ಸಮರ್ಪಕ ವಿದ್ಯುತ್ ಸರಬರಾಜಿಗೆ ಒತ್ತಾಯಿಸಿ ವರ್ತಕರ ಸಂಘದಿಂದ ಮನವಿ ಸಲ್ಲಿಕೆ

ಜನವಾಹಿನಿ News ವಿರಾಜಪೇಟೆ : ಇತ್ತೀಚೆಗೆ ವಿರಾಜಪೇಟೆಯಲ್ಲಿ ವಿದ್ಯುತ್ ಸರಬರಾಜು ಸಮರ್ಪಕವಾಗಿ ಪೂರೈಕೆಯಾಗದೆ ಇರುವುದರಿಂದ ಸಮಸ್ಯೆಗಳು ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಪರಿಹಾರವನ್ನು ಕೋರಿ, ಸಮರ್ಪಕ ವಿದ್ಯುತ್ ನೀಡುವಂತೆ ಒತ್ತಾಯಿಸಿ, ವಿರಾಜಪೇಟೆ ವರ್ತಕರ ಸಂಘದ ವತಿಯಿಂದ ಚೆಸ್ಕಾಂ ಮನವಿ ಪತ್ರ ಸಲ್ಲಿಸಲಾಯಿತು. ವಿರಾಜಪೇಟೆಯ ವರ್ತಕರ ಸಂಘದ ಅಧ್ಯಕ್ಷ ಪಿ.ಎ. ಮಂಜುನಾಥ್ ಮಾತನಾಡಿ ಇತ್ತೀಚೆಗೆ ವಿರಾಜಪೇಟೆಯಲ್ಲಿ ವಿದ್ಯುತ್ ಸಂಪರ್ಕ ಸೂಕ್ತವಾಗಿ ಪೂರೈಕೆಯಾಗುತ್ತಿಲ್ಲ. ಇದರಿಂದಾಗಿ ಪ್ರತಿಯೊಬ್ಬರೂ ಕೂಡ ನಾನಾ ರೀತಿಯಲ್ಲಿ ಕಷ್ಟವನ್ನು ಅನುಭವಿಸುತ್ತಿದ್ದಾರೆ. ಮನೆಯಲ್ಲಿ ಯಾವುದೇ ವಿದ್ಯುತ್ ಚಾಲಿತ ಯಂತ್ರಗಳನ್ನು ಕೂಡ […]
ದೆಹಲಿಯಲ್ಲಿ ಸ್ಫೋಟ ಹಿನ್ನೆಲೆ ಕೊಡಗಿನಲ್ಲೂ ಕಟ್ಟೆಚ್ಚರ – ವಿವಿಧ ಕಡೆ ಶೋಧ ಕಾರ್ಯ

ಜನವಾಹಿನಿ News ಮಡಿಕೇರಿ : ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದ ಹಿನ್ನೆಲೆಯಲ್ಲಿ, ಕರ್ನಾಟಕದಾದ್ಯಂತ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ರಾಜ್ಯದ ಎಲ್ಲಾ ನಗರಗಳಲ್ಲಿ ತಪಾಸಣೆ, ಗಸ್ತು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಬಿಗಿ ಭದ್ರತೆಯನ್ನು ಹೆಚ್ಚಿಸಲು ಆದೇಶಿಸಲಾಗಿದೆ. ಈ ಹಿನ್ನೆಲೆ ಕೊಡಗಿನ ಜನನಿಬಿಡ ಪ್ರದೇಶಗಳಲ್ಲಿ, ಸರ್ಕಾರಿ ಬಸ್ಸು ನಿಲ್ದಾಣ, ರಾಜಾಸೀಟು ಸೇರಿದಂತೆ ಎಲ್ಲಾ ಪ್ರವಾಸಿ ತಾಣಗಳಲ್ಲಿ ಬಾಂಬ್ ನಿಷ್ಕ್ರಿಯ ದಳ, ಡಾಗ್ ಸ್ಕ್ವಾಡ್ ನಿಂದ ಪರಿಶೀಲನೆ ನಡೆಸಿದ್ದು, ವಿಶೇಷ ನಿಗಾ ವಹಿಸಲಾಗಿದೆ. ಮಡಿಕೇರಿ ಬಸ್ಸು ನಿಲ್ದಾಣದಲ್ಲಿದ್ದ […]
ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ನಡೆಯಲಿದೆ : ಸಚಿವ ಮಧು ಬಂಗಾರಪ್ಪ

