ಮಂಗಳೂರಿನಲ್ಲಿ ಕಳ್ಳರ ಹಾವಳಿ; ಎರಡು ಕಡೆ ಕಳ್ಳತನಕ್ಕೆ ಯತ್ನ

ಮಂಗಳೂರು: ಪದವಿನಂಗಡಿ ಬಳಿ ಎರಡು ಕಡೆ ಕಳ್ಳರು ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. ಪದವಿನಂಗಡಿ ಸಮೀಪದ ಮಹಾತ್ಮನಗರ ಬಡಾವಣೆಯ ಮನೆಯೊಂದರ ಮುಖ್ಯಗೇಟ್ ತೆಗೆದು ಒಳನುಗ್ಗಿರುವ ಕಳ್ಳರು ಬಾಗಿಲಿನ ಬಳಿ ಇದ್ದ ಇನ್ನೊಂದು ಸ್ಟೀಲ್ ಗೇಟ್‌ನ್ನು ತೆರೆದು ಮನೆಯ ಬಾಗಿಲನ್ನು ರಾಡ್‌ನಿಂದ ಒಡೆಯಲು ಯತ್ನಿಸಿದ್ದಾರೆ. ರಾತ್ರಿ 1.45ರ ವೇಳೆಗೆ ಈ ಘಟನೆ ನಡೆದಿದ್ದು, ಈ ವೇಳೆ ಎಚ್ಚರಗೊಂಡು ಎಲ್ಲ ಲೈಟ್ ಹಾಕಿ ಮನೆ ಮಂದಿ ಕೂಗಿಕೊಂಡಾಗ ಕಳ್ಳರು ಓಡಿ ಹೋಗಿದ್ದಾರೆ. ತಕ್ಷಣ ಮನೆಯವರು ಪೊಲೀಸರು ಹಾಗೂ ನೆರೆಮನೆಯವರಿಗೆ ಮಾಹಿತಿ […]
ಬೆಳಗಾವಿಯಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಕೊಲೆ

-ಯಾಸೀನ್ ಮೋಮಿನ್ ಕೊಲೆಯಾದ ಯುವಕ ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಲಕ್ಷ್ಮೇಶ್ವರ ಬಳಿ ನಡೆದಿದೆ. ಲಕ್ಷ್ಮೇಶ್ವರ ನಿವಾಸಿ ಮೋಮಿನ್ (28) ಕೊಲೆಯಾದ ಯುವಕನಾಗಿದ್ದಾನೆ. ಮಾರಕಾಸ್ತ್ರ ಹಿಡಿದು ಬಂದ ವ್ಯಕ್ತಿ ಏಕಾಏಕಿ ದಾಳಿ ಮಾಡಿ ಮೋಮಿನ್ ಗೆ ಕೊಲೆ ಮಾಡಿದ್ದಾನೆ. ನೋಡ ನೋಡುತ್ತಿದ್ದಂತೆ ಯುವಕ ಮೇಲೆ ದಾಳಿ ನಡೆದಿದೆ. ಸ್ಥಳಕ್ಕೆ ಕುಲಗೋಡ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಕ್ತಸಿಕ್ತವಾಗಿ […]
ಹಿರಿಯ ಪತ್ರಕರ್ತ ಶಶಿಧರ ಭಟ್ ಗೆ ಅನಾರೋಗ್ಯ; ಚಿಕಿತ್ಸೆ ವೆಚ್ಚ ಭರಿಸುವುದಾಗಿ ಸಿಎಂ ಭರವಸೆ

