಖ್ಯ ಮಾಹಿತಿ: ನೀವು ಈ ತಪ್ಪು ಮಾಡಿದ್ರೆ ಆ.1ರಿಂದ ದಂಡ ಗ್ಯಾರೆಂಟಿ

ವಾಹನ ಚಾಲಕರಿಗೆ ಇದು ಬಹುಮುಖ್ಯ ಮಾಹಿತಿಯಾಗಿದ್ದು, ಆಗಸ್ಟ್ 1ರಿಂದ 130 ಕಿ.ಮೀ.ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಎಫ್‌ಐಆರ್ ದಾಖಲಾಗಲಿದೆ. ಈ ಕುರಿತು ಮಾತನಾಡಿದ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್, ಸ್ಪಾಟ್ ಸ್ಪೀಡ್ ಮತ್ತು ಸೆಕ್ಷನಲ್ ಸ್ಪೀಡ್ ಆಧಾರದಲ್ಲಿ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗುವುದು ಎಂದು ಹೇಳಿದ್ದಾರೆ. ರಾಜ್ಯಾದ್ಯಂತ 130 ಕಿ.ಮೀ.ಗಿಂತ ಹೆಚ್ಚಿನ ವೇಗದಲ್ಲಿ ವಾಹನ ಚಾಲನೆ ಮಾಡಿದಲ್ಲಿ ಎಫ್‌ಐಆರ್ ದಾಖಲಿಸಲಾಗುವುದು. ಈ […]
ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿ ಭೂಹಳ್ಳಿ ಪುಟ್ಟಸ್ವಾಮಿ ಆತ್ಮಹತ್ಯೆ; ಆತ್ಮಹತ್ಯೆಗೆ ಮೊದಲು ಹಾಕಿದ ಪೋಸ್ಟ್‌ನಲ್ಲಿ ಏನಿದೆ?

ಸಾಹಿತಿ ಹಾಗೂ ಪರಿಸರವಾದಿಯಾಗಿದ್ದ ಭೂಹಳ್ಳಿ ಪುಟ್ಟಸ್ವಾಮಿ (76) ಭಾನುವಾರ ತಡ ರಾತ್ರಿ ಚನ್ನಪಟ್ಟಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪುಟ್ಟಸ್ವಾಮಿ ಅವರ ಕುಟುಂಟ ಮೈಸೂರಿನಲ್ಲಿ ನೆಲೆಸಿದೆ. ಪುಟ್ಟಸ್ವಾಮಿ ಅವರು ಮಾತ್ರ ಚನ್ನಪಟ್ಟಣದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ನನ್ನ ಸಾವಿಗೆ ನಾನೇ ಕಾರಣ. ಅನಾರೋಗ್ಯದಿಂದ ಬೇಸರಗೊಂಡ ಜೀವನ ಯಾತ್ರೆ ಮುಗಿಸುತ್ತಿದ್ದೇನೆ. 28.07.24 ರಾತ್ರಿ 2.40 ಇಂತಿ ಭೂಹಳ್ಳಿ ಪುಟ್ಟಸ್ವಾಮಿ ಎಂದು ಪೋಸ್ಟ್ ಮಾಡಿ ಚನ್ನಪಟ್ಟಣದಲ್ಲಿ ನೇಣಿಗೆ ಶರಣಾಗಿದ್ದಾರೆ. ವೃತ್ತಿಯಲ್ಲಿ ಇತಿಹಾಸ ಉಪನ್ಯಾಸಕರಾಗಿದ್ದ […]
ಕಡಬ; ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

-ಮುಸ್ತಫಾ ಆತ್ಮಹತ್ಯೆ ಮಾಡಿಕೊಂಡ ಯುವಕ ಕಡಬ; ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬದ ಕಳಾರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಳಾರ ನಿವಾಸಿ ಮುಸ್ತಫಾ( 33) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಮುಸ್ತಫಾ ಅವರನ್ನು ಹುಡುಕಾಟ ನಡೆಸಿದಾಗ ಹಳೆಯ ಮನೆಯೊಂದರಲ್ಲಿ ಮೊಬೈಲ್ ರಿಂಗ್ ಆಗುತ್ತಿತ್ತು. ಸ್ಥಳಕ್ಕೆ ಹೋಗಿ ನೋಡಿದಾಗ ಮುಸ್ತಫಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮುಸ್ತಫಾ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ. […]