ಜನವಾಹಿನಿ News ಮಡಿಕೇರಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗೆ 12 ಸಾವಿರ ಹಾಗೂ ಅನುದಾನಿತ ಶಾಲೆಗೆ 6 ಸಾವಿರ ಒಟ್ಟು 18 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ಶೀಘ್ರ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ಸೋಮವಾರ ಪೇಟೆ ಬಳಿಯ ಬೇಳೂರು ಕುಸುಬೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ಶಾಲೆಯ ಶತಮಾನೋತ್ಸವ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು. ಸರ್ಕಾರಿ ಶಾಲೆಯನ್ನು ಬಲಪಡಿಸಲು […]
ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಜಿ.ಆರ್.ಪುಷ್ಪಲತಾ ನೇಮಕ

ಜನವಾಹಿನಿ NEWS ಮಡಿಕೇರಿ : ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯೆ ಜಿ.ಆರ್.ಪುಷ್ಪಲತಾ ನೇಮಕಗೊಂಡಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಅಲ್ಕಾ ಲಂಬಾ ರವರ ನಿರ್ದೇಶನದ ಮೇರೆಗೆ ಕರ್ನಾಟಕ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸೌಮ್ಯ ರೆಡ್ಡಿಯವರು ನೇಮಕಾತಿ ಆದೇಶ ಜಾರಿಗೊಳಿಸಿದ್ದಾರೆ. ಪುಷ್ಪಲತಾ ರವರು ಈ ಹಿಂದೆ 2017-18 ರಲ್ಲಿ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು ಈಗ ಎರಡನೇ ಬಾರಿಗೆ ಕೊಡಗು ಮಹಿಳಾ […]
ಕರ್ನಾಟಕ ಕ್ರೀಡಾ ಪ್ರಾಧಿಕಾರದ ನೂತನ ಉಪಾಧ್ಯಕ್ಷರಾಗಿ ಅರುಣ್ ಮಾಚಯ್ಯ ಪದಗೃಹಣ

ಜನವಾಹಿನಿ NEWS ಬೆಂಗಳೂರು : ಕರ್ನಾಟಕ ಕ್ರೀಡಾ ಪ್ರಾಧಿಕಾರದ ನೂತನ ಉಪಾಧ್ಯಕ್ಷರಾಗಿ ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿರುವ ಅಧಿಕೃತ ಕಚೇರಿಯಲ್ಲಿ, ಸನ್ಮಾನ್ಯ ಚೆಪ್ಪುಡೀರ ಅರುಣ್ ಮಾಚಯ್ಯರವರು ಪದಗ್ರಹಣಗೈದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್ ಭೋಸ ರಾಜು , ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಶ್ರೀಮತಿ ಕಾಂಚನ್ ಪೊನ್ನಣ್ಣ ಹಾಗೂ ಜಿಲ್ಲೆಯಿಂದ ಪದಗ್ರಹಣ ಸಮಾರಂಭಕ್ಕೆ ಸಾಕ್ಷಿಕರಿಸಲು ತೆರಳಿದ ಕಾಂಗ್ರೆಸ್ ಮುಖಂಡರುಗಳು, ಕ್ರೀಡಾ ಇಲಾಖೆಯ ಅಧಿಕಾರಿ ವರ್ಗದವರು […]
ಪ್ರಪಂಚಕ್ಕೆ ಸತ್ಯ ಹಾಗೂ ಅಹಿಂಸಾ ಮಾರ್ಗ ಪ್ರತಿಪಾದಿಸಿದ ಮಹಾನ್ ಚೇತನ ಮಹಾತ್ಮ ಗಾಂಧೀಜಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅಭಿಮತ

ಜನವಾಹಿನಿ NEWS ಮಡಿಕೇರಿ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಸತ್ಯ ಹಾಗೂ ಅಹಿಂಸೆಯ ಮೂಲಕ ಇಡೀ ವಿಶ್ವಕ್ಕೆ ಬೆಳಕು ತೊರಿಸಿದ ಮಾಹಾನ್ ಚೇತನ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಪ್ರತಿಪಾದಿಸಿದ್ದಾರೆ. ಸತ್ಯ ಹಾಗೂ ಅಹಿಂಸೆ ಎಂಬ ಅಸ್ತ್ರಗಳಿಂದ ಬ್ರಿಟೀಷರ ವಿರುದ್ದ ಹೋರಾಡಿದ ಮಹಾತ್ಮ ಗಾಂಧೀಜಿ, ಈ ಎರಡೂ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಇವರ ಹಾದಿಯಲ್ಲೇ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಯವರು ನಡೆದರು. ನೈತಿಕತೆಗೆ ಗಾಂಧೀಜಿ ಹಾಗೂ ಶಾಸ್ತ್ರೀಜಿಯವರು ಮಾದರಿಯಾಗಿದ್ದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ […]
ಕಾಫಿ ಬೆಳೆಗಾರರಿಗೆ ಮಳೆ ಹಾನಿ ಪರಿಹಾರ ಒದಗಿಸಲು ಕ್ರಮ : ಸಚಿವ ಭೋಸರಾಜು

ಜನವಾಹಿನಿ NEWS ಮಡಿಕೇರಿ : ಕೊಡಗು ಜಿಲ್ಲೆಯ ಬೆಳೆಗಾರರಿಗೂ ಮಳೆ ಹಾನಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಪ್ರತಿಕ್ರಿಯಿಸಿದ್ದಾರೆ. ಮಡಿಕೇರಿಯಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಉಂಟಾಗಿದೆ ಈ ಹಿನ್ನೆಲೆ ಉತ್ತರ ಭಾಗಕ್ಕೆ ಈಗಾಗಲೇ ಸಿಎಂ ಭೇಟಿ ನೀಡಿದ್ದಾರೆ. ಎರಡೂವರೆ ಸಾವಿರ ಕೋಟಿ ಮಳೆಯಿಂದ ಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಪರಿಹಾರಕ್ಕಾಗಿ ಮೌಲ್ಯಮಾಪನ ಮಾಡಲಾಗಿದೆ. ಕೊಡಗು ಜಿಲ್ಲೆಯಲ್ಲೂ ಕಾಫಿ ಬೆಳೆಗಾರರಿಗೆ ಮಳೆಯಿಂದ […]
ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ : ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಓದಿನ ಕಡೆಗೆ ಗಮನ ಹರಿಸಿ ಠಾಣಾಧಿಕಾರಿ ಮಂಜುನಾಥ್ ಕಿವಿ ಮಾತು

ಜನವಾಹಿನಿ NEWS ಸಿದ್ದಾಪುರ : ಜೀವನದಲ್ಲಿ ಸಾಧನೆ ಮಾಡಲು ಹೊರಟಿರುವ ನೀವು ದುಶ್ಚಟಕ್ಕೆ ಬಲಿಯಾಗದೆ ಓದಿನ ಕಡೆಗೆ ಗಮನ ಹರಿಸಿ ಎಂದು ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಜೀವಿನಿ ಒಕ್ಕೂಟದ ಆಶ್ರಯದಲ್ಲಿ ದೀನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ & ಜೀವನೋಪಾಯ ಇಲಾಖೆ ಕೊಡಗು ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ವಿರಾಜಪೇಟೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಸಿದ್ದಾಪುರ ಪಟ್ಟಣದಲ್ಲಿ […]
ದೂರು ನೀಡಲು ಬಂದಿದ್ದ ಮಹಿಳೆಗೆ ಕಿರುಕುಳ ನೀಡುತ್ತಿದ್ದ ಪೊಲೀಸ್ ಸಿಬ್ಬಂದಿ ಅಮಾನತು