ಕನ್ನಡದ ಹಿರಿಯ ಪತ್ರಕರ್ತ ಶಶಿಧರ ಭಟ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾನು ಅನಾರೋಗ್ಯದಿಂದ ಇರುವ ಬಗ್ಗೆ ಶಶಿಧರ್ ಭಟ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಕೂಡ ಹಾಕಿದ್ದರು. ಶಶಿಧರ್ ಭಟ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೂರವಾಣಿ ಮೂಲಕ ಮಾತನಾಡಿದ್ದಾರೆ. ಈ ವೇಳೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ಆಸ್ಪತ್ರೆಯ ವೈದ್ಯರ ಜೊತೆಗೂ ಮಾತನಾಡಿ ಶಶಿಧರ್ ಭಟ್ ಅವರ ಆರೋಗ್ಯದ ಬಗ್ಗೆ ಮಾಹಿತಿಯನ್ನು ಪಡೆದಿದ್ದಾರೆ. […]
ಕಲ್ಲಡ್ಕ: ಯುವಕನೋರ್ವ ನಾಪತ್ತೆ; ಪತ್ತೆಗೆ ಮನವಿ

ಕಲ್ಲಡ್ಕ: ಯುವಕನೋರ್ವ ಕಳೆದ ಐದು ದಿನಗಳಿಂದ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ಮಾಣಿಮಜಲು ಎಂಬಲ್ಲಿ ನಡೆದಿದೆ. ಸಮದ್ ನಾಪತ್ತೆಯಾದ ಯುವಕನಾಗಿದ್ದಾನೆ. ಇವರು ಸಂತೆಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಇತ್ತೀಚೆಗೆ ಮಳೆಯಿಂದ ಸಂತೆಯಲ್ಲಿ ವ್ಯಾಪಾರ ಮಾಡುತ್ತಿದ್ದ ಧವಸ ದಾನ್ಯಗಳಿಗೆ ಹಾನಿಯಾಗಿತ್ತು. ಇದರಿಂದ ನೊಂದು ಕೊಂಡಿದ್ದರು ಎಂದು ಕಟುಂಬ ಮೂಲಗಳು ಹೇಳುತ್ತಿದೆ. ಸಮದ್ ವಿವಾಹಿತರಾಗಿದ್ದು, ಅವರಿಗೆ ಮೂವರು ಮಕ್ಕಳಿದ್ದಾರೆ. ತಂದೆ ನಾಪತ್ತೆ ಬಳಿಕ ಕುಟುಂಬ ಕಂಗಾಲಾಗಿದೆ. ಸಮದ್ ಅವರನ್ನು ಎಲ್ಲಿಯಾದರೂ ಕಂಡು ಬಂದಲ್ಲಿ ಮಾಹಿತಿ ನೀಡುವಂತೆ ಅವರ ಕುಟುಂಬ ವರ್ಗವು […]
ಬಸ್ ನಿಲ್ಲಿಸಿಲ್ಲ ಎಂದು ಸರಕಾರಿ ಬಸ್ ಗೆ ಕಲ್ಲು ಹೊಡೆದ ಯುವಕ

ಬೆಂಗಳೂರು; ಬೆಂಗಳೂರಿನಿಂದ ತಮಿಳುನಾಡಿಗೆ ತೆರಳುತ್ತಿದ್ದ ಸರ್ಕಾರಿ ಬಸ್‌ಗೆ ಯುವಕನೊಬ್ಬ ಕಲ್ಲು ಹೊಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನಿಂದ ತಿರುವಣ್ಣಮಲೈಗೆ ಬಸ್ ಹೋಗುತ್ತಿತ್ತು. ಟೌನ್‌ಹಾಲ್ ಬಳಿ ಚಲಿಸುತ್ತಿದ್ದ ಬಸ್‌ಗೆ ಯುವಕ ಕಲ್ಲೇಟು ಹೊಡೆದಿದ್ದಾನೆ. ಸೆಟ್‌ಲೈಟ್‌ನಲ್ಲೇ ಬಸ್ ಫುಲ್ ರಶ್ ಅಗಿತ್ತು. ಹಾಗಾಗಿ ಬಸ್ ನ್ನು ನಿಲ್ಲಿಸಿರಲಿಲ್ಲ. ಬಸ್ ನಿಲ್ಲಿಸಲಿಲ್ಲ ಎಂದು ಕೋಪಗೊಂಡ ಯುವಕ ಕಲ್ಲು ಹೊಡೆದಿದ್ದಾನೆ. ತಕ್ಷಣ ತಮಿಳುನಾಡು ಮೂಲದ ಮಹಾರಾಜ ಎಂಬ ಯುವಕನನ್ನು ಎಸ್‌ಜೆ ಪಾರ್ಕ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಯಾಣಿಕರ ಸಮೇತ ಬಸ್ಸನ್ನು ಎಸ್‌ಜೆ ಪಾರ್ಕ್ […]
ದರ್ಶನ್ ಪ್ರಕರಣದಲ್ಲಿ ಮುಂದೆ ಬೇರೆಯೇ ಆಗಲಿದೆ! ಅಧಿಕಾರಿಯೋರ್ವರು ಹೇಳುವುದೇನು?

