ಕೃಷಿ ಸಚಿವ ಚೆಲುವರಾಯಸ್ವಾಮಿ ಜತೆ ಶಾಸಕ ಪೊನ್ನಣ್ಣ ಚರ್ಚೆ

ಜನವಾಹಿನಿ News ಬೆಂಗಳೂರು : ಕರ್ನಾಟಕ ಬರಪಿಡಿತ ಜಿಲ್ಲೆಗಳಲ್ಲಿ, ಪರ ಮತ್ತು ಉಷ್ಣತಾಳುವ ಮೆಕ್ಕೆಜೋಳ ಮತ್ತು ಸುಧಾರಿತ ಕೃಷಿ ಪದ್ಧತಿಗಳ ವಿಸ್ತರಣೆ ಕುರಿತು ಮಾನ್ಯ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಅವರನ್ನು ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಹಾಗೂ ತಜ್ಞರ ತಂಡ ಸಚಿವರ ಕಚೇರಿಯಲ್ಲಿ ಭೇಟಿ ಮಾಡಿ ಚರ್ಚಿಸಿದರು. ಇದೆ ಸಂದರ್ಭದಲ್ಲಿ ಮಾನ್ಯ ಸಚಿವರೊಂದಿಗೆ ಕ್ಷೇತ್ರಕ್ಕೆ ಸಂಬಂಧಿಸಿದ ಇತರ ವಿಷಯಗಳ ಬಗ್ಗೆ ಚರ್ಚಿಸಲಾಯಿತು.
ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜನವಾಹಿನಿ News ಬೆಂಗಳೂರು : ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇವರ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ 2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಜಂಬರ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು. *ಅರೆಭಾಷಿಕರದ್ದು ವಿಭಿನ್ನ ಸಂಸ್ಕೃತಿ* ದಕ್ಷಿಣ ಕನ್ನಡ […]
ಗೋವಾದಲ್ಲಿ ವಿಶ್ವದ ಅತ್ಯಂತ ಎತ್ತರದ ಶ್ರೀ ರಾಮನ ಪ್ರತಿಮೆ ಅನಾವರಣ

ಜನವಾಹಿನಿ News ಗೋವಾ : ದಕ್ಷಿಣ ಗೋವಾದ ಶ್ರೀ ಸಂಸ್ಥಾನ ಗೋಕರ್ಣ ಜೀವೋತ್ತಮ ಮಠದಲ್ಲಿರುವ ವಿಶ್ವದ ಅತಿ ಎತ್ತರದ ಶ್ರೀರಾಮನ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದರು. 77 ಅಡಿ ಎತ್ತರ ಹೊಂದಿರುವ ಈ ಭವ್ಯ ಮೂರ್ತಿ ದೇಶದ ಸಾಂಸ್ಕೃತಿಕ ಪರಂಪರೆ, ಭಕ್ತಿ ಮತ್ತು ಶಿಲ್ಪಕಲೆಯ ಅದ್ಭುತ ಸಂಯೋಗವಾಗಿ ಗೋವಾದ ಹೊಸ ಗುರುತಾಗಲಿದೆ. ಈ ಮೂರ್ತಿಯನ್ನು ಖ್ಯಾತ ಶಿಲ್ಪಿ ರಾಮ್ ಸುತಾರ್ ಮತ್ತು ಅವರ ತಂಡ ನಿರ್ಮಿಸಿದ್ದಾರೆ. ಅಧಿಕ ಚರ್ಚೆಗೆ ಕಾರಣವಾದ ಸರ್ದಾರ್ […]
ಉನ್ನತ ಮಟ್ಟದ, ಅತ್ಯಂತ ಪ್ರಾಮುಖ್ಯತೆಯ ಉಪಹಾರ ಭೇಟಿ : ಶಾಸಕ ಪೊನ್ನಣ್ಣ ಭಾಗಿ