ಜನವಾಹಿನಿ NEWS ಮೂಡುಬಿದಿರೆ : ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಗೆ ಪೊಲೀಸ್ ಸಿಬ್ಬಂದಿಯೊಬ್ಬ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿ ಕಿರುಕುಳ ನೀಡಿರುವ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ತೋಡಾರು ಬಳಿಯ ವಿವಾಹಿತ ಮಹಿಳೆಯೊಬ್ಬರು ಕುಟುಂಬ ಸಮಸ್ಯೆಯ ಕುರಿತು ಆ.23ರಂದುಮೂಡುಬಿದಿರೆ ಪೊಲೀಸ್ ಠಾಣೆಗೆ ತೆರಳಿ ಲಿಖಿತ ದೂರು ನೀಡಿದ್ದರು. ಈ ಬಗ್ಗೆ ಪೊಲೀಸ್ ನಿರೀಕ್ಷಕ ಸಂದೇಶ್ ಅವರು ಪತಿ ಮತ್ತು ಪತ್ನಿಯನ್ನು […]
ಧರ್ಮಸ್ಥಳ ವಿರುದ್ಧ ನಡೆಯುತ್ತಿರೋ ಷಡ್ಯಂತ್ರ ಖಂಡಿಸಿ ಬೃಹತ್ ವಾಹನ ಜಾಥಾ : ಸೋಮವಾರಪೇಟೆಯಿಂದ ನೂರಾರು ವಾಹನಗಳಲ್ಲಿ ಧರ್ಮಸ್ಥಳಕ್ಕೆ ತೆರಳಿದ ಭಕ್ತರು

ಜನವಾಹಿನಿ NEWS ಸೋಮವಾರಪೇಟೆ : ತಾಲೂಕಿನ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ವತಿಯಿಂದ ಶುಕ್ರವಾರ ಸೋಮವಾರಪೇಟೆ ಯಿಂದ ಶ್ರೀಕ್ಷೇತ್ರ ಧರ್ಮಸ್ಥಳದವರೆಗೆ ಬೃಹತ್ ವಾಹನ ಜಾಥಾ ನಡೆಸಲಾಯಿತು. ಪಟ್ಟಣದ ಶ್ರೀ ಮುತ್ತಪ್ಪಸ್ವಾಮಿ ದೇವಾಲಯದಲ್ಲಿ ಜಾಥಗೆ ಚಾಲನೆ ದೊರೆತು, ಶನಿವಾರಸಂತೆ, ಕೊಡ್ಲಿಪೇಟೆ, ಶುಕ್ರವಾರಸಂತೆ, ದೋಣಿಗಲ್ಲು, ಗುಂಡ್ಯ ರಾಷ್ಟ್ರಿಯ ಹೆದ್ದಾರಿ ಮಾರ್ಗವಾಗಿ ಧರ್ಮಸ್ಥಳ ತಲುಪಿತು. ಸುಮಾರು150 ವಾಹನಗಳಲ್ಲಿ 500ಕ್ಕೂ ಹೆಚ್ಚು ಭಕ್ತರು ವಾಹನ ಜಾಥದಲ್ಲಿ ಪಾಲ್ಗೊಂಡು, ಬಳಿಕ ಧರ್ಮಸ್ಥಳದ ದೇವಾಲಯ ಆವರಣಕ್ಕೆ ಮೆರವಣಿಗೆ ಮೂಲಕ ಪ್ರವೇಶಿಸಿ ದೇವರ ದರ್ಶನ ಪಡೆದರು.ನಂತರ ಧರ್ಮಸ್ಥಳದ ಧರ್ಮಾಧಿಕಾರಿ […]