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಈಗಾಗಲೇ ದರ್ಶನ್ ಮತ್ತು ಗ್ಯಾಂಗ್ ಜೈಲಿನಲ್ಲಿದೆ. ದರ್ಶನ್ ಗೆ ಜೈಲಿನಿಂದ ಹೊರತರಲು ಆತನ ಕುಟುಂಬ, ಆಪ್ತ ವಲಯಗಳು ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಆದರೆ ಇದೆಲ್ಲವೂ ಅವರು ಅಂದುಕೊಂಡಂತಿಲ್ಲ ಎನ್ನುವುದು ವಾಸ್ತವ. ಪ್ರಕರಣದಲ್ಲಿ ಕಳೆದ ಒಂದು ತಿಂಗಳಿನಿಂದ ವಿಚಾರಣೆ ನಡಯುತ್ತಿದೆ. ದರ್ಶನ್ ಜೈಲಿನಿಂದ ಹೊರಗಡೆ ಬರುತ್ತಾರೆಯಾ ಅಥವ ಇಲ್ಲವಾ ಎನ್ನುವ ಬಗ್ಗೆ ಯಾರಿಗೂ ಸ್ಪಷ್ಟತೆ ಇಲ್ಲ. ಈ ಪ್ರಕರಣದಲ್ಲಿ ಸಾಕಷ್ಟು ಮಹತ್ವದ ಸಾಕ್ಷಿಗಳು ಪೊಲೀಸರ ಕೈಸೇರಿವೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಈ ಮೂಲಕ […]
ಕೊಡಗು: ಮಳೆ ಹಾನಿ ಪ್ರದೇಶಕ್ಕೆ ಭೇಟಿ ಕೊಟ್ಟ ಸಚಿವರಿಗೆ ತರಾಟೆಗೆ ತಗೆದುಕೊಂಡ ಜನರು

ಕೊಡಗು: ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಭೇಟಿ ನೀಡಿದ್ದ ಸಚಿವ ಬೋಸರಾಜು ಅವರನ್ನು ಸಂತ್ರಸ್ತ ಜನರು ತರಾಟೆಗೆ ತೆಗೆದುಕೊಂಡ ಘಟನೆ ಸೋಮವಾರಪೇಟೆ ತಾಲ್ಲೂಕಿನಲ್ಲಿ ನಡೆದಿದೆ. ಸೋಮವಾರಪೇಟೆ ಜಂಬೂರಿಗೆ ಸಚಿವ ಬೋಸರಾಜು ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಮಂಥರ್ ಗೌಡ ಭೇಟಿ ನೀಡಿದ್ದರು. ಮಳೆಯಿಂದ ಹಾನಿಗೊಳಗಾಗಿರುವ ಸ್ಥಳಗಳಿಗೆ ತೆರಳಿ ವೀಕ್ಷಣೆ ಮಾಡಿದ್ದರು. ಈ ವೇಳೆ ಸಚಿವರಿಗೆ ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದು, 2018 ರಲ್ಲಿ ಮಹಾ ಮಳೆಯಿಂದ ಆಸ್ತಿಪಾಸ್ತಿ, ಮನೆಗಳನ್ನು ಕಳೆದುಕೊಂಡ ನಮಗೆ ಸರ್ಕಾರ ಮನೆ ನೀಡಿದೆ. ಅದರೆ ಯಾವುದೇ ರೀತಿಯಲ್ಲಿ […]
ಕಾವೇರಿ ನದಿಯಲ್ಲಿ ಕೊಚ್ಚಿಕೊಂಡು ಹೋದ ಯುವಕ; ವಿಡಿಯೋ ವೈರಲ್..

