Breaking News :

ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

  ಜನವಾಹಿನಿ News ಮಡಿಕೇರಿ : ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕ್‍ಗಳು/ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿದೆ. ನಗರ ಪ್ರದೇಶದ ವಿಧಾನಸಭಾ ಕ್ಷೇತ್ರವಾದ ಮಡಿಕೇರಿ ವಿಧಾನಸಭಾ […]

ಕೊಡಗು ಪೊಲೀಸರಿಂದ ಕ್ಷಿಪ್ರ ಕಾರ್ಯಾಚರಣೆ : ಕಳವಾದ ಬರೋಬ್ಬರಿ 100 ಮೊಬೈಲ್ ಪತ್ತೆ.!

  ಜನವಾಹಿನಿ News ಮಡಿಕೇರಿ : ಕಳೆದ ಒಂದು ತಿಂಗಳಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಕೊಡಗು ಪೊಲೀಸರು ಜಿಲ್ಲೆಯ ವಿವಿಧೆಡೆಗಳಿಂದ ಕಳುವಾಗಿದ್ದ ಸುಮಾರು 11 ಲಕ್ಷ ರೂ.ಮೌಲ್ಯದ 100 ಮೊಬೈಲ್‌’ಗಳನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮಡಿಕೇರಿಯಲ್ಲಿರುವ ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ವಾರಸುದಾರರಿಗೆ ಪೊಲೀಸ್‌ ವರಿಷ್ಠಾಧಿಕಾರಿ ಬಿಂದುಮಣಿ ಅವರು ಮಂಗಳವಾರ ಈ ಮೊಬೈಲ್‌ಗಳನ್ನು ಹಸ್ತಾಂತರಿಸಿದರು. ಈ ಸಂದರ್ಭ ಮಾತನಾಡಿದ ಎಸ್‌ಪಿ ಬಿಂದುಮಣಿ, ಮೊಬೈಲ್ ಫೋನ್‌ಗಳ ಪತ್ತೆಗೆ ಒಂದು ತಿಂಗಳ ಕಾರ್ಯಾಚರಣೆ ಆರಂಭಿಸಲಾಗಿತ್ತು. 2021-22 ರಲ್ಲಿ ಕೆಲವು ಮೊಬೈಲ್‌ಗಳು […]

ಶನಿವಾರಸಂತೆಯಲ್ಲಿ ನೂತನವಾಗಿ ನಿರ್ಮಿಸಿರುವ ಬಸ್ ನಿಲ್ದಾಣ ಉದ್ಘಾಟನೆ : ಕೊಡ್ಲಿಪೇಟೆಯಲ್ಲಿಯೂ ಜಾಗ ಒದಗಿಸಿದ್ದಲ್ಲಿ ಬಸ್ ನಿಲ್ದಾಣ ನಿರ್ಮಾಣ: ರಾಮಲಿಂಗಾರೆಡ್ಡಿ 

  ಜನವಾಹಿನಿ News ಮಡಿಕೇರಿ : ಶನಿವಾರಸಂತೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬಸ್ ನಿಲ್ದಾಣಕ್ಕೆ ರಾಷ್ಟ್ರದ ಪ್ರಥಮ ಸೇನಾ ಮಹಾದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವತಿಯಿಂದ ಶನಿವಾರಸಂತೆಯಲ್ಲಿ 105 ಲಕ್ಷ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಬಸ್ ನಿಲ್ದಾಣ ಲೋಕಾರ್ಪಣೆಗೊಳಿಸಿ ಸಚಿವರು ಮಾತನಾಡಿದರು. ಶನಿವಾರಸಂತೆ ಗ್ರಾಮದಲ್ಲಿ ಹುಟ್ಟಿ ಬೆಳೆದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಸೇನಾ ಕ್ಷೇತ್ರದಲ್ಲಿನ ಸೇವೆಯನ್ನು ಸ್ಮರಿಸಿ […]