ಜನವಾಹಿನಿ News ಬೆಂಗಳೂರು : ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಮತ್ತು ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭೆ ಕ್ಷೇತ್ರದ ಶಾಸಕರಾದ ಎ ಎಸ್ ಪೂನ್ನಣ್ಣನವರು ಉನ್ನತ ಮಟ್ಟದ ಸಭೆಯಲ್ಲಿ ಭಾಗಿ.
ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಅನುಗ್ರಹ ಕಾಲೇಜು ವಿದ್ಯಾರ್ಥಿ

ಜನವಾಹಿನಿ News ಕುಶಾಲನಗರ : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಕುಶಾಲನಗರ ಅನುಗ್ರಹ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಹೆಚ್ ಎಸ್ ಜೀವನ್ ಜಿಮ್ನಾಸ್ಟಿಕ್ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು ಕಾಲೇಜಿಗೆ ಕೀರ್ತಿ ತಂದಿದ್ದಾನೆ. ಇವನಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು ಪ್ರಾಂಶುಪಾಲರು ದೈಹಿಕ ಶಿಕ್ಷಣ ನಿರ್ದೇಶಕರು, ಉಪನ್ಯಾಸಕ ವೃಂದದವರು ಆಡಳಿತ ವರ್ಗದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ ಹಾಗೂ ರಾಷ್ಟ್ರಮಟ್ಟದಲ್ಲಿಯೂ ಇದೇ ರೀತಿಯಾದ ಸಾಧನೆಯನ್ನು ಮಾಡಿ ತಂದೆ ತಾಯಿಗಳಿಗೆ ಹಾಗೂ […]
ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್‍ಗೆ ಸಹಾಯಧನ

ಜನವಾಹಿನಿ News ಮಡಿಕೇರಿ : 2024-25ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್‍ಗೆ ಶೇ.90ರಷ್ಟು ಸಹಾಯಧನ ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನ ನೀಡಲಾಗುತ್ತದೆ. ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, ಬ್ಯಾಂಕ್ ಪಾಸ್‍ಪುಸ್ತಕ ಪ್ರತಿ ಹಾಗೂ ಎರಡು ಸ್ಟ್ಯಾಂಪ್ ಅಳತೆಯ […]
ಡಿ.01 ರಂದು ವಿಶ್ವ ಏಡ್ಸ್ ದಿನಾಚರಣೆ

ಜನವಾಹಿನಿ News ಮಡಿಕೇರಿ : ವಿಶ್ವ ಏಡ್ಸ್ ದಿನಾಚರಣೆ ಪ್ರಯುಕ್ತ ಡಿಸೆಂಬರ್, 01 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಿಂದ ಜಾಥಾ ಪ್ರಾರಂಭವಾಗಲಿದೆ. ಜಾಥವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಿಂದ ಪ್ರಾರಂಭವಾಗಿ ಚೌಕಿ ವೃತ್ತದ ಮುಖಾಂತರ ಸರ್ಕಾರಿ ಪದವಿ ಪೂರ್ವ ಕಾಲೇಜು ವರೆಗೆ ತಲುಪುವುದು. ನಂತರ ಬೆಳಗ್ಗೆ 11 ಗಂಟೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಮಾರಂಭ ನಡೆಯಲಿದೆ ಎಂದು ಜಿಲ್ಲಾ […]
ಸಂವಿಧಾನ ತತ್ವಗಳೇ ಕಾಂಗ್ರೆಸ್ ಪಕ್ಷದ ಸಿದ್ಧಾಂತ: ಎ.ಎಸ್ ಪೊನ್ನಣ್ಣ

