Breaking News :

ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯ ರಕ್ಷಣೆ

ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಯನ್ನು ಪೊಲೀಸರು ರಕ್ಷಣೆ ಮಾಡಿರುವಂತಹ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕುಗ್ವೆ ಗ್ರಾಮದಲ್ಲಿ ನಡೆದಿದೆ. ಸಾಗರ ತಾಲೂಕಿನ ಅಣಲೇಕೊಪ್ಪ ನಿವಾಸಿಗಳಾದ  ಸಂಗೀತಾ(33) ಮತ್ತು ಮಕ್ಕಳಾದ ಪ್ರೀತಿ(13), ಪ್ರಜ್ವಲ್(9) ಆತ್ಮಹತ್ಯೆಗೆ ಯತ್ನಿಸಿದವರು. ಮಹಿಳೆ ತನ್ನ ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ಕೂಡಲೇ ಸ್ಥಳೀಯರು ಪೊಲೀಸರಿಗೆ ಕರೆಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹಿಳೆ ಮತ್ತು ಮಕ್ಕಳನ್ನ ರಕ್ಷಿಸಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹೃದಯ ವಿದ್ರಾಹಕ ಘಟನೆ: ಬೈಕ್ ನಲ್ಲಿ ತೆರಳುವಾಗ ಮರ ಬಿದ್ದು ಇಬ್ಬರು ಸ್ಥಳದಲ್ಲೇ ಮೃತ್ಯು

ಬೈಕ್‌ ನಲ್ಲಿ ತೆರಳುತ್ತಿದ್ದವರ ಮೇಲೆ ಮರವೊಂದು ಬಿದ್ದು  ಇಬ್ಬರು ಸವಾರರು ಮೃತಪಟ್ಟ ಘಟನೆ ಹಾವೇರಿ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಬಳಿ ನಡೆದಿದೆ. ಮಾಸೂರು ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಚಿನ್ನಮುಳಗುಂದ ಗ್ರಾಮದ ಮಂಜುನಾಥ ಪುಟ್ಟಲಿಂಗಣ್ಣನವರ (35) ಹಾಗೂ ಯತ್ನಳ್ಳಿ ಗ್ರಾಮದ ಹನುಮಂತಪ್ಪ ನಾಮದೇವ (25) ಮೃತರು. ಇವರು ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ, ಜಂಗಲ್ ಕಟಿಂಗ್ ಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಬ್ಬರು ಬೈಕ್ ನಲ್ಲಿ ತೆರಳುವಾಗ ಈ ದುರ್ಘಟನೆ ನಡೆದಿದೆ.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ; ಸೂರಜ್ ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ. ಸೂರಜ್ ಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿದೆ. ಸೂರಜ್ ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಸಂಬಂಧ ಎರಡು ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣದಲ್ಲಿ ಜಾಮೀನು ನೀಡುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅವರಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಸಂತ್ರಸ್ತರನ್ನು […]

ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ- ಮಗ ಮೃತ್ಯು

ಬಾತ್‌ರೂಮ್‌ನಲ್ಲಿ ಗೀಸರ್‌ ಗ್ಯಾಸ್‌ ಸೋರಿಕೆಯಾಗಿ ಉಸಿರುಗಟ್ಟಿ ತಾಯಿ-ಮಗ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ರಾಮನಗರದ ಜ್ಯೋತಿ ನಗರದಲ್ಲಿ ನಡೆದಿದೆ. ಶೋಭಾ (40), ದಿಲೀಪ್ (17) ಮೃತ ದುರ್ದೈವಿಗಳು. ದಿಲೀಪ್‌ ಬಿಸಿ ನೀರು ಕಾಯಿಸಲು ಗ್ಯಾಸ್ ಗೀಜರ್ ಆನ್ ಮಾಡಿದ್ದ. ಈ ವೇಳೆ ಅನಿಲ ಸೋರಿಕೆಯಾಗಿ ಆತ ಉಸಿರುಗಟ್ಟಿ ಮೃತಪಟ್ಟಿದ್ದಾನೆ. ತಡವಾದರೂ ಮಗ ಬಾತ್ ರೂಂನಿಂದ  ಬಾರದೇ ಇದ್ದಾಗ, ಆತನನ್ನು ಹುಡುಕಿಕೊಂಡು ಬಾತ್‌ರೂಮ್‌ಗೆ ಬಂದ ಶೋಭಾ ವಿಷ ಅನಿಲ ಸೇವಿಸಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಇದನ್ನು ಕಂಡು ಇತರರು […]

