ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಅನುಗ್ರಹ ಕಾಲೇಜು ವಿದ್ಯಾರ್ಥಿ

ಜನವಾಹಿನಿ News ಕುಶಾಲನಗರ : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಕುಶಾಲನಗರ ಅನುಗ್ರಹ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಹೆಚ್ ಎಸ್ ಜೀವನ್ ಜಿಮ್ನಾಸ್ಟಿಕ್ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು ಕಾಲೇಜಿಗೆ ಕೀರ್ತಿ ತಂದಿದ್ದಾನೆ. ಇವನಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು ಪ್ರಾಂಶುಪಾಲರು ದೈಹಿಕ ಶಿಕ್ಷಣ ನಿರ್ದೇಶಕರು, ಉಪನ್ಯಾಸಕ ವೃಂದದವರು ಆಡಳಿತ ವರ್ಗದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ ಹಾಗೂ ರಾಷ್ಟ್ರಮಟ್ಟದಲ್ಲಿಯೂ ಇದೇ ರೀತಿಯಾದ ಸಾಧನೆಯನ್ನು ಮಾಡಿ ತಂದೆ ತಾಯಿಗಳಿಗೆ ಹಾಗೂ […]
ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್‍ಗೆ ಸಹಾಯಧನ

ಜನವಾಹಿನಿ News ಮಡಿಕೇರಿ : 2024-25ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್‍ಗೆ ಶೇ.90ರಷ್ಟು ಸಹಾಯಧನ ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನ ನೀಡಲಾಗುತ್ತದೆ. ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, ಬ್ಯಾಂಕ್ ಪಾಸ್‍ಪುಸ್ತಕ ಪ್ರತಿ ಹಾಗೂ ಎರಡು ಸ್ಟ್ಯಾಂಪ್ ಅಳತೆಯ […]
ಡಿ.01 ರಂದು ವಿಶ್ವ ಏಡ್ಸ್ ದಿನಾಚರಣೆ

ಜನವಾಹಿನಿ News ಮಡಿಕೇರಿ : ವಿಶ್ವ ಏಡ್ಸ್ ದಿನಾಚರಣೆ ಪ್ರಯುಕ್ತ ಡಿಸೆಂಬರ್, 01 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಿಂದ ಜಾಥಾ ಪ್ರಾರಂಭವಾಗಲಿದೆ. ಜಾಥವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಿಂದ ಪ್ರಾರಂಭವಾಗಿ ಚೌಕಿ ವೃತ್ತದ ಮುಖಾಂತರ ಸರ್ಕಾರಿ ಪದವಿ ಪೂರ್ವ ಕಾಲೇಜು ವರೆಗೆ ತಲುಪುವುದು. ನಂತರ ಬೆಳಗ್ಗೆ 11 ಗಂಟೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಮಾರಂಭ ನಡೆಯಲಿದೆ ಎಂದು ಜಿಲ್ಲಾ […]
ಸಂವಿಧಾನ ತತ್ವಗಳೇ ಕಾಂಗ್ರೆಸ್ ಪಕ್ಷದ ಸಿದ್ಧಾಂತ: ಎ.ಎಸ್ ಪೊನ್ನಣ್ಣ

ಜನವಾಹಿನಿ News ಬೆಂಗಳೂರು : ಸಮಾಜ, ಧರ್ಮ ನಿರಪೇಕ್ಷತೆ, ಜಾತ್ಯತೀತತೆ…ಇವೇ ನಮ್ಮ ಸಂವಿಧಾನದ ತತ್ವಗಳು. ಇವೇ ಸಂವಿಧಾನದ ಸಿದ್ಧಾಂತಗಳು. ಇದೇ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳು ಕೂಡ ಎಂದು ಮಾನ್ಯ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ತಿಳಿಸಿದರು. ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ, ಕಾನೂನು-ಮಾನವ ಹಕ್ಕು-ಆರ್‌ಟಿಐ ವಿಭಾಗವು, ಸಂವಿಧಾನ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ “ಚುನಾವಣೆ ಪ್ರಕ್ರಿಯೆಯಲ್ಲಿ ಸುಧಾರಣೆ” ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದರು. ಇಡೀ ಪ್ರಪಂಚದಲ್ಲಿರುವ […]
ವಿರಾಜಪೇಟೆ : ರಸ್ತೆ ಕಾಮಗಾರಿ ಆರಂಭಿಸುವಂತೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಜನವಾಹಿನಿ News ವಿರಾಜಪೇಟೆ : ಮಳೆ ನಿಂತ ಮೇಲೆ ಮುಖ್ಯ ರಸ್ತೆಯ ಕಾಮಗಾರಿ ಮಾಡುತ್ತೇವೆ ಎಂದು ಹೇಳಿದ್ದ ಶಾಸಕರು ಮಳೆಗಾಲ ಮುಗಿದು ಬಿಸಿಲು ಆರಂಭಿಸಿದೆ ಆದರೂ ಕೂಡ ರಸ್ತೆಯ ಕಾಮಗಾರಿ ಮಾಡಲು ನಿರ್ಲಕ್ಷ್ಯ ತೋರಿದ್ದಾರೆ ಎಂದು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಲೋಕೋಪಯೋಗಿ ಇಲಾಖೆಯ ಕಛೇರಿಯ ಮುಂದೆ ಪ್ರತಿಭಟನೆ ನಡೆಸಿದರು. ವಿರಾಜಪೇಟೆ ಮಂಡಳ ಬಿ ಜೆ.ಪಿ ವತಿಯಿಂದ ನಡೆದ ಪ್ರತಿಭಟನೆ ನಲ್ಲಿ ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ ಮಾತನಾಡಿ ನನ್ನ ಅಧಿಕಾರದ ಅವಧಿಯಲ್ಲಿ ಮಾಡಿದ್ದ ತಿತಿಮತಿ ಗೋಣಿಕೊಪ್ಪ […]
ಕೊಡಗು – PWD ಎಂಜಿನಿಯರ್ ಗಿರೀಶ್ ಕಚೇರಿ, ಹಾಗೂ ಮನೆಯಮೇಲೆ ಲೊಕಾಯುಕ್ತ ದಾಳಿ