ಕಂಬಳದಲ್ಲಿ ಹೊಸ ದಾಖಲೆ ಸೃಷ್ಠಿಸಿದ ಪೃಥ್ವಿರಾಜ್

ಜನವಾಹಿನಿ News ಪುತ್ತೂರು : ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ನಡೆದ ಕೋಟಿ ಚೆನ್ನಯ ಜೋಡುಕರೆ ಕಂಬಳದಲ್ಲಿ ಕೋಣ ಓಡಿಸುವ ವೇಗದಲ್ಲಿ ಹೊಸ ದಾಖಲೆ ನಿರ್ಮಾಣ ಗೊಂಡಿದೆ ಎಂದು ಕಂಬಳದ ಆಯೋಜಕರು ತಿಳಿಸಿದ್ದಾರೆ. ಶ್ರೀ ಪಂಚಲಿಂಗೇಶ್ವರ ಉರುವಾಲು ನಾರಾಳುಗುತ್ತು ಸದಾನಂದ ಗೌಡ ಅವರ ಕುಟ್ಟಿ – ಕಾಲೆ ಕೋಣಗಳ ಜೋಡಿ ನೇಗಿಲು ಕಿರಿಯ ವಿಭಾಗ ಸ್ಪರ್ಧೆಯಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ಈ ಕೋಣಗಳನ್ನು ಪಡು ಸಾಂತೂರಿನ 22 ವರ್ಷ ಪ್ರಾಯದ ಪೃಥ್ವಿರಾಜ್ ಪೂಜಾರಿ ಎಂಬ ಯುವಕ […]

ಫೆನಾಯಿಲ್ ಘಟಕದ ಹೆಸರಲ್ಲಿ ಡ್ರಗ್ಸ್ ತಯಾರಿಕೆ : ಗುಜರಾತ್‌ ಪೆಡ್ಲರ್‌ನಿಂದ ಸಿಕ್ಕ ಮಾಹಿತಿ – ಕೇಂದ್ರ ಮಾದಕ ದ್ರವ್ಯ ನಿಯಂತ್ರಣ ಅಧಿಕಾರಿಗಳಿಂದ ದಾಳಿ

ಜನವಾಹಿನಿ News ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಡ್ರಗ್ಸ್ ತಯಾರಿಕೆಗೆ ಸೇಫ್‌ ಜೋನ್ ಆಗ್ತಿದೆಯಾ ಎಂಬ ಅನುಮಾನ ಕಾಡುತ್ತಿದೆ. ಇವತ್ತು ಕೇಂದ್ರ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಅಧಿಕಾರಿಗಳು ಭಾರೀ ಪ್ರಮಾಣದ ಡ್ರಗ್ಸ್ ತಯಾರಿಕೆಯ ಘಟಕದ ಮೇಲೆ ದಾಳಿ ಮಾಡಿದ್ದಾರೆ. ನಗರದ ಹೆಬ್ಬಾಳದಲ್ಲಿರುವ ಟುಕ್ ಟುಕ್ ಹೌಸ್ ಹೋಲ್ಡ್ ಕೆಮಿಕಲ್ಸ್ ಪ್ರೊಡಕ್ಷನ್ ಸಲ್ಯೂಷನ್ ತಯಾರಿಕಾ ಘಟಕದ ಮೇಲೆ ಈ ದಾಳಿ ನಡೆದಿದೆ. ಈ ಘಟಕ ಬೋರೇಗೌಡ ಎಂಬ ವ್ಯಕ್ತಿಗೆ ಸೇರಿದ್ದು, 1 ವರ್ಷದ ಹಿಂದೆ […]

ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಜಿಲ್ಲೆಯಲ್ಲಿ ಮತ್ತೊಂದು ಜೀವ ಬಲಿ : ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸ್ಥಳದಲ್ಲೇ ಸಾವು 

  ಜನವಾಹಿನಿ News ಸಿದ್ದಾಪುರ : ಕಾಡಾನೆ ತುಳಿತಕ್ಕೆ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ಸಿದ್ದಾಪುರ ಸಮೀಪದ ಗೌರಿಬೆಟ್ಟ ವ್ಯಾಪ್ತಿಯಲ್ಲಿ ನಡೆದಿದೆ. ಬಜೆಗೊಳ್ಳಿ ಬಳಿಯ ಗೌರಿಬೆಟ್ಟ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದ್ದು, ಹುಂಡಿ ನಿವಾಸಿ ಲತೀಫ್ (65) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಘಟನೆಯ ಸುದ್ದಿ ಹರಡುತ್ತಿದ್ದಂತೆ ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಸೇರಿದ್ದು, ನಿರಂತರ ಆನೆ ದಾಳಿಯಿಂದ ಜೀವ ಭಯದಲ್ಲಿ ಬದುಕುತ್ತಿರುವುದಾಗಿ ಆಕ್ರೋಶ ವ್ಯಕ್ತಪಡಿಸಿದರು. ಅರಣ್ಯ ಇಲಾಖೆಯ […]

ಸಮಾಜದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸರಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧ : ಸಚಿವ ಭೋಸರಾಜು