ಮಂಡ್ಯ; ಯುವಕನೋರ್ವ ಕಾವೇರಿ ನದಿಯಲ್ಲಿ ಕೊಚ್ಚಿಕೊಂಡು ಹೋದ ಘಟನೆಯ ವಿಡಿಯೋವೊಂದು ವೈರಲ್ ಆಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈ ಘಟನೆ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಬಿನಿ ಹಾಗೂ ಕೆಆರ್‌ಎಸ್ ಜಲಾಶಯದಿಂದ ನೀರು ಬಿಡುಗಡೆಯಾದ ಹಿನ್ನಲೆಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ಈ ನೀರಿನಲ್ಲಿ ಅಪರಿಚಿತ ಯುವಕ ಕೊಚ್ಚಿ ಹೋಗಿದ್ದಾನೆ. ನದಿಯಲ್ಲಿ ಸ್ನಾನ ಮಾಡುವ ವೇಳೆ ಈ ಅವಘಡ ನಡೆದಿದೆ ಎನ್ನಲಾಗಿದೆ. ಈ ದೃಶ್ಯ ಕಂಡ ಸ್ಥಳೀಯರು ಯುವಕನನ್ನು ರಕ್ಷಿಸಲು ಸಾಧ್ಯವಾಗದೆ […]
ಚಾಮರಾಜನಗರ: ಬಸ್ & ಕಾರಿನ ನಡುವೆ ಭೀಕರ ಅಪಘಾತ; ಇಬ್ಬರು ಮೃತ್ಯು

ಚಾಮರಾಜನಗರ: ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಪಟ್ಟಣದ ಹೊರ ವಲಯದ ಎಪಿಎಂಸಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿ-766 ರಲ್ಲಿ ನಡೆದಿದೆ. ಚಾಮರಾಜನಗರ ಅಂಬೇಡ್ಕರ್ ಬಡಾವಣೆ ನಿವಾಸಿಗಳಾದ ಮಹೇಶ್, ದರ್ಶನ್ ಮೃತರು. ಸಚಿನ್ ಮತ್ತು ಚಾಲಕ ಕಿಟ್ಟಿ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಇವರು ಗುಂಡ್ಲುಪೇಟೆಯಿಂದ ಮೈಸೂರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಗುಂಡ್ಲುಪೇಟೆ ಕಡೆಗೆ ಬರುತ್ತಿದ್ದ ಬಸ್ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ. ಘಟನೆ ಸಂಬಂಧ ಗುಂಡ್ಲುಪೇಟೆ ಪೊಲೀಸ್ […]
ಕಡಬ; ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಡಬ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ರಾತ್ರಿ ಕಡಬದಲ್ಲಿ ನಡೆದಿದೆ. ಕಡಬ ತಿಮರಡ್ಡ ನಿವಾಸಿ ಅಝರ್(28) ಆತ್ಮಹತ್ಯೆ ಮಾಡಿಕೊಂಡ ಯುವಕ. ಅಝರ್ ಶನಿವಾರ ರಾತ್ರಿ ಮನೆಯ ಕೋಣೆಯಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಝರ್ ವಿವಾಹಿತರಾಗಿದ್ದು, ಒಂದು ಮಗು ಕೂಡ ಇದೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.