ಜನವಾಹಿನಿ News ಮಡಿಕೇರಿ : ಲೋಕೋಪಯೋಗಿ ಕಚೇರಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್ ರವರ ಮಡಿಕೇರಿ ಕಚೇರಿ, ಕುಶಾಲನಗರ, ಮೈಸೂರಿನ ಮನೆಗಳಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ದೂರಿನ ಹಿನ್ನೆಲೆ ಲೋಕಾಯುಕ್ತ DYSP ದಿನಕರ್ ಶೆಟ್ಟಿ ನೇತೃತ್ವದಲ್ಲಿ ಮೈಸೂರಿನಲ್ಲಿ ದಾಳಿ ನಡೆಸಲಾಗಿದ್ದು, ಮಡಿಕೇರಿಯಲ್ಲಿ ಲೋಕಾಯುಕ್ತ ಸಬ್ ಇನ್ಸ್‌ಪೆಕ್ಟರ್ ವೀಣಾ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಏಕ ಕಾಲದಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಅಗತ್ಯ ದಾಖಲೆಗಳು ಹಾಗೂ ಕಡತಗಳನ್ನು ಪರಿಶೀಲಿಸಿದ್ದಾರೆ.
ಏ.2 ರಿಂದ ಕೊಡವ ಕೌಟುಂಬಿಕ ಕಬಡ್ಡಿ ನಮ್ಮೆ

ಜನವಾಹಿನಿ News ಮಡಿಕೇರಿ : ಮುಲ್ಲೇಂಗಡ ಒಕ್ಕದ ಆಶ್ರಯದಲ್ಲಿ ಪ್ರಪ್ರಥಮ ಬಾರಿಗೆ ಕೊಡವ ಕೌಟುಂಬಿಕ ಕಬಡ್ಡಿ ನಮ್ಮೆಯನ್ನು ೨೦೨೬ರ ಏ.೨,೩,೪ ರಂದು ಕಂಡಂಗಾಲ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ್ರೀಡಾಕೂಟದ ಸಂಚಾಲಕ ಮುಲ್ಲೇಂಗಡ ಮದೋಷ್ ಪೂವಯ್ಯ ತಿಳಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆ ತಾಲೂಕು ಕಂಡಂಗಾಲ ಗ್ರಾಮದಲ್ಲಿ ಮುಲ್ಲೇಂಗಡ ಒಕ್ಕ ಐನ್ ಮನೆ ಹೊಂದಿದೆ. ಕೊಡವ ಸಮುದಾಯಬಾಂಧವರಿಗೆ ಹಾಕಿ, ಕ್ರಿಕೆಟ್, ಹಗ್ಗಜಗ್ಗಾಟ ಇತ್ಯಾದಿ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದೆ. ಗ್ರಾಮೀಣ ಕ್ರೀಡೆಯಾದ ಕಬಡ್ಡಿಯನ್ನು ಉತ್ತೇಜಿಸು ನಿಟ್ಟಿನಲ್ಲಿ […]
ಕಾಫಿ ತೋಟಗಳ ನಡುವೆ ಶರ ವೇಗದಲ್ಲಿ ಪೈಪೋಟಿ ನೀಡಿದ ರ್‍ಯಾಲಿ ಪಟುಗಳು – ಕಾರುಗಳ ಪೈಪೋಟಿಗೆ ಪ್ರೇಕ್ಷಕರು ಫುಲ್ ಫಿದಾ