  ಜನವಾಹಿನಿ News ಮಡಿಕೇರಿ : ಸಮಾಜದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಶ್ರಮಿಸುವ ಪೊಲೀಸರಿಗೆ ವಸತಿ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ತಿಳಿಸಿದ್ದಾರೆ. ನಗರದ ಪೊಲೀಸ್ ಮೈತ್ರಿ ಭವನದ ಬಳಿ ಸುಮಾರು 5.30 ಕೋಟಿ ರೂ ವೆಚ್ಚದಲ್ಲಿ ಪೊಲೀಸ್ ವಸತಿ ಗೃಹ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಸಚಿವರು ಮಾತನಾಡಿದರು. ಸಮಾಜದಲ್ಲಿ ಪ್ರತಿಯೊಬ್ಬರೂ ನೆಮ್ಮದಿಯಾಗಿ ಬದುಕುವಲ್ಲಿ ಪೊಲೀಸರ ಶ್ರಮ ಹೆಚ್ಚಿನದ್ದಾಗಿದೆ. ಆ ದಿಸೆಯಲ್ಲಿ ಪೊಲೀಸ್ […]

ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ  ಗಣರಾಜ್ಯೋತ್ಸವ  ಆಚರಣೆ 

  ಜನವಾಹಿನಿ News ಮಡಿಕೇರಿ : ಜಿಲ್ಲಾಡಳಿತ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 77 ನೇ ಗಣರಾಜ್ಯೋತ್ಸವ ದಿನಾಚರಣೆಯು ಅರ್ಥಪೂರ್ಣವಾಗಿ ಸೋಮವಾರ ಆಚರಿಸಲಾಯಿತು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ […]

ಪಾಲಿಬೆಟ್ಟ: ರಾಷ್ಟ್ರೀಯ ಮಟ್ಟದ ಫುಟ್ಬಾಲ್ ಪಂದ್ಯಾವಳಿ – ರೆಡ್ ಯುನೈಟೆಡ್ ಊಟಿ ತಂಡ ಚಾಂಪಿಯನ್

  ಜನವಾಹಿನಿ News ಪಾಲಿಬೆಟ್ಟ : ಯಂಗ್ ಇಂಡಿಯಾ ಯೂತ್ ಕ್ಲಬ್ ನ ಸುವರ್ಣ ಮಹೋತ್ಸವದ ಅಂಗವಾಗಿ ರಾಷ್ಟ ಮಟ್ಟದ ಸೂಪರ್ ಫೈ ಕಾಲ್ಚೆಂಡು ಕ್ರೀಡಾ ಹಬ್ಬಕ್ಕೆ ವರಣರಂಜಿತ ತೆರೆಕಂಡಿದೆ. ಪಾಲಿಬೆಟ್ಟ ಸಾರ್ವಜನಿಕ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ಪಂದ್ಯಾವಳಿಯ ಅಂತಿಮ ಫೈನಲ್ ಪಂದ್ಯಾಟದಲ್ಲಿ ಕ್ಲಾಸಿಕ್ ಸ್ಪೋರ್ಟ್ ಕ್ಲಬ್ ಮತ್ತು ರೆಡ್ ಯುನೈಟೆಡ್ ಊಟಿ ತಂಡದ ನಡುವೆ ನಡೆದ ರೋಮಾಂಚನಕಾರಿ ಪಂದ್ಯಾವಳಿಯಲ್ಲಿ 3-0 ಗೋಲುಗಳಿಂದ ರೆಡ್ ಯುನೈಟೆಡ್ ಊಟಿ ತಂಡ ಗೆಲುವು ಸಾಧಿಸುವ ಮೂಲಕ ಚಾಂಪಿಯನ್ […]

ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ : ನಾಲ್ಕಕ್ಕೂ ಅಧಿಕ ಅಂಗಡಿಗಳು ಸುಟ್ಟು ಭಸ್ಮ

    ಜನವಾಹಿನಿ News ಬಂಟ್ವಾಳ : ವಿಟ್ಲ ಕಲ್ಲಡ್ಕ ರಸ್ತೆಯಲ್ಲಿರುವ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಭಸ್ಮಗೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ. ಸಂತೋಷ್ ಎಂಬವರ ಮಾಲಕತ್ವದ ಶ್ರೀ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಬೆಂಕಿ ಧಗಧಗನೇ ಸಂಪೂರ್ಣ ಅಂಗಡಿಯನ್ನು ಆಹುತಿ ಪಡೆದುಕೊಂಡಿದ್ದು, ಹತ್ತಿರದ ಟೈಲರ್ ಶಾಪ್,ಅಮಿತ್ ಹೋಟೆಲ್, ಗಣೇಶ್ ಡ್ರೈವಿಂಗ್ ಸ್ಕೂಲ್ ಅಂಗಡಿ ಕಟ್ಟಡಗಳೂ ಬೆಂಕಿಗಾಹುತಿಯಾಗಿದೆ. ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಬೆಂಕಿ ಹತ್ತಿಕೊಂಡಿದೆನ್ನಲಾಗಿದೆ. ಘಟನಾ ಸ್ಥಳದ ಸುತ್ತಮುತ್ತ ಹಲವಾರು […]