ಜನವಾಹಿನಿ News ಬೆಂಗಳೂರು : ಸಮಾಜ, ಧರ್ಮ ನಿರಪೇಕ್ಷತೆ, ಜಾತ್ಯತೀತತೆ…ಇವೇ ನಮ್ಮ ಸಂವಿಧಾನದ ತತ್ವಗಳು. ಇವೇ ಸಂವಿಧಾನದ ಸಿದ್ಧಾಂತಗಳು. ಇದೇ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳು ಕೂಡ ಎಂದು ಮಾನ್ಯ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ತಿಳಿಸಿದರು. ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ, ಕಾನೂನು-ಮಾನವ ಹಕ್ಕು-ಆರ್‌ಟಿಐ ವಿಭಾಗವು, ಸಂವಿಧಾನ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ “ಚುನಾವಣೆ ಪ್ರಕ್ರಿಯೆಯಲ್ಲಿ ಸುಧಾರಣೆ” ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದರು. ಇಡೀ ಪ್ರಪಂಚದಲ್ಲಿರುವ […]
ವಿರಾಜಪೇಟೆ : ರಸ್ತೆ ಕಾಮಗಾರಿ ಆರಂಭಿಸುವಂತೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಜನವಾಹಿನಿ News ವಿರಾಜಪೇಟೆ : ಮಳೆ ನಿಂತ ಮೇಲೆ ಮುಖ್ಯ ರಸ್ತೆಯ ಕಾಮಗಾರಿ ಮಾಡುತ್ತೇವೆ ಎಂದು ಹೇಳಿದ್ದ ಶಾಸಕರು ಮಳೆಗಾಲ ಮುಗಿದು ಬಿಸಿಲು ಆರಂಭಿಸಿದೆ ಆದರೂ ಕೂಡ ರಸ್ತೆಯ ಕಾಮಗಾರಿ ಮಾಡಲು ನಿರ್ಲಕ್ಷ್ಯ ತೋರಿದ್ದಾರೆ ಎಂದು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಲೋಕೋಪಯೋಗಿ ಇಲಾಖೆಯ ಕಛೇರಿಯ ಮುಂದೆ ಪ್ರತಿಭಟನೆ ನಡೆಸಿದರು. ವಿರಾಜಪೇಟೆ ಮಂಡಳ ಬಿ ಜೆ.ಪಿ ವತಿಯಿಂದ ನಡೆದ ಪ್ರತಿಭಟನೆ ನಲ್ಲಿ ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ ಮಾತನಾಡಿ ನನ್ನ ಅಧಿಕಾರದ ಅವಧಿಯಲ್ಲಿ ಮಾಡಿದ್ದ ತಿತಿಮತಿ ಗೋಣಿಕೊಪ್ಪ […]
ಕೊಡಗು – PWD ಎಂಜಿನಿಯರ್ ಗಿರೀಶ್ ಕಚೇರಿ, ಹಾಗೂ ಮನೆಯಮೇಲೆ ಲೊಕಾಯುಕ್ತ ದಾಳಿ

ಜನವಾಹಿನಿ News ಮಡಿಕೇರಿ : ಲೋಕೋಪಯೋಗಿ ಕಚೇರಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್ ರವರ ಮಡಿಕೇರಿ ಕಚೇರಿ, ಕುಶಾಲನಗರ, ಮೈಸೂರಿನ ಮನೆಗಳಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ದೂರಿನ ಹಿನ್ನೆಲೆ ಲೋಕಾಯುಕ್ತ DYSP ದಿನಕರ್ ಶೆಟ್ಟಿ ನೇತೃತ್ವದಲ್ಲಿ ಮೈಸೂರಿನಲ್ಲಿ ದಾಳಿ ನಡೆಸಲಾಗಿದ್ದು, ಮಡಿಕೇರಿಯಲ್ಲಿ ಲೋಕಾಯುಕ್ತ ಸಬ್ ಇನ್ಸ್‌ಪೆಕ್ಟರ್ ವೀಣಾ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಏಕ ಕಾಲದಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಅಗತ್ಯ ದಾಖಲೆಗಳು ಹಾಗೂ ಕಡತಗಳನ್ನು ಪರಿಶೀಲಿಸಿದ್ದಾರೆ.