ಮಂಗಳೂರಿನಲ್ಲಿ ಕಳ್ಳರ ಹಾವಳಿ; ಎರಡು ಕಡೆ ಕಳ್ಳತನಕ್ಕೆ ಯತ್ನ

ಮಂಗಳೂರು: ಪದವಿನಂಗಡಿ ಬಳಿ ಎರಡು ಕಡೆ ಕಳ್ಳರು ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. ಪದವಿನಂಗಡಿ ಸಮೀಪದ ಮಹಾತ್ಮನಗರ ಬಡಾವಣೆಯ ಮನೆಯೊಂದರ ಮುಖ್ಯಗೇಟ್ ತೆಗೆದು ಒಳನುಗ್ಗಿರುವ ಕಳ್ಳರು ಬಾಗಿಲಿನ ಬಳಿ ಇದ್ದ ಇನ್ನೊಂದು ಸ್ಟೀಲ್ ಗೇಟ್‌ನ್ನು ತೆರೆದು ಮನೆಯ ಬಾಗಿಲನ್ನು ರಾಡ್‌ನಿಂದ ಒಡೆಯಲು ಯತ್ನಿಸಿದ್ದಾರೆ. ರಾತ್ರಿ 1.45ರ ವೇಳೆಗೆ ಈ ಘಟನೆ ನಡೆದಿದ್ದು, ಈ ವೇಳೆ ಎಚ್ಚರಗೊಂಡು ಎಲ್ಲ ಲೈಟ್ ಹಾಕಿ ಮನೆ ಮಂದಿ ಕೂಗಿಕೊಂಡಾಗ ಕಳ್ಳರು ಓಡಿ ಹೋಗಿದ್ದಾರೆ. ತಕ್ಷಣ ಮನೆಯವರು ಪೊಲೀಸರು ಹಾಗೂ ನೆರೆಮನೆಯವರಿಗೆ ಮಾಹಿತಿ […]

ಬೆಳಗಾವಿಯಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಕೊಲೆ

-ಯಾಸೀನ್ ಮೋಮಿನ್ ಕೊಲೆಯಾದ ಯುವಕ ಬೆಳಗಾವಿ:  ಮಾರಕಾಸ್ತ್ರಗಳಿಂದ‌ ಕೊಚ್ಚಿ ಯುವಕನ‌ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಲಕ್ಷ್ಮೇಶ್ವರ ಬಳಿ ನಡೆದಿದೆ. ಲಕ್ಷ್ಮೇಶ್ವರ ನಿವಾಸಿ ಮೋಮಿನ್ (28) ಕೊಲೆಯಾದ ಯುವಕನಾಗಿದ್ದಾನೆ. ಮಾರಕಾಸ್ತ್ರ ಹಿಡಿದು ಬಂದ ವ್ಯಕ್ತಿ ಏಕಾಏಕಿ ದಾಳಿ ಮಾಡಿ ಮೋಮಿನ್ ಗೆ ಕೊಲೆ ಮಾಡಿದ್ದಾನೆ. ನೋಡ ನೋಡುತ್ತಿದ್ದಂತೆ ಯುವಕ ಮೇಲೆ ದಾಳಿ ನಡೆದಿದೆ. ಸ್ಥಳಕ್ಕೆ ಕುಲಗೋಡ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಕ್ತಸಿಕ್ತವಾಗಿ […]

ಹಿರಿಯ ಪತ್ರಕರ್ತ ಶಶಿಧರ ಭಟ್ ಗೆ ಅನಾರೋಗ್ಯ; ಚಿಕಿತ್ಸೆ ವೆಚ್ಚ ಭರಿಸುವುದಾಗಿ ಸಿಎಂ ಭರವಸೆ

ಕನ್ನಡದ ಹಿರಿಯ ಪತ್ರಕರ್ತ ಶಶಿಧರ ಭಟ್ ಅವರು  ಅನಾರೋಗ್ಯದಿಂದ ಬಳಲುತ್ತಿದ್ದು ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾನು ಅನಾರೋಗ್ಯದಿಂದ ಇರುವ ಬಗ್ಗೆ ಶಶಿಧರ್ ಭಟ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಕೂಡ ಹಾಕಿದ್ದರು. ಶಶಿಧರ್ ಭಟ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೂರವಾಣಿ ಮೂಲಕ ಮಾತನಾಡಿದ್ದಾರೆ. ಈ ವೇಳೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ಆಸ್ಪತ್ರೆಯ ವೈದ್ಯರ ಜೊತೆಗೂ ಮಾತನಾಡಿ ಶಶಿಧರ್ ಭಟ್ ಅವರ ಆರೋಗ್ಯದ ಬಗ್ಗೆ ಮಾಹಿತಿಯನ್ನು ಪಡೆದಿದ್ದಾರೆ.   […]