ಚಾಲನೆ ಸಂದರ್ಭ ಪಲ್ಟಿಯಾದ ಎರಡು ಕಾರು – 2ನೇ ದಿನ ತಾಂತ್ರಿಕ ದೋಷದಿಂದ ಹೊರಗುಳಿದ 10ಕ್ಕೆೊ ಹೆಚ್ಚು ಕಾರುಗಳು ಜನವಾಹಿನಿ News ಮಡಿಕೇರಿ : ಬ್ಲೂ ಬ್ಯಾಂಡ್ ಎಫ್ಎಂ ಎಸ್‌ಸಿಐ ಇಂಡಿಯನ್ ನ್ಯಾಷನಲ್ ರ್‍ಯಾಲಿ ಚಾಂಪಿಯನ್ಶಿಪ್ ನೇತೃತ್ವದಲ್ಲಿ ರೋಬಸ್ಟಾ ಸ್ಪೋರ್ಟ್ಸ್ ಅಂಡ್ ಅಡ್ವೆಂಚರ್ ಅಕಾಡೆಮಿ ಸಾಹಕಾರದೊಂದಿಗೆ ರೋಬಸ್ಟಾ 2025 ರ್‍ಯಾಲಿಯು ಪಾಲಿಬೆಟ್ಟ ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಕಡಿದಾದ ರಸ್ತೆಯಲ್ಲಿ ಸಂಚರಿಸಿ ಗುರಿ ಮುಟ್ಟಲು ಅರಸಹಾಸ ಪಟ್ಟಲು. ನಿಗದಿತ ಸಮಯ ಮುಟ್ಟಲು ತಾ ಮುಂದು ನಾ ಮುಂದು ಎಂಬಂತೆ ಕಾರುಗಳು ಸರವೇಗದಲ್ಲಿ […]
ಕ್ರೀಡೆಗೆ ಸರಕಾರ ಕೋಟ್ಯಾಂತರ ಅನುದಾನ ನೀಡಿದೆ ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು : ಶಾಸಕ ಪೊನ್ನಣ್ಣ

ಜನವಾಹಿನಿ News ಮಡಿಕೇರಿ : ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜನೆಗೊಂಡ, ಕೊಡವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯ ಮುಖ್ಯ ಅತಿಥಿಯಾಗಿ ಶಾಸಕರು ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ನವರು ಭಾಗವಹಿಸಿದ್ದರು. ಕ್ರಿಕೆಟ್ ಆಟಗಾರರಿಗೆ ಶುಭ ಕೋರುತ್ತಾ ಮಾತನಾಡಿದ ಮಾನ್ಯ ಶಾಸಕರು, ಜಗತ್ತಿನಾದ್ಯಂತ ಖ್ಯಾತಿ ಪಡೆದಿರುವ ಕ್ರಿಕೆಟ್ ಪಂದ್ಯಾಟವು, ಇಂದು ದೇಶದ ಎಲ್ಲಾ ಕ್ರೀಡಾ ಪ್ರೇಮಿಗಳು ಇಷ್ಟಪಡುವ ಕ್ರೀಡೆಯಾಗಿದೆ. ನಮ್ಮ ಕೊಡಗಿನಲ್ಲಿ ಸಹ, ಇಂತಹ ಪಂದ್ಯಾವಳಿಗಳು ನಡೆಯುವುದರಿಂದ ಅನೇಕ ಕ್ರಿಕೆಟ್ ಪಟುಗಳ ಪ್ರತಿಭೆ ಅನಾವರಣಕ್ಕೆ ಸಾಕ್ಷಿಯಾಗಿದೆ […]
ವೃಕ್ಷಮಾತೆ, ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

ಜನವಾಹಿನಿ News ಬೆಂಗಳೂರು : ಪದ್ಮ ಪ್ರಶಸ್ತಿ ಪುರಸ್ಕೃತೆ ವೃಕ್ಷಮಾತೆ, ಸಾಲು ಮರದ ತಿಮ್ಮಕ್ಕ ಇನ್ನಿಲ್ಲ. 114 ವರ್ಷ ವಯಸ್ಸಾಗಿದ್ದ ಸಾಲು ಮರದ ತಿಮ್ಮಕ್ಕ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ತಿಮ್ಮಕ್ಕ ನವೆಂಬರ್ 2ರಿಂದ ಜಯನಗರ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಜನಿಸಿದ ತಿಮ್ಮಕ್ಕ ಅವರನ್ನು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದ ಚಿಕ್ಕಯ್ಯ ಎಂಬವರೊಂದಿಗೆ ಮದುವೆ ಮಾಡಿಕೊಡಲಾಗುತ್ತದೆ. ಆದ್ರೆ ಚಿಕ್ಕಯ್ಯ-ತಿಮ್ಮಯ್ಯ ದಂಪತಿಗೆ ಮಕ್ಕಳಾಗುವುದಿಲ್ಲ. ಮಕ್ಕಳಿಲ್ಲದ ದುಃಖವನ್ನು […]