ಕಲ್ಲಡ್ಕ: ಯುವಕನೋರ್ವ ನಾಪತ್ತೆ; ಪತ್ತೆಗೆ ಮನವಿ

ಕಲ್ಲಡ್ಕ: ಯುವಕನೋರ್ವ ಕಳೆದ ಐದು ದಿನಗಳಿಂದ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ಮಾಣಿಮಜಲು ಎಂಬಲ್ಲಿ ನಡೆದಿದೆ. ಸಮದ್ ನಾಪತ್ತೆಯಾದ ಯುವಕನಾಗಿದ್ದಾನೆ. ಇವರು ಸಂತೆಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಇತ್ತೀಚೆಗೆ ಮಳೆಯಿಂದ ಸಂತೆಯಲ್ಲಿ ವ್ಯಾಪಾರ ಮಾಡುತ್ತಿದ್ದ ಧವಸ ದಾನ್ಯಗಳಿಗೆ ಹಾನಿಯಾಗಿತ್ತು. ಇದರಿಂದ ನೊಂದು ಕೊಂಡಿದ್ದರು ಎಂದು ಕಟುಂಬ ಮೂಲಗಳು ಹೇಳುತ್ತಿದೆ. ಸಮದ್ ವಿವಾಹಿತರಾಗಿದ್ದು, ಅವರಿಗೆ ಮೂವರು ಮಕ್ಕಳಿದ್ದಾರೆ‌. ತಂದೆ ನಾಪತ್ತೆ ಬಳಿಕ ಕುಟುಂಬ ಕಂಗಾಲಾಗಿದೆ. ಸಮದ್ ಅವರನ್ನು ಎಲ್ಲಿಯಾದರೂ ಕಂಡು ಬಂದಲ್ಲಿ ಮಾಹಿತಿ ನೀಡುವಂತೆ ಅವರ ಕುಟುಂಬ ವರ್ಗವು […]

ಬಸ್ ನಿಲ್ಲಿಸಿಲ್ಲ ಎಂದು ಸರಕಾರಿ ಬಸ್ ಗೆ ಕಲ್ಲು ಹೊಡೆದ ಯುವಕ

ಬೆಂಗಳೂರು; ಬೆಂಗಳೂರಿನಿಂದ ತಮಿಳುನಾಡಿಗೆ ತೆರಳುತ್ತಿದ್ದ ಸರ್ಕಾರಿ ಬಸ್‌ಗೆ ಯುವಕನೊಬ್ಬ ಕಲ್ಲು ಹೊಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನಿಂದ ತಿರುವಣ್ಣಮಲೈಗೆ ಬಸ್‌ ಹೋಗುತ್ತಿತ್ತು. ಟೌನ್‌ಹಾಲ್‌ ಬಳಿ ಚಲಿಸುತ್ತಿದ್ದ ಬಸ್‌ಗೆ ಯುವಕ ಕಲ್ಲೇಟು ಹೊಡೆದಿದ್ದಾನೆ. ಸೆಟ್‌ಲೈಟ್‌ನಲ್ಲೇ ಬಸ್ ಫುಲ್ ರಶ್ ಅಗಿತ್ತು. ಹಾಗಾಗಿ ಬಸ್ ನ್ನು ನಿಲ್ಲಿಸಿರಲಿಲ್ಲ. ಬಸ್ ನಿಲ್ಲಿಸಲಿಲ್ಲ ಎಂದು ಕೋಪಗೊಂಡ ಯುವಕ ಕಲ್ಲು ಹೊಡೆದಿದ್ದಾನೆ. ತಕ್ಷಣ ತಮಿಳುನಾಡು ಮೂಲದ ಮಹಾರಾಜ ಎಂಬ ಯುವಕನನ್ನು ಎಸ್‌ಜೆ ಪಾರ್ಕ್‌ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಯಾಣಿಕರ ಸಮೇತ ಬಸ್ಸನ್ನು ಎಸ್‌ಜೆ ಪಾರ್ಕ್‌ […]

ದರ್ಶನ್ ಪ್ರಕರಣದಲ್ಲಿ ಮುಂದೆ ಬೇರೆಯೇ ಆಗಲಿದೆ! ಅಧಿಕಾರಿಯೋರ್ವರು ಹೇಳುವುದೇನು?

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಈಗಾಗಲೇ ದರ್ಶನ್ ಮತ್ತು ಗ್ಯಾಂಗ್ ಜೈಲಿನಲ್ಲಿದೆ. ದರ್ಶನ್ ಗೆ ಜೈಲಿನಿಂದ ಹೊರತರಲು ಆತನ ಕುಟುಂಬ, ಆಪ್ತ ವಲಯಗಳು ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಆದರೆ ಇದೆಲ್ಲವೂ ಅವರು ಅಂದುಕೊಂಡಂತಿಲ್ಲ ಎನ್ನುವುದು ವಾಸ್ತವ. ಪ್ರಕರಣದಲ್ಲಿ ಕಳೆದ ಒಂದು ತಿಂಗಳಿನಿಂದ ವಿಚಾರಣೆ ನಡಯುತ್ತಿದೆ. ದರ್ಶನ್ ಜೈಲಿನಿಂದ ಹೊರಗಡೆ ಬರುತ್ತಾರೆಯಾ ಅಥವ ಇಲ್ಲವಾ ಎನ್ನುವ ಬಗ್ಗೆ ಯಾರಿಗೂ ಸ್ಪಷ್ಟತೆ ಇಲ್ಲ. ಈ ಪ್ರಕರಣದಲ್ಲಿ ಸಾಕಷ್ಟು ಮಹತ್ವದ ಸಾಕ್ಷಿಗಳು ಪೊಲೀಸರ ಕೈಸೇರಿವೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಈ ಮೂಲಕ […]